ಮುಂಬಯಿ: 4 ವರ್ಷಗಳ ಬಳಿಕ ಮತ್ತೆ ಭಾರತ ಮತ್ತು ನ್ಯೂಜಿಲ್ಯಾಂಡ್ ತಂಡಗಳು(IND vs NZ Live) ಏಕದಿನ ವಿಶ್ವಕಪ್ನ ಸೆಮಿಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗುತ್ತಿದೆ. ಈ ಪಂದ್ಯದಲ್ಲಿ ಟಾಸ್ ಗೆದ್ದ ರೋಹಿತ್ ಶರ್ಮ ಅವರು ಟಾಸ್ ಗೆದ್ದು ಬ್ಯಾಟಿಂಗ್ ಆಯ್ದುಕೊಂಡಿದ್ದಾರೆ.
ಒಟ್ಟು 29 ಎಸೆತ ಎದುರಿಸಿದ ರೋಹಿತ್ ಶರ್ಮ ಅವರು ತಲಾ 4 ಸಿಕ್ಸರ್ ಮತ್ತು ಬೌಂಡರಿ ಬಾರಿಸಿ 47 ರನ್ಗೆ ವಿಕೆಟ್ ಕೈಚೆಲ್ಲಿದರು. ಸಿಕ್ಸರ್ ಬಾರಿಸುವ ಪ್ರಯತ್ನದಲ್ಲಿ ಲಾಂಗ್ ಆನ್ನಲ್ಲಿ ನಾಯಕ ಕೇನ್ ವಿಲಿಯಮ್ಸನ್ಗೆ ಕ್ಯಾಚ್ ನೀಡಿ ಪೆವಿಲಿಯನ್ ಸೇರಿದರು. ಕೇವಲ ಮೂರು ರನ್ ಅಂತರದಿಂದ ಅರ್ಧಶತಕ ವಂಚಿತರಾದರು.
ಈಗಾಗಲೇ ತಲಾ ಮೂರು ಸಿಕ್ಸರ್ ಮತ್ತು ಬೌಂಡರಿ ಬಾರಿಸಿರುವ ರೋಹಿತ್ ಶರ್ಮ ಅಪಾಯಕಾರಿಯಾಗುವ ಸೂಚನೆ ನೀಡಿದ್ದಾರೆ.
ಕೇವಲ 17 ಎಸೆತಗಳಲ್ಲಿ 33 ರನ್ ಗಳಿಸಿ ಬ್ಯಾಟಿಂಗ್ ನಡೆಸುತ್ತಿರುವ ರೋಹಿತ್
ತಂಡದ ಬಹುಪಾಲು ಮೊತ್ತ ರೋಹಿತ್ ಶರ್ಮ ಅವರದ್ದಾಗಿದೆ.
ಸದ್ಯ 4 ಓವರ್ ಮುಕ್ತಾಯಕ್ಕೆ ವಿಕೆಟ್ ನಷ್ಟವಿಲ್ಲದೆ 38 ರನ್ ಗಳಿಸಿದೆ.