ಮ್ಯಾಂಚೆಸ್ಟರ್: ಭಾರತ ಹಾಗೂ ಇಂಗ್ಲೆಂಡ್ ನಡುವಿನ ಏಕದಿನ ಸರಣಿಯ (IND VS ENG ODI) ಮೂರನೇ ಪಂದ್ಯ ಮ್ಯಾಂಚೆಸ್ಟರ್ನ ಓಲ್ಡ್ ಟ್ರಾಫರ್ಡ್ ಸ್ಟೇಡಿಯಮ್ನಲ್ಲಿ ಆರಂಭಗೊಂಡಿದ್ದು, ಟಾಸ್ ಗೆದ್ದಿರುವ ಭಾರತ ತಂಡ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದೆ.
ಟೀಮ್ ಇಂಡಿಯಾದಲ್ಲಿ ಒಂದು ಬದಲಾವಣೆ ಮಾಡಿಕೊಳ್ಳಲಾಗಿದ್ದು, ಜಸ್ಪ್ರಿತ್ ಬುಮ್ರಾ ಬದಲಿಗೆ ಮೊಹಮ್ಮದ್ ಸಿರಾಜ್ ಸಿರಾಜ್ ಸ್ಥಾನ ಪಡೆದುಕೊಂಡಿದ್ದಾರೆ.
ಇದು ಸರಣಿಯ ನಿರ್ಣಾಯಕ ಪಂದ್ಯ. ಮೊದಲ ಪಂದ್ಯವನ್ನು ಭಾರತ ತಂಡ ೧೦ ವಿಕೆಟ್ಗಳಿಂದ ತನ್ನದಾಗಿಸಿಕೊಂಡಿದ್ದರೆ, ಎರಡನೇ ಪಂದ್ಯವನ್ನು ಇಂಗ್ಲೆಂಡ್ ತಂಡ ೧೦೦ ರನ್ಗಳಿಂದ ತನ್ನದಾಗಿಸಿಕೊಂಡಿತ್ತು.
ಇದನ್ನೂ ಓದಿ | IND vs ENG ODI | ಬುಮ್ರಾ ಬೆಂಕಿ, ಭಾರತಕ್ಕೆ ಮೊದಲ ಪಂದ್ಯದಲ್ಲಿ 10 ವಿಕೆಟ್ಗಳ ಭರ್ಜರಿ ಜಯ