ಬೆಂಗಳೂರು: ಅಕ್ಟೋಬರ್ 14ರಂದು ನಡೆಯುವ ವಿಶ್ವಕಪ್(icc world cup 2023) ಟೂರ್ನಿಯ ಹೈವೋಲ್ಟೇಜ್ ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಿನ ಪಂದ್ಯಕ್ಕೆ ಬಿಸಿಸಿಐ ಮತ್ತೆ 14,000 ಸಾವಿರ ಟಿಕೆಟ್‌ಗಳನ್ನು ಬಿಡುಗಡೆ ಮಾಡುವುದಾಗಿ ತಿಳಿಸಿದೆ. ವಿಶ್ವದ ಅತಿ ದೊಡ್ಡ ಮತ್ತು 1 ಲಕ್ಷದ 32 ಸಾವಿರ ಆಸನ ಸಾಮರ್ಥ್ಯ ಹೊಂದಿರುವ ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ಈ ಪಂದ್ಯ ನಡೆಯಲಿದೆ.
ಮಧ್ಯಾಹ್ನ 12 ಗಂಟೆಯಿಂದ ಪ್ರಾರಂಭ
ಪಂದ್ಯದ ಟಿಕೆಟ್ಗಳು ಇಂದು ಮಧ್ಯಾಹ್ನ 12 ಗಂಟೆಯಿಂದ ಪ್ರಾರಂಭವಾಗುತ್ತದೆ. ಕ್ರಿಕೆಟ್ ಅಭಿಮಾನಿಗಳು ಅಧಿಕೃತ ಟಿಕೆಟ್ ವೆಬ್ಸೈಟ್ https://tickets.cricketworldcup.com ನಲ್ಲಿ ಟಿಕೆಟ್‌ಗಳನ್ನು ಖರೀದಿಸಬಹುದಾಗಿದೆ. ಎಂದು ಬಿಸಿಸಿಐ ಮಾಧ್ಯಮ ಪ್ರಕಟಣೆಯಲ್ಲಿ ತಿಳಿಸಿದೆ. ಸಾಂಪ್ರದಾಯಿಕ ಬದ್ಧ ಎದುರಾಳಿಗಳ ನಡುವಿನ ಈ ಕಾದಾಟವನ್ನು ಕಣ್ತುಂಬಿಕೊಳ್ಳಲು ಉಭಯ ದೇಶಗಳ ಅಭಿಮಾನಿಗಳು ಚಾತಕ ಪಕ್ಷಿಯಂತೆ ಕಾದು ಕುಳಿತಿದ್ದಾರೆ.
7 ವರ್ಷಗಳ ಬಳಿಕ ಆಗಮನ
ಪಾಕಿಸ್ತಾನ ತಂಡ 7 ವರ್ಷಗಳ ಬಳಿಕ ಭಾರತಕ್ಕೆ ಕಾಲಿದೆ. ಇದಕ್ಕೂ ಮುನ್ನ 2016ರಲ್ಲಿ ನಡೆದಿದ್ದ ಟಿ20 ವಿಶ್ವಕಪ್ ಟೂರ್ನಿಯಲ್ಲಿ ಆಡಲು ಕೊನೆಯ ಬಾರಿ ಪಾಕ್ ತಂಡ ಭಾರತಕ್ಕೆ ಬಂದಿತ್ತು. ಮುಂಬಯಿ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನ ದ್ವಿಪಕ್ಷೀಯ ಸರಣಿ ಆಡುವುದನ್ನು ನಿಲ್ಲಿಸಿದೆ. ಕೇವಲ ಐಸಿಸಿ ಟೂರ್ನಿಗಳಲ್ಲಿ ಮಾತ್ರ ಮುಖಾಮುಖಿಯಾಗುತ್ತಿವೆ.
2008ರಲ್ಲಿ ಪಾಕ್ಗೆ ತೆರಳಿದ್ದ ಭಾರತ
2008ರ ಮುಂಬೈ ದಾಳಿಯ ಬಳಿಕ ಭಾರತ ಮತ್ತು ಪಾಕಿಸ್ತಾನ ನಡುವೆ ದ್ವಿಪಕ್ಷೀಯ ಕ್ರಿಕೆಟ್ ಪಂದ್ಯಾಟಗಳು ನಡೆದಿಲ್ಲ. ಭಾರತ ತಂಡ 2008ರಲ್ಲಿ ಕೊನೆಯ ಬಾರಿ ಏಷ್ಯಾ ಕಪ್ ಟೂರ್ನಿ ಆಡಲು ಪಾಕಿಸ್ತಾನಕ್ಕೆ ಪ್ರವಾಸ ಕೈಗೊಂಡಿತ್ತು ಹಾಗೂ 2006ರಲ್ಲಿ ಪಾಕಿಸ್ತಾನಲ್ಲಿ ಉಭಯ ತಂಡಗಳು ಕೊನೆಯ ಬಾರಿ ದ್ವಿಪಕ್ಷೀಯ ಸರಣಿಯಲ್ಲಿ ಕಾದಾಟ ನಡೆಸಿದ್ದವು.
ಇದನ್ನೂ ಓದಿ IND vs AUS: ಭಾರತ-ಆಸೀಸ್ ಪಂದ್ಯಕ್ಕೆ ಕ್ಷಣಗಣನೆ; ಮಳೆ ಕಾಟ ಇದೆಯೇ?; ಇಲ್ಲಿದೆ ಹವಾಮಾನ ವರದಿ
ಉಭಯ ವಿಶ್ವಕಪ್ ತಂಡಗಳು
ಪಾಕಿಸ್ತಾನ: ಬಾಬರ್ ಅಜಂ (ನಾಯಕ), ಮೊಹಮ್ಮದ್ ರಿಜ್ವಾನ್ (ವಿಕೆಟ್ ಕೀಪರ್), ಇಮಾಮ್ ಉಲ್ ಹಕ್, ಫಕಾರ್ ಜಮಾನ್, ಇಫ್ತಿಕಾರ್ ಅಹ್ಮದ್, ಮೊಹಮ್ಮದ್ ನವಾಜ್, ಶದಾಬ್ ಖಾನ್, ಹಸನ್ ಅಲಿ, ಹ್ಯಾರೀಸ್ ರಾವುಫ್, ಮೊಹಮ್ಮದ್ ವಾಸಿಂ, ಶಹೀನ್ ಅಫ್ರಿಧಿ, ಸೌದ್ ಶಕೀಲ್, ಸಲ್ಮಾನ್ ಅಲಿ ಆಘಾ, ಉಸ್ಮಾನ್ ಮೀರ್, ಅಬ್ದುಲ್ಲಾ ಶಫೀಕ್
ಭಾರತ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್, ಕೆಎಲ್ ರಾಹುಲ್, ಹಾರ್ದಿಕ್ ಪಾಂಡ್ಯ (ಉಪನಾಯಕ), ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ರವಿಚಂದ್ರನ್ ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬುಮ್ರಾ , ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಕುಲದೀಪ್ ಯಾದವ್.
ಗಾಂಧಿ-ಜಿನ್ನಾ ಕ್ರಿಕೆಟ್ ಟ್ರೋಫಿ ನಡೆಸಲು ಪಾಕ್ ಚಿಂತನೆ
ಪಾಕಿಸ್ತಾನ ಕ್ರಿಕೆಟ್ ಮಂಡಳಿಯ ಅಧ್ಯಕ್ಷ ಝಾಕಾ ಅಶ್ರಫ್(Zaka Ashraf) ಅವರು ಮಹಮ್ಮದ್ ಅಲಿ ಜಿನ್ನಾ ಮತ್ತು ಮಹಾತ್ಮ ಗಾಂಧಿಯವರ ಹೆಸರಿನಲ್ಲಿ ಕ್ರಿಕೆಟ್ ಟ್ರೋಫಿ(Jinnah-Gandhi Trophy) ನಡೆಸಲು ಆಸಕ್ತವಾರಿದ್ದೇವೆ ಎಂದು ಕೆಲ ದಿನಗಳ ಹಿಂದೆ ಮಾಧ್ಯಮದ ಮುಂದೆ ಹೇಳಿದ್ದರು. “ಜಿನ್ನಾ-ಗಾಂಧಿ ದ್ವಿಪಕ್ಷೀಯ ಸರಣಿಯ ಬಗ್ಗೆ ಈಗಾಗಲೇ ಬಿಸಿಸಿಐಗೆ ಪ್ರಸ್ತಾವವನ್ನು ಸಲ್ಲಿಸಲಾಗಿದೆ” ಎಂದಿದ್ದರು.