Site icon Vistara News

VISTARA TOP 10 NEWS : ಸೆಮೀಸ್​ಗೇರಿದ ಭಾರತ, 5 ವರ್ಷವೂ ನಾನೇ ಸಿಎಂ ಎಂದ ಸಿದ್ದರಾಮಯ್ಯ ಮತ್ತಿತರ ದಿನದ ಪ್ರಮುಖ ಸುದ್ದಿಗಳು

Top 10 news

1. IND vs SL: ಲಂಕಾ ದಹನ ಮಾಡಿ ಸೆಮಿಫೈನಲ್​ ಪ್ರವೇಶಿಸಿದ ಟೀಮ್​ ಇಂಡಿಯಾ
ಮುಂಬಯಿ: ಶ್ರೀಲಂಕಾ ವಿರುದ್ಧ ದಾಖಲೆಯ 302 ರನ್​ಗಳ ಗೆಲುವು ಸಾಧಿಸಿದ ಟೀಮ್​ ಇಂಡಿಯಾ ಹಾಲಿ ಆವೃತ್ತಿಯ ವಿಶ್ವಕಪ್ ಟೂರ್ನಿಯಲ್ಲಿ ಮೊದಲ ತಂಡವಾಗಿ ಸೆಮಿಫೈನಲ್​ ಪ್ರವೇಶಿಸಿದೆ. ಇನ್ನುಳಿದ ಮೂರು ಸ್ಥಾನಕ್ಕೆ ಕನಿಷ್ಠ 5 ತಂಡಗಳು ಪೈಪೋಟಿ ನಡೆಸಲಿದೆ. ಇತ್ತಂಡಗಳ ಈ ಪಂದ್ಯ ಇತ್ತೀಚೆಗೆ ಮುಕ್ತಾಯ ಕಂಡಿದ್ದ ಏಷ್ಯಾಕಪ್ ಫೈನಲ್​ ಪಂದ್ಯದ ಮುಂದುವರಿದ ಭಾಗದಂತೆ ಕಂಡು ಬಂತು. ಆ ಪಂದ್ಯದಲ್ಲಿಯೂ ಲಂಕಾ ಇದೇ ರೀತಿಯ ಕಳಪೆ ಪ್ರದರ್ಶನ ತೋರಿ ಹೀನಾಯ ಸೋಲು ಕಂಡಿತ್ತು. ಆ ಪಂದ್ಯದಲ್ಲಿ ಲಂಕಾ 50 ರನ್​ಗೆ ಆಲೌಟ್​ ಆಗಿತ್ತು. ವಿಶ್ವಕಪ್​ನಲ್ಲಿ 55 ರನ್​ಗೆ ಸರ್ವಪತನ ಕಂಡಿತು. ಪೂರ್ಣ ವರದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
ವಿಶ್ವ ಕಪ್‌ ಕುರಿತ ಸಮಗ್ರ ಸುದ್ದಿಗಳಿಗಾಗಿ ಕ್ಲಿಕ್‌ ಮಾಡಿ

2. ಮುಂದಿನ 5 ವರ್ಷವೂ ನಾನೇ ಸಿಎಂ ಎಂದ ಸಿದ್ದರಾಮಯ್ಯ!
ವಿಜಯನಗರ (ಹೊಸಪೇಟೆ): ರಾಜ್ಯ ರಾಜಕೀಯದಲ್ಲಿ (Karnataka Politics) ಸಾಕಷ್ಟು ಬದಲಾವಣೆ ಆಗುತ್ತದೆ. ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಬದಲಾಗುತ್ತಾರೆ. ಈಗ ಡಿಸಿಎಂ ಆಗಿರುವ ಡಿ.ಕೆ. ಶಿವಕುಮಾರ್‌ (DCM DK Shivakumar) ಸಿಎಂ ಆಗಲಿದ್ದಾರೆ ಎಂಬ ಚರ್ಚೆ ಹುಟ್ಟಿಕೊಂಡಿತ್ತು. ಆದರೆ, ಈಗ ಆ ಎಲ್ಲ ಗೊಂದಲಕ್ಕೆ ಸ್ವತಃ ಸಿಎಂ ಸಿದ್ದರಾಮಯ್ಯ ತೆರೆ ಎಳೆದಿದ್ದಾರೆ. ಮುಂದಿನ ಐದು ವರ್ಷವೂ ನಾನೇ ಸಿಎಂ ಎಂದು ಹೇಳಿದ್ದಾರೆ. ಪೂರ್ಣ ವರದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.

3. 6 ತಿಂಗಳಾದರೂ ಸುಧಾರಿಸದ ಸರ್ಕಾರ, ಹಿಡಿತವಿಲ್ಲದ ಸಿಎಂ; ಬಿಜೆಪಿಯಿಂದ ಉಗ್ರ ಹೋರಾಟ: ಬಿಎಸ್‌ವೈ
ಬೆಂಗಳೂರು: ‌ಮುಖ್ಯಮಂತ್ರಿ ಸಿದ್ದರಾಮಯ್ಯ (CM Siddaramaiah) ಅವರಿಗೆ ತಮ್ಮ ಎರಡನೇ ಅವಧಿಯಲ್ಲಿ ಹಿಡಿತ ಇಲ್ಲ. ಅವರೀಗ ವಿಚಿತ್ರ ಪರಿಸ್ಥಿತಿಯಲ್ಲಿ ಇದ್ದಾರೆ. ಶಕ್ತಿ ಯೋಜನೆಯಡಿ (Shakti Scheme) ಉಚಿತ ಬಸ್ ಪ್ರಯಾಣ ಹೊರತುಪಡಿಸಿ. ಗೃಹಲಕ್ಷ್ಮಿ ಯೋಜನೆ (Grilahakshmi Scheme) ಜನರನ್ನು ತಲುಪಿಲ್ಲ. ಇದಕ್ಕೆಲ್ಲ ಅವರು ಕಸರತ್ತು ಮಾಡುತ್ತಿದ್ದಾರೆ. ಉಚಿತ ಬಸ್ ಪ್ರಯಾಣ ಹೊರತುಪಡಿಸಿ, ಉಳಿದ ಉಚಿತ ಗ್ಯಾರಂಟಿ ಯೋಜನೆಗಳು (Congress Guarantee Scheme) ಅರ್ಧದಷ್ಟು ಜನರನ್ನು ತಲುಪಿಲ್ಲ. ಹೀಗಾಗಿ ಎಲ್ಲ ಅಭಿವೃದ್ಧಿ ಕಾರ್ಯಗಳೂ ಸ್ಥಗಿತವಾಗಿವೆ. ವಿದ್ಯುತ್ ಉಚಿತ ಕೊಡುವುದಾಗಿ ಹೇಳಿ, ದರವನ್ನು ಹೆಚ್ಚಳ ಮಾಡಿದ್ದಾರೆ. ಕಾಂಗ್ರೆಸ್‌ ಸರ್ಕಾರದವರು ಒಳ ಜಗಳದಲ್ಲಿ ತಲ್ಲೀನರಾಗಿದ್ದಾರೆ. ಇದೇ ರೀತಿ ಮುಂದುವರಿದರೆ ಹೋರಾಟ ಮಾಡಬೇಕಾಗಲಿದೆ. ನಾವು ಆರು ತಿಂಗಳು ಅವಕಾಶ ನೀಡಿದೆವು. ಆದರೆ, ಆರು ತಿಂಗಳಲ್ಲಿ ಯಾವುದೇ ಸುಧಾರಣೆ ಆಗಲಿಲ್ಲ‌. ಹಾಗಾಗಿ ರಾಜ್ಯಾದ್ಯಂತ ಹೋರಾಟ ಮಾಡುತ್ತೇವೆ ಎಂದು ಮಾಜಿ ಸಿಎಂ ಬಿ.ಎಸ್.‌ ಯಡಿಯೂರಪ್ಪ (Former CM BS Yediyurappa) ಎಚ್ಚರಿಕೆ ನೀಡಿದರು. ಈ ಮೂಲಕ ರಾಜ್ಯ ರಾಜಕೀಯದಲ್ಲಿ (Karnataka Politics) ಬಿಎಸ್‌ವೈ ಮತ್ತೆ ಸಂಚಲನ ಮೂಡಿಸುವ ಸಂದೇಶ ಕೊಟ್ಟಿದ್ದಾರೆ. ಪೂರ್ಣ ವರದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.

4. ಝಿಕಾ ವೈರಸ್ ತಡೆಗೆ ಮಾರ್ಗಸೂಚಿ ಬಿಡುಗಡೆ ಮಾಡಿದ ಆರೋಗ್ಯ ಇಲಾಖೆ
ಬೆಂಗಳೂರು: ಚಿಕ್ಕಬಳ್ಳಾಪುರದಲ್ಲಿ ಝಿಕಾ ವೈರಸ್ (Zika Virus) ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಸದ್ಯ ಯಾರೂ ಭಯಪಡುವುದು ಬೇಡ ಎಂದು ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ (Health Minister Dinesh Gundu Rao) ಹೇಳಿಕೆ ನೀಡಿದ್ದಾರೆ. ಈ ನಡುವೆ ಆರೋಗ್ಯ ಇಲಾಖೆಯಿಂದ ಝಿಕಾ ವೈರಸ್ ಮಾರ್ಗಸೂಚಿ (Health Department Guidelines) ಬಿಡುಗಡೆಯಾಗಿದೆ. ಈ ನಿಯಮವನ್ನು ರಾಜ್ಯದ ಜನತೆಯು ಅನುಸರಿಸಬೇಕು ಎಂದು ಆರೋಗ್ಯ ಇಲಾಖೆ ಸೂಚನೆ ನೀಡಿದೆ. ಪೂರ್ಣ ವರದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.

5. ಇಡಿ ಸಮನ್ಸ್‌ ಧಿಕ್ಕರಿಸಿ ಚುನಾವಣೆ ಪ್ರಚಾರಕ್ಕೆ ತೆರಳಿದ ಕೇಜ್ರಿವಾಲ್‌, ಇಡಿ ಮುಂದೇನು ಮಾಡಬಹುದು?
ಹೊಸದಿಲ್ಲಿ: ವಿಚಾರಣೆಗೆ ಬರುವಂತೆ ಜಾರಿ ನಿರ್ದೇಶನಾಲಯ (Enforcement Directorate – ED) ನೀಡಿದ ಸಮನ್ಸ್‌ ಧಿಕ್ಕರಿಸಿ ದಿಲ್ಲಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್ (Delhi CM Arvind Kejriwal) ಅವರು ಮಧ್ಯಪ್ರದೇಶದಲ್ಲಿ ಚುನಾವಣಾ ಪ್ರಚಾರಕ್ಕೆ ತೆರಳಿದ್ದಾರೆ. ಪೂರ್ಣ ವರದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ: Mahua Moitra: ನೀತಿ ಸಮಿತಿ ಮುಂದೆ ಹಾಜರಾದ ಟಿಎಂಸಿ ಸಂಸದೆ ಮಹಿವಾ ಮೋಯಿತ್ರಾ; ಆಕೆಯ ಮಾಜಿ ಸಂಗಾತಿ ಹೇಳಿದ್ದೇನು?

6. ಅತಿಥಿ ಉಪನ್ಯಾಸಕರ ಸೇವಾ ಅವಧಿ ವಿಸ್ತರಣೆ; ಹೊರಗುತ್ತಿಗೆ ನೌಕರರಿಗೆ ಗುಡ್‌ ನ್ಯೂಸ್‌
ಬೆಂಗಳೂರು: ರಾಜ್ಯ ಸರ್ಕಾರ ಅತಿಥಿ ಉಪನ್ಯಾಸಕರಿಗೆ (Guest Lecturer) ಹಾಗೂ ಹೊರಗುತ್ತಿಗೆ ನೌಕರರಿಗೆ (Outsourced employees) ಗುಡ್‌ ನ್ಯೂಸ್‌ ಒಂದನ್ನು ನೀಡಿದೆ. ಒಂದು ಕಡೆ ಅತಿಥಿ ಉಪನ್ಯಾಸಕರ ನೇಮಕ ವಿಚಾರದಲ್ಲಿನ ಬಹುದಿನಗಳ ಬೇಡಿಕೆಯನ್ನು ಈಡೇರಿಸಿದರೆ, ಮತ್ತೊಂದು ಕಡೆ ವಿವಿಧ ಜಿ.ಪಂ ಇಲಾಖೆಗಳ ಹೆಚ್ಚುವರಿ ವೇತನ ಬಿಡುಗಡೆಗೊಳಿಸಿ ರಾಜ್ಯ ಸರ್ಕಾರ ಆದೇಶ ಹೊರಡಿಸಿದೆ. ಪೂರ್ಣ ವರದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.

7. ಇಂಡಿಯಾ ಬ್ಲಾಕ್ ವೇಸ್ಟ್​​ ಎಂದ ಬಿಹಾರದ ಸಿಎಂ ನಿತೀಶ್​ ಕುಮಾರ್
ಪಾಟ್ನಾ: ಕಾಂಗ್ರೆಸ್​ಗೆ ಇಂಡಿಯಾ ಬ್ಲಾಕ್​ ಮೈತ್ರಿಗಿಂತ (India Bloc) ಚುನಾವಣೆಯಲ್ಲಿ ಹೆಚ್ಚು ಆಸಕ್ತಿ ಇದೆ ಎಂದು ಹೇಳುವ ಮೂಲಕ ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ಗುರುವಾರ ಹೇಳಿದ್ದಾರೆ. ಈ ಮೂಲಕ ಅವರು ಆಡಳಿತಾರೂಢ ಬಿಜೆಪಿಗೆ ಪ್ರತಿಪಕ್ಷಗಳ ಒಕ್ಕೂಟದ ವಿರುದ್ಧ ದಾಳಿ ಮಾಡಲು ಹೊಸ ಅಸ್ತ್ರ ನೀಡಿದ್ದಾರೆ. ಪಾಟ್ನಾದಲ್ಲಿ ಮಾತನಾಡಿದ ನಿತೀಶ್ ಕುಮಾರ್ 2024 ರ ಸಾರ್ವತ್ರಿಕ ಚುನಾವಣೆಯಲ್ಲಿ ಬಿಜೆಪಿ ಅಲೆಯನ್ನು ಎದುರಿಸಲು ರಚಿಸಲಾದ 28 ಪಕ್ಷಗಳ ಬಣವಾದ ಮೈತ್ರಿಕೂಟದಿಂದ “ಹೆಚ್ಚಿನದೇನೂ ನಡೆಯುತ್ತಿಲ್ಲ” ಎಂದು ಹೇಳಿಕೆ ನೀಡಿದ್ದಾರೆ. ಈ ಮೂಲಕ ಇಂಡಿಯಾ ಬ್ಲಾಕ್​ ಚುನಾವಣೆಗೆ ಮೊದಲೇ ಪೀಸ್​ಪೀಸ್​ ಆಗುವ ಸೂಚನೆ ಕೊಟ್ಟಿದ್ದಾರೆ. ಪೂರ್ಣ ವರದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.

8. ಭೀಕರ ರಸ್ತೆ ಅಪಘಾತ: ಮಕ್ಕಳು ಸೇರಿ ಒಂದೇ ಕುಟುಂಬದ ಐವರ ದುರ್ಮರಣ
ಕಲಬುರಗಿ: ಒಂದು ಸಣ್ಣ ನಿರ್ಲಕ್ಷ್ಯವು ಐವರ ಜೀವವನ್ನೇ ತೆಗೆದಿದೆ. ಒಂದೇ ಬೈಕ್‌ನಲ್ಲಿ ಬರುತ್ತಿದ್ದ ಒಂದೇ ಕುಟುಂಬದ ಐವರು ರಸ್ತೆ ಅಪಘಾತದಲ್ಲಿ (Road Accident) ಮೃತಪಟ್ಟಿದ್ದಾರೆ. ಬೈಕ್‌ಗೆ ಲಾರಿ ಡಿಕ್ಕಿಯಾಗಿ ಐವರು ಮೃತಪಟ್ಟಿರುವ ಘಟನೆ ಕಲಬುರಗಿಯ ಅಫಜಲಪುರ ತಾಲೂಕಿನ ಹಳ್ಳೋಳ್ಳಿ ಕ್ರಾಸ್ ಬಳಿ ನಡೆದಿದೆ. ನೇಪಾಳ ಮೂಲದ ಒಂದೇ ಕುಟುಂಬದವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ. ಪೂರ್ಣ ವರದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.

9. ಪರೀಕ್ಷೆಯಲ್ಲಿ ನಕಲು ಮಾಡಿ ಸಿಕ್ಕಿಬಿದ್ದ ವಿದ್ಯಾರ್ಥಿನಿ; ಕಾಲೇಜು ಕಟ್ಟಡದಿಂದ ಜಿಗಿದು ಆತ್ಮಹತ್ಯೆ
ಹಾಸನ: ಕಾಲೇಜಿನ ಐದನೇ ಮಹಡಿಯಿಂದ ಜಿಗಿದು ಇಂಜಿನಿಯರಿಂಗ್ ವಿದ್ಯಾರ್ಥಿನಿ ಆತ್ಮಹತ್ಯೆ (Self Harming) ಮಾಡಿಕೊಂಡಿರುವ ಘಟನೆ ನಗರದ ಹೊರವಲಯದ ರಾಜೀವ್ ಇನ್‌ಸ್ಟಿಟ್ಯೂಟ್ ಆಫ್ ಟೆಕ್ನಾಲಜಿ ಕಾಲೇಜಿನಲ್ಲಿ (Rajiv Institute of Technology College) ನಡೆದಿದೆ. ಪೂರ್ಣ ವರದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.

10. ಹಾವಿನ ದ್ವೇಷ 12 ವರುಷ! ಕಾಟ ಕೊಟ್ಟಿದ್ದ ಯುವಕನನ್ನು ಕಚ್ಚಿ ಸಾಯಿಸಿತೇ ನಾಗರಹಾವು?
ಹಾಸನ: ಹಾವಿನ ದ್ವೇಷ (Snake hatred) 12 ವರುಷ ಎಂದು ಹೇಳುವುದು ನಿಜವೋ ಸುಳ್ಳೋ ಗೊತ್ತಿಲ್ಲ. ಇದೊಂದು ನಂಬಿಕೆಯಾಗಿ ಇಲ್ಲಿಯವರೆಗೂ ಚಾಲ್ತಿಯಲ್ಲದಿದೆ. ಆದರೆ, ಈಗ ಇದು ನಿಜಕ್ಕೂ ಹೌದೇ ಎಂದು ಅನುಮಾನ ಹುಟ್ಟಿಸುವಂತಹ ಒಂದು ಘಟನೆ ಹಾಸನ ಜಿಲ್ಲೆಯ ಹೊಳೆನರಸೀಪುರದಲ್ಲಿ ನಡೆದಿದೆ. ಹೌದು. ಹಾವಿಗೆ ಪದೇ ಪದೆ ತೊಂದರೆ ಕೊಟ್ಟು ಅದನ್ನು ವಿಡಿಯೊ (Snake Video) ಮಾಡಿಕೊಂಡಿದ್ದ ಯುವಕ, ಅದಾಗಿ ಕೆಲವೇ ದಿನಗಳಲ್ಲಿ ಹಾವು ಕಚ್ಚಿ (Snake Bite) ಮೃತಪಟ್ಟಿದ್ದಾನೆ. ಪೂರ್ಣ ವರದಿ ಓದಲು ಈ ಲಿಂಕ್ ಕ್ಲಿಕ್ ಮಾಡಿ.
ಮತ್ತಷ್ಟು ವೈರಲ್‌ ಸುದ್ದಿಗಳಿಗಾಗಿ ಕ್ಲಿಕ್‌ ಮಾಡಿ.

Exit mobile version