ರಾಂಚಿ : ಪ್ರವಾಸಿ ನ್ಯೂಜಿಲ್ಯಾಂಡ್ ವಿರುದ್ಧದ ಟಿ20 ಸರಣಿಯ (INDvsNZ T20) ಮೊದಲ ಪಂದ್ಯದಲ್ಲಿ ಟಾಸ್ ಗೆದ್ದಿರುವ ಭಾರತ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಫೀಲ್ಡಿಂಗ್ ಆಯ್ಕೆ ಮಾಡಿಕೊಂಡಿದ್ದಾರೆ. ಈ ಗ್ರೌಂಡ್ನಲ್ಲಿ ಇದುವರೆಗೆ ನಡೆದಿರುವ ಮೂರು ಟಿ20 ಪಂದ್ಯಗಳಲ್ಲಿ ಎರಡು ಬಾರಿ ಚೇಸಿಂಗ್ ಮಾಡಿದ ತಂಡ ವಿಜಯ ಸಾಧಿಸಿದೆ. ಏಕ ದಿನ ಸರಣಿಯಲ್ಲಿ ಕ್ಲೀನ್ ಸ್ವೀಪ್ ಸಾಧನೆ ಮಾಡಿರುವ ಭಾರತ ತಂಡ ಚುಟುಕು ಕ್ರಿಕೆಟ್ನ ಸರಣಿಯನ್ನೂ ವಶಪಡಿಸಿಕೊಳ್ಳುವ ಇರಾದೆಯೊಂದಿಗೆ ಆಡಲಿದೆ.
ಆಲ್ರೌಂಡರ್ ಮಿಚೆಲ್ ಸ್ಯಾಂಟ್ನರ್ ನ್ಯೂಜಿಲ್ಯಾಂಡ್ ತಂಡದ ನೇತೃತ್ವ ವಹಿಸಿಕೊಂಡಿದ್ದಾರೆ. ಉಪಖಂಡದಲ್ಲಿ ಅತ್ಯುತ್ತಮ ಪ್ರದರ್ಶನ ನೀಡುವ ಸ್ಪಿನ್ನರ್ ಇಶ್ ಸೋಧಿ ಕೂಡ ಗಾಯದ ಸಮಸ್ಯೆಯಿಂದ ಗುಣಮುಖರಾಗಿ ತಂಡ ಸೇರಿಕೊಂಡಿದ್ದಾರೆ.
ಭಾರತ ತಂಡದ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿಯ ತವರಿನ ಸ್ಟೇಡಿಯಮ್ ಇದಾಗಿದೆ. ಗುರುವಾರ ಟೀಮ್ ಇಂಡಿಯಾದ ಡ್ರೆಸಿಂಗ್ ರೂಮ್ಗೆ ಭೇಟಿ ನೀಡಿರುವ ಧೋನಿ, ನಾಯಕ ಹಾರ್ದಿಕ್ ಪಾಂಡ್ಯ ಸೇರಿದಂತೆ ಟೀಮ್ ಇಂಡಿಯಾ ಸದಸ್ಯರ ಜತೆ ಚರ್ಚೆ ನಡೆಸಿದ್ದಾರೆ. ಅವರ ಹೇಳಿಕೊಟ್ಟಿರುವ ಯೋಜನೆಯಂತೆ ಭಾರತ ತಂಡದ ಆಟಗಾರರು ಪ್ರದರ್ಶನ ನೀಡಲಿದ್ದಾರೆ.
ತಂಡಗಳು
ಭಾರತ: ಶುಬ್ಮನ್ ಗಿಲ್, ಇಶಾನ್ ಕಿಶನ್, ರಾಹುಲ್ ತ್ರಿಪಾಠಿ, ಸೂರ್ಯಕುಮಾರ್ ಯಾದವ್, ಹಾರ್ದಿಕ್ ಪಾಂಡ್ಯ, ದೀಪಕ್ ಹೂಡಾ, ವಾಷಿಂಗ್ಟನ್ ಸುಂದರ್, ಶಿವಂ ಮಾವಿ, ಉಮ್ರಾನ್ ಮಲಿಕ್, ಅರ್ಶ್ದೀಪ್ ಸಿಂಗ್, ಕುಲ್ದೀಪ್ ಯಾದವ್.
ನ್ಯೂಜಿಲ್ಯಾಂಡ್: ಫಿನ್ ಅಲೆನ್, ಡೆವೋನ್ ಕಾನ್ವೆ, ಮಾರ್ಕ್ ಚಾಪ್ಮನ್, ಗ್ಲೆನ್ ಫಿಲಿಪ್ಸ್, ಡ್ಯಾರಿಲ್ ಮಿಚೆಲ್, ಮೈಕೆಲ್ ಬ್ರೇಸ್ವೆಲ್, ಮಿಚೆಲ್ ಸ್ಯಾಂಟ್ನರ್, ಜಾಕೊಬ್ ಡಫಿ, ಬ್ಲೇರ್ ಟಿಕ್ನರ್, ಇಶ್ ಸೋಧಿ, ಲಾಕಿ ಫರ್ಗ್ಯೂಸನ್.