ಮುಂಬಯಿ: ವೆಸ್ಟ್ ಇಂಡೀಸ್ (INDvsWI 2023) ಪ್ರವಾಸಕ್ಕಾಗಿ ಭಾರತದ ಟೆಸ್ಟ್ ಮತ್ತು ಏಕದಿನ ತಂಡಗಳನ್ನು ಬಿಸಿಸಿಐ ಶುಕ್ರವಾರ ಪ್ರಕಟಿಸಿದೆ. ಡಬ್ಲ್ಯುಟಿಸಿ ಫೈನಲ್‌ನಲ್ಲಿ ನಿರಾಶಾದಾಯಕ ಪ್ರದರ್ಶನದ ನಂತರ ಚೇತೇಶ್ವರ ಪೂಜಾರ ಮತ್ತು ಉಮೇಶ್ ಯಾದವ್ ಅವರನ್ನು ಟೆಸ್ಟ್ ತಂಡದಿಂದ ಕೈಬಿಡಲಾಗಿದೆ. ಒಂದು ವರ್ಷದ ಹಿಂದೆ ಟೆಸ್ಟ್ ತಂಡಕ್ಕೆ ಮರಳಿದ್ದ ಪೂಜಾರ ಅವಕಾಶವನ್ನು ಉತ್ತಮವಾಗಿ ಬಳಸಿಕೊಂಡಿರಲಿಲ್ಲ. ಕೊಟ್ಟ ಕೊನೇ ಅವಕಾಶ ಎಂಬಂತೆ ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್ ಫೈನಲ್‌ನಲ್ಲೂ ನೀರಸ ಪ್ರದರ್ಶನ ನೀಡಿದ್ದರು. ಅದೇ ರೀತಿ ಡಬ್ಲ್ಯುಟಿಸಿ ಫೈನಲ್‌ನಲ್ಲಿ ಆಸ್ಟ್ರೇಲಿಯಾ ಉಮೇಶ್ ಯಾದವ್ ಕೂಡ ಉತ್ತಮ ಪ್ರದರ್ಶನ ನೀಡಿರಲಿಲ್ಲ. ಹೀಗಾಗಿ ಅವರಿಬ್ಬರಿಗು ಕೊಕ್ ಕೊಡಲಾಗಿದೆ. ಯಶಸ್ವಿ ಜೈಸ್ವಾಲ್ ಮತ್ತು ವೇಗಿ ಮುಖೇಶ್ ಕುಮಾರ್‌ಗೆ ಅವಕಾಶ ದೊರಕಿದೆ. ಇದೇ ವೇಳೆ ದೀರ್ಘ ಅವಧಿಯ ಬಳಿಕ ನವದೀಪ್ ಸೈನಿ ತಂಡಕ್ಕೆ ಮರಳಿದ್ದಾರೆ.
ಐಪಿಎಲ್ 2023ರಲ್ಲಿ ಅದ್ಭುತ ಪ್ರದರ್ಶನ ನೀಡಿದ ನಂತರ ಜೈಸ್ವಾಲ್ ಆಯ್ಕೆ ರೇಸ್‌ನಲ್ಲಿ ಇದ್ದರು. ಐಪಿಎಲ್‌ನಲ್ಲಿ ಅವರು 163 ಸ್ಟ್ರೈಕ್ ರೇಟ್‌ನಲ್ಲಿ 625 ರನ್ ಗಳಿಸಿದ್ದರು. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲೂ ಅದ್ಭುತ ದಾಖಲೆ ಹೊಂದಿದ್ದಾರೆ. ಮುಂಬೈ ಕ್ರಿಕೆಟರ್ 15 ಪಂದ್ಯಗಳಲ್ಲಿ 80.21 ಸರಾಸರಿ ಹೊಂದಿದ್ದು, 9 ಶತಕಗಳನ್ನು ಬಾರಿಸಿದ್ದಾರೆ. 265 ಗರಿಷ್ಠ ಅವರ ಗರಿಷ್ಠ ಸ್ಕೋರ್.
ಇದೇ ವೇಳೆ ಮೊಹಮ್ಮದ್ ಶಮಿಗೂ ಟೆಸ್ಟ್ ಮತ್ತು ಏಕದಿನ ಪಂದ್ಯಗಳಿಂದ ವಿರಾಮ ನೀಡಲಾಗಿದೆ. ಇವರ ಬದಲಿಗೆ ಜಯದೇವ್ ಉನಾದ್ಕಟ್ ಅವಕಾಶ ಪಡೆದಿದ್ದಾರೆ. ಶಾರ್ದೂಲ್ ಠಾಕೂರ್ ಮತ್ತು ಅಜಿಂಕ್ಯ ರಹಾನೆ ಟೆಸ್ಟ್ ತಂಡದಲ್ಲಿ ತಮ್ಮ ಸ್ಥಾನಗಳನ್ನು ಉಳಿಸಿಕೊಂಡಿದ್ದಾರೆ. ಸ್ಪಿನ್ ಬೌಲಿಂಗ್ ಆಲ್‌ರೌಂಡರ್ ಅಕ್ಷರ್ ಪಟೇಲ್ ಕೂಡ ತಮ್ಮ ಸ್ಥಾನಗಳನ್ನು ಉಳಿಸಿಕೊಂಡಿದ್ದಾರೆ. ಸುಮಾರು 15 ತಿಂಗಳುಗಳ ಕಾಲ ಟೆಸ್ಟ್ ಸೇರಿದಂತೆ ಯಾವುದೇ ತಂಡದಲ್ಲಿ ಸ್ಥಾನ ಪಡೆಯದ ರಹಾನೆ ಅವರಿಗೆ ಭಾರತ ತಂಡದ ಉಪನಾಯಕನ ಪಟ್ಟ ನೀಡಲಾಗಿದೆ. ವಿಶ್ವ ಟೆಸ್ಟ್ ಚಾಂಪಿಯನ್‌ಷಿಪ್‌ನಲ್ಲಿ ಅವರು ಉತ್ತಮ ಪ್ರದರ್ಶನ ನೀಡಿರುವುದೇ ಅವರಿಗೆ ಉಪನಾಯಕನ ಪಟ್ಟ ಕಟ್ಟಲು ಪ್ರಮುಖ ಕಾರಣ.
NEWS – India’s squads for West Indies Tests and ODI series announced.
— BCCI (@BCCI) June 23, 2023
TEST Squad: Rohit Sharma (Capt), Shubman Gill, Ruturaj Gaikwad, Virat Kohli, Yashasvi Jaiswal, Ajinkya Rahane (VC), KS Bharat (wk), Ishan Kishan (wk), R Ashwin, R Jadeja, Shardul Thakur, Axar Patel, Mohd.… pic.twitter.com/w6IzLEhy63
ಡಬ್ಲ್ಯುಟಿಸಿ ಫೈನಲ್‌ಗೆ ಬ್ಯಾಕ್ ಅಪ್ ಓಪನರ್ ಆಗಿಯಾಗಿದ್ದ ಋತುರಾಜ್ ಗಾಯಕ್ವಾಡ್ ತಮ್ಮ ವಿವಾಹದ ಕಾರಣಕ್ಕೆ ಇಂಗ್ಲೆಂಡ್‌ಗೆ ಹೋಗಿರಲಿಲ್ಲ. ಇದೀಗ ಡೊಮಿನಿಕಾದ ವಿಂಡ್ಸರ್ ಪಾರ್ಕ್ನಲ್ಲಿ ಪ್ರಾರಂಭವಾಗುವ ಎರಡು ಪಂದ್ಯಗಳ ಟೆಸ್ಟ್ ಸರಣಿಗೆ 16 ಸದಸ್ಯರ ತಂಡದಲ್ಲಿ ಅವರೂ ಸ್ಥಾನ ಪಡೆದಿದ್ದಾರೆ.
ವೆಸ್ಟ್ ಇಂಡೀಸ್ ವಿರುದ್ಧ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿ ಮತ್ತು ಮೂರು ಏಕದಿನ ಪಂದ್ಯಗಳಿಗೆ ಪುರುಷರ ಆಯ್ಕೆ ಸಮಿತಿಯು ಭಾರತದ ತಂಡವನ್ನು ಆಯ್ಕೆ ಮಾಡಿದೆ. ಭಾರತವು ಐದು ಟಿ 20 ಪಂದ್ಯಗಳನ್ನು ಆಡಲಿದೆ. ಅದಕ್ಕೆ ಮುಂದಿನ ದಿನಗಳಲ್ಲಿ ತಂಢ ಪ್ರಕಟಿಸಲಾಗುವುದು ಎಂದು ಬಿಸಿಸಿಐ ಪ್ರಕಟಣೆಯಲ್ಲಿ ತಿಳಿಸಿದೆ.
ಏಕದಿನ ತಂಡಕ್ಕೆ ಸಂಬಂಧಿಸಿದಂತೆ, ಇಶಾನ್ ಕಿಶನ್ ಅವರೊಂದಿಗೆ ಸಂಜು ಸ್ಯಾಮ್ಸನ್ ಅವರನ್ನು ವಿಕೆಟ್ ಕೀಪರ್ ಬ್ಯಾಟರ್ ಆಗಿ ಆಯ್ಕೆ ಮಾಡಲಾಗಿದೆ. ಶ್ರೇಯಸ್ ಅಯ್ಯರ್ ಮತ್ತು ರಿಷಭ್ ಪಂತ್ ಅನುಪಸ್ಥಿತಿಯಲ್ಲಿ, ಆಯ್ಕೆದಾರರು ಸೂರ್ಯಕುಮಾರ್ ಯಾದವ್ ಅವರನ್ನು 4 ನೇ ಕ್ರಮಾಂಕದಲ್ಲಿ ಆಡಿಸಲು ನಿರ್ಧರಿಸಿದ್ದಾರೆ.
ಇದನ್ನೂ ಓದಿ : Team India : ಭಾರತ ಕ್ರಿಕೆಟ್ ತಂಡದ ನೂತನ ಆಯ್ಕೆಗಾರನಿಗೆ ಹುಡುಕಾಟ ಆರಂಭಿಸಿದ ಬಿಸಿಸಿಐ
ವೇಗದ ಬೌಲರ್ ಆಗಿ ಮೊಹಮ್ಮದ್ ಸಿರಾಜ್ ಕಣಕ್ಕಿಳಿಯಲಿದ್ದು, ಅವರಿಗೆ ಶಾರ್ದೂಲ್ ಠಾಕೂರ್ ಮತ್ತು ಜಯದೇವ್ ಉನಾದ್ಕಟ್ ಬೆಂಬಲ ನೀಡಲಿದ್ದಾರೆ. ಉಮ್ರಾನ್ ಮಲಿಕ್ ತಂಡಕ್ಕೆ ಮರಳಿದರೆ, ಮುಖೇಶ್ ಕುಮಾರ್ ಅವರನ್ನು ಏಕದಿನ ಪಂದ್ಯಗಳಿಗೂ ಆಯ್ಕೆ ಮಾಡಲಾಗಿದೆ. ಸ್ಪಿನ್ನರ್‌ಗಳಾದ ಯಜುವೇಂದ್ರ ಚಹಲ್, ಕುಲದೀಪ್ ಯಾದವ್, ಅಕ್ಷರ್ ಪಟೇಲ್ ಮತ್ತು ರವೀಂದ್ರ ಜಡೇಜಾ ಸ್ಪಿನ್ ವಿಭಾಗದ ಅಸ್ತ್ರಗಳಾಗಿದ್ದಾರೆ. ಮೂರು ಪಂದ್ಯಗಳ ಏಕದಿನ ಸರಣಿ ಜುಲೈ 27 ರಂದು ಬಾರ್ಬಡೋಸ್‌ನಲ್ಲಿ ಪ್ರಾರಂಭವಾಗಲಿದೆ.
ಟೆಸ್ಟ್ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಯಶಸ್ವಿ ಜೈಸ್ವಾಲ್, ಅಜಿಂಕ್ಯ ರಹಾನೆ (ಉಪನಾಯಕ), ಕೆಎಸ್ ಭರತ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಅಕ್ಷರ್ ಪಟೇಲ್, ಮೊಹಮ್ಮದ್ ಶಮಿ. ಸಿರಾಜ್, ಮುಖೇಶ್ ಕುಮಾರ್, ಜಯದೇವ್ ಉನಾದ್ಕಟ್, ನವದೀಪ್ ಸೈನಿ.
ಏಕ ದಿನ ಸರಣಿಗೆ ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಇಶಾನ್ ಕಿಶನ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ (ಉಪನಾಯಕ), ಶಾರ್ದೂಲ್ ಠಾಕೂರ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಯಜುವೇಂದ್ರ ಚಾಹಲ್, ಕುಲದೀಪ್ ಯಾದವ್, ಜಯದೇವ್ ಉನಾದ್ಕತ್, ಮೊಹಮ್ಮದ್ ಶಮಿ. ಸಿರಾಜ್, ಉಮ್ರಾನ್ ಮಲಿಕ್, ಮುಖೇಶ್ ಕುಮಾರ್.