ಅಹಮದಾಬಾದ್: ಸಾಂಪ್ರದಾಯಿಕ ಬದ್ಧ ಎದುರಾಳಿ ಪಾಕಿಸ್ತಾನ ವಿರುದ್ಧ ಟಾಸ್ ಗೆದ್ದ ಭಾರತ ಬೌಲಿಂಗ್ ಆಯ್ದುಕೊಂಡಿದೆ. ಬಾಬರ್ ಪಡೆದ ಬ್ಯಾಟಿಂಗ್ ಆಹ್ವಾನ ಪಡೆದಿದೆ. ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ(Narendra Modi Stadium) ನಡೆಯುತ್ತಿರುವ ಈ ಪಂದ್ಯವನ್ನು ಕಣ್ತುಂಬಿಕೊಳ್ಳಲು ಅಭಿಮಾನಿಗಳು ಬಾರಿ ಸಂಖ್ಯೆಯಲ್ಲಿ ಸೇರಿದ್ದಾರೆ.
ಸ್ಟೇಡಿಯಂನಲ್ಲಿ ಕಿಕ್ಕಿರಿದು ಸರಿದ ಅಭಿಮಾನಿಗಳು.
ವಾರ್ಮ್ಅಪ್ ನಡೆಸಲು ಮೈದಾನಕ್ಕೆ ಬಂದ ವಿರಾಟ್ ಕೊಹ್ಲಿ
ವಿಶ್ವಕಪ್ ಇತಿಹಾಸದಲ್ಲಿ ಭಾರತ ತಂಡ ಪಾಕಿಸ್ತಾನ ವಿರುದ್ಧ ಸೋಲರಿಯದ ಸರದಾರನಾಗಿ ಮೆರೆದಾಡಿದೆ. ಈ ಪ್ರತಿಷ್ಠಿತ ಕೂಟದಲ್ಲಿ ಆಡಿದ ಏಳೂ ಪಂದ್ಯಗಳಲ್ಲಿ ಟೀಮ್ ಇಂಡಿಯಾ ಪಾಕಿಸ್ತಾನವನ್ನು ಮಣ್ಣುಮುಕ್ಕಿಸಿದೆ. ಈ ಬಾರಿಯೂ ಪಾಕ್ನ ಗರ್ವ ಭಂಗ ಮಾಡುವುದರಲ್ಲಿ ಭಾರತ ಯಶಸ್ಸು ಸಾಧಿಸಲಿ ಎನ್ನುವುದು ಶತಕೋಟಿ ಭಾರತೀಯರ ಆಶಯವಾಗಿದೆ.
ವೆಂಕಟೇಶ್ ಪ್ರಸಾದ್ 1999ರ ಪಂದ್ಯದಲ್ಲಿ 27ಕ್ಕೆ 5 ವಿಕೆಟ್ ಉರುಳಿಸಿದ್ದು ಭಾರತದ ಬೌಲರ್ ಒಬ್ಬರ ಉತ್ತಮ ದಾಖಲೆಯಾಗಿದೆ. 2019ರಲ್ಲಿ ಮೊಹಮ್ಮದ್ ಶಮಿ 4 ವಿಕೆಟ್ ಪಡೆದಿದ್ದರು.
ಭಾರತ-ಪಾಕ್ ವಿಶ್ವಕಪ್ ಪಂದ್ಯಗಳಲ್ಲಿ ಕನ್ನಡಿಗ ವೆಂಕಟೇಶ್ ಪ್ರಸಾದ್ ಅತೀ ಹೆಚ್ಚು ವಿಕೆಟ್ ಉರುಳಿಸಿದ ದಾಖಲೆ ಹೊಂದಿದ್ದಾರೆ. 8 ವಿಕೆಟ್