ಲಕ್ನೋ: ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತ ಭಾರತ ಬ್ಯಾಟಿಂಗ್ ಆಹ್ವಾನ ಪಡೆದಿದೆ. ಟಾಸ್ ಗೆದ್ದ ಜಾಸ್ ಬಟ್ಲರ್ ಬೌಲಿಂಗ್ ಆಯ್ದುಕೊಂಡರು. ಸೆಮಿಫೈನಲ್ ಹೊಸ್ತಿಲಲ್ಲಿ ಬಂದು ನಿಂತಿರುವ ಭಾರತ(IND vs ENG) ಈ ಪಂದ್ಯ ಗೆದ್ದರೆ ಸೆಮಿಫೈನಲ್ ಟಿಕೆಟ್ ಅಧಿಕೃತವಾಗಲಿದೆ.
ಎಲ್ಬಿ ಬಲೆಯಿಂದ ಪಾರಾದ ರೋಹಿತ್ ಶರ್ಮ
ವಿರಾಟ್ ಕೊಹ್ಲಿ ಅವರು 9 ಎಸೆತ ಎದುರಿಸಿ ಶೂನ್ಯ ಸಂಕಟಕ್ಕೆ ಸಿಲುಕಿದರು.
ಸದ್ಯ ಭಾರತ 40 ರನ್ಗೆ ಮೂರು ವಿಕೆಟ್ ಕಳೆದುಕೊಂಡಿದೆ.
ಟೀಮ್ ಇಂಡಿಯಾದ ಆರಂಭಿಕ ಆಟಗಾರ ಶುಭಮನ್ ಗಿಲ್ ಮತ್ತು ವಿರಾಟ್ ಮತ್ತು ಶ್ರೇಯಸ್ ಅಯ್ಯರ್ ಅವರು ನಿರೀಕ್ಷಿತ ಬ್ಯಾಟಿಂಗ್ ಪ್ರದರ್ಶನ ತೋರುವಲ್ಲಿ ಎಡವಿ ವಿಕೆಟ್ ಕೈಚೆಲ್ಲಿದ್ದಾರೆ
ಉಭಯ ತಂಡಗಳ ಆಡುವ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್ ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ.
🚨 Toss and Team Update 🚨
— BCCI (@BCCI) October 29, 2023
England win the toss and elect to bowl in Lucknow.
A look at #teamindia's Playing XI 👌
Follow the match ▶️ https://t.co/etXYwuCQKP#cwc23 | #meninblue | #indveng pic.twitter.com/oIo82skT3v
ಇಂಗ್ಲೆಂಡ್: ಜಾನಿ ಬೈರ್‌ಸ್ಟೋವ್, ಡೇವಿಡ್ ಮಲನ್, ಜೋ ರೂಟ್, ಬೆನ್ ಸ್ಟೋಕ್ಸ್, ಜೋಸ್ ಬಟ್ಲರ್, ಲಿಯಾಮ್ ಲಿವಿಂಗ್‌ಸ್ಟೋನ್, ಮೊಯಿನ್ ಅಲಿ, ಕ್ರಿಸ್ ವೋಕ್ಸ್, ಡೇವಿಡ್ ವಿಲ್ಲಿ, ಆದಿಲ್ ರಶೀದ್, ಮಾರ್ಕ್ ವುಡ್