ಕೋಲ್ಕೊತಾ: ಈಗಾಗಲೇ ಸೆಮಿಫೈನಲ್ ಪ್ರವೇಶ ಪಡೆದಿರುವ ಭಾರತ ಮತ್ತು ದಕ್ಷಿಣ ಆಫ್ರಿಕಾ ತಂಡಗಳು ಅಗ್ರಸ್ಥಾನಕ್ಕಾಗಿ ಪೈಪೋಟಿ ನಡೆಸಲು ಸಿದ್ಧವಾಗಿ ನಿಂತಿದೆ. ಕೂಟದ ಅಜೇಯ ತಂಡ ಭಾರತದ ಗೆಲುವಿಗೆ ಹರಿಣ ಪಡೆ ಬ್ರೇಕ್ ಹಾಕಿತೇ ಎನ್ನುವುದು ಪಂದ್ಯದ ಕೌತುಕ.
ಉಭಯ ಆಡುವ ಬಳಗ
ಭಾರತ: ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಸ್ಸಿ ವಾನ್ ಡರ್ ಡುಸೆನ್, ಐಡೆನ್ ಮಾರ್ಕ್ರಮ್, ಟೆಂಬ ಬವುಮಾ, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಲುಂಗಿ ಎನ್ಗಿಡಿ, ತಬ್ರೈಜ್ ಶಮ್ಸಿ.
ದಕ್ಷಿಣ ಆಫ್ರಿಕಾ: ಕ್ವಿಂಟನ್ ಡಿ ಕಾಕ್ (ವಿಕೆಟ್ ಕೀಪರ್), ರಸ್ಸಿ ವಾನ್ ಡರ್ ಡುಸೆನ್, ಐಡೆನ್ ಮಾರ್ಕ್ರಮ್, ಟೆಂಬ ಬವುಮಾ, ಹೆನ್ರಿಕ್ ಕ್ಲಾಸೆನ್, ಡೇವಿಡ್ ಮಿಲ್ಲರ್, ಮಾರ್ಕೊ ಜಾನ್ಸೆನ್, ಕೇಶವ್ ಮಹಾರಾಜ್, ಕಗಿಸೊ ರಬಾಡಾ, ಲುಂಗಿ ಎನ್ಗಿಡಿ, ತಬ್ರೈಜ್ ಶಮ್ಸಿ.
ಭಾರತ ತಂಡ ಈ ಪಂದ್ಯಕ್ಕೆ ಯಾವುದೇ ಬದಲಾವಣೆ ಮಾಡಿಲ್ಲ. ಕಳೆದ ಪಂದ್ಯದಲ್ಲಿ ಆಡಿದ ಆಟಗಾರರೇ ಕಣಕ್ಕಿಳಿದರು.
ಭಾರತ ತಂಡ
ರೋಹಿತ್ ಶರ್ಮಾ, ಶುಭಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆ.ಎಲ್ ರಾಹುಲ್, ಸೂರ್ಯಕುಮಾರ್ ಯಾದವ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಕುಲ್ದೀಪ್ ಯಾದವ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್.
🚨 Toss and Team Update 🚨#teamindia win the toss and elect to bat first in Kolkata 👌
— BCCI (@BCCI) November 5, 2023
Follow the match ▶️ https://t.co/iastFYWeDi#cwc23 | #meninblue | #indvsa pic.twitter.com/gvh49Yl6gi
ದಕ್ಷಿಣ ಆಫ್ರಿಕಾ ವಿರುದ್ಧ ಟಾಸ್ ಗೆದ್ದ ಟೀಮ್ ಇಂಡಿಯಾದ ನಾಯಕ ರೋಹಿತ್ ಶರ್ಮ ಅವರು ಬ್ಯಾಟಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ.
ಕೊಹ್ಲಿ ಸಾಧನೆ
ವಿರಾಟ್ ಕೊಹ್ಲಿ ಅವರು ಇದುವರೆಗೆ ಒಟ್ಟು 288* ಏಕದಿನ ಪಂದ್ಯಗಳನ್ನು ಆಡಿ 58.27 ರ ಸರಾಸರಿಯಲ್ಲಿ 13,525 ರನ್ ಗಳಿಸಿದ್ದಾರೆ. ಇದರಲ್ಲಿ 48* ಶತಕ ಮತ್ತು 71 ಅರ್ಧಶತಕ ಒಳಗೊಂಡಿದೆ. ಬೌಲಿಂಗ್ನಲ್ಲೂ 4 ವಿಕೆಟ್ ಪಡೆದಿದ್ದಾರೆ. ಟೆಸ್ಟ್ನಲ್ಲಿ 111 ಪಂದ್ಯಗಳಲ್ಲಿ 8676 ರನ್ ಗಳಿಸಿದ್ದು, 29 ಶತಕ, 7 ದ್ವಿಶತಕ ಮತ್ತು 29 ಅರ್ಧಶತಕ ಸಿಡಿಸಿದ್ದಾರೆ. 254 ಅವರ ಗರಿಷ್ಠ ವೈಯಲ್ತಿಕ ಮೊತ್ತಾವಾಗಿದೆ. 115 ಟಿ20 ಪಂದ್ಯವಾಡಿ 4,008 ರನ್ ಬಾರಿಸಿದ್ದಾರೆ. ಇದರಲ್ಲಿ 37 ಅರ್ಧಶತಕ ಮತ್ತು 1 ಶತಕ ದಾಖಲಾಗಿದೆ. ಮೂರು ಮಾದರಿಯ ಕ್ರಿಕೆಟ್ನಲ್ಲಿ ಒಟ್ಟು 26,209 ರನ್ ಬಾರಿಸಿದ್ದಾರೆ.