Site icon Vistara News

Champions Trophy 2025 : ಪಾಕಿಸ್ತಾನಕ್ಕೆ ನಾವು ಹೋಗುವುದಿಲ್ಲ; ಭಾರತದ ಸ್ಪಷ್ಟ ನುಡಿ

Champions Trophy 2025

ಬೆಂಗಳೂರು: 2025ರ ಚಾಂಪಿಯನ್ಸ್ ಟ್ರೋಫಿಯಲ್ಲಿ ಪಾಲ್ಗೊಳ್ಳುವ ಬಗ್ಗೆ ಭಾರತದ ನಿಲುವು ದೃಢವಾಗಿದೆ. ಯಾವುದೇ ಕಾರಣಕ್ಕೆ ಅಲ್ಲಿಗೆ ಹೋಗದಿರುವ ನಿರ್ಧಾರ ಕೈಗೊಂಡಿದೆ. ಪ್ರಸ್ತುತ ಯುವ ವ್ಯವಹಾರ ಮತ್ತು ಕ್ರೀಡಾ ಸಚಿವ ಅನುರಾಗ್ ಠಾಕೂರ್ ಕ್ರಿಕೆಟ್ ಮತ್ತು ಭಯೋತ್ಪಾದನೆ ಒಟ್ಟಿಗೆ ಇರಲು ಸಾಧ್ಯವಿಲ್ಲ ಎಂದು ಒತ್ತಿ ಹೇಳಿದ್ದಾರೆ. ಹೀಗಾಗಿ ಮುಂದಿನ ಬಾರಿ ಅಲ್ಲಿಗೆ ಹೋಗುವುದಿಲ್ಲ ಎಂದು ಹೇಳಿದ್ದಾರೆ.

ಭಾರತವು ಪಾಕಿಸ್ತಾನದಲ್ಲಿ ಆಡುವುದಿಲ್ಲ ಎಂದು ಭಾರತೀಯ ಸಚಿವರು ಹೇಳಿದ್ದಾರೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಮೇಲೆ ಇದರಿಂದ ಒತ್ತಡ ಹೆಚ್ಚಾಗಿದೆ. 2023ರ ಏಷ್ಯಾ ಕಪ್ ರೀತಿಯಲ್ಲೇ ನಷ್ಟ ಉಂಟಾಗುವ ಸಾಧ್ಯತೆಗಳು ಇರುವ ಕಾರಣ ಆಯೋಜನೆ ಹೇಗೆ ಎಂಬ ಚಿಂತೆಯಲ್ಲಿ ಬಿದ್ದಿದೆ.

ಚಾಂಪಿಯನ್ಸ್ ಟ್ರೋಫಿ 2025 ಪಾಕಿಸ್ತಾನದಲ್ಲಿ ನಡೆಯಲಿದೆ ಎಂಬುದಾಗಿ ಅಲ್ಲಿನ ಕ್ರಿಕೆಟ್​ ಮಂಡಳಿ ಹೇಳುತ್ತಿದೆ. ಭಾರತವು ಪಾಕಿಸ್ತಾನದಲ್ಲಿ ಆಡುವುದಿಲ್ಲ ಎಂಬ ನಿಲುವನ್ನು ಉಳಿಸಿಕೊಂಡಿದೆ. ಕಳೆದ ವರ್ಷ ಪಾಕಿಸ್ತಾನದಲ್ಲಿ ನಡೆಯಬೇಕಿದ್ದ ಏಷ್ಯಾಕಪ್​ನ್ಲಲಿ ಭಾಗವಹಿಸಲು ಭಾರತ ನಿರಾಕರಿಸಿತ್ತು.

ಏಷ್ಯಾ ಕಪ್​ ಪಂದ್ಯಾವಳಿಯು ಪಾಕಿಸ್ತಾನ ಮತ್ತು ಶ್ರೀಲಂಕಾದಲ್ಲಿ ಜಂಟಿಯಾಗಿ ನಡೆಯಿತು. ಇದೇ ಮೊದಲ ಬಾರಿಗೆ ಏಷ್ಯಾ ಕಪ್ ಅನ್ನು ಉಭಯ ದೇಶಗಳು ಆಯೋಜಿಸಿದವು.

IPL 2024 : ಸೋಲಿನ ಸರಮಾಲೆ; ಸಿದ್ಧಿವಿನಾಯಕನ ದರ್ಶನ ಪಡೆದ ಆರ್​​ಸಿಬಿ ಆಟಗಾರರು

ಭಾರತದ ಎಲ್ಲಾ ಪಂದ್ಯಗಳು ಶ್ರೀಲಂಕಾದಲ್ಲಿ ನಡೆದವು, ಇದರಲ್ಲಿ ಭಾರತ-ಪಾಕಿಸ್ತಾನ ಪಂದ್ಯವೂ ಸೇರಿದೆ. ಶ್ರೀಲಂಕಾದಲ್ಲಿ ನಡೆದ ಫೈನಲ್ ಪಂದ್ಯದಲ್ಲಿ ಶ್ರೀಲಂಕಾವನ್ನು ಸೋಲಿಸಿ ಭಾರತ ಏಷ್ಯಾಕಪ್ ತನ್ನದಾಗಿಸಿಕೊಂಡಿತ್ತು.

ಪಿಸಿಬಿ ಸಂದಿಗ್ಧ ಪರಿಸ್ಥಿತಿಯಲ್ಲಿ

ಐಸಿಸಿ ಚಾಂಪಿಯನ್ಸ್​​ ಟ್ರೋಫಿ 2025 ಅನ್ನು ಪಾಕಿಸ್ತಾನಕ್ಕೆ ನಿಗದಿಪಡಿಸಿದ ನಂತರ ಭಾರತೀಯ ತಂಡವನ್ನು ಪಾಕಿಸ್ತಾನಕ್ಕೆ ಕಳುಹಿಸುವಂತೆ ಬಿಸಿಸಿಐ ಮನವೊಲಿಸಲು ಪಿಸಿಬಿ ಪ್ರಯತ್ನಿಸುತ್ತಿದೆ. ಆದರೆ, ಭಾರತ ಪಿಸಿಬಿಗೆ ಗ್ರೀನ್ ಸಿಗ್ನಲ್ ನೀಡಿಲ್ಲ. ಭಾರತದ ಉಪಸ್ಥಿತಿಯಿಲ್ಲದೆ, ಐಸಿಸಿ ಚಾಂಪಿಯನ್ಸ್ ಟ್ರೋಫಿಯನ್ನು ಪಾಕಿಸ್ತಾನದಿಂದ ಸ್ಥಳಾಂತರಿಸಬೇಕಾಗಬಹುದು. ಏಷ್ಯಾ ಕಪ್ ಪರಿಸ್ಥಿತಿಯಂತೆಯೇ ಹೈಬ್ರಿಡ್ ಪರಿಹಾರ ಕಂಡುಕೊಳ್ಳಬೇಕಾಗುತ್ತದೆ.

ಉಭಯ ದೇಶಗಳ ನಡುವಿನ ದ್ವಿಪಕ್ಷೀಯ ಸಂಬಂಧಗಳು ಮುರಿದುಹೋಗಿವೆ. ಪರಸ್ಪರ ಪಂದ್ಯಗಳನ್ನು ಆಡುತ್ತಿಲ್ಲ. ಈ ನಿರ್ಧಾರ ಎರಡೂ ಸರ್ಕಾರಗಳ ಅಡಿಯಲ್ಲಿ ನಡೆಯಿತು. ಆದಾಗ್ಯೂ, ಪಾಕಿಸ್ತಾನವು ಕಳೆದ ಏಕದಿನ ವಿಶ್ವಕಪ್ ಸೇರಿದಂತೆ ಅನೇಕ ಐಸಿಸಿ ಪಂದ್ಯಾವಳಿಗಳಿಗಾಗಿ ತನ್ನ ತಂಡವನ್ನು ಭಾರತಕ್ಕೆ ಕಳುಹಿಸಿತ್ತು.

Exit mobile version