Site icon Vistara News

Virat Kohli: ದಿಢೀರ್​ ತಂಡ ತೊರೆದು ಮುಂಬೈಗೆ ತೆರಳಿದ ಕೊಹ್ಲಿ; ಏನದು ಫ್ಯಾಮಿಲಿ ಮ್ಯಾಟರ್​?​

virat kohli

ಮುಂಬಯಿ: ನೆದರ್ಲೆಂಡ್ಸ್ ವಿರುದ್ಧದ ಅಭ್ಯಾಸ ಪಂದ್ಯಕ್ಕೂ ಮುನ್ನ ಟೀಮ್​ ಇಂಡಿಯಾ ಆಟಗಾರ ವಿರಾಟ್​ ಕೊಹ್ಲಿ(Virat Kohli) ಅವರು ದಿಢೀರ್​ ತಂಡ ತೊರೆದು ಮುಂಬೈಯಲ್ಲಿರುವ ತಮ್ಮ ನಿವಾಸಕ್ಕೆ ತೆರಳಿದ್ದಾರೆ. ಕೌಟುಂಬಿಕ ವಿಚಾರವಾಗಿ ಕೊಹ್ಲಿ ಮುಂಬೈಗೆ ತೆರಳಿದ್ದಾರೆ ಎಂದು ತಿಳಿದುಬಂದಿದೆ.

ವಿರಾಟ್​ ಕೊಹ್ಲಿ ಅವರು ಮನೆಗೆ ತೆರಳಲು ತಂಡದ ಮ್ಯಾನೇಜ್‌ಮೆಂಟ್‌ಗೆ ಅನುಮತಿ ಕೋರಿದ್ದಾರೆ ಎನ್ನಲಾಗಿದೆ. ಭಾನುವಾರವೇ ರೋಹಿತ್​ ಪಡೆ ತಿರುವನಂತಪುರಂ ತಲುಪಿದೆ. ಆದರೆ ವಿರಾಟ್ ಕೊಹ್ಲಿ ಮಾತ್ರ ಪ್ರಯಾಣಿಸಿಲ್ಲ. ಅವರು ಮುಂಬೈಗೆ ತೆರಳಿದ್ದಾರೆ. ಬಿಸಿಸಿಐ ಮೂಲಗಳ ಪ್ರಕಾರ ಕೊಹ್ಲಿ ವೈಯಕ್ತಿಕ ಕಾರಣಗಳಿಗಾಗಿ ಮುಂಬೈಗೆ ತೆರಳಿದ್ದಾರೆ ಎಂದು ಖಚಿತಪಡಿಸಿದೆ. ಅಲ್ಲದೆ ಶೀಘ್ರದಲ್ಲೇ ತಂಡವನ್ನು ಸೇರಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಎರಡು ದಿನಗಳ ಹಿಂದೆ ಅನುಷ್ಕಾ ಶರ್ಮಾ(anushka sharma) ಗರ್ಭಿಣಿಯಾಗಿದ್ದಾರೆ, ವಿರಾಟ್ ಕೊಹ್ಲಿ ಮತ್ತೆ ತಂದೆಯಾಗುತ್ತಿದ್ದಾರೆ ಎಂಬ ಸುದ್ದಿ ಸಾಮಾಜಿಕ ಜಾಲತಾಣಗಳಲ್ಲಿ ಚರ್ಚೆಯಾಗಿತ್ತು. ಬಹುತೇಕ ಎಲ್ಲ ಮಾಧ್ಯಮಗಳು ಕೂಡ ಈ ಸುದ್ದಿಯನ್ನು ಪ್ರಕಟಿಸಿದ್ದವು.

ಎರಡನೇ ಮಗುವಿನ ನಿರೀಕ್ಷೆ ಖಚಿತ!

ಹಿಂದುಸ್ತಾನ್ ಟೈಮ್ಸ್ ವರದಿಯ ಪ್ರಕಾರ, ಅನುಷ್ಕಾ ತಮ್ಮ ಎರಡನೇ ಮಗುವಿನ ನಿರೀಕ್ಷೆಯಲ್ಲಿದ್ದಾರೆ. ಇದೇ ಕಾರಣಕ್ಕೆ ಅನುಷ್ಕಾ ಶರ್ಮಾ ಸಾರ್ವಜನಿಕವಾಗಿ ಹೆಚ್ಚು ಕಾಣಿಸಿಕೊಳ್ಳುತ್ತಿಲ್ಲ. ಜತೆಗೆ ವಿರಾಟ್ ಕೊಹ್ಲಿ ಅವರೊಂದಿಗೆ ಎಲ್ಲಿಗೂ ಪ್ರಯಾಣಿಸುತ್ತಿಲ್ಲ, ಅನುಷ್ಕಾ ಮುಂಬೈಯ ಹೆರಿಗೆ ಆಸ್ಪತ್ರೆಯಲ್ಲಿ ಕಾಣಿಸಿಕೊಂಡಿದ್ದು, ತಮ್ಮ ಫೋಟೋಗಳನ್ನು ಎಲ್ಲಿಯೂ ಪ್ರಕಟಿಸದಂತೆ ಪಾಪರಾಜಿಗಳಿಗೆ ವಿನಂತಿಸಿದ್ದಾರೆ ಎಂದು ವರದಿಯಾಗಿತ್ತು. ಇದೀಗ ಕೊಹ್ಲಿ ದಿಢೀರ್​ ಮನೆಗೆ ಭೇಟಿ ನೀಡಿರುವುದು ಈ ಸುದ್ದಿ ನಿಜವಾದಂತಿದೆ.

ವಿರಾಟ್ ಕೊಹ್ಲಿ ಮತ್ತು ಅನುಷ್ಕಾ ಶರ್ಮಾ 2017ರ ಡಿ11ರಂದು ವಿವಾಹವಾಗಿದ್ದರು. 2021ರ ಜನವರಿಯಲ್ಲಿ ಅನುಷ್ಕಾ ಶರ್ಮಾ ಹೆಣ್ಣು ಮಗುವಿಗೆ ಜನ್ಮ ನೀಡಿದ್ದರು. ಈ ಮಗುವಿಗೆ ವಮಿಕಾ ಎಂದು ಹೆಸರಿಡಲಾಗಿದೆ. ಮೊದಲ ಮಗುವಿನ ನಿರೀಕ್ಷೆಯಲ್ಲಿದ್ದ ವಿರಾಟ್ ಕೊಹ್ಲಿ ಆಸೀಸ್ ಟೆಸ್ಟ್ ಸರಣಿಯ ಮೊದಲ ಪಂದ್ಯದ ನಂತರ ಭಾರತಕ್ಕೆ ಮರಳಿದ್ದರು.

ಇದನ್ನೂ ಓದಿ Virat And Anushka| ಮಗಳ ಹುಟ್ಟುಹಬ್ಬಕ್ಕೆ ವಿಶೇಷ ಫೋಟೊ ಹಂಚಿಕೊಂಡ ವಿರುಷ್ಕಾ ಜೋಡಿ!

ಎನ್​ಜಿಒ ನಡೆಸುತ್ತಿರುವ ದಂಪತಿ

ಕೊಹ್ಲಿ ಮತ್ತು ಅನುಷ್ಕಾ ಅದೆಷ್ಟೋ ಜನರಿಗೆ ಸ್ಫೂರ್ತಿಯಾಗಿದ್ದಾರೆ. ಈ ಜೋಡಿ ಸೇವಾ (seVVA) ಎಂಬ ಹೆಸರಿನ ಎನ್​ಜಿಒ ನಡೆಸುತ್ತಿದ್ದು ಈ ಮೂಲಕ ಹಲವರಿಗೆ ಸಹಾಯವನ್ನು ಮಾಡುತ್ತಿದ್ದಾರೆ. ಕೊಹ್ಲಿಯ ಎಲ್ಲ ಏರಿಳಿತದಲ್ಲಿಯೂ ಪತ್ನಿ ಅನುಷ್ಕಾ ಬೆಂಬಲಕ್ಕೆ ನಿಂತು ಅವರಿಗೆ ಸದಾ ಪ್ರೋತ್ಸಾಹವನ್ನು ನೀಡುತ್ತಲೇ ಬಂದಿದ್ದಾರೆ. ಕೊಹ್ಲಿ ಕೂಡ ತನ್ನ ಬದುಕಿನಲ್ಲಿ ಅನುಷ್ಕಾ ಮುಖ್ಯ ಪಾತ್ರಹಿಸಿರುದಾಗಿ ಹಿಂದೊಮ್ಮೆ ಸಂದರ್ಶನದಲ್ಲಿ ಹೇಳಿದ್ದರು. “ಅನುಷ್ಕಾ ಅವರ ಭೇಟಿ ನನ್ನ ಜೀವನದಲ್ಲಿ ಹೊಸ ದೃಷ್ಟಿಕೋನವನ್ನು ಕೊಟ್ಟಿದೆ. ಹಾಗೇ ಎಲ್ಲವನ್ನೂ ಸ್ವೀಕರಿಸುವ ಭಾವನೆಯನ್ನು ಬೆಳೆಸಿಕೊಳ್ಳಲು ಸಹಕರಿಸಿದೆ” ಎಂದು ಕೊಹ್ಲಿ ಹೇಳಿದ್ದರು.

ಭಾರತ-ನೆದರ್ಲೆಂಡ್ಸ್ ವಿರುದ್ಧದ ಅಭ್ಯಾಸ ಪಂದ್ಯ ಮಂಗಳವಾರ ಮಧ್ಯಾಹ್ನ 2 ಗಂಟೆಗೆ ಆರಂಭವಾಗಲಿದೆ. ಈ ಪಂದ್ಯ ತಿರುವನಂತಪುರಂನಲ್ಲಿ ನಡೆಯಲಿದೆ. ಇಂಗ್ಲೆಂಡ್​ ವಿರುದ್ಧದ ಮೊದಲ ಅಭ್ಯಾಸ ಪಂದ್ಯ ಮಳೆಯಿಂದ ರದ್ದುಗೊಂಡಿತ್ತು. ಇದೀಗ ದ್ವಿತೀಯ ಅಭ್ಯಾಸ ಪಂದ್ಯಕ್ಕೂ ಮಳೆ ಅಡ್ಡಿಪಡಿಸುವ ಸಾಧ್ಯತೆ ಅಧಿಕ ಎಂದು ಹವಾಮಾನ ಇಲಾಖೆ ತಿಳಿಸಿದೆ.

Exit mobile version