ನವದೆಹಲಿ: ಜೂನ್ 16ರಿಂದ ಆರಂಭಗೊಳ್ಳಲಿರುವ ದಕ್ಷಿಣ ಆಫ್ರಿಕಾ(India women’s vs South Africa women’s) ವಿರುದ್ಧದ ಕ್ರಿಕೆಟ್ ಸರಣಿಗೆ ಭಾರತ ಮಹಿಳಾ ತಂಡ(India women’s squad) ಪ್ರಕಟಗೊಂಡಿದೆ. ಉದಯೋನ್ಮುಖ ಆಟಗಾರ್ತಿ, ಕರ್ನಾಟಕದ ಶ್ರೇಯಾಂಕಾ ಪಾಟೀಲ್ ಏಕದಿನ ಮತ್ತು ಟಿ20 ಸರಣಿಯಲ್ಲಿ ಸ್ಥಾನ ಪಡೆದಿದ್ದಾರೆ. ಉಭಯ ತಂಡಗಳ ನಡುವೆ ಟೆಸ್ಟ್, ಟಿ20 ಮತ್ತು ಏಕದಿನ ಸರಣಿಗಳು ನಡೆಯಲಿವೆ.
ಹರ್ಮನ್‌ಪ್ರೀತ್ ಕೌರ್ ಅವರು ಮೂರು ಮಾದರಿಯಲ್ಲೂ ಭಾರತ ತಂಡವನ್ನು ಮುನ್ನಡೆಸಲಿದ್ದು, ಸ್ಮೃತಿ ಮಂಧಾನ ಉಪನಾಯಕಿಯಾಗಿದ್ದಾರೆ. ಗಾಯದಿಂದ ವಿಶ್ರಾಂತಿ ಪಡೆದಿದ್ದ ಅನುಭವಿ ಆಟಗಾರ್ತಿ ಜೆಮಿಮಾ ರಾಡ್ರಿಗಸ್ ಈ ಸರಣಿ ಮೂಲಕ ಮತ್ತೆ ತಂಡಕ್ಕೆ ಕಮ್ಬ್ಯಾಕ್ ಮಾಡಿದ್ದಾರೆ. ಕಳೆದ ಬಾಂಗ್ಲಾ ವಿರುದ್ಧದ ಸರಣಿಯಿಂದ ಅವರು ಹೊರಗುಳಿದಿದ್ದರು. ವೇಗಿ ಪೂಜಾ ವಸ್ತ್ರಕರ್ ಕೂಡ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ದೇಶೀಯ ಕ್ರಿಕೆಟ್ ಟೂರ್ನಿಯಲ್ಲಿ ಅತ್ಯುತ್ತಮ ಬ್ಯಾಟಿಂಗ್ ಪ್ರದರ್ಶನ ತೋರುತ್ತಿದ್ದ ಅಗ್ರ ಕ್ರಮಾಂಕದ ಬ್ಯಾಟರ್ ಪ್ರಿಯಾ ಪೂನಿಯಾ ಏಕದಿನ ಮತ್ತು ಟೆಸ್ಟ್ ತಂಡಕ್ಕೆ ಮರಳಿದ್ದಾರೆ. 21 ವರ್ಷದ ಶ್ರೇಯಾಂಕಾ ಪಾಟೀಲ್ ಡಬ್ಲ್ಯುಪಿಎಲ್‌ನಲ್ಲಿ ಈ ಬಾರಿ ಆರ್‌ಸಿಬಿ ತಂಡದ ಪರ 13 ವಿಕೆಟ್ ಪಡೆದು ಮಿಂಚಿದ್ದರು. ಮುಂಬೈನ ವಾಂಖೆಡೆ ಸ್ಟೇಡಿಯಂನಲ್ಲಿ 2023ರ ಡಿಸೆಂಬರ್ 6ರಂದು ಇಂಗ್ಲೆಂಡ್ ವಿರುದ್ಧದ ಟಿ20 ಪಂದ್ಯದಲ್ಲಿ ಆಡುವ ಮೂಲಕ ಭಾರತ ಹಿರಿಯರ ಮಹಿಳಾ ತಂಡಕ್ಕೆ ಪದಾರ್ಪಣೆ ಮಾಡಿದ್ದರು.
ಪಂದ್ಯಾವಳಿಗಳು ಜೂನ್ 16ರಿಂದ ಜುಲೈ 9ರ ವರೆಗೆ ನಡೆಯಲಿದೆ. ಒಂದು ಟೆಸ್ಟ್, ಮೂರು ಏಕದಿನ ಮತ್ತು ಮೂರು ಟಿ20 ಪಂದ್ಯಗಳು ನಡೆಯಲಿವೆ. ಏಕದಿನ ಪಂದ್ಯಗಳು ಬೆಂಗಳೂರಿನಲ್ಲಿ ಮತ್ತು ಉಳಿದ ಪಂದ್ಯಗಳು ಚೆನ್ನೈನಲ್ಲಿ ನಡೆಯಲಿವೆ.
ಏಕದಿನ ತಂಡ
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂದಾನ (ಉಪನಾಯಕಿ), ಶಫಾಲಿ ವರ್ಮಾ, ದೀಪ್ತಿ ಶರ್ಮಾ, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೆಟ್ ಕೀಪರ್), ಉಮಾ ಚೆಟ್ರಿ (ವಿಕೆಟ್ ಕೀಪರ್), ದಯಾಳನ್ ಹೇಮಲತಾ, ರಾಧಾ ಯಾದವ್, ಆಶಾ ಶೋಭನ, ಶ್ರೇಯಾಂಕಾ ಪಾಟೀಲ್, ಸೈಕಾ ಇಶಾಕ್, ಪೂಜಾ ವಸ್ತ್ರಕರ್, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ, ಪ್ರಿಯಾ ಪೂನಿಯಾ.
ಟಿ20 ತಂಡ
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ಶುಭಾ ಸತೀಶ್, ಜೆಮಿಮಾ ರಾಡ್ರಿಗಸ್, ರಿಚಾ ಘೋಷ್ (ವಿಕೆ), ಉಮಾ ಚೆಟ್ರಿ (ವಿಕೆ), ದೀಪ್ತಿ ಶರ್ಮಾ, ಸ್ನೇಹ ರಾಣಾ, ಸೈಕಾ ಇಶಾಕ್, ರಾಜೇಶ್ವರಿ ಗಾಯಕ್‌ವಾಡ್, ಪೂಜಾ ವಸ್ತ್ರಕರ್, ಅರುಂಧತಿ ರೆಡ್ಡಿ, ರೇಣುಕಾ ಸಿಂಗ್ ಠಾಕೂರ್, ಮೇಘನಾ ಸಿಂಗ್, ಪ್ರಿಯಾ ಪುನಿಯಾ.
ಇದನ್ನೂ ಓದಿ T20 World Cup 2024: ಬಿಸಿಲಿನಲ್ಲೇ ಬ್ಯಾಟಿಂಗ್-ಬೌಲಿಂಗ್ ಅಭ್ಯಾಸ ನಡೆಸಿದ ಟೀಮ್ ಇಂಡಿಯಾ ಆಟಗಾರರು
ಟೆಸ್ಟ್ ತಂಡ
ಹರ್ಮನ್‌ಪ್ರೀತ್ ಕೌರ್ (ನಾಯಕಿ), ಸ್ಮೃತಿ ಮಂಧಾನ (ಉಪನಾಯಕಿ), ಶಫಾಲಿ ವರ್ಮಾ, ದಯಾಲನ್ ಹೇಮಲತಾ, ಉಮಾ ಚೆಟ್ರಿ (ವಿಕೆ), ರಿಚಾ ಘೋಷ್ (ವಿಕೆ), ಜೆಮಿಮಾ ರೋಡ್ರಿಗಸ್, ಸಜನಾ ಸಜೀವನ್, ದೀಪ್ತಿ ಶರ್ಮಾ, ಶ್ರೇಯಾಂಕಾ ಪಾಟೀಲ್, ರಾಧಾ ಯಾದವ್, ಅಮಾನ್ಜೋತ್ ಕೌರ್, ಎ. ಸೋಭಾನಾ, ಪೂಜಾ ವಸ್ತ್ರಾಕರ್, ರೇಣುಕಾ ಸಿಂಗ್ ಠಾಕೂರ್, ಅರುಂಧತಿ ರೆಡ್ಡಿ. ಸ್ಟ್ಯಾಂಡ್‌ಬೈ: ಸೈಕಾ ಇಶಾಕ್.