T20 World Cup | ತಂಗಳು ಆಹಾರ ತಿಂದು ಪ್ರಾಕ್ಟೀಸ್ ಮಾಡುವುದೇ ಹೇಗೆ? ಐಸಿಸಿ ಆತಿಥ್ಯಕ್ಕೆ ಸೆಹ್ವಾಗ್‌ ಕೆಂಡಾಮಂಡಲ - Vistara News

T20 ವಿಶ್ವಕಪ್

T20 World Cup | ತಂಗಳು ಆಹಾರ ತಿಂದು ಪ್ರಾಕ್ಟೀಸ್ ಮಾಡುವುದೇ ಹೇಗೆ? ಐಸಿಸಿ ಆತಿಥ್ಯಕ್ಕೆ ಸೆಹ್ವಾಗ್‌ ಕೆಂಡಾಮಂಡಲ

ಸಿಡ್ನಿಯಲ್ಲಿ ಭಾರತ ತಂಡದ ಆಟಗಾರರಿಗೆ ತಣ್ಣಗಾಗಿರುವ ಆಹಾರ ಕೊಟ್ಟಿರುವುಕ್ಕೆ ಟೀಮ್‌ ಇಂಡಿಯಾದ ಮಾಜಿ ಆಟಗಾರ ವೀರೇಂದ್ರ ಸೆಹ್ವಾಗ್‌ ಕೋಪಗೊಂಡಿದ್ದಾರೆ.

VISTARANEWS.COM


on

IND vs AUS
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವ ದೆಹಲಿ : ಸಿಡ್ನಿಯಲ್ಲಿ ಟೀಮ್ ಇಂಡಿಯಾ ಆಟಗಾರರಿಗೆ (T20 World Cup) ತಂಗಳು ಆಹಾರ ಕೊಟ್ಟಿರುವ ವಿಷಯ ಭಾರತ ತಂಡದ ಮಾಜಿ ಸ್ಫೋಟಕ ಬ್ಯಾಟರ್ ವೀರೇಂದ್ರ ಸೆಹ್ವಾಗ್‌ ಅವರಿಗೆ ಕೋಪ ತರಿಸಿದೆ. ಆಟಗಾರರ ಕಾಳಜಿ ನೋಡಿಕೊಳ್ಳಬೇಕಾದ ಐಸಿಸಿಯ ಕ್ರಮವನ್ನು ಅವರು ಟ್ವೀಟ್‌ ಮಾಡಿ ವಿರೋಧಿಸಿದ್ದಾರೆ. ವಿದೇಶದಲ್ಲಿ ಕ್ರೀಡಾಪಟುಗಳಿಗೆ ಉತ್ತಮ ಆಹಾರ ದೊರಕುತ್ತದೆ ಎಂಬದು ಭ್ರಮೆಯಾಗಿದೆ ಎಂದು ಅವರು ಹೇಳಿದ್ದಾರೆ.

ಮೆಲ್ಬೋರ್ನ್‌ನಲ್ಲಿ ಪಾಕಿಸ್ತಾನ ವಿರುದ್ಧದ ಪಂದ್ಯ ಗೆದ್ದ ಬಳಿಕ ಭಾರತ ತಂಡ ಸಿಡ್ನಿಗೆ ತೆರಳಿತ್ತು. ಅಲ್ಲಿಯೂ ಭಾರತ ತಂಡದ ಆಟಗಾರರಿಗೆ ಕಳಪೆ ದರ್ಜೆಯ ಹೋಟೆಲ್‌ಗಳನ್ನು ಬುಕ್‌ ಮಾಡಿಕೊಡಲಾಗಿತ್ತು. ಅದಕ್ಕಿಂತ ಹೆಚ್ಚಾಗಿ ಟೀಮ್‌ ಇಂಡಿಯಾ ಆಟಗಾರರಿಗೆ ಅಭ್ಯಾಸದ ವೇಳೆ ಪೂರ್ತಿ ತಣ್ಣಗಾಗಿರುವ ಸ್ಯಾಂಡ್‌ವಿಚ್‌, ಫಲಾಫೆಲ್‌, ಹಣ್ಣುಗಳು ಹಾಗೂ ಸಲಾಡ್‌ಗಳನ್ನು ನೀಡಲಾಗಿತ್ತು. ಟೀಮ್‌ ಇಂಡಿಯಾ ಆಟಗಾರರು ಅದನ್ನು ತಿನ್ನಲು ನಿರಾಕರಿಸಿ, ಹೋಟೆಲ್‌ಗೆ ಮರಳಿದ ಬಳಿಕ ಊಟ ಮಾಡಿದ್ದರು. ಆಟಗಾರರ ಆತಿಥ್ಯ ವಿಚಾರದಲ್ಲಿ ನಿರ್ಲಕ್ಷ್ಯ ವಹಿಸಲಾಗಿದೆ ಎಂದು ಐಸಿಸಿಗೆ ದೂರು ನೀಡಲಾಗಿದೆ. ಈ ಬಗ್ಗೆ ಪ್ರತಿಕ್ರಿಯಿಸಿದ ವೀರೇಂದ್ರ ಸೆಹ್ವಾಗ್‌, ಇದು ಸರಿಯಾದ ಕ್ರಮವಲ್ಲ ಎಂದಿದ್ದಾರೆ.

“ಒಂದು ಕಾಲದಲ್ಲಿ ವಿದೇಶದಲ್ಲಿ ಆಟಗಾರರಿಗೆ ವಿಶೇಷ ಆತಿಥ್ಯ ನೀಡಲಾಗುತ್ತಿತ್ತು ಎಂದು ಹೇಳಲಾಗುತ್ತಿತ್ತು. ಆದರೆ, ಈಗ ವಿದೇಶದ ಟೀಮ್‌ಗಳು ಬಂದಾಗ ಭಾರತವೇ ಉತ್ತಮ ಆಹಾರವನ್ನು ಪೂರೈಕೆ ಮಾಡುತ್ತದೆ,” ಎಂದು ಅವರು ಬರೆದುಕೊಂಡಿದ್ದಾರೆ.

“ಉತ್ತಮ ಆಹಾರ ಪೂರೈಕೆ ಮಾಡದಿರುವುದು ಐಸಿಸಿಯ ಸಮಸ್ಯೆ. ಅಭ್ಯಾಸ ಮುಗಿದ ಬಳಿಕ ಬಿಸಿಯಾದ ಸ್ಯಾಂಡ್‌ವಿಚ್‌ ಕೊಡಬೇಕು. ಅದು ಬಿಟ್ಟು ತಣ್ಣಗಾಗಿರುವ ಆಹಾರ ಕೊಟ್ಟರೆ ಹೇಗೆ? ಬಿಸಿ ಆಹಾರ ಕೊಡಬೇಕು ಎಂಬ ನಿಯಮ ಎಲ್ಲರಿಗೂ ಅನ್ವಯ. ಬೆಣ್ಣೆ ಹಣ್ಣು, ಟೊಮೆಟೊ ಹಾಗೂ ಸೌತೆಕಾಯಿಯನ್ನು ನೀಡಬೇಕು,” ಎಂಬುದಾಗಿ ವೀರೇಂದ್ರ ಸೆಹ್ವಾಗ್‌ ಒತ್ತಾಯಿಸಿದ್ದಾರೆ.

ಇದನ್ನೂ ಓದಿ | IND | ವಿಶ್ವ ಕಪ್‌ನಲ್ಲಿ ಟೀಮ್‌ ಇಂಡಿಯಾ ಆಟಗಾರರಿಗೆ ತಂಗಳು ಊಟ ಸರಬರಾಜು! ಐಸಿಸಿಗೆ ದೂರು ನೀಡಿದ ಬಿಸಿಸಿಐ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

Air India: ಟೀಮ್​ ಇಂಡಿಯಾ ಆಟಗಾರರನ್ನು ಕರೆ ತಂದ ಏರ್‌ ಇಂಡಿಯಾಗೆ ವರದಿ ಕೇಳಿದ ಡಿಜಿಸಿಎ; ಕಾರಣವೇನು?

Air India: ಡಿಜಿಸಿಎ 2017ರ ನಿಯಮಗಳ ಪ್ರಕಾರ, ನಿಗದಿತ ವಿಮಾನ ಸೇವೆಗಳನ್ನು ಕೈಬಿಟ್ಟು ನಿಗದಿತವಲ್ಲದ ವಿಮಾನ ಸೇವೆಗಳನ್ನು ಬಳಸುವಂತಿಲ್ಲ ಎಂದು ಹೇಳಿತ್ತು. ಈ ನಿಯಮನ್ನು ಏರ್​ ಇಂಡಿಯಾ ಉಲ್ಲಂಘಿಸಿದೆ ಎಂದು ಡಿಜಿಸಿಎ ಹೇಳಿದೆ.

VISTARANEWS.COM


on

Air India
Koo

ಮುಂಬಯಿ: ವಿಶೇಷ ಚಾರ್ಟರ್ಡ್ ವಿಮಾನದ ಮೂಲಕ ಟೀಮ್​ ಇಂಡಿಯಾ(Team India) ಆಟಗಾರರನ್ನು ನವದೆಹಲಿಗೆ ಕರೆ ತಂದ ಏರ್ ಇಂಡಿಯಾಗೆ(Chartered flight for Team India) ಸಂಕಷ್ಟವೊಂದು ಎದುರಾಗಿದೆ. ನೆವಾರ್ಕ್‌ನಿಂದ ದೆಹಲಿ ನಡುವೆ ಹಾರಾಟ ನಡೆಸಬೇಕಿದ್ದ ಏರ್‌ ಇಂಡಿಯಾದ(Air India) ಸಾಮಾನ್ಯ ಪ್ಯಾಸೆಂಜರ್‌ ವಿಮಾನವನ್ನು ಜುಲೈ 2ರಂದು ರದ್ದುಗೊಳಿಸಿ, ಭಾರತದ ಕ್ರಿಕೆಟ್‌ ತಂಡವನ್ನು ಸ್ವದೇಶಕ್ಕೆ ಕರೆತರುವ ಉದ್ದೇಶದಿಂದ ಬಾರ್ಬಡೋಸ್‌ಗೆ ಡೈವರ್ಟ್‌ ಮಾಡಿದ ಕ್ರಮಕ್ಕೆ ಭಾರತೀಯ ವಿಮಾನಯಾನ ನಿಯಂತ್ರಕ ಸಂಸ್ಥೆ ನಾಗರಿಕ ವಿಮಾನಯಾನ ಮಹಾ ನಿರ್ದೇಶನಾಲಯ(DGCA)ವು ಏರ್‌ ಇಂಡಿಯಾದಿಂದ ವರದಿ ಕೇಳಿದ.

ಟಿ20 ವಿಶ್ವಕಪ್​ ಟೂರ್ನಿ ಮುಗಿದ ಮರು ದಿನವೇ​ ವೆಸ್ಟ್ ​ಇಂಡೀಸ್​ನಲ್ಲಿ ಉಂಟಾದ ಬೆರಿಲ್ ಚಂಡಮಾರುತದಿಂದಾಗಿ ವಿಮಾನ ನಿಲ್ದಾಣವನ್ನು ಮುಚ್ಚಲಾಗಿತ್ತು. ಹೀಗಾಗಿ ಟೀಮ್​ ಇಂಡಿಯಾ ಆಟಗಾರರು ಬಾರ್ಬಡೋಸ್‌ನಲ್ಲೇ ನಾಲ್ಕು ದಿನಗಳ ಕಾಲ ಸಿಲುಕಿಕೊಂಡಿದ್ದರು. ಹವಾಮಾನವು ಸುಧಾರಿಸಿದ ನಂತರ, ವಿಶ್ವ ಚಾಂಪಿಯನ್‌ಗಳನ್ನು ಮರಳಿ ಮನೆಗೆ ಕರೆತರಲು ಬಿಸಿಸಿಐ ವಿಶೇಷ ಏರ್ ಇಂಡಿಯಾ ಚಾರ್ಟರ್ಡ್ ವಿಮಾನವನ್ನು ಬಾರ್ಬಡೋಸ್‌ಗೆ ಕಳುಹಿಸಲಾಗಿತ್ತು. ಸುಮಾರು 18 ಗಂಟೆಗಳ ಸುದೀರ್ಘ ಪ್ರಯಾಣದ ನಂತರ, ತಂಡವು ಅಂತಿಮವಾಗಿ ಇಂದು(ಗುರುವಾರ) ಬೆಳಗ್ಗೆ ಭಾರತಕ್ಕೆ ಬಂದಿಳಿದೆ. ಇದೀಗ ಪ್ಯಾಸೆಂಜರ್‌ ವಿಮಾನವನ್ನು ರದ್ದುಗೊಳಿಸಿದ ಕ್ರಮಕ್ಕೆ ಉತ್ತರ ನೀಡುವಂತೆ ಏರ್‌ ಇಂಡಿಯಾಗೆ ಡಿಜಿಸಿಎ ಆದೇಶಿಸಿದೆ.

ಇದನ್ನೂ ಓದಿ Team India: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ಗೆ ಕ್ಷಣಗಣನೆ; ಮುಂಬೈ ತಲುಪಿದ ಆಟಗಾರರು

ಡಿಜಿಸಿಎ 2017ರ ನಿಯಮಗಳ ಪ್ರಕಾರ, ನಿಗದಿತ ವಿಮಾನ ಸೇವೆಗಳನ್ನು ಕೈಬಿಟ್ಟು ನಿಗದಿತವಲ್ಲದ ವಿಮಾನ ಸೇವೆಗಳನ್ನು ಬಳಸುವಂತಿಲ್ಲ ಎಂದು ಹೇಳಿತ್ತು. ಈ ನಿಯಮನ್ನು ಏರ್​ ಇಂಡಿಯಾ ಉಲ್ಲಂಘಿಸಿದೆ ಎಂದು ಡಿಜಿಸಿಎ ಹೇಳಿದೆ.

ಈ ವಿಚಾರವಾಗಿ ಪ್ರತಿಕ್ರಿಯೆ ನೀಡಿದ್ದು, ವಿಮಾನ ರದ್ದುಗೊಂಡ ಕುರಿತು ಪ್ರಯಾಣಿಕರಿಗೆ ಮುಂಚಿತವಾಗಿ ತಿಳಿಸಲಾಗಿತ್ತು. ಅವರಿಗೆ ನ್ಯೂಯಾರ್ಕ್‌ ತನಕ ರಸ್ತೆ ಮೂಲಕ ಸಾಗಲು ಅಥವಾ ವಿಮಾನದಲ್ಲಿ ಸಾಗಲು ಅವಕಾಶ ಕಲ್ಪಿಸಲಾಗಿತ್ತು. ನಂತರ ನ್ಯೂಯಾರ್ಕ್‌ನಿಂದ ದಿಲ್ಲಿಗೆ ತೆರಳಲು ಬೇರೆ ವಿಮಾನ ಸೇವೆ ಒದಗಿಸಲಾಗಿತ್ತು ಎಂದು ಏರ್‌ ಇಂಡಿಯಾ ಹೇಳಿದೆ.

17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದ ಭಾರತ


ಜುಲೈ 29ರಂದು ನಡೆದಿದ್ದ ವಿಶ್ವಕಪ್​ ಫೈನಲ್​ ಪಂದ್ಯದಲ್ಲಿ ಟಾಸ್ ಗೆದ್ದು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡ ಭಾರತ, ವಿರಾಟ್ ಕೊಹ್ಲಿ ಮತ್ತು ಅಕ್ಷರ್ ಪಟೇಲ್ ಅವರ ಜವಾಬ್ದಾರಿಯುತ ಆಟದ ನೆರವಿನಿಂದ 7 ವಿಕೆಟ್ ನಷ್ಟಕ್ಕೆ 176 ರನ್ ಗಳಿಸಿತು. ಈ ಮೊತ್ತವನ್ನು ಒಂದು ಹಂತದ ವರೆಗೆ ದಿಟ್ಟವಾಗಿ ಬೆನ್ನಟ್ಟಿಕೊಂಡು ಬಂದ ದಕ್ಷಿಣ ಆಫ್ರಿಕಾ(South Africa vs India) 8 ವಿಕೆಟ್​ಗೆ 169 ರನ್​ ಗಳಿಸಲಷ್ಟೇ ಶಕ್ತವಾಯಿತು. ಭಾರತ 7 ರನ್​ಗಳ ಗೆಲುವು ಸಾಧಿಸಿ 17 ವರ್ಷಗಳ ಬಳಿಕ ಟಿ20 ವಿಶ್ವಕಪ್​ ಗೆದ್ದು ಬೀಗಿತ್ತು.

Continue Reading

ಕ್ರೀಡೆ

Team India: ಟೀಮ್ ಇಂಡಿಯಾದ ವಿಕ್ಟರಿ ಪೆರೇಡ್​ಗೆ ಕ್ಷಣಗಣನೆ; ಮುಂಬೈ ತಲುಪಿದ ಆಟಗಾರರು

Team India: ಭಾರತಕ್ಕೆ ಬರುವ ಮುನ್ನವೇ ರೋಹಿತ್​ ‘ಇಂತಹ ವಿಶೇಷ ಸಂಭ್ರಮವನ್ನು ನಿಮ್ಮೊಂದಿಗೆ ಆಚರಿಸುವ ಬಯಕೆಯಿದೆ. ಮರೈನ್ ಡ್ರೈವ್ ಹಾಗೂ ವಾಂಖೇಡೆ ಕ್ರೀಡಾಂಗಣದಲ್ಲಿ ನಮ್ಮೊಂದಿಗೆ ನೀವೂ ಜತೆಯಾಗಿ’ ಎಂದು ಟ್ವೀಟ್ ಮಾಡಿದ್ದರು. ಈಗಾಗಲೇ ಅಭಿಮಾನಿಗಳು ಟೀಮ್​ ಇಂಡಿಯಾ ಜೆರ್ಸಿ ತೊಟ್ಟು ಸ್ಟೇಡಿಯಂಗೆ ಆಗಮಿಸಿದ್ದಾರೆ.

VISTARANEWS.COM


on

Team India
Koo

ಮುಂಬಯಿ: ಟಿ20 ವಿಶ್ವಕಪ್(T20 World Cup) ವಿಜೇತ ಟೀಮ್​ ಇಂಡಿಯಾದ(Team India) ವಿಕ್ಟರಿ ಪೆರೇಡ್​ಗೆ ಕ್ಷಣಗಣನೆ ಶುರುವಾಗಿದೆ. ವಿಶ್ವ ವಿಜೇತರನ್ನು ಅಭಿನಂದಿಸಲು(Team India victory parade) ಮುಂಬೈ ನಗರಿ ಸಿದ್ಧವಾಗಿ ನಿಂತಿದೆ. ಆಟಗಾರರು ಈಗಾಗಲೇ ಮುಂಬೈ ತಲುಪಿದ್ದಾರೆ. ಈ ವಿಜಯಯಾತ್ರೆಯನ್ನು ಸ್ಟಾರ್ ಸ್ಪೋರ್ಟ್ಸ್ ನೇರ ಪ್ರಸಾರ ಮಾಡುವುದಾಗಿ ಘೋಷಿಸಿದೆ. ಹಾಗೆಯೇ ಸ್ಪೋರ್ಟ್ಸ್ 18ನಲ್ಲಿ, ಜಿಯೋ ಸಿನಿಮಾ ಆ್ಯಪ್​ನಲ್ಲಿಯೂ ಈ ವಿಜಯೋತ್ಸವದ ನೇರ ಪ್ರಸಾರ ಇರಲಿದೆ.

ಸಂಭ್ರಮಾಚರಣೆಗೆ ಆಹ್ವಾನ ನೀಡಿದ್ದ ರೋಹಿತ್​


ಮುಂಬೈನವರೇ ಆಗಿರುವ ನಾಯಕ ರೋಹಿತ್ ಶರ್ಮ ತಮ್ಮ ತವರಿನ ಅಭಿಮಾನಿಗಳಿಗೆ ಈ ಬೃಹತ್ ಮೆರವಣಿಯಲ್ಲಿ ಪಾಲ್ಗೊಳ್ಳುವಂತೆ ವಿಶೇಷವಾಗಿ ಮನವಿ ಮಾಡಿದ್ದರು. ಭಾರತಕ್ಕೆ ಬರುವ ಮುನ್ನವೇ ರೋಹಿತ್​ ‘ಇಂತಹ ವಿಶೇಷ ಸಂಭ್ರಮವನ್ನು ನಿಮ್ಮೊಂದಿಗೆ ಆಚರಿಸುವ ಬಯಕೆಯಿದೆ. ಮರೈನ್ ಡ್ರೈವ್ ಹಾಗೂ ವಾಂಖೇಡೆ ಕ್ರೀಡಾಂಗಣದಲ್ಲಿ ನಮ್ಮೊಂದಿಗೆ ನೀವೂ ಜತೆಯಾಗಿ’ ಎಂದು ಟ್ವೀಟ್ ಮಾಡಿದ್ದರು. ಈಗಾಗಲೇ ಅಭಿಮಾನಿಗಳು ಟೀಮ್​ ಇಂಡಿಯಾ ಜೆರ್ಸಿ ತೊಟ್ಟು ಸ್ಟೇಡಿಯಂಗೆ ಆಗಮಿಸಿದ್ದಾರೆ.

ತೆರೆದ ಬಸ್​ನಲ್ಲಿ ರೋಡ್ ಶೋ


ಆಟಗಾರರು ಮುಂಬೈಗೆ ತಲುಪಿದೊಡನೆ ‘ಮುಂಬೈನ ನರೀಮನ್ ಪಾಯಿಂಟ್‌ನಿಂದ ಸರಿಯಾಗಿ 5 ಗಂಟೆಗೆ ರೋಡ್‌ ಶೋ ಆರಂಭವಾಗಲಿದೆ. ಅದಾದ ಮೇಲೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಗುತ್ತದೆ. ಇದಾದ ಬಳಿಕ ಬಿಸಿಸಿಐ ಘೋಷಿಸಿರುವ 125 ಕೋಟಿ ಬಹುಮಾನ ಮೊತ್ತವನ್ನು ಕೂಡ ಪ್ರದಾನ ಮಾಡಲಾಗುತ್ತದೆ.

ಮುಂಬೈಗೆ ತೆರಳುವ ಮುನ್ನ ಟೀಮ್​ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi)ಅವರ ನಿವಾಸಕ್ಕೆ(Team India Arrival) ಭೇಟಿ ನೀಡಿ ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜತೆಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟವನ್ನು ಕೂಡ ಏರ್ಪಡಿಸಲಾಗಿತ್ತು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ(PM Modi) ನಮೋ ನಂ.1 ಎಂದು ಬರೆದ ಟೀಮ್​ ಇಂಡಿಯಾ ಜೆರ್ಸಿಯನ್ನು(Indian Cricket Jersey) ಉಡುಗೊರೆಯಾಗಿ ನೀಡಲಾಯಿತು.

ಇದನ್ನೂ ಓದಿ Team India: ಮೋದಿಗೆ ನಮೋ ಹೆಸರಿನ ಟೀಮ್​ ಇಂಡಿಯಾ ಜೆರ್ಸಿ ಉಡುಗೊರೆ ನೀಡಿದ ಬಿಸಿಸಿಐ

ವಿಶ್ವ ವಿಜೇತ ತಂಡವನ್ನು ಭೇಟಿ ಮಾಡಿದ ಫೋಟೊವನ್ನು ಮೋದಿ ಕೂಡ ತನ್ನ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದು, ನಮ್ಮ ಚಾಂಪಿಯನ್‌ಗಳೊಂದಿಗೆ ಉತ್ತಮ ಸಭೆ!…ಪಂದ್ಯಾವಳಿಯ ಸ್ಮರಣೀಯ ಸಂಭಾಷಣೆy ಅನುಭವವನ್ನು ಕೇಳಿ ನಿಜವಾಗಿಯೂ ಸಂತಸ ತಂದಿತು ಎಂದು ಬರೆದುಕೊಂಡಿದ್ದಾರೆ.

ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಮುಂಬೈ ಪೊಲೀಸರು ಜನರನ್ನು ಒತ್ತಾಯಿಸಿದ್ದಾರೆ. ಮುಂಬೈ ವಲಯ 1ರ ಡಿಸಿಪಿ ಪ್ರವೀಣ್ ಮುಂಡೆ ಮಾಧ್ಯಮದೊಂದಿಗೆ ಮಾತನಾಡಿ, ”ಟಿ20 ವಿಶ್ವಕಪ್ ಗೆದ್ದಿರುವ ಭಾರತ ಕ್ರಿಕೆಟ್ ತಂಡ ಮುಂಬೈಗೆ ಆಗಮಿಸುತ್ತಿದೆ. ನಾರಿಮನ್ ಪಾಯಿಂಟ್ ಮತ್ತು ವಾಂಖೆಡೆ ಸ್ಟೇಡಿಯಂ ನಡುವೆ ಮರೈನ್ ಡ್ರೈವ್‌ನಲ್ಲಿ ಸಂಜೆ 5ರಿಂದ 7 ಗಂಟೆಗೆ ತೆರೆದ ಬಸ್‌ನಲ್ಲಿ ವಿಜಯೋತ್ಸವ ಮೆರವಣಿಗೆ ನಡೆಸಲಾಗುತ್ತಿದೆ. ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಸಂಜೆ 4:30 ಕ್ಕೆ ಮೊದಲು ತಲುಪಿ ಮತ್ತು ರಸ್ತೆಯಲ್ಲಿ ಯಾರೂ ದಟ್ಟಣೆ ಸೇರಬೇಡಿ ಎಂದಿದ್ದಾರೆ.

Continue Reading

ಕ್ರೀಡೆ

Team India: ಮೋದಿಗೆ ನಮೋ ಹೆಸರಿನ ಟೀಮ್​ ಇಂಡಿಯಾ ಜೆರ್ಸಿ ಉಡುಗೊರೆ ನೀಡಿದ ಬಿಸಿಸಿಐ

Team India: ವಿಶ್ವ ವಿಜೇತ ತಂಡವನ್ನು ಭೇಟಿ ಮಾಡಿದ ಫೋಟೊವನ್ನು ಮೋದಿ ಕೂಡ ತನ್ನ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದು, ನಮ್ಮ ಚಾಂಪಿಯನ್‌ಗಳೊಂದಿಗೆ ಉತ್ತಮ ಸಭೆ!…ಪಂದ್ಯಾವಳಿಯ ಸ್ಮರಣೀಯ ಸಂಭಾಷಣೆy ಅನುಭವವನ್ನು ಕೇಳಿ ನಿಜವಾಗಿಯೂ ಸಂತಸ ತಂದಿತು ಎಂದು ಬರೆದುಕೊಂಡಿದ್ದಾರೆ.

VISTARANEWS.COM


on

Team India
Koo

ನವದೆಹಲಿ: ಐಸಿಸಿ ಟಿ20 ವಿಶ್ವಕಪ್(T20 World Cup 2024)​ ಟ್ರೋಫಿ ಗೆದ್ದು ತವರಿಗೆ ಮರಳಿದ ಟೀಮ್​ ಇಂಡಿಯಾ (Team India) ಆಟಗಾರರನ್ನು ಪ್ರಧಾನಿ ನರೇಂದ್ರ ಮೋದಿ (Narendra Modi) ತಮ್ಮ ನಿವಾಸದಲ್ಲಿ ಸನ್ಮಾನಿಸಿದರು. ಈ ವೇಳೆ ಬಿಸಿಸಿಐ ಕಡೆಯಿಂದ ಮೋದಿಗೆ(PM Modi) ನಮೋ ನಂ.1 ಎಂದು ಬರೆದ ಟೀಮ್​ ಇಂಡಿಯಾ ಜೆರ್ಸಿಯನ್ನು(Indian Cricket Jersey) ಉಡುಗೊರೆಯಾಗಿ ನೀಡಲಾಯಿತು.

ಇಂದು(ಗುರುವಾರ) ಬೆಳಗ್ಗೆ ದೆಹಲಿಗೆ ಆಗಮಿಸಿದ ಆಟಗಾರರು ಬಳಿಕ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ಅವರ ನಿವಾಸಕ್ಕೆ ಭೇಟಿ ನೀಡಿದ್ದರು. ವಿಶ್ವಕಪ್​ ಗೆಲುವಿನ ಕುರಿತು ಆಟಗಾರರು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಬಳಿಕ ವಿಶ್ವ ಕಪ್​ ಟ್ರೋಫಿ ಜತೆ ಆಟಗಾರರೊಂದಿಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟವನ್ನು ಕೂಡ ಏರ್ಪಡಿಸಲಾಗಿತ್ತು. ಈ ಎಲ್ಲ ಕಾರ್ಯಕ್ರಮದ ಬಳಿಕ ಬಿಸಿಸಿಐ ಅಧ್ಯಕ್ಷ ರೋಜರ್​ ಬಿನ್ನಿ ಮತ್ತು ಬಿಸಿಸಿಐ ಕಾರ್ಯದರ್ಶಿ ಜಯ್​ ಶಾ ಅವರು ನಮೋ ಎಂದು ಬರೆದ ಟೀಮ್​ ಇಂಡಿಯಾ ಜೆರ್ಸಿಯನ್ನು ನೆನಪಿನ ಕಾಣಿಕೆಯಾಗಿ ನೀಡಿದರು. ಈ ಫೋಟೊವನ್ನು ಬಿಸಿಸಿಐ ತನ್ನ ಅಧಿಕೃತ ಸಾಮಾಜಿಕ ಜಾಲತಾಣ ಖಾತೆಯಲ್ಲಿ ಶೇರ್​ ಮಾಡಿದೆ.

ಇದನ್ನೂ ಓದಿ Team India victory parade: ಸಂಜೆ 5ರಿಂದ 7ರವರೆಗೆ ಮುಂಬಯಿಯಲ್ಲಿ ಟೀಮ್ ಇಂಡಿಯಾ ಭರ್ಜರಿ ರೋಡ್ ಶೋ; ನೇರ ಪ್ರಸಾರ ವೀಕ್ಷಣೆ ಹೇಗೆ?

ವಿಶ್ವ ವಿಜೇತ ತಂಡವನ್ನು ಭೇಟಿ ಮಾಡಿದ ಫೋಟೊವನ್ನು ಮೋದಿ ಕೂಡ ತನ್ನ ಟ್ವಿಟರ್​ ಎಕ್ಸ್​ನಲ್ಲಿ ಹಂಚಿಕೊಂಡಿದ್ದು, ನಮ್ಮ ಚಾಂಪಿಯನ್‌ಗಳೊಂದಿಗೆ ಉತ್ತಮ ಸಭೆ!…ಪಂದ್ಯಾವಳಿಯ ಸ್ಮರಣೀಯ ಸಂಭಾಷಣೆy ಅನುಭವವನ್ನು ಕೇಳಿ ನಿಜವಾಗಿಯೂ ಸಂತಸ ತಂದಿತು ಎಂದು ಬರೆದುಕೊಂಡಿದ್ದಾರೆ.

ಆಟಗಾರರಿಗೆ ಕರೆ ಮಾಡಿದ್ದ ಮೋದಿ

ಜೂನ್‌ 29ರಂದು ನಡೆದ ಫೈನಲ್‌ ಪಂದ್ಯದಲ್ಲಿ ಭಾರತ ದಕ್ಷಿಣ ಆಫ್ರಿಕಾದ ವಿರುದ್ಧ ಭಾರತ 7 ರನ್‌ಗಳಿಂದ ಜಯ ಸಾಧಿಸಿತ್ತು. ಆ ವೇಳೆ ಆಟಗಾರರಿಗೆ ಕರೆ ಮಾಡಿ ಮೋದಿ ಅಭಿನಂದನೆ ಸಲ್ಲಿಸಿದ್ದರು. ಮೋದಿ ಅವರು ಟೀಮ್‌ ಇಂಡಿಯಾ ನಾಯಕ ರೋಹಿತ್ ಶರ್ಮಾ ಅವರೊಂದಿಗೆ ಮಾತನಾಡಿ, ಅದ್ಭುತ ನಾಯಕತ್ವಕ್ಕಾಗಿ ಅಭಿನಂದನೆ ತಿಳಿಸಿದರು. ಅವರ ಟಿ20 ವೃತ್ತಿ ಜೀವನವನ್ನು ಶ್ಲಾಘಿಸಿದರು. ಜತೆಗೆ ಪ್ರಧಾನಿ ಫೈನಲ್‌ ಪಂದ್ಯದಲ್ಲಿ ಭಾರತವು ಸ್ಪರ್ಧಾತ್ಮಕ ಸ್ಕೋರ್ ಗಳಿಸಲು ಸಹಾಯ ಮಾಡಿದ ವಿರಾಟ್ ಕೊಹ್ಲಿ (76 ರನ್) ಅವರ ಆಟವನ್ನೂ ಮೆಚ್ಚಿಕೊಂಡರು. ಜತೆಗೆ ಭಾರತೀಯ ಕ್ರಿಕೆಟ್‌ಗೆ ಕೊಹ್ಲಿ ನೀಡಿದ ಕೊಡುಗೆಯನ್ನೂ ನೆನಪಿಸಿಕೊಂಡಿದ್ದರು.

ಜತೆಗೆ ಜಸ್​ಪ್ರೀತ್​ ಬುಮ್ರಾ ಮತ್ತು ಹಾರ್ದಿಕ್ ಪಾಂಡ್ಯ ಅವರಿಗೂ ಪ್ರಧಾನಿ ಮೆಚ್ಚುಗೆ ಸೂಚಿಸಿದ್ದರು. ಮಾತ್ರವಲ್ಲ ಅದ್ಭುತ ಕ್ಯಾಚ್‌ ಹಿಡಿದು ಪಂದ್ಯದ ಗತಿಯನ್ನೇ ಬದಲಾಯಿಸಿದ ಸೂರ್ಯ ಕುಮಾರ್ ಯಾದವ್ ಅವರನ್ನು ಉಲ್ಲೇಖಿಸಲು ಪ್ರಧಾನಿ ಮರೆತಿರಲಿಲ್ಲ. ಗೆಲುವಿಗಾಗಿ ಮುಖ್ಯ ಕೊಡುಗೆ ನೀಡಿದ ಭಾರತದ ಮುಖ್ಯ ಕೋಚ್ ರಾಹುಲ್ ದ್ರಾವಿಡ್ ಅವರಿಗೆ ಮೋದಿ ಧನ್ಯವಾದ ಅರ್ಪಿಸಿದ್ದರು. ಈ ಕುರಿತಾದ ಫೋಟೊ ಸೋಷಿಯಲ್‌ ಮೀಡಿಯಾದಲ್ಲಿ ವೈರಲ್‌ ಆಗಿತ್ತು. ಪ್ರಧಾನಿ ಅವರ ನಡೆಗೆ ಕ್ರೀಡಾಪ್ರೇಮಿಗಳು ಮೆಚ್ಚುಗೆ ಸೂಚಿಸಿದ್ದರು.

Continue Reading

ಪ್ರಮುಖ ಸುದ್ದಿ

Team India victory parade: ಸಂಜೆ 5ರಿಂದ 7ರವರೆಗೆ ಮುಂಬಯಿಯಲ್ಲಿ ಟೀಮ್ ಇಂಡಿಯಾ ಭರ್ಜರಿ ರೋಡ್ ಶೋ; ನೇರ ಪ್ರಸಾರ ವೀಕ್ಷಣೆ ಹೇಗೆ?

Team India victory parade: ಆಟಗಾರರು ಮುಂಬೈಗೆ ತಲುಪಿದೊಡನೆ ‘ಮುಂಬೈನ ನರೀಮನ್ ಪಾಯಿಂಟ್‌ನಿಂದ ರೋಡ್‌ ಶೋ ಆರಂಭವಾಗಲಿದೆ. ಅದಾದ ಮೇಲೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಗುತ್ತದೆ.

VISTARANEWS.COM


on

Team India victory parade
Koo

ಮುಂಬಯಿ: ಟಿ20 ವಿಶ್ವಕಪ್​ ಟ್ರೋಫಿ ಗೆದ್ದು 13 ವರ್ಷಗಳ ಬಳಿಕ ಐಸಿಸಿ ಟ್ರೋಫಿಯ ಬರ ನೀಗಿಸಿದ ಟೀಮ್​ ಇಂಡಿಯಾ(Team India) ಆಟಗಾರರು ಇಂದು(ಗುರುವಾರ) ತವರಿಗೆ ಆಗಮಿಸಿದ್ದಾರೆ. ಈಗಾಗಲೇ ದೆಹಲಿಯಲ್ಲಿ ಭರ್ಜರಿ ಸ್ವಾಗತ ಮತ್ತು ಪ್ರಧಾನಿ ಮೋದಿ ನಿವಾಸಕ್ಕೆ ಭೇಟಿ ನೀಡಿರುವ ರೋಹಿತ್​ ಪಡೆ ಇದೀಗ ದೇಶದ ವಾಣಿಜ್ಯ ರಾಜಧಾನಿ ಮುಂಬೈನತ್ತ ಪ್ರಯಾಣ ಬೆಳೆಸಿದೆ. ವಿಶ್ವ ವಿಜೇತರನ್ನು ಅಭಿನಂದಿಸಲು(Team India victory parade) ಮುಂಬೈ ನಗರಿ ಸಿದ್ಧವಾಗಿ ನಿಂತಿದೆ.

ತೆರೆದ ಬಸ್​ನಲ್ಲಿ ರೋಡ್ ಶೋ


ಆಟಗಾರರು ಮುಂಬೈಗೆ ತಲುಪಿದೊಡನೆ ‘ಮುಂಬೈನ ನರೀಮನ್ ಪಾಯಿಂಟ್‌ನಿಂದ ರೋಡ್‌ ಶೋ ಆರಂಭವಾಗಲಿದೆ. ಅದಾದ ಮೇಲೆ ವಾಂಖೆಡೆ ಕ್ರೀಡಾಂಗಣದಲ್ಲಿ ನಡೆಯುವ ಕಾರ್ಯಕ್ರಮದಲ್ಲಿ ಆಟಗಾರರನ್ನು ಮತ್ತು ಮತ್ತು ಸಿಬ್ಬಂದಿ ಬಳಗವನ್ನು ಸನ್ಮಾನಿಸಲಾಗುತ್ತದೆ. ಇದಾದ ಬಳಿಕ ಬಿಸಿಸಿಐ ಘೋಷಿಸಿರುವ 125 ಕೋಟಿ ಬಹುಮಾನ ಮೊತ್ತವನ್ನು ಕೂಡ ಪ್ರದಾನ ಮಾಡಲಾಗುತ್ತದೆ. ಈ ಸನ್ಮಾನ ಕಾರ್ಯಕ್ರಮಕ್ಕೆ ಸಾರ್ವಜನಿಕರಿಗೂ ಅವಕಾಶ ನೀಡಲಾಗಿದೆ. ಈಗಾಗಲೇ ಅಭಿಮಾನಿಗಳು ಟೀಮ್​ ಇಂಡಿಯಾ ಜೆರ್ಸಿ ತೊಟ್ಟು ಸ್ಟೇಡಿಯಂಗೆ ಆಗಮಿಸುತ್ತಿದ್ದಾರೆ.

ಸಾರ್ವಜನಿಕ ಸಾರಿಗೆ ಬಳಸುವಂತೆ ಒತ್ತಾಯ


ಸಂಚಾರ ದಟ್ಟಣೆಯನ್ನು ನಿಯಂತ್ರಿಸಲು ಸಾರ್ವಜನಿಕ ಸಾರಿಗೆಯನ್ನು ಬಳಸುವಂತೆ ಮುಂಬೈ ಪೊಲೀಸರು ಜನರನ್ನು ಒತ್ತಾಯಿಸಿದ್ದಾರೆ. ಮುಂಬೈ ವಲಯ 1ರ ಡಿಸಿಪಿ ಪ್ರವೀಣ್ ಮುಂಡೆ ಮಾಧ್ಯಮದೊಂದಿಗೆ ಮಾತನಾಡಿ, ”ಟಿ20 ವಿಶ್ವಕಪ್ ಗೆದ್ದಿರುವ ಭಾರತ ಕ್ರಿಕೆಟ್ ತಂಡ ಮುಂಬೈಗೆ ಆಗಮಿಸುತ್ತಿದೆ. ನಾರಿಮನ್ ಪಾಯಿಂಟ್ ಮತ್ತು ವಾಂಖೆಡೆ ಸ್ಟೇಡಿಯಂ ನಡುವೆ ಮರೈನ್ ಡ್ರೈವ್‌ನಲ್ಲಿ ಸಂಜೆ 5ರಿಂದ 7 ಗಂಟೆಗೆ ತೆರೆದ ಬಸ್‌ನಲ್ಲಿ ವಿಜಯೋತ್ಸವ ಮೆರವಣಿಗೆ ನಡೆಸಲಾಗುತ್ತಿದೆ. ಮೆರವಣಿಗೆಯಲ್ಲಿ ಪಾಲ್ಗೊಳ್ಳಲು ಸಂಜೆ 4:30 ಕ್ಕೆ ಮೊದಲು ತಲುಪಿ ಮತ್ತು ರಸ್ತೆಯಲ್ಲಿ ಯಾರೂ ದಟ್ಟಣೆ ಸೇರಬೇಡಿ ಎಂದಿದ್ದಾರೆ.

https://twitter.com/BCCI/status/1808768308579348742

ಯಾವ ಚಾನೆಲ್​ನಲ್ಲಿ ನೇರ ಪ್ರಸಾರ?


ಈ ವಿಜಯಯಾತ್ರೆಯನ್ನು ಸ್ಟಾರ್ ಸ್ಪೋರ್ಟ್ಸ್ ನೇರ ಪ್ರಸಾರ ಮಾಡುವುದಾಗಿ ಘೋಷಿಸಿದೆ. ಹಾಗೆಯೇ ಸ್ಪೋರ್ಟ್ಸ್ 18ನಲ್ಲಿ, ಜಿಯೋ ಸಿನಿಮಾ ಆ್ಯಪ್​ನಲ್ಲಿಯೂ ಈ ವಿಜಯೋತ್ಸವದ ನೇರ ಪ್ರಸಾರ ಇರಲಿದೆ.

ಮೋದಿ ಭೇಟಿ ಮಾಡಿದ ತಂಡ


ಮುಂಬೈಗೆ ತೆರಳುವ ಮುನ್ನ ಟೀಮ್​ ಇಂಡಿಯಾ ಆಟಗಾರರು ದೆಹಲಿಯ ಲೋಕ ಕಲ್ಯಾಣ ಮಾರ್ಗದಲ್ಲಿರುವ ಪ್ರಧಾನಿ ನರೇಂದ್ರ ಮೋದಿ (PM Narendra Modi)ಅವರ ನಿವಾಸಕ್ಕೆ(Team India Arrival) ಭೇಟಿ ನೀಡಿ ವಿಶ್ವಕಪ್​ ಗೆಲುವಿನ ಕುರಿತು ಪ್ರಧಾನಿ ಜತೆ ತಮ್ಮ ಅನುಭವ ಹಂಚಿಕೊಂಡರು. ಮೋದಿ ಕೂಡ ಆಟಗಾರರೊಂದಿಗೆ ಕೆಲ ಕಾಲ ಕುಶಲೋಪರಿ ನಡೆಸಿದರು. ಜತೆಗೆ ಗ್ರೂಫ್​ ಫೋಟೊ ತೆಗೆಸಿಕೊಂಡರು. ಆಟಗಾರರಿಗೆ ವಿಶೇಷ ಭೋಜನ ಕೂಟವನ್ನು ಕೂಡ ಏರ್ಪಡಿಸಲಾಗಿತ್ತು.

ಪ್ರತಿಕೂಲ ಹವಾಮಾನದ ಕಾರಣದಿಂದ ಆಟಗಾರರು ಕೆಲವು ದಿನ ಬಾರ್ಬಡಾಸ್​ನಲ್ಲೇ ಸಿಲುಕಿ ಹಾಕಿಕೊಂಡಿದ್ದರು. ಸದ್ಯ ತವರಿಗೆ ಆಗಮಿಸಿದ್ದಾರೆ. ಸಂಜೆ ಮುಂಬೈಯಲ್ಲಿ ನಡೆಯುವ ಅಭಿನಂದನಾ ಕಾರ್ಯಕ್ರಮದ ಬಳಿಕ ಟೀಮ್​ ಇಂಡಿಯಾ ಆಟಗಾರರು ತಮ್ಮ ಮನೆಗಳತ್ತ ಪ್ರಯಾಣ ಬೆಳೆಸಲಿದ್ದಾರೆ.

Continue Reading
Advertisement
Team India
ಪ್ರಮುಖ ಸುದ್ದಿ4 mins ago

Team India : ಮುಂಬೈನಲ್ಲಿ ನಡೆದ ಭಾರತ ತಂಡದ ವಿಜಯೋತ್ಸವ ನೋಡಿದ ರೋಮಾಂಚನ ಖಾತರಿ

Viral Video
ದೇಶ11 mins ago

10 ರೂ.ಗಾಗಿ ಎಲ್ಲರ ಮುಂದೆ ಪ್ಯಾಂಟ್‌ ಬಿಚ್ಚಿ, ಆಟೋ ಡ್ರೈವರ್‌ ಮೇಲೆ ಮಂಗಳಮುಖಿ ಹಲ್ಲೆ; Video ಇಲ್ಲಿದೆ

A lorry collided with a bike Two persons died on the spot
ಕರ್ನಾಟಕ22 mins ago

Road Accident: ಬೈಕ್‌ಗೆ ಲಾರಿ ಡಿಕ್ಕಿ; ಇಬ್ಬರು ಸ್ಥಳದಲ್ಲೇ ಸಾವು!

Drowned In Water A woman died while crossing the kalu sanka
ಕರ್ನಾಟಕ23 mins ago

Drowned In Water: ಕಾಲು ಸಂಕ ದಾಟುವಾಗ ನೀರಲ್ಲಿ ಕೊಚ್ಚಿ ಹೋದ ಮಹಿಳೆ!

Fans came from Japan to Hyderabad to watch Prabhas starrer Kalki 2898 AD
ಕರ್ನಾಟಕ26 mins ago

Kalki 2898 AD: “ಕಲ್ಕಿ 2898 ಎಡಿ” ಸಿನಿಮಾ ನೋಡಲು ಜಪಾನ್‌ನಿಂದ ಹೈದರಾಬಾದ್‌ಗೆ ಬಂದ ಫ್ಯಾನ್ಸ್‌!

India's open-bus parade
ಪ್ರಮುಖ ಸುದ್ದಿ43 mins ago

India’s open-bus parade : ಮುಂಬೈನಲ್ಲಿ ನಡೆದ ಭಾರತ ಕ್ರಿಕೆಟ್​ ತಂಡದ ವಿಜಯೋತ್ಸವ ಕಾರ್ಯಕ್ರಮದ ಚಿತ್ರಗಳು ಇಲ್ಲಿವೆ

Dr Jitendra Singh
ದೇಶ54 mins ago

2025ರ ವೇಳೆಗೆ ಬಾಹ್ಯಾಕಾಶ, ಸಮುದ್ರದ ಆಳಕ್ಕೆ ಮಾನವ ಸಹಿತ ಮಿಷನ್;‌ ಕೇಂದ್ರ ಸಚಿವ ಮಹತ್ವದ ಘೋಷಣೆ

Rohit Sharma
ಕ್ರಿಕೆಟ್1 hour ago

Rohit Sharma : ವಾಂಖೆಡೆ ಸ್ಟೇಡಿಯಮ್​ನಲ್ಲಿ ಡಾನ್ಸ್ ಮಾಡಿದ ರೋಹಿತ್ ಶರ್ಮಾ

Mukesh Ambani
ದೇಶ2 hours ago

Mukesh Ambani: ಸೋನಿಯಾ ಗಾಂಧಿಯನ್ನು ಮಗನ ಮದುವೆಗೆ ಆಹ್ವಾನಿಸಿದ ಮುಕೇಶ್‌ ಅಂಬಾನಿ

India's open-bus parade
ಪ್ರಮುಖ ಸುದ್ದಿ2 hours ago

India’s open-bus parade : ಭಾರತ ತಂಡದ ವಿಜಯೋತ್ಸವ ಮೆರವಣಿಗೆಯಲ್ಲಿ ಭದ್ರತಾ ವೈಫಲ್ಯ; ಬಸ್​​ನಲ್ಲಿದ್ದ ಆಟಗಾರರು ಜಸ್ಟ್​ ಮಿಸ್​​

Sharmitha Gowda in bikini
ಕಿರುತೆರೆ9 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ9 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ9 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ7 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ9 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ9 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ7 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ8 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ10 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

karnataka Weather Forecast
ಮಳೆ6 hours ago

Karnataka Weather : ಭಾರಿ ಮಳೆಗೆ ಗುಡ್ಡ ಕುಸಿತ; ಮಣ್ಣಿನ ಅಡಿ ಸಿಲುಕಿದ ಮಹಿಳೆ ಉಸಿರುಗಟ್ಟಿ ಸಾವು

karnataka Rain
ಮಳೆ7 hours ago

Karnataka Rain : ಮಳೆಗೆ ಜಾರಿ ಮುಖಾಮುಖಿ ಡಿಕ್ಕಿಯಾದ ಲಾರಿಗಳು; ಕಾರಿನ ಮೇಲೆ ಬಿದ್ದ ಬೃಹತ್‌ ಮರ

wild animal attack
ಬೆಂಗಳೂರು ಗ್ರಾಮಾಂತರ9 hours ago

Wild Animal Attack : ಮಾಗಡಿಯಲ್ಲಿ ರೈತನ ತಲೆ ಬಗೆದ ಕರಡಿ; ಮಲೆನಾಡಿನಲ್ಲಿ ಆನೆಗಳ ಹಾವಳಿ

Chikkaballapura News
ಚಿಕ್ಕಬಳ್ಳಾಪುರ10 hours ago

Chikkaballapura News : ಒಂದು ವರ್ಷದ ಮಗು ಬಿಟ್ಟು ಕ್ಷಣಾರ್ಧದಲ್ಲಿ ತಾಯಿ ಎಸ್ಕೇಪ್!

karnataka Rain
ಮಳೆ11 hours ago

Karnataka Rain : ಧಾರಾಕಾರ ಮಳೆಗೆ ಗುಡ್ಡ ಕುಸಿತ; ಹೊನ್ನಾವರ-ಬೆಂಗಳೂರು ಹೆದ್ದಾರಿ ಬಂದ್

Karnataka Rain
ಮಳೆ12 hours ago

Karnataka Rain : ಉಕ್ಕಿ ಹರಿದ ಚಂಡಿಕಾ ಹೊಳೆಯಲ್ಲಿ ಸಿಲುಕಿಕೊಂಡ ಬಸ್‌; ಪ್ರಯಾಣಿಕರು ಕಂಗಾಲು

Tornado Effect in Udupi
ಉಡುಪಿ13 hours ago

Tornado Effect : ಉಡುಪಿಯ ರಟ್ಟಾಡಿಯಲ್ಲಿ ಭಾರಿ ಶಬ್ದದೊಂದಿಗೆ ಅಪ್ಪಳಿಸಿದ ಸುಂಟರಗಾಳಿ

karnataka weather Forecast
ಮಳೆ2 days ago

Karnataka Weather : ಮಳೆ ಅಬ್ಬರಕ್ಕೆ ಹೆಚ್ಚಾದ ಗುಡ್ಡ ಕುಸಿತ; ಬಂಗ್ರ ಕೂಳೂರಿನಲ್ಲಿ ರಸ್ತೆ ಬಂದ್‌

karnataka Weather Forecast
ಮಳೆ3 days ago

Karnataka Weather : ಕೊಡಗು, ದಾವಣಗೆರೆಯಲ್ಲಿ ಮಳೆಯಾಟ; ಬೆಂಗಳೂರಲ್ಲಿ ಮೋಡ ಕವಿದ ವಾತಾವರಣ

karnataka Weather Forecast
ಮಳೆ4 days ago

Karnataka Weather : ಬೆಂಗಳೂರು, ಕಲಬುರಗಿ ಸೇರಿದಂತೆ ಹಲವೆಡೆ ವರ್ಷಧಾರೆ; ನಾಳೆಗೂ ಮಳೆ ಅಲರ್ಟ್‌

ಟ್ರೆಂಡಿಂಗ್‌