ಸೇಂಟ್ ಕಿಟ್ಸ್ : ವೆಸ್ಟ್ ಇಂಡೀಸ್ ವಿರುದ್ಧದ ಟಿ೨೦ ಸರಣಿಯ ಮೂರನೇ ಪಂದ್ಯದಲ್ಲಿ ಭಾರತ ತಂಡದ ನಾಯಕ ರೋಹಿತ್ ಶರ್ಮ ಟಾಸ್ ಗೆದಿದ್ದಾರೆ. ಸೋಮವಾರ ಎರಡನೇ ಪಂದ್ಯ ನಡೆದ ವಾರ್ನರ್ ಪಾರ್ಕ್ ಸ್ಟೇಡಿಯಮ್‌ನಲ್ಲಿ ಈ ಹಣಾಹಣಿಯೂ ಆಯೋಜನೆಗೊಂಡಿದ್ದು, ಭಾರತ ತಂಡ ಮೊದಲು ಫೀಲ್ಡ್ ಮಾಡಲು ಮುಂದಾಗಿದೆ.
ಸರಣಿಯ ಮೊದಲೆರಡು ಪಂದ್ಯಗಳಲ್ಲಿ ಭಾರತ ಹಾಗೂ ಆತಿಥೇಯ ವೆಸ್ಟ್ ಇಂಡೀಸ್ ತಲಾ ಒಂದು ಪಂದ್ಯಗಳನ್ನು ಗೆದ್ದಿದೆ. ಈ ಪಂದ್ಯವನ್ನು ಗೆದ್ದ ತಂಡಕ್ಕೆ ಸರಣಿ ವಶಪಡಿಸಿಕೊಳ್ಳುವುದಕ್ಕೆ ಅನುಕೂಲವಾಗಲಿದೆ,
ಮೂರನೇ ಪಂದ್ಯವಾಡುವ ಭಾರತ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದೆ. ರವೀಂದ್ರ ಜಡೇಜಾ ಬದಲಿಗೆ ದೀಪಕ್ ಹೂಡಾ ಅವಕಾಶ ಪಡೆದಿದ್ದಾರೆ.
ಭಾರತ ತಂಡ
ರೋಹಿತ್ ಶರ್ಮ (ನಾಯಕ), ರಿಷಭ್ ಪಂತ್, ಸೂರ್ಯಕುಮಾರ್ ಯಾದವ್, ಶ್ರೇಯಸ್ ಅಯ್ಯರ್, ದೀಪಕ್ ಹೂಡಾ, ಹಾರ್ದಿಕ್ ಪಾಂಡ್ಯ, ದಿನೇಶ್ ಕಾರ್ತಿಕ್, ಆವೇಶ್ ಖಾನ್, ಭುವನೇಶ್ವರ್ ಕುಮಾರ್, ರವಿಚಂದ್ರನ್ ಅಶ್ವಿನ್, ಅರ್ಶ್‌ದೀಪ್ ಸಿಂಗ್.