ಕೊಲೊಂಬೊ: ಕಳೆದ ಆವೃತ್ತಿಯ ಏಷ್ಯಾ ಕಪ್ ಚಾಂಪಿಯನ್ ಶ್ರೀಲಂಕಾ (Asia Cup 2023) ತಂಡದ ವಿರುದ್ಧದ ನಿರಾಯಸ ಗೆಲುವು ಸಾಧಿಸಿದ ಭಾರತ ತಂಡದ ಟ್ರೋಫಿ ಎತ್ತಿ ಹಿಡಿದಿದೆ. ಇದು ಭಾರತ ತಂಡದ ಪಾಲಿಗೆ ಎಂಟನೇ ಚಾಂಪಿಯನ್ಷಿಪ್ ಆಗಿದ್ದು, ಏಷ್ಯಾ ಕಪ್ನಲ್ಲಿ ತನ್ನ ಪಾರಮ್ಯ ಮುಂದುವರಿಸಿದೆ. ಫೈನಲ್ ಪಂದ್ಯದ ಗೆಲುವಿನಲ್ಲಿ ಭಾರತ ತಂಡದ ಬೌಲರ್ ಮೊಹಮ್ಮದ್ ಸಿರಾಜ್ ಪ್ರಮುಖ ಪಾತ್ರ ವಹಿಸಿದರು. ಅವರು ಲಂಕಾ ತಂಡದ ಪ್ರಮುಖ ಆರು ವಿಕೆಟ್ಗಳನ್ನು ಉರುಳಿಸಿ ಮಿಂಚಿದರು.
ಇಲ್ಲಿನ ಪ್ರೇಮದಾಸ ಕ್ರಿಕೆಟ್ ಸ್ಟೇಡಿಯಮ್ನಲ್ಲಿ ನಡೆದ ಪಂದ್ಯದಲ್ಲಿ ಟಾಸ್ ಗೆದ್ದ ಶ್ರೀಲಂಕಾ ತಂಡ ಮೊದಲು ಬ್ಯಾಟ್ ಮಾಡಿತು. ಕಳಪೆ ಬ್ಯಾಟಿಂಗ್ ಪ್ರದರ್ಶನ ನೀಡಿ 15.2 ಓವರ್ಗಳಲ್ಲಿ 50 ರನ್ಗಳಿಗೆ ಆಲ್ಔಟ್ ಆಯಿತು. ಪ್ರತಿಯಾಗಿ ಬ್ಯಾಟ್ ಮಾಡಿದ ಭಾರತ ತಂಡ 6.1 ಓವರ್ಗಳಲ್ಲಿ 51 ರನ್ ಮಾಡಿ ಗೆಲುವು ಸಾಧಿಸಿ ಟ್ರೋಫಿ ಎತ್ತಿ ಹಿಡಿಯಿತು.
ಏಷ್ಯಾ ಕಪ್ ಫೈನಲ್ನಲ್ಲಿ ಭಾರತ ತಂಡದ ಬೌಲರ್ಗಳು ಅಬ್ಬರಿಸಿದ್ದಾರೆ. ಟಾಸ್ ಗೆದ್ದು ಮೊದಲು ಬ್ಯಾಟ್ ಮಾಡಿದ ಆತಿಥೇಯ ಶ್ರೀಲಂಕಾ ತಂಡವನ್ನು ಕೇವಲ 50 ರನ್ಗಳಿಗೆ ಆಲ್ಔಟ್ ಮಾಡಿದೆ. ಇದು ಏಕದಿನ ಮಾದರಿಯಲ್ಲಿ ಭಾರತ ವಿರುದ್ಧ ಶ್ರೀಲಂಕಾ ತಂಡ ಬಾರಿಸಿದ ಅತ್ಯಂತ ಕನಿಷ್ಠ ಮೊತ್ತವಾಗಿದೆ.
ಭಾರತ ತಂಡದ ಪರವಾಗಿ ಮೊಹಮ್ಮದ್ ಸಿರಾಜ್ ಜೀವನ ಶ್ರೇಷ್ಠ ಪ್ರದರ್ಶನ ನೀಡಿದ್ದಾರೆ. ಶ್ರೀಲಂಕಾದ ಬ್ಯಾಟರ್ಗಳೆಲ್ಲರೂ ಪತರಗುಟ್ಟುವಂತೆ ಮಾಡಿದ ಅವರು ತಮ್ಮ 7 ಓವರ್ಗಳ ಸ್ಪೆಲ್ನಲ್ಲಿ 21 ರನ್ ನೀಡಿ 6 ವಿಕೆಟ್ ಕಬಳಿಸಿದ್ದಾರೆ. ತಮ್ಮ ಬೆಂಕಿಯುಂಡೆಯಂಥ ಚೆಂಡುಗಳ ಮೂಲಕ ಲಂಕಾದ ಬ್ಯಾಟರ್ಗಳು ಪೆವಿಲಿಯನ್ ಪರೇಡ್ ಮಾಡಿದ್ದಾರೆ.
ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ತಮ್ಮ 2.2 ಓವರ್ಗಳ 3 ರನ್ ಬಾರಿಸಿ 3 ವಿಕೆಟ್ ಪಡೆದರು.
ಜಸ್ಪ್ರೀತ್ ಬುಮ್ರಾ ಮೊದಲ ಓವರ್ನಲ್ಲಿಯೇ ವಿಕೆಟ್ ಕಿತ್ತು ಲಂಕಾಗೆ ಆಘಾತವಿಕ್ಕಿದರು.
ಶ್ರೀಲಂಕಾದ ಮೊದಲ ವಿಕೆಟ್
ಭಾರತ ಆಡುವ ಬಳಗ
🚨 Toss & Team News from Colombo 🚨
— BCCI (@BCCI) September 17, 2023
Sri Lanka have elected to bat against #teamindia in the #asiacup2023 Final.
Here's our Playing XI 🙌 #indvsl
Follow the match ▶️ https://t.co/xrKl5d85dN pic.twitter.com/tzLDct6Ppb
ಗಾಯಾಳು ಅಕ್ಷರ್ ಪಟೇಲ್ ಸ್ಥಾನಕ್ಕೆ ಆಯ್ಕೆಯಾದ ವಾಷಿಂಗ್ಟನ್ ಸುಂದರ್ಗೆ ಅವಕಾಶ ನೀಡಲಾಗಿದೆ
5 ಬದಲಾವಣೆ
ನಿರೀಕ್ಷೆಯಂತೆ ಭಾರತ ತಂಡದಲ್ಲಿ 5 ಬದಲಾವಣೆ ಮಾಡಲಾಗಿದೆ. ಬಾಂಗ್ಲಾದೇಶ ವಿರುದ್ಧದ ಔಪಚಾರಿಕ ಪಂದ್ಯಕ್ಕೆ ವಿಶ್ರಾಂತಿ ಪಡೆದಿದ್ದ ವಿರಾಟ್ ಕೊಹ್ಲಿ, ಉಪನಾಯಕ ಹಾರ್ದಿಕ್ ಪಾಂಡ್ಯ, ವೇಗಿಗಳಾದ ಜಸ್ಪ್ರೀತ್ ಬುಮ್ರಾ, ಮೊಮ್ಮದ್ ಸಿರಾಜ್ ಮತ್ತು ಸ್ಪಿನ್ನರ್ ಕುಲ್ದೀಪ್ ಯಾದವ್ ಮತ್ತೆ ತಂಡ ಸೇರಿಕೊಂಡಿದ್ದಾರೆ. ಹೀಗಾಗಿ ಇವರ ಸ್ಥಾನದಲ್ಲಿ ಆಡಿದ್ದ ಆಟಗಾರರು ಈ ಪಂದ್ಯದಿಂದ ಹೊರಗುಳಿದರು.