ಲಕ್ನೋ: ಇಂಗ್ಲೆಂಡ್ ವಿರುದ್ಧದ ಪಂದ್ಯದಲ್ಲಿ ಟಾಸ್ ಸೋತ ಭಾರತ ಬ್ಯಾಟಿಂಗ್ ಆಹ್ವಾನ ಪಡೆದಿದೆ. ಟಾಸ್ ಗೆದ್ದ ಜಾಸ್ ಬಟ್ಲರ್ ಬೌಲಿಂಗ್ ಆಯ್ದುಕೊಂಡರು. ಸೆಮಿಫೈನಲ್ ಹೊಸ್ತಿಲಲ್ಲಿ ಬಂದು ನಿಂತಿರುವ ಭಾರತ(IND vs ENG) ಈ ಪಂದ್ಯ ಗೆದ್ದರೆ ಸೆಮಿಫೈನಲ್ ಟಿಕೆಟ್ ಅಧಿಕೃತವಾಗಲಿದೆ.
ಅತಿ ಹೆಚ್ಚು ಪಂದ್ಯಗಳಲ್ಲಿ ಭಾರತ ತಂಡವನ್ನು ನಾಯಕನಾಗಿ ಮುನ್ನಡೆಸಿದ ದಾಖಲೆ ವಿಶ್ವಕಪ್ ವಿಜೇತ ಮಹೇಂದ್ರ ಸಿಂಗ್ ಧೋನಿ ಅವರ ಹೆಸರಿನಲ್ಲಿದೆ. ಧೋನಿ ಅವರು 332 ಪಂದ್ಯಗಳಲ್ಲಿ ತಂಡವನ್ನು ಮುನ್ನಡೆಸಿದ್ದಾರೆ.
ರೋಹಿತ್ ಇಂಗ್ಲೆಂಡ್ ವಿರುದ್ಧ ಕಣಕಿಯುವ ಮೂಲಕ 100ನೇ ಪಂದ್ಯವನ್ನು ಮುನ್ನಡೆಸಿದ 7ನೇ ಭಾರತೀಯ ನಾಯಕ ಎನಿಸಿಕೊಂಡರು.
ಲಕ್ನೋದ ಭಾರತ ರತ್ನ ಶ್ರೀ ಅಟಲ್ ಬಿಹಾರಿ ವಾಜಪೇಯಿ ಏಕಾನ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯುವ ಪಂದ್ಯದಲ್ಲಿ ರೋಹಿತ್ ಅವರು ಮೈದಾನಕ್ಕಿಳಿಯುತ್ತಿದಂತೆ ನಾಯಕನಾಗಿ 100ನೇ ಪಂದ್ಯವನ್ನು ಮುನ್ನಡೆಸಿದ ದಾಖಲೆ ಬರೆದರು.
ಭಾರತ ಈ ಪಂದ್ಯದಲ್ಲಿ ಆಡುವ ಬಳಗದಲ್ಲಿ ಯಾವುದೇ ಬದಲಾವಣೆ ಮಾಡಲಿಲ್ಲ. ಕಳೆದ ನ್ಯೂಜಿಲ್ಯಾಂಡ್ ವಿರುದ್ಧದ ಒಂದ್ಯದಲ್ಲಿ ಆಡಿದ ತಂಡವನ್ನೇ ಈ ಪಂದ್ಯದಲ್ಲಿಯೂ ಆಡಲಿಳಿಸಿತು.
ಭಾರತ ಆಡುವ ಬಳಗ
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಸಿರಾಜ್ ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ.