ಬೆಂಗಳೂರು: ಅಕ್ಟೋಬರ್ 5 ರಿಂದ ಆರಂಭವಾದ ಐಸಿಸಿ ಏಕದಿನ ವಿಶ್ವಕಪ್ ಟೂರ್ನಿ(ICC World Cup 2023) ಕೊನೆಯ ಹಂತಕ್ಕೆ ಬಂದು ನಿಂತಿದೆ. ಇಂದು (ಭಾನುವಾರ) ನಡೆಯುವ ಭಾರತ ಮತ್ತು ನೆದರ್ಲೆಂಡ್ಸ್ ವಿರುದ್ಧದ ಪಂದ್ಯದ ಮೂಲಕ ಲೀಗ್ ಪಂದ್ಯಗಳಿಗೆ ತೆರೆ ಬೀಳಲಿದೆ.
ನೆದರ್ಲೆಂಡ್ಸ್ ವಿರುದ್ಧ ಟಾಸ್ ಗೆದ್ದ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮ ಅವರು ಮೊದಲು ಬ್ಯಾಟಿಂಗ್ ನಡೆಸುವ ನಿರ್ಧಾರ ಕೈಗೊಂಡರು.
ಬೆಂಗಳೂರಿನಲ್ಲಿ ಕಳೆದ ಎರಡು ದಿನಗಳಿಂದ ಮಳೆಯಾಗಿಲ್ಲ. ಸದ್ಯ ಭಾನುವಾರವೂ ಮಳೆ ಬರುವಂತೆ ಕಾಣುತ್ತಿಲ್ಲ. ಹೀಗಾಗಿ ಕ್ರಿಕೆಟ್ ಅಭಿಮಾನಿಗಳು ಸಂಪೂರ್ಣವಾಗಿ ಪಂದ್ಯವನ್ನು ಕಣ್ತುಂಬಿಕೊಳ್ಳಬಹುದು
ಬೆಂಗಳೂರಿನ ಕ್ವೀನ್ಸ್ ರಸ್ತೆ, ಎಂ.ಜಿ.ರಸ್ತೆ, ರಾಜಭವನ ರಸ್ತೆ, ಸೆಂಟ್ರಲ್ ಸ್ಟ್ರೀಟ್, ಕಬ್ಬನ್ ರಸ್ತೆ, ಸೆಂಟ್ ಮಾರ್ಕ್ ರಸ್ತೆ, ಮ್ಯೂಸಿಯಂ ರಸ್ತೆ, ಕಸ್ತೂರ್ ಬಾ ರಸ್ತೆ, ಡಾ.ಬಿ.ಆರ್.ಅಂಬೇಡ್ಕರ್ ರಸ್ತೆ, ಲ್ಯಾವೆಲ್ಲೆ ರಸ್ರೆ, ವಿಠಲ್ ಮಲ್ಯ ರಸ್ತೆ, ನೃಪತುಂಗ ರಸ್ತೆಗಳಲ್ಲಿ ನಿಲುಗಡೆಯನ್ನು ನಿಷೇಧಿಲಾಗಿದೆ. ಕಿಂಗ್ಸ್ ರಸ್ತೆ, ಯು.ಬಿ. ಸಿಟಿ ಪಾರ್ಕಿಂಗ್ ಸ್ಥಳ, ಶಿವಾಜಿ ನಗರ ಬಿಎಂಟಿಸಿ ಬಸ್ ನಿಲ್ದಾಣ ಮೊದಲ ಮಹಡಿಯಲ್ಲಿ ವಾಹನಗಳ ಪಾರ್ಕಿಂಗ್‌ಗೆ ವ್ಯವಸ್ಥೆ ಮಾಡಲಾಗಿದೆ.
ಭಾರತ ಹಾಗೂ ನೆದರ್ಲೆಂಡ್ಸ್ (IND vs NED) ತಂಡಗಳು ಪಂದ್ಯಕ್ಕಾಗಿ (ICC World Cup 2023) ಸಕಲ ರೀತಿಯಲ್ಲಿ ಸಜ್ಜಾಗಿವೆ. ಇದರ ಬೆನ್ನಲ್ಲೇ ಬೆಂಗಳೂರಿನಲ್ಲಿ ಭಾನುವಾರ ಬೆಳಗ್ಗೆ 7ರಿಂದ 11 ಗಂಟೆವರೆಗೆ ವಾಹನಗಳ ಪಾರ್ಕಿಂಗ್ (Vehicles Parking) ನಿಷೇಧಿಸಲಾಗಿದೆ.
ಸ್ಟೇಡಿಯಂ ಹೊರಭಾಗದಲ್ಲಿ ವಿರಾಟ್ ಕೊಹ್ಲಿ ಅವರು ಇದುವರೆಗೆ ಏಕದಿನ ಮತ್ತು ಟಿ20ಯಲ್ಲಿ ಸಿಡಿಸಿರುವ ಕೆಲ ಶತಕದ ಸಂಭ್ರಮಾಚರಣೆಯ ಕಟೌಟ್ಗಳನ್ನು ನಿಲ್ಲಿಸಲಾಗಿದೆ. ಅಲ್ಲದೆ ತಮ್ಮ 50ನೇ ಶತಕವನ್ನು ಇಂದು ಬಾರಿಸಲಿ ಎಂದು ಶುಭ ಹಾರೈಸಿದ್ದಾರೆ. ಅಭಿಮಾನಿಗಳು ಈ ಕಟೌಟ್ ಮುಂದೆ ಸೆಲ್ಫಿ ಕ್ಲಿಕ್ಕಿಸಿಕೊಂಡು ಸಂಭ್ರಮಿಸುತ್ತಿದ್ದಾರೆ. ಆರ್ಸಿಬಿ ಫ್ರಾಂಚೈಸಿ ಕಟೌಟ್ನ ವಿಡಿಯೊವನ್ನು ತನ್ನ ಅಧಿಕೃತ ಟ್ವಿಟರ್ ಎಕ್ಸ್ ಖಾತೆಯಲ್ಲಿ ಹಂಚಿಕೊಂಡು”ನಮ್ಮ ವಿರಾಟ ರಾಜ” ಎಂದು ಬರೆದುಕೊಂಡಿದೆ.