ರಾಂಚಿ: ಟೀಮ್ ಇಂಡಿಯಾದ ಮಾಜಿ ಆಟಗಾರ ಹಾಗೂ ನಾಯಕ ಮಹೇಂದ್ರ ಸಿಂಗ್ ಧೋನಿ(MS Dhoni) ಅವರಿಗೆ ಬೈಕ್ ಮತ್ತು ಕಾರಿನ ಕ್ರೇಜ್ ಇರುವುದು ಈಗಾಗಕೇ ಎಲ್ಲರಿಗೂ ತಿಳಿದಿದೆ. ಧೋನಿ ಬಿಡುವಿನ ವೇಳೆ ಹಲವು ಬಾರಿ ವಿಂಟೇಜ್ ಕಾರುಗಳು ಮತ್ತು ಬೈಕ್ಗಳನ್ನು ಓಡಿಸಿದ ವಿಡಿಯೊ ವೈರಲ್(viral video) ಆಗಿತ್ತು. ಅಲ್ಲದೆ ತಮ್ಮ ಮನೆಯಲ್ಲೇ ಅವರು ಗ್ಯಾರೇಜ್ ಕೂಡ ಹೊಂದಿದ್ದಾರೆ. ಇದೀಗ ಧೋನಿ ಅವರ ಬೃಹತ್ ಗಾಜಿನ ಗ್ಯಾರೇಜ್‌ನ ವಿಡಿಯೊವೊಂದು ವೈರಲ್ ಆಗಿದೆ.
ಕಳೆದ ವರ್ಷ ವೆಂಕಟೇಶ್ ಪ್ರಸಾದ್ ಮತ್ತು ಸುನಿಲ್ ಜೋಶಿ ಅವರು ಧೋನಿಯ ರಾಂಚಿಯಲ್ಲಿರುವ ಮನೆಗೆ ಭೇಟಿ ನೀಡಿದ ಸಂದರ್ಭದಲ್ಲಿ ಧೋನಿ ಫಾರ್ಮ್ ಹೌಸ್ನಲ್ಲಿರುವ ಬೈಕ್ ಮತ್ತು ಕಾರುಗಳ ವಿಡಿಯೊವನ್ನು ಹಂಚಿಕೊಂಡಿದ್ದರು. ಇದನ್ನು ಕಂಡ ಅನೇಕರು ಅಬ್ಬಾ… ಎಂದು ಆಶ್ಚರ್ಯವಾಗಿದ್ದರು. ಇದೀಗ ಶಾದಾಬ್ ಸೈಫಿ ಎಂಬ ಯೂಟ್ಯೂಬ್ ಚಾನೆಲ್ ಧೋನಿಯ ಗಾಜಿನ ಗ್ಯಾರೇಜ್‌ನ ಒಳಭಾಗದ ವಿಡಿಯೊವನ್ನು ಸಾಮಾಜಿಕ ಜಾಲತಾಣದಲ್ಲಿ ಅಪ್‌ಲೋಡ್ ಮಾಡಿದೆ. ಈ ವಿಡಿಯೊ ಭಾರೀ ವೈರಲ್ ಆಗಿದೆ.
ಏತನ್ಮಧ್ಯೆ, ಧೋನಿ ಅವರ ಅಪರೂಪದ ಬೈಕ್ ಮತ್ತು ಕಾರುಗಳ ಸಂಗ್ರಹದ ವಿಡಿಯೊ ಅಂತರ್ಜಾಲದಲ್ಲಿ ಕಾಣಿಸಿಕೊಂಡಿರುವುದು ಇದೇ ಮೊದಲಲ್ಲ. ಇದಕ್ಕೂ ಮೊದಲು, ಧೋನಿ ಅವರ ಪತ್ನಿ ಇನ್‌ಸ್ಟಾಗ್ರಾಮ್‌ನಲ್ಲಿ ಈ ಗ್ಯಾರೇಜ್‌ನ ಫೋಟೋವನ್ನು ಹಂಚಿಕೊಂಡಿದ್ದರು. ಜತೆಗೆ “ಈ ಹುಡುಗ ನಿಜವಾಗಿಯೂ ಅವನ ಆಟಿಕೆಗಳನ್ನು ಪ್ರೀತಿಸುತ್ತಾನೆ” ಎಂದು ಶೀರ್ಷಿಕೆ ನೀಡಿದ್ದರು.
ವಿದಾಯದ ಐಪಿಎಲ್ ಟೂರ್ನಿ(IPL 2024) ಆಡಲಿರುವ ಚೆನ್ನೈ ಸೂಪರ್ ಕಿಂಗ್ಸ್(Chennai Super Kings) ತಂಡದ ನಾಯಕ ಮಹೇಂದ್ರ ಸಿಂಗ್ ಧೋನಿ ಅವರು 17ನೇ ಆವೃತ್ತಿಯ ಐಪಿಎಲ್ಗಾಗಿ ಈಗಾಗಲೇ ಅಭ್ಯಾಸ ಆರಂಭಿಸಿದ್ದಾರೆ.
ಇದನ್ನೂ ಓದಿ MS Dhoni : ಧ್ವಜಾರೋಹಣ ಮಾಡಿ ಗಣರಾಜ್ಯೋತ್ಸವ ಆಚರಿಸಿದ ಎಂಎಸ್ ಧೋನಿ
ಹಾಲಿ ಚಾಂಪಿಯನ್ ಆಗಿರುವ ಚೆನ್ನೈ ತಂಡ ಈ ಬಾರಿಯ ಆವೃತ್ತಿಗಾಗಿ ಆಟಗಾರರ ಮಿನಿ ಹರಾಜಿನಲ್ಲಿ ಸ್ಟಾರ್ ಆಟಗಾರರನ್ನು ಖರೀದಿಸಿ ತಂಡವನ್ನು ಬಲಿಷ್ಠಗೊಳಿಸಿದೆ. ಕಳೆದ ಬಾರಿಯ ಟೂರ್ನಿಯಲ್ಲಿ ಬೆರಳೆಣಿಕೆಯ ಅನುಭವಿ ಆಟಗಾರರನ್ನು ಹೊಂದಿದ್ದರೂ ಕಪ್ ಗೆದ್ದು ಇತಿಹಾಸ ನಿರ್ಮಿಸಿತ್ತು. ಈ ಬಾರಿ ಬಲಿಷ್ಠವಾಗಿ ಗೋಚರಿಸಿದ ಚೆನ್ನೈ ತಂಡ ಮತ್ತೆ ಕಪ್ ಗೆಲ್ಲುವುದು ಖಚಿತ ಎಂದು ಟೂರ್ನಿ ಆರಂಭಕ್ಕೂ ಮುನ್ನವೇ ಅಭಿಮಾನಿಗಳು ಭವಿಷ್ಯ ನುಡಿಯಲಾರಂಭಿಸಿದ್ದಾರೆ.
MS Dhoni has started his preparations for IPL 2024. pic.twitter.com/zYKaV8mdnp
— Mufaddal Vohra (@mufaddal_vohra) January 10, 2024
ಧೋನಿ ಅವರು ಅಂತಾರಾಷ್ಟ್ರೀಯ ಕ್ರಿಕೆಟ್ಗೆ ವಿದಾಯ ಹೇಳಿ ಕೆಳವು ವರ್ಷಗಳಾಗಿವೆ. ಕೇವಲ ಐಪಿಎಲ್ ಟೂರ್ನಿಯಲ್ಲಿ(IPL 2024) ಮಾತ್ರ ಆಡುತ್ತಿದ್ದಾರೆ. ಕಳೆದ ವರ್ಷವೇ ಅವರು ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್ಗೂ ಗುಡ್ಬೈ ಹೇಳಲಿದ್ದಾರೆ. ನಿವೃತ್ತಿ ಬಳಿಕ ಏನು ಮಾಡಲಿದ್ದೀರ ಎಂದು ಅಭಿಮಾನಿಯೊಬ್ಬರು ಕೇಳಿದ ಪ್ರಶ್ನೆಗೆ ಉತ್ತರಿಸಿದ್ದ ಧೋನಿ. ಸದ್ಯಕ್ಕೆ ನಾನು ಕ್ರಿಕೆಟ್ ಬಗ್ಗೆ ಮಾತ್ರ ಯೋಚಿಸುತ್ತಿದ್ದೇನೆ. ಆದರೆ ಒಂದಂತು ನಿಜ, ಕ್ರಿಕೆಟ್ನಿಂದ ನಿವೃತ್ತಿಯಾದ ಬಳಿಕ ಕೆಲ ಕಾಲ ಆರ್ಮಿಯಲ್ಲಿ ಕರ್ತವ್ಯ ನಿರ್ವಹಿಸುತ್ತೇನೆ ಅದು ನನ್ನ ಜೀವನದ ಪ್ರಮುಖ ಗುರಿ ಎಂದು ಮಾಹಿ ಹೇಳಿದ್ದರು.