Site icon Vistara News

ind vs aus : ಮೊದಲ ಪಂದ್ಯದಲ್ಲಿ ಭಾರತ ತಂಡಕ್ಕೆ ಜಯ, ಆಸ್ಟ್ರೇಲಿಯಾ ವಿರುದ್ಧ ಸರಣಿಯಲ್ಲಿ 1-0 ಮುನ್ನಡೆ

Ind vs Aus

ಮೊಹಾಲಿ: ಮೊಹಾಲಿ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಏಕ ದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್​ಗಳ ಸುಲಭ ಗೆಲುವು ಸಾಧಿಸಿದೆ. ಭಾರತ ತಂಡದ ಪರ ಬೌಲಿಂಗ್​ನಲ್ಲಿ 51 ರನ್​ಗಳಿಗೆ 5 ವಿಕೆಟ್​ ಉರುಳಿಸಿದ ಮೊಹಮ್ಮದ್ ಶಮಿ ಹಾಗೂ ಬ್ಯಾಟಿಂಗ್ ಮೂಲಕ ತಲಾ ಅರ್ಧ ಶತಕಗಳನ್ನು ಬಾರಿಸಿದ ಶುಭ್​ಮನ್​ ಗಿಲ್​ (74) ಹಾಗೂ ಋತುರಾಜ್​ ಗಾಯಕ್ವಾಡ್​ (71), ಸೂರ್ಯಕುಮಾರ್​ ಯಾದವ್​ (50), ಮತ್ತು ಕೆ. ಎಲ್​ ರಾಹುಲ್​ (58*) ಗೆಲುವಿನ ರೂವಾರಿಗಳು ಎನಿಸಿಕೊಂಡರು. ಈ ವಿಜಯದ ಮೂಲಕ ಭಾರತ ತಂಡ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿತು.

ವಿಶ್ವಕಪ್ ಟೂರ್ನಿಗೆ ಆತಿಥ್ಯ ವಹಿಸುತ್ತಿರುವ ಭಾರತ ಮತ್ತು ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾಗೆ ಈ ಸರಣಿ ಡ್ರೆಸ್​ ರಿಹರ್ಸಲ್​ ಇದ್ದಂತೆ. ಮೂರು ಪಂದ್ಯಗಳ ಸರಣಿಯ ಮೊದಲೆರಡು ಪಂದ್ಯಗಳಿಗೆ ನಾಯಕ ರೋಹಿತ್‌ ಶರ್ಮಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಕನ್ನಡಿಗ ಕೆ.ಎಲ್. ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ. ಅವರು ಮತ್ತೊಮ್ಮೆ ತಂಡದ ನಾಯಕತ್ವ ಪಡೆದಂತಾಗಿದೆ.

ಸ್ಟಾರ್​ ಬ್ಯಾಟರ್​ ವಿರಾಟ್ ಕೊಹ್ಲಿ, ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯ ಹಾಗೂ ಚೈನಾಮನ್​ ಸ್ಪಿನ್ನರ್ ಕುಲದೀಪ್ ಯಾದವ್ ಅವರೂ ಈ ಪಂದ್ಯಕ್ಕೆ ಇಲ್ಲ.

ಶ್ರೇಯಸ್‌ ಅಯ್ಯರ್ ಅವರು ತಮ್ಮ ಫಿಟ್‌ನೆಸ್ ಸಾಬೀತುಪಡಿಸಬೇಕಿದೆ. ಸೂರ್ಯಕುಮಾರ್‌ ಯಾದವ್ ಅವರಿಗೂ ಲಯಕ್ಕೆ ಮರಳುವ ಸವಾಲು ಇದೆ. ಇವರಿಬ್ಬರಿಗೂ ವಿಶ್ವಕಪ್ ತಂಡದಲ್ಲಿ ಆಡುವ ಅವಕಾಶ ಗಿಟ್ಟಿಸಲು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಆಡಲೇಬೇಕಾದ ಒತ್ತಡದಲ್ಲಿದ್ದಾರೆ.

ಇತ್ತಂಡಗಳ ಪ್ಲೇಯಿಂಗ್ ಇಲೆವೆನ್​

ಭಾರತ: ಕೆ.ಎಲ್. ರಾಹುಲ್ (ನಾಯಕ-ವಿಕೆಟ್‌ಕೀಪರ್), ಶುಭಮನ್ ಗಿಲ್, ಋತುರಾಜ್ ಗಾಯಕವಾಡ, ಶ್ರೇಯಸ್ ಅಯ್ಯ‌, ರವೀಂದ್ರ ಜಡೇಜ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಆರ್. ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್‌ಪ್ರೀತ್‌ ಬೂಮ್ರಾ, ಮೊಹಮ್ಮದ್ ಶಮಿ,

ಆಸ್ಟ್ರೇಲಿಯಾ: ಪ್ಯಾಟ್ ಕಮಿನ್ಸ್ (ನಾಯಕ), ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಷೇನ್, ಕ್ಯಾಮೆರಾನ್ ಗ್ರೀನ್, ಮಾರ್ಕಸ್ ಸೊಯಿನಿಸ್, ಮ್ಯಾಟ್ ಶಾರ್ಟ್, ಸೀನ್ ಅಬಾಟ್, ಅಡಂ ಜಂಪಾ, ಜೋಶ್ ಇಂಗ್ಲಿಷ್ (ವಿಕೆಟ್‌ಕೀಪರ್)

Sukhesha Padibagilu

ಪ್ಯಾಟ್​ ಕಮಿನ್ಸ್​ಗೆ ವಿಕೆಟ್​ ಒಪ್ಪಿಸಿದ ಇಶಾನ್​ ಕಿಶನ್​. 18 ರನ್ ಬಾರಿಸಿ ಪೆವಿಲಿಯನ್​ಗೆ ಮರಳಿದ ಎಡಗೈ ಬ್ಯಾಟರ್​

Sukhesha Padibagilu

ಭಾರತ ತಂಡ 150 ರನ್​ಗಳ ಗಡಿ ದಾಟಿದ್ದು, ಗೆಲುವಿನತ್ತ ಮುನ್ನುಗ್ಗುತ್ತಿದೆ. ಶುಭ್​ಮನ್​ ಗಿಲ್​ ಮಾಸ್ಟರ್​ ಕ್ಲಾಸ್ ಬ್ಯಾಟಿಂಗ್ ಪ್ರದರ್ಶನ ನೀಡುತ್ತಿದ್ದಾರೆ.

Sukhesha Padibagilu

ಆಸ್ಟ್ರೇಲಿಯಾ ವಿರುದ್ಧ ಚೇಸಿಂಗ್​ನಲ್ಲಿ ಶುಭ್​​ಮನ್​ ಗಿಲ್​ 32, ಋತುರಾಜ್ ಗಾಯಕ್ವಾಡ್​ 32 ರನ್ ಬಾರಿಸಿದ್ದಾರೆ.

Sukhesha Padibagilu

ಶುಭ್​ಮನ್​ ಗಿಲ್​ ಹಾಗೂ ಋತುರಾಜ್​ ಗಾಯಕ್ವಾಡ್​ ಭಾರತ ತಂಡದ ಪರವಾಗಿ ಬ್ಯಾಟಿಂಗ್ ಆರಂಭಿಸಿದ್ದಾರೆ.

Sukhesha Padibagilu

ಅನಗತ್ಯ ರನ್​ಗಾಗಿ ಓಡಿದ ಕ್ಯಾಮೆರಾನ್ ಗ್ರೀನ್ ರನ್​ಔಟ್​​.

Exit mobile version