Site icon Vistara News

India vs Ireland: ಇಂದು ನಡೆಯುವ ಭಾರತ-ಐರ್ಲೆಂಡ್​ ಪಂದ್ಯಕ್ಕೆ ಮಳೆ ಭೀತಿ ಇದೆಯೇ?

India vs Ireland

India vs Ireland: New York Weather Forecast: Will rain interrupt T20 World Cup match?

ನ್ಯೂಯಾರ್ಕ್​: ಇಂಗ್ಲೆಂಡ್​ ಮತ್ತು ಸ್ಕಾಟ್ಲೆಂಡ್​ ನಡುವೆ ನಿನ್ನೆ(ಮಂಗಳವಾರ) ನಡೆಯಬೇಕಿದ್ದ ಪಂದ್ಯ ಮಳೆಯಿಂದ ಫಲಿತಾಂಶ ಕಾಣದೆ ರದ್ದು ಗೊಂಡಿತ್ತು. ಹೀಗಾಗಿ ಇಂದು(ಬುಧವಾರ) ನಡೆಯುವ ಭಾರತ ಮತ್ತು ಐರ್ಲೆಂಡ್(India vs Ireland)​ ವಿರುದ್ಧದ ಪಂದ್ಯಕ್ಕೂ ಮಳೆ ಭೀತಿ(New York Weather Forecast) ಇದೆಯೇ ಎಂದು ಅಭಿಮಾನಿಗಳಿಗೆ ಆತಂಕವೊಂದು(T20 World Cup) ಶುರುವಾಗಿದೆ. ಪಂದ್ಯದ ಹವಾಮಾನ ವರದಿ ಹೀಗಿದೆ.

ಹವಾಮಾನ ವರದಿ

ನ್ಯೂಯಾರ್ಕ್​ನಲ್ಲಿ ಈ ಪಂದ್ಯ ಹಗಲು ನಡೆಯುವ ಕಾರಣ ಭಾಗಶಃ ಬಿಸಿಲಿನ ವಾತಾವರಣ ಇರಲಿದೆ. ಬೆಳಗ್ಗಿನ ಜಾವ ಕೊಂಚ ಮೋಡ ಕವಿದ ವಾತಾವರಣ ಕಂಡು ಬಂದರೂ ಕೂಡ ಪಂದ್ಯಕ್ಕೆ ಮಳೆ ಅಡ್ಡಿಪಡಿಸುವ ಯಾವುದೇ ಸಾಧ್ಯತೆಗಳಿಲ್ಲ ಎಂದು ಹವಾಮಾನ ಇಲಾಖೆ ತಿಳಿಸಿದೆ. ಪಂದ್ಯವು ಬೆಳಿಗ್ಗೆ ಮತ್ತು ಮಧ್ಯಾಹ್ನ ನಡೆಯವ ಕಾರಣ ಇಬ್ಬನಿಯ ಸಮಸ್ಯೆ ಕೂಡ ಕಾಣಸಿಗದು. ಹೀಗಾಗಿ ಪಂದ್ಯ ಸಂಪೂರ್ಣವಾಗಿ ನಡೆಯಲಿದೆ.

ಪಿಚ್​ ರಿಪೋರ್ಟ್​


ನಸೌ ಕ್ರಿಕೆಟ್​ ಸ್ಟೇಡಿಯಂನ ಪಿಚ್ ಅತ್ಯಂತ ಆಘಾತಕಾರಿಯಾಗಿ ವರ್ತಿಸುತ್ತಿದೆ. ಬ್ಯಾಟರ್​ಗಳು ಇಲ್ಲಿ ರನ್​ಗಳಿಸಲು ಪರದಾಡುತ್ತಿದ್ದಾರೆ. ಇದಕ್ಕೆ ಸೋಮವಾರ ನಡೆದಿದ್ದ ದಕ್ಷಿಣ ಆಫ್ರಿಕಾ ಮತ್ತು ಶ್ರೀಲಂಕಾ ನಡುವಣ ಪಂದ್ಯವೇ ಉತ್ತಮ ನಿದರ್ಶನ. ಈ ಪಂದ್ಯದಲ್ಲಿ ದಾಖಲೆಯ 127 ಎಸೆತಗಳು ಡಾಟ್​ ದಾಖಲಾಗಿತ್ತು. ಅಲ್ಲದೆ ಬೌನ್ಸರ್​ ಎಸೆತಗಳನ್ನು ಸರಿಯಾಗಿ ಗ್ರಹಿಸಿಕೊಳ್ಳಲು ಸಾಧ್ಯವಾಗದೆ ಬ್ಯಾಟರ್​ಗಳು ಚೆಂಡಿನೇಟು ತಿಂದಿದ್ದರು. ಔಟ್​ ಫೀಲ್ಡ್​ ಕೂಡ ಫೀಲ್ಡಿಂಗ್​ಗೆ ಅಷ್ಟು ಯೋಗ್ಯವಾಗಿಲ್ಲ. ಈ ಬಗ್ಗೆ ಕೋಚ್​ ರಾಹುಲ್​ ದ್ರಾವಿಡ್​ ಈಗಾಗಲೇ ಅಸಮಾಧಾನ ವ್ಯಕ್ತಪಡಿಸಿದ್ದಾರೆ. ಸಂಪೂರ್ಣವಾಗಿ ಜಾರುತ್ತಿದ್ದು ಆಟಗಾರರು ಗಾಯಗಳಾಗುವ ಸಾಧ್ಯತೆ ಅಧಿಕವಾಗಿ ಎಂದು ದ್ರಾವಿಡ್​ ಹೇಳಿದ್ದರು. ಬೌಲರ್​ಗಳಿಗೆ ಇದು ನೆಚ್ಚಿನ ತಾಣವಾಗಿದೆ.

ಇದನ್ನೂ ಓದಿ IPL 2025 Mega Auction: ಕೇವಲ ಇಷ್ಟು ಆಟಗಾರರ ರಿಟೇನ್​ಗೆ ಮಾತ್ರ ಅವಕಾಶ!

ಟಿ20 ಮುಖಾಮುಖಿ


ಉಭಯ ತಂಡಗಳು ಇದುವೆರೆಗೆ ಟಿ20 ಕ್ರಿಕೆಟ್​ನಲ್ಲಿ ಒಟ್ಟು 7 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಎಲ್ಲ ಪಂದ್ಯಗಳನ್ನು ಭಾರತ ಗೆದ್ದಿದೆ. ಇದರಲ್ಲೊಂದು ಟಿ20 ವಿಶ್ವಕಪ್​ ಪಂದ್ಯವಾಗಿದೆ. ಈ ಲೆಕ್ಕಾಚಾರದಲ್ಲಿ ಭಾರತ ಬಲಿಷ್ಠವಾಗಿ ಗೋಚರಿಸಿದರೂ ಕೂಡ ಐರ್ಲೆಂಡ್​ ಸವಾಲನ್ನು ಹಗುರವಾಗಿ ಕಾಣುವಂತಿಲ್ಲ. ಏಕೆಂದರೆ ಬಲಿಷ್ಠ ತಂಡಗಳು ಕೂಡ ದುರ್ಬಲ ತಂಡದ ವಿರುದ್ಧ ಸೋತ ಹಲವು ನಿದರ್ಶನಗಳಿವೆ. ಹೀಗಾಗಿ ಪ್ರತಿ ಹೆಚ್ಚುಗೂ ಎಚ್ಚರಿಕೆಯಿಂದ ಆಡಬೇಕು.

ಪಂದ್ಯದ ಪ್ರಸಾರ


ನ್ಯೂಯಾರ್ಕ್​ನಲ್ಲಿ ಈ ಪಂದ್ಯ ಹಗಲು ನಡೆದರೂ ಕೂಡ ಭಾರತದಲ್ಲಿ ರಾತ್ರಿ 8 ಗಂಟೆಗೆ ಪಂದ್ಯ ಪ್ರಸಾರಗೊಳ್ಳಲಿದೆ. ಸ್ಟಾರ್​ ಸ್ಪೋರ್ಟ್ಸ್​ ಮತ್ತು ಡಿಡಿ ದೂರದರ್ಶನದಲ್ಲಿ ಪಂದ್ಯಗಳು ನೇರಪ್ರಸಾರ ಇರಲಿದೆ. ಪಂದ್ಯದ ಲೈವ್ ಸ್ಟ್ರೀಮಿಂಗ್ ಡಿಸ್ನಿ + ಹಾಟ್‌ಸ್ಟಾರ್‌ ಮೊಬೈಲ್​ನಲ್ಲಿ ಉಚಿತವಾಗಿ ವೀಕ್ಷಿಸಬಹುದು.

ಉಭಯ ತಂಡಗಳು


ಭಾರತ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್​ ಕೀಪರ್​), ಸಂಜು ಸ್ಯಾಮ್ಸನ್ (ವಿಕೆಟ್​ ಕೀಪರ್​), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್​ ಸಿಂಗ್​, ಜಸ್​ಪ್ರೀತ್​ ಬುಮ್ರಾ, ಮೊಹಮ್ಮದ್​ ಸಿರಾಜ್.

ಐರ್ಲೆಂಡ್​: ಪಾಲ್ ಸ್ಟರ್ಲಿಂಗ್ (ನಾಯಕ), ಮಾರ್ಕ್ ಅಡೈರ್, ರಾಸ್ ಅಡೈರ್, ಆಂಡ್ರ್ಯೂ ಬಲ್ಬಿರ್ನಿ, ಕರ್ಟಿಸ್ ಕ್ಯಾಂಫರ್, ಗರೆಥ್ ಡೆಲಾನಿ, ಜಾರ್ಜ್ ಡಾಕ್ರೆಲ್, ಗ್ರಹಾಂ ಹ್ಯೂಮ್, ಜೋಶ್ ಲಿಟಲ್, ಬ್ಯಾರಿ ಮೆಕಾರ್ಥಿ, ನೀಲ್ ರಾಕ್ (ವಿಕೆಟ್ ಕೀಪರ್), ಹ್ಯಾರಿ ಟೆಕ್ಟರ್, ಲಾರ್ಕನ್ ಟಕರ್ (ವಿಕೆಟ್ ಕೀಪರ್), ಬೆನ್ ವೈಟ್ ಮತ್ತು ಕ್ರೇಗ್ ಯಂಗ್.

Exit mobile version