ಮೊಹಾಲಿ: ಮೊಹಾಲಿ: ಪ್ರವಾಸಿ ಆಸ್ಟ್ರೇಲಿಯಾ ವಿರುದ್ಧದ ಏಕ ದಿನ ಸರಣಿಯ ಮೊದಲ ಪಂದ್ಯದಲ್ಲಿ ಭಾರತ ತಂಡ 5 ವಿಕೆಟ್ಗಳ ಸುಲಭ ಗೆಲುವು ಸಾಧಿಸಿದೆ. ಭಾರತ ತಂಡದ ಪರ ಬೌಲಿಂಗ್ನಲ್ಲಿ 51 ರನ್ಗಳಿಗೆ 5 ವಿಕೆಟ್ ಉರುಳಿಸಿದ ಮೊಹಮ್ಮದ್ ಶಮಿ ಹಾಗೂ ಬ್ಯಾಟಿಂಗ್ ಮೂಲಕ ತಲಾ ಅರ್ಧ ಶತಕಗಳನ್ನು ಬಾರಿಸಿದ ಶುಭ್ಮನ್ ಗಿಲ್ (74) ಹಾಗೂ ಋತುರಾಜ್ ಗಾಯಕ್ವಾಡ್ (71), ಸೂರ್ಯಕುಮಾರ್ ಯಾದವ್ (50), ಮತ್ತು ಕೆ. ಎಲ್ ರಾಹುಲ್ (58*) ಗೆಲುವಿನ ರೂವಾರಿಗಳು ಎನಿಸಿಕೊಂಡರು. ಈ ವಿಜಯದ ಮೂಲಕ ಭಾರತ ತಂಡ ಮೂರು ಪಂದ್ಯಗಳ ಸರಣಿಯಲ್ಲಿ 1-0 ಮುನ್ನಡೆ ಪಡೆದುಕೊಂಡಿತು.
ವಿಶ್ವಕಪ್ ಟೂರ್ನಿಗೆ ಆತಿಥ್ಯ ವಹಿಸುತ್ತಿರುವ ಭಾರತ ಮತ್ತು ಐದು ಬಾರಿಯ ಚಾಂಪಿಯನ್ ಆಸ್ಟ್ರೇಲಿಯಾಗೆ ಈ ಸರಣಿ ಡ್ರೆಸ್ ರಿಹರ್ಸಲ್ ಇದ್ದಂತೆ. ಮೂರು ಪಂದ್ಯಗಳ ಸರಣಿಯ ಮೊದಲೆರಡು ಪಂದ್ಯಗಳಿಗೆ ನಾಯಕ ರೋಹಿತ್ ಶರ್ಮಾ ಅವರಿಗೆ ವಿಶ್ರಾಂತಿ ನೀಡಲಾಗಿದೆ. ಕನ್ನಡಿಗ ಕೆ.ಎಲ್. ರಾಹುಲ್ ತಂಡವನ್ನು ಮುನ್ನಡೆಸಲಿದ್ದಾರೆ. ಅವರು ಮತ್ತೊಮ್ಮೆ ತಂಡದ ನಾಯಕತ್ವ ಪಡೆದಂತಾಗಿದೆ.
ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ, ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಹಾಗೂ ಚೈನಾಮನ್ ಸ್ಪಿನ್ನರ್ ಕುಲದೀಪ್ ಯಾದವ್ ಅವರೂ ಈ ಪಂದ್ಯಕ್ಕೆ ಇಲ್ಲ.
ಶ್ರೇಯಸ್ ಅಯ್ಯರ್ ಅವರು ತಮ್ಮ ಫಿಟ್ನೆಸ್ ಸಾಬೀತುಪಡಿಸಬೇಕಿದೆ. ಸೂರ್ಯಕುಮಾರ್ ಯಾದವ್ ಅವರಿಗೂ ಲಯಕ್ಕೆ ಮರಳುವ ಸವಾಲು ಇದೆ. ಇವರಿಬ್ಬರಿಗೂ ವಿಶ್ವಕಪ್ ತಂಡದಲ್ಲಿ ಆಡುವ ಅವಕಾಶ ಗಿಟ್ಟಿಸಲು ತಮ್ಮ ಸಾಮರ್ಥ್ಯಕ್ಕೆ ತಕ್ಕಂತೆ ಆಡಲೇಬೇಕಾದ ಒತ್ತಡದಲ್ಲಿದ್ದಾರೆ.
ಇತ್ತಂಡಗಳ ಪ್ಲೇಯಿಂಗ್ ಇಲೆವೆನ್
ಭಾರತ: ಕೆ.ಎಲ್. ರಾಹುಲ್ (ನಾಯಕ-ವಿಕೆಟ್ಕೀಪರ್), ಶುಭಮನ್ ಗಿಲ್, ಋತುರಾಜ್ ಗಾಯಕವಾಡ, ಶ್ರೇಯಸ್ ಅಯ್ಯ, ರವೀಂದ್ರ ಜಡೇಜ, ಸೂರ್ಯಕುಮಾರ್ ಯಾದವ್, ಇಶಾನ್ ಕಿಶನ್, ಆರ್. ಅಶ್ವಿನ್, ಶಾರ್ದೂಲ್ ಠಾಕೂರ್, ಜಸ್ಪ್ರೀತ್ ಬೂಮ್ರಾ, ಮೊಹಮ್ಮದ್ ಶಮಿ,
ಆಸ್ಟ್ರೇಲಿಯಾ: ಪ್ಯಾಟ್ ಕಮಿನ್ಸ್ (ನಾಯಕ), ಡೇವಿಡ್ ವಾರ್ನರ್, ಮಿಚೆಲ್ ಮಾರ್ಷ್, ಸ್ಟೀವ್ ಸ್ಮಿತ್, ಮಾರ್ನಸ್ ಲಾಬುಷೇನ್, ಕ್ಯಾಮೆರಾನ್ ಗ್ರೀನ್, ಮಾರ್ಕಸ್ ಸೊಯಿನಿಸ್, ಮ್ಯಾಟ್ ಶಾರ್ಟ್, ಸೀನ್ ಅಬಾಟ್, ಅಡಂ ಜಂಪಾ, ಜೋಶ್ ಇಂಗ್ಲಿಷ್ (ವಿಕೆಟ್ಕೀಪರ್)
ಆಸ್ಟ್ರೇಲಿಯಾ ತಂಡ 157 ರನ್ಗಳಿಗೆ 4 ವಿಕೆಟ್ ಕಳೆದುಕೊಂಡಿದೆ.
ಅರ್ಧ ಶತಕ ಬಾರಿಸಿ ಅಪಾಯಕಾರಿಯಾಗಿ ಪರಿಣಮಿಸಿದ್ದ ಡೇವಿಡ್ ವಾರ್ನರ್ ಔಟಾಗಿದ್ದಾರೆ. ಆಸ್ಟ್ರೇಲಿಯಾ ತಂಡ 18.2 ಓವರ್ಗಳಲ್ಲಿ 2 ವಿಕೆಟ್ಗೆ 98 ರನ್ ಬಾರಿಸಿದೆ.
ಶಾರ್ದೂಲ್ ಠಾಕೂರ್ ಎಸೆತಕ್ಕೆ ಜೀವನದಾನ ಪಡೆದ ವಾರ್ನರ್ ಅರ್ಧ ಶತಕ ಬಾರಿಸಿ ಮಿಂಚಿದರು.
29ನೇ ಅರ್ಧ ಶತಕ ಬಾರಿಸಿದ ಡೇವಿಡ್ ವಾರ್ನರ್
ಭಾರತ ತಂಡ ಮತ್ತೆ ಫೀಲ್ಡಿಂಗ್ ವೈಫಲ್ಯ ಎದುರಿಸುತ್ತಿದೆ. ಅಪಾಯಕಾರಿ ಬ್ಯಾಟರ್ ಡೇವಿಡ್ ವಾರ್ನರ್ ಕೊಟ್ಟ ಸುಲಭ ಕ್ಯಾಚ್ ಕೈಚೆಲ್ಲಿದ ಶ್ರೇಯಸ್ ಅಯ್ಯರ್ ಠಾಕೂರ್.