ಬ್ರಿಸ್ಬೇನ್: ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವೆ ಇಂದು (ಬುಧವಾರ) ನಡೆಯಬೇಕಿದ್ದ ಎರಡನೇ ಅಭ್ಯಾಸ ಪಂದ್ಯ ರದ್ದು ಗೊಂಡಿದೆ(T20 World Cup). ಬ್ರಿಸ್ಬೇನ್‌ನ ಗಾಬಾ ಸ್ಟೇಡಿಯಂನಲ್ಲಿ ನಡೆಯಬೇಕಿದ್ದ ಈ ಪಂದ್ಯಕ್ಕೆ ಮಳೆ ಅಡ್ಡಿಯಾದ ಕಾರಣ ಪಂದ್ಯವನ್ನು ರದ್ದು ಪಡಿಸಲಾಯಿತು.
ಮೊದಲ ಅಭ್ಯಾಸ ಪಂದ್ಯದಲ್ಲಿ ಭಾರತ ತಂಡ ಆಸ್ಟ್ರೇಲಿಯಾ ವಿರುದ್ಧ ರೋಚಕ ಗೆಲುವು ಸಾಧಿಸಿತ್ತು. ಎರಡನೇ ಪಂದ್ಯದಲ್ಲಿಯೂ ಇದೇ ಪ್ರದರ್ಶನ ತೋರುವ ಮೂಲಕ ಪಾಕಿಸ್ತಾನದ ವಿರುದ್ಧದ ಪಂದ್ಯಕ್ಕೂ ಮುನ್ನ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳುವ ಇರಾದೆಯಲ್ಲಿತ್ತು. ಇತ್ತ ನ್ಯೂಜಿಲೆಂಡ್ ತಂಡ ಕೂಡ ಈ ಪಂದ್ಯದಲ್ಲಿ ಭರ್ಜರಿ ಪ್ರದರ್ಶನ ತೋರುವ ಯೋಜನೆಯಲ್ಲಿತ್ತು. ಆದರೆ ಉಭಯ ತಂಡಗಳ ಈ ಯೋಜನೆಗೆ ಮಳೆ ತಣ್ಣೀರೆರಚಿದೆ.
ಟಿ20 ವಿಶ್ವ ಕಪ್ನ ಸೂಪರ್ 12 ಹಂತದ ಪಂದ್ಯಗಳು ಶನಿವಾರದಿಂದ ಆರಂಭವಾಗಲಿದ್ದು, ಮೊದಲ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ ವಿರುದ್ಧ ನ್ಯೂಜಿಲೆಂಡ್ ಸೆಣಸಾಟ ನಡೆಸಲಿದೆ. ಇನ್ನು ಭಾನುವಾರ(ಅಕ್ಟೋಬರ್ 23) ಭಾರತ ಹಾಗೂ ಪಾಕಿಸ್ತಾನದ ವಿರುದ್ಧ ಪಂದ್ಯ ನಡೆಯಲಿದ್ದು, ಈ ಪಂದ್ಯಕ್ಕಾಗಿ ಕ್ರಿಕೆಟ್ ಅಭಿಮಾನಿಗಳೆಲ್ಲರೂ ಕುತೂಹಲದಿಂದ ಕಾಯುತ್ತಿದ್ದಾರೆ. ಆದರೆ ಈ ಪಂದ್ಯಕ್ಕೂ ಮಳೆ ಅಡ್ಡಿಯಾಗುವ ಸಾಧ್ಯತೆ ಇದೆ ಎಂದು ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ.
ಭಾರತದ ವೇಳಾಪಟ್ಟಿ
ಅಕ್ಟೋಬರ್ 23 – ಭಾರತ vs ಪಾಕಿಸ್ತಾನ
ಅಕ್ಟೋಬರ್ 27- ಭಾರತ vs ರನ್ನರ್ ಅಪ್ (ಗುಂಪು A)
ಅಕ್ಟೋಬರ್ 30- ಭಾರತ vs ದಕ್ಷಿಣ ಆಫ್ರಿಕಾ
ನವೆಂಬರ್ 02- ಭಾರತ vs ಬಾಂಗ್ಲಾದೇಶ
ನವೆಂಬರ್ 06- ಭಾರತ vs ಬಿ ಗುಂಪಿನ ವಿಜೇತ ತಂಡ
ಟಿ20 ವಿಶ್ವಕಪ್‌ಗೆ ಭಾರತ ತಂಡ
ರೋಹಿತ್ ಶರ್ಮಾ (ನಾಯಕ), ಕೆ ಎಲ್ ರಾಹುಲ್ (ಉಪನಾಯಕ), ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ದೀಪಕ್ ಹೂಡಾ, ರಿಷಭ್ ಪಂತ್ (ವಿಕೆಟ್ ಕೀಪರ್), ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಆರ್.ಅಶ್ವಿನ್, ಯಜುವೇಂದ್ರ ಚಹಲ್, ಅಕ್ಷರ್ ಪಟೇಲ್, ಭುವನೇಶ್ವರ್ ಕುಮಾರ್, ಹರ್ಷಲ್ ಪಟೇಲ್, ಅರ್ಶ್‌ದೀಪ್ ಸಿಂಗ್, ಮೊಹಮ್ಮದ್ ಶಮಿ.
ಮೀಸಲು ಆಟಗಾರರು:
ಮೊಹಮ್ಮದ್ ಸಿರಾಜ್, ಶ್ರೇಯಸ್ ಅಯ್ಯರ್, ರವಿ ಬಿಷ್ಣೋಯಿ, ಶಾರ್ದೂಲ್ ಠಾಕೂರ್.
ಇದನ್ನೂ ಓದಿ | T20 Ranking: ಸ್ಮೃತಿ ಮಂಧಾನ, ದೀಪ್ತಿ ಶರ್ಮಾ ವೃತ್ತಿಜೀವನಶ್ರೇಷ್ಠ ಸಾಧನೆ