ಇಂದೋರ್: ಈಗಾಗಲೇ ಪ್ರವಾಸಿ ನ್ಯೂಜಿಲ್ಯಾಂಡ್(IND VS NZ) ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ 2-0 ಮುನ್ನಡೆ ಸಾಧಿಸಿ ಸರಣಿ ವಶಪಡಿಸಿಕೊಂಡಿರುವ ಭಾರತ ಅಂತಿಮ ಪಂದ್ಯವನ್ನಾಡಲು ಸಜ್ಜಾಗಿದೆ. ಇತ್ತಂಡಗಳ ಈ ಹೋರಾಟ ಇಂದೋರ್ನಲ್ಲಿ ಮಂಗಳವಾರ(ಜ.24) ನಡೆಯಲಿದೆ. ಈ ಪಂದ್ಯದ ಪಿಚ್ ರಿಪೋರ್ಟ್ ಮತ್ತು ಆಡುವ ಬಳಗದ ಸಂಪೂರ್ಣ ಮಾಹಿತಿ ಇಂತಿದೆ.
ಪಿಚ್ ರಿಪೋರ್ಟ್
ಇಂದೋರ್ನ ಹೋಳ್ಕರ್ ಸ್ಟೇಡಿಯಂನ ಪಿಚ್ ಹೆಚ್ಚು ಸ್ಪಿನ್ ಬೌಲರ್ಗಳಿಗೆ ನೆರವು ನೀಡಿದರೂ ಇದು ಬ್ಯಾಟಿಂಗ್ ಟ್ರ್ಯಾಕ್ ಆಗಿದೆ. ಏಕೆಂದರೆ ಈ ಮೈದಾನದ ಚಿಕ್ಕದಾಗಿದೆ. ಆದ್ದರಿಂದ ಬ್ಯಾಟರ್ಗಳು ಇಲ್ಲಿ ಸುಲಭವಾಗಿ ಬೌಂಡರಿ, ಸಿಕ್ಸರ್ ಬಾರಿಸಬಹುದು. ಇಲ್ಲಿ ನಡೆದ ವೆಸ್ಟ್ ಇಂಡೀಸ್ ವಿರುದ್ಧದ ಪಂದ್ಯದಲ್ಲಿ ಭಾರತ 418 ರನ್ ಬಾರಿಸಿತ್ತು. ಆದರೆ ಈ ಪಿಚ್ನಲ್ಲಿ ಚೇಸಿಂಗ್ ನಡೆಸುವುದು ತುಂಬಾ ಕಷ್ಟ.
ಟಾಸ್ ಗೆದ್ದ ತಂಡ ಇಲ್ಲಿ ಮೊದಲು ಬ್ಯಾಟಿಂಗ್ ನಡೆಸುವ ಸಾಧ್ಯತೆ ಹೆಚ್ಚು. ಏಕೆಂದರೆ ಇತ್ತೀಚೆಗೆ ಇಲ್ಲಿ ನಡೆದ 5 ಪಂದ್ಯಗಳಲ್ಲಿ ಮೂರು ಪಂದ್ಯ ಮೊದಲು ಬ್ಯಾಟಿಂಗ್ ನಡೆಸಿದ ತಂಡವೇ ವಿಜಯಶಾಲಿಯಾಗಿದೆ. ಜತೆಗೆ ಇಲ್ಲಿ ದ್ವಿತೀಯ ಇನಿಂಗ್ಸ್ ವೇಳೆ ಮಂಜಿನ ಸಮಸ್ಯೆಯೂ ಕಾಡಲಿದೆ. ಹೀಗಾಗಿ ಟಾಸ್ ಗೆದ್ದ ತಂಡ ಮೊದಲು ಬ್ಯಾಟಿಂಗ್ ಆಯ್ಕೆ ಮಾಡಿಕೊಳ್ಳಬಹುದು.
ಸಂಭಾವ್ಯ ತಂಡ
ಭಾರತ: ರೋಹಿತ್ ಶರ್ಮ (ನಾಯಕ), ಶುಭ್‌ಮನ್ ಗಿಲ್, ಇಶಾನ್ ಕಿಶನ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ವಾಷಿಂಗ್ಟನ್ ಸುಂದರ್, ಶಾರ್ದೂಲ್ ಠಾಕೂರ್, ಉಮ್ರಾನ್ ಮಲಿಕ್/ಮೊಹಮ್ಮದ್ ಸಿರಾಜ್ , ಕುಲದೀಪ್ ಯಾದವ್/ ಯಜುವೇಂದ್ರ ಚಹಲ್, ಮೊಹಮ್ಮದ್ ಶಮಿ,
ನ್ಯೂಜಿಲ್ಯಾಂಡ್: ಟಾಮ್ ಲಾಥಮ್ (ನಾಯಕ), ಫಿನ್ ಅಲೆನ್, ಡೆವೋನ್ ಕಾನ್ವೆ, ಹೆನ್ರಿ ನಿಕೋಲ್ಸ್, ಡ್ಯಾರಿಲ್ ಮಿಚೆಲ್, ಗ್ಲೆನ್ ಫಿಲಿಪ್ಸ್, ಮೈಕಲ್ ಬ್ರೇಸ್‌ವೆಲ್, ಮಿಚೆಲ್ ಸ್ಯಾಂಟ್ನರ್, ಹೆನ್ರಿ ಶಿಪ್ಲೆ, ಲ್ಯಾಕಿ ಫರ್ಗ್ಯುಸನ್, ಬ್ಲೇರ್ ಟಿಕ್ನರ್.
ಇದನ್ನೂ ಓದಿ | IND VS NZ: ರಾಯ್‌ಪುರದಲ್ಲಿ ಟೀಮ್ ಇಂಡಿಯಾದ ರಾಯಭಾರ; ಕಿವೀಸ್ ವಿರುದ್ಧ 8 ವಿಕೆಟ್ ಗೆಲುವು