ಇಂದೋರ್: ನ್ಯೂಜಿಲ್ಯಾಂಡ್(IND VS NZ) ವಿರುದ್ಧದ ಅಂತಿಮ ಏಕದಿನ ಪಂದ್ಯವನ್ನು ಜಯಿಸುವ ಮೂಲಕ ಟೀಮ್ ಇಂಡಿಯಾ ಐಸಿಸಿ(icc odi ranking) ನೂತನ ಏಕದಿನ ಶ್ರೇಯಾಂಕದಲ್ಲಿ ನಂ.1 ಸ್ಥಾನಕ್ಕೇರಿದೆ. ಸೋಲು ಕಂಡ ಕಿವೀಸ್ ಮೂರನೇ ಸ್ಥಾನಕ್ಕೆ ಜಾರಿದೆ.
ರಾಯ್ಪುರದಲ್ಲಿ ನಡೆದ ದ್ವಿತೀಯ ಏಕದಿನ ಪಂದ್ಯದಲ್ಲಿ ಭಾರತ ಗೆಲುವು ಸಾಧಿಸಿದಾಗ ಶ್ರೇಯಾಂಕ ಪಟ್ಟಿಯಲ್ಲಿ ಮೂರನೇ ಸ್ಥಾನದಲ್ಲಿತ್ತು. ಇದೀಗ ಇಂದೋರ್ನಲ್ಲಿ ನಡೆದ ಅಂತಿಮ ಪಂದ್ಯದಲ್ಲಿ ಗೆಲುವು ಸಾಧಿಸುವ ಮೂಲಕ ಭಾರತ ಎರಡು ಸ್ಥಾನಗಳ ಪ್ರಗತಿ ಕಂಡು ಮೊದಲ ಸ್ಥಾನಕ್ಕೇರಿದೆ. ಅಗ್ರ ಸ್ಥಾನದಲ್ಲಿದ್ದ ಇಂಗ್ಲೆಂಡ್ ತಂಡ ದ್ವಿತೀಯ ಸ್ಥಾನಕ್ಕೆ ಇಳಿದಿದೆ.
ಇಂದೋರ್ನ ಹೋಳ್ಕರ್ ಸ್ಟೇಡಿಯಂನಲ್ಲಿ ಮಂಗಳವಾರ ನಡೆದ ಈ ಮುಖಾಮುಖಿಯಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್ ನಡೆಸಿದ ಭಾರತ ರೋಹಿತ್ ಶರ್ಮಾ(101 ಮತ್ತು ಶುಭಮನ್ ಗಿಲ್(112) ಅವರ ಭರ್ಜರಿ ಶತಕದ ನೆರವಿನಿಂದ ನಿಗದಿತ 50 ಓವರ್ಗಳಲ್ಲಿ 9 ವಿಕೆಟ್ಗೆ 385 ರನ್ ಗಳಿಸಿತು. ಗುರಿ ಬೆನ್ನಟ್ಟಿದ ನ್ಯೂಜಿಲ್ಯಾಂಡ್ 41.2 ಓವರ್ಗಳಲ್ಲಿ 295ಗೆ ಸರ್ವಪತನ ಕಂಡಿತು. ಭಾರತ 90 ರನ್ಗಳ ಗೆಲುವು ಸಾಧಿಸಿತು. ಈ ಗೆಲುವಿನೊಂದಿಗೆ ಬರೋಬ್ಬರಿ 13 ವರ್ಷಗಳ ಬಳಿಕ ಭಾರತ ಕಿವೀಸ್ ವಿರುದ್ಧ ಏಕದಿನ ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧನೆ ಮಾಡಿತು.
ಇದನ್ನೂ ಓದಿ | IND VS NZ: ಕಿವೀಸ್ ವಿರುದ್ಧ ಕ್ಲೀನ್ ಸ್ವೀಪ್ ಸಾಧನೆಗೈದ ಟೀಮ್ ಇಂಡಿಯಾ