Site icon Vistara News

India vs Sri Lanka: ಲಂಕಾ ಸರಣಿಯಲ್ಲಿ ವಿಶೇಷ ದಾಖಲೆ ಮೇಲೆ ಕಣ್ಣಿಟ್ಟ ಕೊಹ್ಲಿ, ರೋಹಿತ್​

India vs Sri Lanka

India vs Sri Lanka: Kohli, Rohit eyeing a special record in the Lankan series

ಕೊಲಂಬೊ: ಕಳೆದ ಏಕದಿನ ವಿಶ್ವಕಪ್​ ಫೈನಲ್​ ಪಂದ್ಯದ ಬಳಿಕ ಮೊದಲ ಏಕದಿನ ಪಂದ್ಯವನ್ನಾಡುತ್ತಿರುವ ಟೀಮ್​ ಇಂಡಿಯಾದ ಸ್ಟಾರ್​ ಆಟಗಾರರಾದ ನಾಯಕ ರೋಹಿತ್​ ಶರ್ಮ(rohit sharma) ಮತ್ತು ವಿರಾಟ್​ ಕೊಹ್ಲಿ(virat kohli) ಶ್ರೀಲಂಕಾ(India vs Sri Lanka) ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ದಾಖಲೆಯೊಂದನ್ನು ನಿರ್ಮಿಸುವ ಸನಿಹದಲ್ಲಿದ್ದಾರೆ.

ರೋಹಿತ್​​ಗೆ ಬೇಕು 2 ಶತಕ

ರೋಹಿತ್​ ಈ ಸರಣಿಯಲ್ಲಿ 2 ಶತಕ ಬಾರಿಸಿದರೆ, ವಿರಾಟ್​ ಕೊಹ್ಲಿ(Virat Kohli) ಮತ್ತು ಸಚಿನ್ ತೆಂಡೂಲ್ಕರ್(Sachin Tendulkar)​ ಜತೆ ಎಲೈಟ್​ ಪಟ್ಟಿಗೆ ಸೇರ್ಪಡೆಗೊಳ್ಳಲಿದ್ದಾರೆ. ರೋಹಿತ್​ 2 ಶತಕ ಬಾರಿಸುತ್ತಿದ್ದಂತೆ ಅಂತಾರಾಷ್ಟ್ರೀಯ ಕ್ರಿಕೆಟ್​ನಲ್ಲಿ 50 ಶತಕ ಪೂರ್ತಿಗೊಳಿಸಿದ ಸಾಧನೆ ಮಾಡಲಿದ್ದಾರೆ. ಈ ಸಾಧನೆ ಮಾಡಿದ ಮೂರನೇ ಕ್ರಿಕೆಟಿಗ ಎನಿಸಿಕೊಳ್ಳಲಿದ್ದಾರೆ. ಸಚಿನ್ ತೆಂಡೂಲ್ಕರ್ ಮತ್ತು ವಿರಾಟ್‌ ಕೊಹ್ಲಿ ಮೊದಲಿಗರು. ರೋಹಿತ್​ ಸದ್ಯ 48 ಶತಕ ಬಾರಿಸಿದ್ದಾರೆ. ಏಕದಿನದಲ್ಲಿ 31, ಟೆಸ್ಟ್​ನಲ್ಲಿ 12, ಟಿ20ಯಲ್ಲಿ 5 ಶತಕ ಬಾರಿಸಿದ್ದಾರೆ. ಸಚಿನ್ ತೆಂಡೂಲ್ಕರ್ ಒಟ್ಟು 100 ಶತಕ ಬಾರಿಸಿ ಅಗ್ರಸ್ಥಾನದಲ್ಲಿದ್ದಾರೆ. ವಿರಾಟ್​ ಕೊಹ್ಲಿ 80 ಶತಕ ಬಾರಿಸಿ ದ್ವಿತೀಯ ಸ್ಥಾನಿಯಾಗಿದ್ದಾರೆ.

14 ಸಾವಿರ ರನ್​ ದಾಖಲೆ ಮೇಲೆ ಕೊಹ್ಲಿ ಕಣ್ಣು


ವಿರಾಟ್​ ಕೊಹ್ಲಿ(Virat Kohli) ಶ್ರೀಲಂಕಾ(India tour of Sri Lanka) ವಿರುದ್ಧದ ಏಕದಿನ ಸರಣಿಯಲ್ಲಿ 152 ರನ್ ಗಳಿಸಿದರೆ ಏಕದಿನ ಕ್ರಿಕೆಟ್​ನಲ್ಲಿ 14 ಸಾವಿರ ರನ್ ಪೂರೈಸಲಿದ್ದಾರೆ. ಈ ಸಾಧನೆ ಮಾಡಿದ ವಿಶ್ವದ ಮೂರನೇ ಬ್ಯಾಟರ್​ ಎಂಬ ಹೆಗ್ಗಳಿಕೆಗೆ ಪಾತ್ರರಾಗಲಿದ್ದಾರೆ.

ಇದನ್ನೂ ಓದಿ IND vs SL: ಇಂದು ಭಾರತ-ಲಂಕಾ ಮೊದಲ ಏಕದಿನ ಹಣಾಹಣಿ; ಎಷ್ಟು ಗಂಟೆಗೆ ಪಂದ್ಯ ಆರಂಭ?

ಸದ್ಯ 292* ಏಕದಿನ ಪಂದ್ಯಗಳನ್ನಾಡಿರುವ ವಿರಾಟ್​ ಕೊಹ್ಲಿ 13,848* ರನ್(virat kohli odi runs)​ ಬಾರಿಸಿದ್ದಾರೆ. ಲಂಕಾ ವಿರುದ್ಧದ ಮೂರು ಪಂದ್ಯಗಳ ಸರಣಿಯಲ್ಲಿ ಕೊಹ್ಲಿ 152 ರನ್​ ಬಾರಿಸಿದರೆ 14 ಸಾವಿರ ರನ್​ ಮೈಲುಗಲ್ಲು ತಲುಪಲಿದ್ದಾರೆ. ಏಕದಿನ ಕ್ರಿಕೆಟ್‌ನಲ್ಲಿ 14000ಕ್ಕೂ ಹೆಚ್ಚು ರನ್ ಗಳಿಸಿದ ಸಾರ್ವಕಾಲಿದ ದಾಖಲೆ ಸಚಿನ್ ತೆಂಡೂಲ್ಕರ್ ಮತ್ತು ಕುಮಾರ ಸಂಗಕ್ಕಾರ ಹೆಸರಿನಲ್ಲಿದೆ. ಸಚಿನ್ 463 ಏಕದಿನ ಪಂದ್ಯಗಳಲ್ಲಿ 18,426 ರನ್ ಗಳಿಸಿದ್ದರೆ, ಕುಮಾರ ಸಂಗಕ್ಕಾರ 404 ಪಂದ್ಯಗಳನ್ನಾಡಿ 14,234 ರನ್ ಬಾರಿಸಿದ್ದಾರೆ. ಕೊಹ್ಲಿಗೆ ಸಂಗಕ್ಕಾರ ದಾಖಲೆ ಮುರಿಯುವ ಅವಕಾಶವಿದೆ. ಆದರೆ ಸಚಿನ್​ ದಾಖಲೆ ಮುರಿಯುವುದು ಕಷ್ಟ ಸಾಧ್ಯ.

ಭಾರತ ತಂಡ


ರೋಹಿತ್ ಶರ್ಮಾ (ನಾಯಕ), ಶುಭ್​ಮನ್ ಗಿಲ್ (ಉಪನಾಯಕ), ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ (ವಿಕೆಟ್ ಕೀಪರ್), ರಿಷಬ್ ಪಂತ್ (ವಿಕೆಟ್ ಕೀಪರ್), ಶ್ರೇಯಸ್ ಅಯ್ಯರ್, ಶಿವಂ ದುಬೆ, ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್, ವಾಷಿಂಗ್ಟನ್ ಸುಂದರ್, ಅರ್ಷದೀಪ್ ಸಿಂಗ್, ರಿಯಾನ್ ಪರಾಗ್, ಅಕ್ಷರ್ ಪಟೇಲ್, ಖಲೀಲ್ ಅಹ್ಮದ್, ಹರ್ಷಿತ್ ರಾಣಾ

Exit mobile version