ಮುಂಬಯಿ: ಈ ಬಾರಿಯ ಪ್ಯಾರಿಸ್ ಒಲಿಂಪಿಕ್ಸ್‌ನಲ್ಲಿ(Paris Olympics) ಭಾಗಿಯಾಗುವ ಭಾರತದ ಆ್ಯತ್ಲೀಟ್‌ಗಳಿಗೆ ಮನೆಯ ತಾವರಣವನ್ನು ಕಲ್ಪಿಸಲು ಇದರ ಉದ್ದೇಶದಿಂದ ರಿಲಯನ್ಸ್ ಸಂಸ್ಥೆ “ಇಂಡಿಯಾ ಹೌಸ್”(India House) ಎಂಬ ವಿಶೇಷ ವ್ಯವಸ್ಥೆಯೊಂದನ್ನು ಮಾಡಿದೆ. ಭಾರತೀಯ ಕ್ರೀಡಾಪಟುಗಳು ಇದರಲ್ಲೇ ಉಳಿದುಕೊಳ್ಳಲಿದ್ದಾರೆ.
ಇಂಡಿಯಾ ಹೌಸ್ಗೆ ಎಲ್ಲ ದೇಶಗಳ ಪತ್ರಕರ್ತರಿಗೆ ಮುಕ್ತ ಪ್ರವೇಶವಿದೆ ಎಂದು ನೀತಾ ಅಂಬಾನಿ(Nita Ambani) ಹೇಳಿದ್ದಾರೆ. ನೀತಾ ಅಂಬಾನಿ ಅವರು ಅಂತಾರಾಷ್ಟ್ರೀಯ ಒಲಿಂಪಿಕ್ ಸಂಸ್ಥೆ (ಐಒಸಿ.) ಸದಸ್ಯೆಯಾಗಿದ್ದಾರೆ. ಅಮೆರಿಕಾದ ಲಾಸ್ ಏಂಜಲಿಸ್ನಲ್ಲಿ 2028ರಲ್ಲಿ ನಡೆಯುವ ಒಲಿಂಪಿಕ್ಸ್‌ನಲ್ಲಿ ಕ್ರಿಕೆಟ್ ಸೇರ್ಪಡೆಗೊಳ್ಳುವಲ್ಲಿ ನೀತಾ ಅಂಬಾನಿ ಅವರ ಪಾತ್ರವೂ ಪ್ರಮುಖವಾಗಿತ್ತು. ಕಳೆದ ವರ್ಷ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿಯ ಅಧಿವೇಶನ(International Olympic Committee Session) ಮುಂಬೈಯಲ್ಲಿ ನಡೆದ ವೇಳೆಯೂ ನೀತಾ ಅಂಬಾನಿ ಈ ಸಭೆಯ ವಕಾಲತ್ತು ವಹಿಸಿದ್ದರು.
ಆ್ಯತ್ಲೀಟ್‌ಗಳಿಗೆ ಸಿಗಲಿದೆ ಮನೆ ಊಟ
ಮಹತ್ವದ ಕ್ರೀಡಾಕೂಡವಾದ ಪ್ಯಾರಿಸ್ ಒಲಿಂಪಿಕ್ಸ್(Paris Olympics) ಜುಲೈ 26ರಿಂದ ಆರಂಭಗಳ್ಳಲಿದೆ. ಈ ಬಾರಿ ಟೂರ್ನಿಯಲ್ಲಿ ಸ್ಪರ್ಧಿಸಲಿರುವ ಭಾರತೀಯ ಕ್ರೀಡಾಪಟುಗಳಿಗೆ ಭಾರತೀಯ ಶೈಲಿಯ ಊಟ ಸಿಗಲಿದೆ. ಇದೇ ಮೊದಲ ಬಾರಿಗೆ ಒಲಿಂಪಿಕ್ಸ್ ಗೇಮ್ಸ್ ವಿಲೇಜ್‌ನಲ್ಲಿ ರೋಟಿ, ದಾಲ್, ಆಲೂ ಗೋಬಿ, ಚಿಕನ್ ಇತ್ಯಾದಿ ಭಾರತೀಯ ಖಾದ್ಯಗಳು ಸಿಗಲಿದೆ.
ಇದನ್ನೂ ಓದಿ Paris Olympics 2024: ಒಲಿಂಪಿಕ್ಸ್‌ಗೆ ಬಲಿಷ್ಠ ತಂಡ ಪ್ರಕಟಿಸಿದ ಹಾಕಿ ಇಂಡಿಯಾ
ಪ್ರತಿ ಬಾರಿಯೂ ಜಾಗತಿಕ ಕ್ರೀಡಾಕೂಟಗಳಲ್ಲಿ ಭಾರತೀಯ ಆ್ಯತ್ಲೀಟ್‌ಗಳಿಗೆ ದೊಡ್ಡ ಸಮಸ್ಯೆ ಎದುರಾಗುತ್ತಿದ್ದು ಆಹಾರ. ಟೋಕಿಯೊ ಒಲಿಂಪಿಕ್ಸ್ನಲ್ಲಿಯೂ ಭಾರತೀಯ ಆ್ಯತ್ಲೀಟ್‌ಗಳು ಸರಿಯಾದ ಪೌಷ್ಟಿಕಾಂಶ ಆಹಾರ ಸಿಗುತ್ತಿಲ್ಲ ಎಂದು ಅಳಲು ತೋಡಿಕೊಂಡಿದ್ದರು. ವಿದೇಶಿ ಆ್ಯತ್ಲೀಟ್‌ಗಳಿಗೆ ಈ ಸಮಸ್ಯೆ ಎದುರಾಗುವುದಿಲ್ಲ. ಏಕೆಂದರೆ ಅವರು ಅಕ್ಕಿಯಿಂದ ತಯಾರಿಸಿದ ಆಹಾರವನ್ನು ಅಷ್ಟಾಗಿ ಸೇವಿಸುವುದಿಲ್ಲ. ಈ ಬಾರಿ ಭಾರತೀಯ ಆ್ಯತ್ಲೀಟ್‌ಗಳ ಆಹಾರದ ದೊಡ್ಡ ಸಮಸ್ಯೆ ಬಗೆಹರಿದಂತಿದೆ. ದಕ್ಷಿಣ ಏಷ್ಯಾದ ಖಾದ್ಯಗಳನ್ನು ಸೇರಿಸಲು ಸಂಘಟಕರಿಗೆ ಭಾರತೀಯ ಒಲಿಂಪಿಕ್ ಸಂಸ್ಥೆ ಮನವಿ ಮಾಡಿದೆ. ಈ ಮನವಿಯನ್ನು ಸಂಘಟಕರು ಒಪ್ಪಿಕೊಂಡಿರುವುದಾಗಿ ಒಲಿಂಪಿಕ್ಸ್‌ನ ಭಾರತ ತಂಡ ಉಪ ಮುಖ್ಯಾಧಿಕಾರಿಯಾಗಿರುವ ಶಿವ ಕೇಶವನ್ ಕೆಲವು ತಿಂಗಳ ಹಿಂದೆ ತಿಳಿಸಿದ್ದರು.
ಗೇಮ್ಸ್ ವಿಲೇಜ್‌ನಲ್ಲಿ ಭಾರತೀಯ ಕ್ರೀಡಾಪಟುಗಳಿಗೆ ಪ್ರತ್ಯೇಕ ಕ್ರೀಡಾ ವಿಜ್ಞಾನ ಕೇಂದ್ರವನ್ನೂ ಐಒಎ ಸ್ಥಾಪಿಸುತ್ತಿದೆ. ಇಲ್ಲಿ ಅಥ್ಲೀಟ್‌ಗಳಿಗೆ ಅಗತ್ಯವಿರುವ ವೈದ್ಯಕೀಯ ನೆರವು, ಔಷಧ ಒದಗಿಸಲು ಭಾರತದಿಂದಲೇ ವೈದ್ಯಕೀಯ ಉಪಕರಣಗಳನ್ನು ಕೂಡ ಐಒಎ ಪ್ಯಾರಿಸ್‌ಗೆ ಕೊಂಡೊಯ್ಯುತ್ತಿದೆ. ಕಳೆದ ಬಾರಿಗಿಂತ ಈ ಬಾರಿ ಹೆಚ್ಚಿನ ಪದಕ ಗೆಲ್ಲುವುದು ಭಾರತದ ಪ್ರಮುಖ ಗುರಿಯಾಗಿದೆ. ಟೋಕಿಯೊದಲ್ಲಿ ಭಾರತ ಒಟ್ಟು 7 ಪದಕ ಜಯಿಸಿತ್ತು. ಇದರಲ್ಲಿ ಒಂದು ಚಿನ್ನ, 2 ಬೆಳ್ಳಿ ಮತ್ತು 4 ಕಂಚಿನ ಪದಕ ಒಳಗೊಂಡಿತ್ತು. ಒಟ್ಟಾರೆಯಾಗಿ ಭಾರತ ಪದಕ ಪಟ್ಟಿಯಲ್ಲಿ 48ನೇ ಸ್ಥಾನ ಪಡೆದಿತ್ತು.
ಕ್ರೀಡಾಕೂಟ ಜುಲೈ 26ರಿಂದ ಆಗಸ್ಟ್ 11ರವರೆಗೆ ನಡೆಯಲಿದೆ. ಪ್ಯಾರಿಸ್ ಆತಿಥ್ಯದಲ್ಲಿ ನಡೆಯುತ್ತಿರುವ ಮೂರನೇ (1900 ಮತ್ತು 1924ರ ನಂತರ) ಟೂರ್ನಿ ಇದಾಗಿದೆ. 32 ಕ್ರೀಡೆಗಳು ಮತ್ತು 329 ಈವೆಂಟ್‌ಗಳನ್ನು ಯೋಜಿಸಲಾಗಿದೆ.