ಈಪುಣೆ: ಈಗಾಗಲೇ ಹ್ಯಾಟ್ರಿಕ್ ಗೆಲುವು ಸಾಧಿಸಿದ ಭಾರತ ನಾಲ್ಕನೇ ಗೆಲುವಿನ ನಿರೀಕ್ಷೆಯಲ್ಲಿದೆ. ಬಾಂಗ್ಲಾದೇಶ(IND vs BAN) ವಿರುದ್ಧ ಪುಣೆಯಲ್ಲಿ ನಡೆಯುತ್ತಿರುವ ಪಂದ್ಯದಲ್ಲಿಯೂ ಗೆಲುವು ಸಾಧಿಸಿ ಅಂಕಪಟ್ಟಿಯಲ್ಲಿ ಮತ್ತೆ ಅಗ್ರಸ್ಥಾನ ಪಡೆಯುವುದು ರೋಹಿತ್ ಪಡೆಯ ಯೋಜನೆಯಾಗಿದೆ.
ಶಾರ್ದೂಲ್ ಠಾಕೂರ್ ಅವರ ಬದಲು ಈ ಪಂದ್ಯದಲ್ಲಿ ಮೊಹಮ್ಮದ್ ಶಮಿ ಅವರು ಆಡುವ ಸಾಧ್ಯತೆ ಇದೆ.
ಭಾರತ ಮತ್ತು ಬಾಂಗ್ಲಾದೇಶ ವಿಶ್ವಕಪ್ನಲ್ಲಿ ಇದುವರೆಗೆ 4 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಭಾರತ ಮೂರು ಪಂದ್ಯಗಲ್ಲು ಗೆದ್ದರೆ, ಬಾಂಗ್ಲಾ 1 ಪಂದ್ಯ ಗೆದ್ದಿದೆ. ಇತ್ತಂಡಗಳು ವಿಶ್ವಕಪ್ನಲ್ಲಿ ಮೊದಲು ಮುಖಾಮುಖಿಯಾಗಿದ್ದು 2007ರಲ್ಲಿ. ಈ ಪಂದ್ಯದಲ್ಲಿ ಭಾರತ 5 ವಿಕೆಟ್ಗಳ ಸೋಲು ಕಂಡಿತ್ತು
ಹವಾಮಾನ ವರದಿ
ಪುಣೆಯಲ್ಲಿ ಯಾವುದೇ ಮಳೇಯ ಭೀತಿ ಇಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಆದರೆ ಬಿಸಿಲಿನ ಧಗೆ ಹೆಚ್ಚಿರಲಿದೆ ಎಂದು ತಿಳಿಸಿದೆ. ಪಂದ್ಯ ನಡೆಯುವ ಮಧ್ಯಾಹ್ನ ಇಲ್ಲಿನ ತಾಪಮಾನವು 32 ಡಿಗ್ರಿ ಸೆಲ್ಸಿಯಸ್ ಇದರಲಿದೆ ಎಂದು ವರದಿಯಲ್ಲಿ ತಿಳಿಸಿದೆ. ಸಂಜೆಯ ವೇಳೆ ತಾಪಮಾನ 25 ಡಿಗ್ರಿ ಸೆಲ್ಸಿಯಸ್ ಇರಲಿದೆ. ಹೀಗಾಗಿ ಪಂದ್ಯವನ್ನು ಸಂಪೂರ್ಣವಾಗಿ ಕಣ್ತುಂಬಿಕೊಳ್ಳಬಹುದು.