VISTARA TOP 10 NEWS : ಸಿಕ್ಕಿಂ ಪ್ರವಾಹಕ್ಕೆ 23 ಯೋಧರ ನಾಪತ್ತೆ; ಏಷ್ಯನ್ ಗೇಮ್ಸ್​ನಲ್ಲಿ ಭಾರತದ ಐತಿಹಾಸಿಕ ಸಾಧನೆ ಮತ್ತಿತರ ದಿನದ ಪ್ರಮುಖ ಸುದ್ದಿಗಳು - Vistara News

ಕ್ರಿಕೆಟ್

VISTARA TOP 10 NEWS : ಸಿಕ್ಕಿಂ ಪ್ರವಾಹಕ್ಕೆ 23 ಯೋಧರ ನಾಪತ್ತೆ; ಏಷ್ಯನ್ ಗೇಮ್ಸ್​ನಲ್ಲಿ ಭಾರತದ ಐತಿಹಾಸಿಕ ಸಾಧನೆ ಮತ್ತಿತರ ದಿನದ ಪ್ರಮುಖ ಸುದ್ದಿಗಳು

VISTARA TOP 10 NEWS: ದೇಶ, ವಿದೇಶಗಳ ಸುದ್ದಿಗಳು, ದಿನವಿಡೀ ನಡೆದ ಪ್ರಮುಖ ಬೆಳವಣಿಗೆಗಳ ಸುತ್ತುನೋಟವೇ Vistara Top10 News

VISTARANEWS.COM


on

Top 10 news
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ

1. ಸಿಕ್ಕಿಂ ದಿಢೀರ್ ಪ್ರವಾಹ, ಇನ್ನೂ ಪತ್ತೆಯಾಗಿಲ್ಲ 23 ಯೋಧರು, 8 ಮಂದಿ ಸಾವು
ಗ್ಯಾಂಗ್‌ಟಾಕ್‌: ಉತ್ತರ ಸಿಕ್ಕಿಂನಲ್ಲಿ ಮೇಘಸ್ಫೋಟ ಉಂಟಾಗಿದ್ದು(Sikkim Flash Flood), ನದಿಗಳು ಉಕ್ಕಿ ಹರಿಯುತ್ತಿವೆ. ಅಷ್ಟೇ ಅಲ್ಲ, ಭಾರತೀಯ ಸೇನೆಯ 23 ಯೋಧರು (Indian Army Jawans) ಸೇರಿದಂತೆ ಒಟ್ಟು 49 ಜನರು ನಾಪತ್ತೆಯಾಗಿದ್ದಾರೆ. ಈ ಮಧ್ಯೆ 8 ಜನರು ಮೃತಪಟ್ಟಿರುವುದು ಖಚಿತಪಟ್ಟಿದೆ. ಹಾಗೆಯೇ ನಾಪತ್ತೆಯಾಗಿರುವವರ ಶೋಧ ಕಾರ್ಯಾಚರಣೆ ನಡೆದಿದೆ(Search operation). ಪ್ರಧಾನಿ ನರೇಂದ್ರ ಮೋದಿ (PM Narendra Modi) ಸಿಕ್ಕಮ್ ಮುಖ್ಯಮಂತ್ರಿಯವರೊಂದಿಗೆ ಮಾತನಾಡಿ, ನೈಸರ್ಗಿಕ ವಿಪತ್ತು ನಿರ್ವಹಣೆಗೆ ಎಲ್ಲ ರೀತಿಯ ನೆರವು ನೀಡುವುದಾಗಿ ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.

2. Asian Games : ಏಷ್ಯನ್​ ಗೇಮ್ಸ್​ನಲ್ಲಿ ಭಾರತದ ಐತಿಹಾಸಿಕ ಸಾಧನೆ, ಒಟ್ಟು ಪದಕಗಳ ಸಂಖ್ಯೆ 81ಕ್ಕೆ ಏರಿಕೆ
ಬೆಂಗಳೂರು: ಭಾರತೀಯ ಕ್ರೀಡಾ ಕ್ಷೇತ್ರಕ್ಕೆ ಅಕ್ಟೋಬರ್​ 4 ಮಹತ್ವದ ದಿನವಾಗಿದೆ. ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್​ನಲ್ಲಿ (Asian Games) ಭಾರತದ ಅಥ್ಲೀಟ್​ಗಳು ಇದುವರೆಗಿನ ಗರಿಷ್ಠ ಸಾಧನೆ ಮಾಡಿದ್ದಾರೆ. ಇಲ್ಲಿಯವರೆಗಿನ 18 ಆವೃತ್ತಿಗಳಲ್ಲಿ ಭಾರತ ಗರಿಷ್ಠ 69 ಪದಕಗಳನ್ನು ಗೆದ್ದುಕೊಂಡಿತ್ತು. ಆದರೆ, ಈ ಬಾರಿ 11ನೇ ದಿನಕ್ಕೆ ಒಟ್ಟು ಪದಕಗಳ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ಈ ಮೂಲಕ ಸಾರ್ವಕಾಲಿಕ ದಾಖಲೆಯನ್ನು ಬರೆದಿದೆ. ಅಕ್ಟೋಬರ್ 7ರವರೆಗೆ ಅಂದರೆ ಇನ್ನೂ ಮೂರು ದಿನಗಳ ಕಾಲ ಕ್ರೀಡಾಕೂಟ ನಡೆಯಲಿದ್ದು ಭಾರತದ ಒಟ್ಟು ಪದಕಗಳ ಸಂಖ್ಯೆ ಹೆಚ್ಚಳವಾಗಲಿದೆ. ಅಂದಾಜಿನ ಪ್ರಕಾರ ಭಾರತಕ್ಕೆ 100 ಪದಕಗಳನ್ನು ಗೆಲ್ಲುವ ಅವಕಾಶವೂ ಇದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ : Asian Games : ಏಷ್ಯನ್​ ಗೇಮ್ಸ್​ನಲ್ಲಿ ಚಿನ್ನದ ಪದಕ ಗೆದ್ದ ಜಾವೆಲಿನ್ ಎಸೆತಗಾರ ನೀರಜ್​ ಚೋಪ್ರಾ
ಏಷ್ಯನ್​ ಗೇಮ್ಸ್​ನಲ್ಲಿ ಹೊಸ ದಾಖಲೆಯೊಂದಿಗೆ ಚಿನ್ನ ಗೆದ್ದ ಪುರುಷರ ರಿಲೇ ತಂಡ

4. ಏಕದಿನ ವಿಶ್ವಕಪ್ ಸಮರ ಗುರುವಾರದಿಂದ ಶುರು!, ಭಾರತ ಆತಿಥ್ಯದಲ್ಲಿ ನಡೆಯಲಿದೆ ಕ್ರಿಕೆಟ್ ಹಬ್ಬ
13ನೇ ಆವೃತ್ತಿಯ ಏಕ ದಿನ ಕ್ರಿಕೆಟ್ ವಿಶ್ವ ಕಪ್​ ಭಾರತದ ಆತಿಥ್ಯದಲ್ಲಿ ಗುರುವಾರದಿಂದ (ಅಕ್ಟೋಬರ್​ 5) ಆರಂಭವಾಗಲಿದೆ. ಅಹಮದಾಬಾದ್​ನಲ್ಲಿರುವ ವಿಶ್ವದ ಅತ್ಯಂತ ದೊಡ್ಡ ಕ್ರಿಕೆಟ್ ಸ್ಟೇಡಿಯಮ್​ ಆಗಿರುವ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮೊದಲ ಪಂದ್ಯ ನಡೆಯಲಿದೆ. 2019ರ ಆವೃತ್ತಿಯ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್​ ನ್ಯೂಜಿಲ್ಯಾಂಡ್ ನಡುವಿನ ಹಣಾಹಣಿಯೊಂದಿಗೆ ಟೂರ್ನಿಗೆ ಚಾಲನೆ ಸಿಗಲಿದೆ.
ವಿಶ್ವಕಪ್‌ ಪಂದ್ಯಾವಳಿಯ ಕುತೂಹಲಕರ ಮಾಹಿತಿಗಾಗಿ ಕ್ಲಿಕ್‌ ಮಾಡಿ

4. ಮೋದಿ ದಸರಾ ಕೊಡುಗೆ; ಉಜ್ವಲ ಫಲಾನುಭವಿಗಳ ಎಲ್‌ಪಿಜಿ ಸಿಲಿಂಡರ್ ಸಬ್ಸಿಡಿ 300 ರೂ.ಗೆ ಏರಿಕೆ!
ನವದೆಹಲಿ: ರಕ್ಷಾ ಬಂಧನಕ್ಕೆ (Raksha Bandhan) ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 200 ರೂ. ಕಡಿತ (LPG Price Cut) ಮಾಡಿದ್ದ ಕೇಂದ್ರ ಸರ್ಕಾರವು (Central Government) ಈಗ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಖುಷಿ ಸುದ್ದಿ ನೀಡಿದೆ. 200 ರೂ. ಇದ್ದ ಸಬ್ಸಿಡಿ ಮೊತ್ತವನ್ನು 300 ರೂಪಾಯಿಗೆ ಏರಿಕೆ ಮಾಡಿದೆ. ಪ್ರಧಾನಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ(Pradhan Mantri Ujjwala Yojana). ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ

5. ಬಿಜೆಪಿ ಸರ್ಕಾರ ಸಾವಿರಾರು ಕೇಸ್‌ ಕೈಬಿಟ್ಟಿದೆ; 7361 ರೌಡಿ ಶೀಟರ್ಸ್‌ ಬೀದಿಗೆ ಬಿಟ್ಟಿದೆ ಎಂದ ಡಿ ಕೆ ಶಿವಕುಮಾರ್‌
ಬೆಂಗಳೂರು: “ಹಿಂದಿನ ಬಿಜೆಪಿ ಸರಕಾರ (BJP Governments) ಕೋಮು ಘಟನೆಗಳಿಗೆ (Communal Incidents) ಸಂಬಧಪಟ್ಟ ಸಾವಿರಾರು ಪ್ರಕರಣಗಳನ್ನು ಕೈಬಿಟ್ಟಿದೆ. ಜತೆಗೆ ಸಾವಿರಾರು ರೌಡಿ ಶೀಟರ್‌ಗಳನ್ನು (Rowdy Sheeters) ಬೀದಿಗೆ ಬಿಟ್ಟಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್‌ (DK Shivakumar) ಅವರು ತಿರುಗೇಟು ನೀಡಿದ್ದಾರೆ. ಸದಾಶಿವನ ನಗರದ ನಿವಾಸದ ಬಳಿ ಮಾಧ್ಯಮಗಳೊಂದೊಂದಿಗೆ ಮಾತನಾಡುವ ವೇಳೆ ಗಲಭೆ ಪ್ರಕರಣ ಹಿಂಪಡೆಯುವಂತೆ ನೀವು ಪತ್ರ ಬರೆದಿರುವುದನ್ನು ಬಿಜೆಪಿ ಅಸ್ತ್ರವಾಗಿಸಿಕೊಂಡಿದೆಯಲ್ಲಾ ಎಂಬ ಪ್ರಶ್ನೆಗೆ ಶಿವಕುಮಾರ್ ಅವರು ಉತ್ತರಿಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಂಪಡೆಯಲಾದ ಕೋಮು ಪ್ರಕರಣಗಳ ಬಗ್ಗೆ ಮಾಹಿತಿ ನೀಡಿದರು. ಪೂರ್ಣ ಸುದ್ದಿಗೆ ಇಲ್ಲ ಕ್ಲಿಕ್ ಮಾಡಿ.

6. Shivamogga Violence : ಕಾಂಗ್ರೆಸ್‌ ತುಷ್ಟೀಕರಣ ಸಮಾಜಘಾತುಕ ಶಕ್ತಿಗಳಿಗೆ ಬಲ ಎಂದ ಬೊಮ್ಮಾಯಿ

7. Nobel Prize 2023: ಅಮೆರಿಕದ ಮೌಂಗಿ ಬವೆಂಡಿ, ಲೂಯಿಸ್ ಬ್ರಸ್, ಅಲೆಕ್ಸಿ ಎಕಿಮೊವ್‌ಗೆ ಕೆಮೆಸ್ಟ್ರಿ ನೊಬೆಲ್ ಪ್ರಶಸ್ತಿ

8. JDS Politics : ಮೈತ್ರಿ ಬಗ್ಗೆ ಜೆಡಿಎಸ್‌ನ 19 ಶಾಸಕರಲ್ಲಿ ಅಸಮಾಧಾನ; ಗಾಂಧೀಜಿ ಎಲೆಕ್ಷನ್‌ಗೆ ನಿಂತರೂ 20 ಕೋಟಿ ರೂ ಬೇಕು!

9. Cancer Detector: ಬಾಯಿಯಿಂದ ಊದಿದರೆ ಕ್ಯಾನ್ಸರ್‌ ಪತ್ತೆ ಹಚ್ಚುವ ಉಪಕರಣ! ಭಾರತೀಯ ಉದ್ಯಮಿಯ ಪ್ರಯತ್ನ

10. Actress Kushboo: ಕೇರಳ ದೇಗುಲದಲ್ಲಿ ಖುಷ್ಬೂಗೆ ಪಾದ ಪೂಜೆ; ದೇವಿಯೇ ಇವರನ್ನು ಆರಿಸಿದ್ದಂತೆ!
ಮತ್ತಷ್ಟು ವೈರಲ್‌ ಸುದ್ದಿಗಳಿಗಾಗಿ ಕ್ಲಿಕ್‌ ಮಾಡಿ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
Continue Reading
Click to comment

Leave a Reply

Your email address will not be published. Required fields are marked *

Latest

ಹಾರ್ದಿಕ್ ವಿರುದ್ಧ ಅಸಮಾಧಾನ: ಮೊದಲ ಬಾರಿಗೆ ಪ್ರತಿಕ್ರಿಯಿಸಿದ ಸಹೋದರ ಕೃನಾಲ್ ಪಾಂಡ್ಯ.

VISTARANEWS.COM


on

ಭಾರತೀಯ ಕ್ರಿಕೆಟ್ ಲೋಕದ ಫೇಮಸ್ ‘ಪಾಂಡ್ಯ ಬ್ರದರ್ಸ್’ ನಡುವೆ ಎಲ್ಲವೂ ಸರಿಯಿಲ್ಲ ಎಂಬ ವದಂತಿಗಳು ಇತ್ತೀಚಿನ ದಿನಗಳಲ್ಲಿ ಜೋರಾಗಿ ಕೇಳಿಬರುತ್ತಿವೆ. ಈ ಬಗ್ಗೆ ಮೊದಲ ಬಾರಿಗೆ ಮೌನ ಮುರಿದಿರುವ ದೊಡ್ಡಣ್ಣ ಕೃನಾಲ್ ಪಾಂಡ್ಯ, ಆರ್‌ಸಿಬಿ ಇನ್‌ಸೈಡರ್ ಮಿಸ್ಟರ್ ನ್ಯಾಗ್ಸ್ ಜೊತೆಗಿನ ಸಂದರ್ಶನದಲ್ಲಿ ಮಾರ್ಮಿಕವಾಗಿ ಉತ್ತರಿಸಿದ್ದಾರೆ. ತಮ್ಮ ಸಹೋದರ ಹಾರ್ದಿಕ್ ಪಾಂಡ್ಯ ಅವರೊಂದಿಗಿನ ಭಿನ್ನಾಭಿಪ್ರಾಯದ ಬಗ್ಗೆ ನೇರವಾದ ಉತ್ತರ ನೀಡದಿದ್ದರೂ, “ಕುಟುಂಬದಲ್ಲಿ ಹಲವು ಸದಸ್ಯರಿರುತ್ತಾರೆ, ಕೆಲವೊಮ್ಮೆ ಕೆಲವರನ್ನು ಮಿಸ್ ಮಾಡಿಕೊಳ್ಳಬೇಕಾಗುತ್ತದೆ” ಎಂದು ಹೇಳುವ ಮೂಲಕ ಇಬ್ಬರ ನಡುವೆ ಬಿರುಕು ಮೂಡಿರುವ ಸುಳಿವು ನೀಡಿದ್ದಾರೆ.

ಒಂದು ಕಾಲದಲ್ಲಿ ಮುಂಬೈ ಇಂಡಿಯನ್ಸ್ ಪರ ಒಟ್ಟಾಗಿ ಕಣಕ್ಕಿಳಿಯುತ್ತಿದ್ದ ಈ ಸಹೋದರರು ಈಗ ಬೇರೆ ಬೇರೆ ತಂಡಗಳಲ್ಲಿದ್ದಾರೆ. ಹಾರ್ದಿಕ್ ಮುಂಬೈ ತಂಡವನ್ನು ಮುನ್ನಡೆಸುತ್ತಿದ್ದರೆ, ಕೃನಾಲ್ ಬೆಂಗಳೂರು ತಂಡದ ಪರ ಆಡುತ್ತಿದ್ದಾರೆ. ಆದರೆ ಇತ್ತೀಚೆಗೆ ಹಾರ್ದಿಕ್ ಅವರು ನತಾಶಾ ಅವರಿಂದ ವಿಚ್ಛೇದನ ಪಡೆದ ಬಳಿಕ ಮಹಿಕಾ ಶರ್ಮಾ ಜೊತೆಗಿನ ಒಡನಾಟ ಬೆಳೆಸಿಕೊಂಡಿರುವುದು ಮತ್ತು ಆ ನಂತರ ಹಾರ್ದಿಕ್ ವರ್ತನೆಯಲ್ಲಿ ಬದಲಾವಣೆ ಆಗಿರುವುದು ಈ ಸಹೋದರರ ನಡುವಿನ ಕಿರಿಕ್‌ಗೆ ಮುಖ್ಯ ಕಾರಣ ಎಂಬ ಚರ್ಚೆಗಳು ನಡೆಯುತ್ತಿವೆ. ಈ ಹಿಂದೆ ಮುಂಬೈ ಮತ್ತು ಆರ್‌ಸಿಬಿ ಪಂದ್ಯದಲ್ಲಿ ಹಾರ್ದಿಕ್ ವಿಕೆಟ್ ಬಿದ್ದಾಗ ಕೃನಾಲ್ ಅತಿಯಾಗಿ ಸಂಭ್ರಮಿಸಿದ್ದು ಕೂಡ ಈ ವದಂತಿಗಳಿಗೆ ಪುಷ್ಟಿ ನೀಡುವಂತಿದೆ.

ಸಂದರ್ಶನದ ವೇಳೆ ಮಿಸ್ಟರ್ ನ್ಯಾಗ್ಸ್ ಅವರು ಡಬ್ಲ್ಯೂಡಬ್ಲ್ಯೂಇ (WWE) ಖ್ಯಾತಿಯ ಕೇನ್ ಮತ್ತು ಅಂಡರ್‌ಟೇಕರ್ ಅವರ ಉದಾಹರಣೆ ನೀಡಿ, “ನಿಮ್ಮಿಬ್ಬರ ಮಧ್ಯೆ ಫೈಟ್ ನಡೆಯುತ್ತಿದೆಯೇ?” ಎಂದು ಕೇಳಿದಾಗ ಕೃನಾಲ್ “ಆಲ್ ಓಕೆ” ಎಂದು ನಗುತ್ತಲೇ ಉತ್ತರಿಸಿದ್ದಾರೆ. ಆದರೆ ಅವರ ನಗು ಮತ್ತು ಮಾತುಗಳ ಹಿಂದೆ ಅಸಮಾಧಾನದ ಛಾಯೆ ಇರುವುದು ಅಭಿಮಾನಿಗಳ ಕಣ್ಣಿನಿಂದ ತಪ್ಪಿಸಿಕೊಳ್ಳಲು ಸಾಧ್ಯವಾಗಿಲ್ಲ. ಮಾತಿಗಷ್ಟೇ ಕೃನಾಲ್ ಎಲ್ಲವೂ ಸರಿಯಿದೆ ಎಂದಿದ್ದಾರೋ ಅಥವಾ ನಿಜವಾಗಿಯೂ ಇಬ್ಬರ ನಡುವಿನ ಮನಸ್ತಾಪ ಬಗೆಹರಿದಿದೆಯೋ ಎಂಬ ಕುತೂಹಲ ಈಗ ಕ್ರಿಕೆಟ್ ವಲಯದಲ್ಲಿ ತೀವ್ರವಾಗಿದೆ.

Continue Reading

ಬೆಂಗಳೂರು

KVS Sports Meet : 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟ; ಫೈನಲ್‌ ಮ್ಯಾಚ್‌ ಗೆದ್ದ ಕೊಲ್ಕತ್ತಾ ರೀಜನ್‌ ಶಾಲೆ ಮಕ್ಕಳು

ಬೆಂಗಳೂರಿನ ಯಲಹಂಕದ ಕೇಂದ್ರೀಯ ವಿದ್ಯಾಲಯ ಆರ್‌ಡಬ್ಲ್ಯೂ ಎಫ್‌ನಲ್ಲಿ 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟ 2024-25ರ (KVS Sports Meet) ಮುಕ್ತಾಯಗೊಂಡಿದೆ. ಬಾಲಕರ ರೋಚಕ ಕ್ರಿಕೆಟ್‌ ಪಂದ್ಯಾವಳಿಯಲ್ಲಿ ಕೊಲ್ಕತ್ತಾ ರೀಜನ್‌ ಶಾಲೆ ಮಕ್ಕಳು ಮೊದಲ ಸ್ಥಾನ ಗಳಿಸಿದ್ದಾರೆ.

VISTARANEWS.COM


on

53rd KVS National Games Kolkata Region School children win final match

ಬೆಂಗಳೂರು: ಬೆಂಗಳೂರಿನ ಯಲಹಂಕ ಕೇಂದ್ರೀಯ ವಿದ್ಯಾಲಯದಲ್ಲಿ ಸೆ. 30 ರಿಂದ ಅ. 6 ರವರೆಗೆ 53ನೇ ರಾಷ್ಟ್ರೀಯ ಕ್ರೀಡಾಕೂಟ ನಡೆಸಲಾಯಿತು. ಕ್ರೀಡೆಯಲ್ಲಿ ಹಲವಾರು ಆಟಗಳಿವೆ. ಅದರಲ್ಲಿ ಕ್ರಿಕೆಟ್ ಬಹು ಮುಖ್ಯ ಪಾತ್ರವನ್ನು ವಹಿಸುತ್ತದೆ. ದೇಶದ ನಾನಾ ರಾಜ್ಯಗಳಿಂದ ಅಂದರೆ ಒಟ್ಟು 18 ರಾಜ್ಯಗಳಿಂದ ಮಕ್ಕಳು ಕ್ರಿಕೆಟ್ ಆಡಲು ಕೆ .ವಿ .ಆರ್ ಡಬ್ಲ್ಯೂ ಎಫ್‌ಗೆ ಬಂದಿದ್ದರು. ಒಟ್ಟು 269 ಶಾಲೆಯ ಮಕ್ಕಳು ನಾಲ್ಕು ವಿವಿಧ ಆಟದ ಮೈದಾನದಲ್ಲಿ ತಮ್ಮ ಉತ್ತಮ ಪ್ರದರ್ಶನವನ್ನು ಪ್ರದರ್ಶಿಸಿದರು. ಅ.6 ರಂದು ಫೈನಲ್ ಮ್ಯಾಚ್‌ ನಡೆಸಲಾಯಿತು.

ಪ್ರಥಮ ಸ್ಥಾನವನ್ನು ಕೊಲ್ಕತ್ತಾ ರೀಜನ್ ಶಾಲೆ ಮಕ್ಕಳು ಮತ್ತು ದ್ವಿತೀಯ ಸ್ಥಾನವನ್ನು ಜಬಲ್ ಪುರ್ ರೀಜನ್ ಶಾಲೆ ಮಕ್ಕಳು ಗಳಿಸಿಕೊಂಡರು. ನಂತರ ಶಾಲೆ ಆವರಣದಲ್ಲಿ ಮಧ್ಯಾಹ್ನ 12 ಗಂಟೆಗೆ ಪ್ರಶಸ್ತಿ ಪ್ರಧಾನ ಕಾರ್ಯಕ್ರಮವನ್ನು ಏರ್ಪಡಿಸಲಾಯಿತು. ಕಾರ್ಯಕ್ರಮಕ್ಕೆ ಮುಖ್ಯ ಅತಿಥಿಗಳಾಗಿ ಡಾ ಪಿ. ದೇವಕುಮಾರ್(ಜಂಟಿ ಆಯುಕ್ತ ಕೆ ವಿ ಎಸ್ ಪ್ರಧಾನ ಕಛೇರಿ) ಹಾಗೂ ವಿಶೇಷ ಅತಿಥಿಗಳಾಗಿ ಧರ್ಮೇಂದ್ರ ಪಟ್ಲೆ. (ಉಪ ಆಯುಕ್ತ ಕೆ ವಿ ಎಸ್ ಬೆಂಗಳೂರು), ಆರ್ ಪ್ರಮೋದ್.(ಸಹಾಯಕ ಆಯುಕ್ತ ಕೆ ವಿ ಎಸ್ ಬೆಂಗಳೂರು), ಹೇಮಾ ಕೆ( ಸಹಾಯಕ ಆಯುಕ್ತ ) ಆಗಮಿಸಿದ್ದರು.

ಅತಿಥಿಗಳಿಗೆ ಶಾಲೆಯ ವರ್ಣ ರಂಜಿತಾ NCC ಬ್ಯಾಂಡ್ ತಂಡದ ಮಕ್ಕಳು ಸ್ವಾಗತ ಕೋರಿದರು. ಗಾಯನ ತಂಡದಿಂದ ಸ್ವಾಗತ ಗಾಯನವನ್ನು ಹಾಡಿದರು ನಂತರ ಸ್ವಾಗತ ಭಾಷಣವನ್ನು ಧರ್ಮೇಂದ್ರ ಪಟ್ಲೆ ಮಾಡಿದರು. ನೃತ್ಯ ತಂಡದಿಂದ ಮಕ್ಕಳು ಸ್ವಾಗತ ನೃತ್ಯವನ್ನು ಮಾಡಿದರು.

Continue Reading

ಬೆಂಗಳೂರು

KVS Sports Meet : 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಚಾಲನೆ; ಮೈದಾನದಲ್ಲಿ ಬಾಲಕರ ರೋಚಕ ಕ್ರಿಕೆಟ್

KVS Sports Meet : 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟಕ್ಕೆ ಚಾಲನೆ ನೀಡಲಾಗಿದ್ದು, ಮೊದಲ ದಿನವೇ ಮೈದಾನದಲ್ಲಿ ಬಾಲಕರ ಕ್ರಿಕೆಟ್ ರೋಚಕವಾಗಿತ್ತು.

VISTARANEWS.COM


on

53rd KVS National Games inaugurated

ಬೆಂಗಳೂರು: 53ನೇ ಕೆವಿಎಸ್ ರಾಷ್ಟ್ರೀಯ ಕ್ರೀಡಾಕೂಟ 2024-25ಕ್ಕೆ (KVS Sports Meet) ಸೋಮವಾರ ಬೆಂಗಳೂರಿನ ಯಲಹಂಕದ ಕೇಂದ್ರೀಯ ವಿದ್ಯಾಲಯ ಆರ್‌ಡಬ್ಲ್ಯೂ ಎಫ್‌ನಲ್ಲಿ ಚಾಲನೆ ನೀಡಲಾಯಿತು. 14 ವರ್ಷದೊಳಗಿನ ಬಾಲಕರ ವಿಭಾಗದ ಕ್ರಿಕೆಟ್‌ ರೋಚಕವಾಗಿತ್ತು. ಮುಖ್ಯ ಅತಿಥಿಯಾಗಿ ಕೆವಿಎಸ್‌ ಉಪ ಆಯುಕ್ತರು ಡಾ.ಧರ್ಮೇಂದ್ರ ಪಟ್ಲೆ, ಸಹಾಯಕ ಆಯುಕ್ತ ಆರ್ ಪ್ರಮೋದ್ ಸೇರಿ ಇತರರು ಭಾಗಿಯಾಗಿದ್ದರು.

53rd KVS National Games inaugurated

ಇದೇ ವೇಳೆ ಕೆ.ವಿ.ಎಸ್ ಧ್ವಜಾರೋಹಣವನ್ನು ಮುಖ್ಯ ಅತಿಥಿಗಳು ನೆರವೇರಿಸಿದರು. ಪಾತ್ರ ಮತ್ತು ನಾಯಕತ್ವ ಎರಡನ್ನೂ ಅಭಿವೃದ್ಧಿಪಡಿಸುವಲ್ಲಿ ಕ್ರೀಡೆಯ ಮಹತ್ವವನ್ನು ಎತ್ತಿ ತೋರಿಸಿದರು. ಆಟಗಾರರನ್ನು ಹುಮ್ಮಸ್ಸಿನಿಂದ ಸ್ಪರ್ಧಿಸಲು ಪ್ರೋತ್ಸಾಹಿಸಿದರು. ಮುಂಬರುವ ದಿನಗಳಲ್ಲಿ ರೋಚಕ ಕ್ರಿಕೆಟ್ ಪಂದ್ಯಗಳನ್ನು ನೋಡುವ ನಿರೀಕ್ಷೆಯಿದೆ, ಏಕೆಂದರೆ ಭಾಗವಹಿಸುವವರು ತಮ್ಮ ಅತ್ಯುತ್ತಮ ಪ್ರದರ್ಶನವನ್ನು ಮೈದಾನಕ್ಕೆ ತರುತ್ತಾರೆ ಎಂದು ಅಭಿಪ್ರಾಯಪಟ್ಟರು.

Continue Reading

ಕ್ರೀಡೆ

Duleep Trophy: ದುಲೀಪ್​ ಟ್ರೋಫಿಯಿಂದ ಹೊರಬಿದ್ದ ಮೊಹಮ್ಮದ್ ಸಿರಾಜ್

Duleep Trophy: ವೃತ್ತಿಪರ ಕ್ರಿಕೆಟ್​ಗೆ ಮರಳುವ ನಿರೀಕ್ಷೆಯಲ್ಲಿ ಜಮ್ಮ ಕಾಶ್ಮೀರದ ವೇಗಿ ಉಮ್ರಾನ್ ಮಲಿಕ್(Umran Malik) ಕೂಡ ಅನಾರೋಗ್ಯದ ಕಾರಣ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ.

VISTARANEWS.COM


on

Duleep Trophy

ಮುಂಬಯಿ: ದುಲೀಪ್​ ಟ್ರೋಫಿ(Duleep Trophy) ಆರಂಭಕ್ಕೂ ಮುನ್ನವೇ ಟೀಮ್​ ಇಂಡಿಯಾದ ವೇಗಿ ಮೊಹಮ್ಮದ್ ಸಿರಾಜ್(mohammed siraj) ಅನಾರೋಗ್ಯದ ಕಾರಣ ಟೂರ್ನಿಯಿಂದ ಹೊರಬಿದ್ದಿದ್ದಾರೆ. ಅವರ ಬದಲಿಗೆ ನವದೀಪ್ ಸೈನಿ ಸ್ಥಾನ ಪಡೆದಿದ್ದಾರೆ. ಇದೇ ವೇಳೆ ಹಿರಿಯ ಆಟಗಾರ ರವೀಂದ್ರ ಜಡೇಜಾ(Ravindra Jadeja) ಅವರನ್ನು ಭಾರತ ‘ಬಿ’ ತಂಡದಿಂದ ಬಿಡುಗಡೆ ಮಾಡಲಾಗಿದೆ.

ವೃತ್ತಿಪರ ಕ್ರಿಕೆಟ್​ಗೆ ಮರಳುವ ನಿರೀಕ್ಷೆಯಲ್ಲಿ ಜಮ್ಮ ಕಾಶ್ಮೀರದ ವೇಗಿ ಉಮ್ರಾನ್ ಮಲಿಕ್(Umran Malik) ಕೂಡ ಅನಾರೋಗ್ಯದ ಕಾರಣ ಪಂದ್ಯಾವಳಿಯಿಂದ ಹೊರಗುಳಿದಿದ್ದಾರೆ. ಉಮ್ರಾನ್ ಬದಲಿಗೆ ಮಧ್ಯಪ್ರದೇಶದ ಮಧ್ಯಮ ವೇಗಿ ಗೌರವ್ ಯಾದವ್ ಭಾರತ ‘ಸಿ’ ತಂಡದಲ್ಲಿ ಸ್ಥಾನ ಪಡೆದಿದ್ದಾರೆ. ಜಡೇಜಾ ಸ್ಥಾನಕ್ಕೆ ಬದಲಿ ಆಟಗಾರನನ್ನ ಹೆಸರಿಸಲಾಗಿಲ್ಲ. ಜಡೇಜಾ ದುಲೀಪ್ ಟ್ರೋಫಿಯಲ್ಲಿ ಕೇವಲ ಒಂದು ಪಂದ್ಯವನ್ನು ಆಡಿ ಬಳಿಕ ಬಾಂಗ್ಲಾದೇಶ ಟೆಸ್ಟ್​ ಸರಣಿಗೆ ಮುಂಚಿತವಾಗಿ ಭಾರತ ಶಿಬಿರಕ್ಕೆ ತೆರಳಬೇಕಿತ್ತು. ಆದರೆ ಬಿಸಿಸಿಐ ಅವರಿಗೆ ಕೊನೆಯ ಕ್ಷಣದಲ್ಲಿ ವಿಶ್ರಾಂತಿ ನೀಡಿದೆ. ಭಾರತ ‘ಎ’ ತಂಡವನ್ನು ಶುಭಮನ್ ಗಿಲ್ ಮುನ್ನಡೆಸಿದರೆ, ‘ಡಿ’ತಂಡವನ್ನು ಶ್ರೇಯಸ್‌ ಅಯ್ಯರ್‌ ಮುನ್ನಡೆಸಲಿದ್ದಾರೆ.

ಭಾರತ ‘ಎ’ ತಂಡ


ಶುಭಮನ್ ಗಿಲ್ (ನಾಯಕ), ಮಯಾಂಕ್ ಅಗರ್ವಾಲ್, ರಿಯಾನ್ ಪರಾಗ್, ಧ್ರುವ ಜುರೆಲ್ (ವಿಕೆಟ್‌ ಕೀಪರ್), ಕೆಎಲ್ ರಾಹುಲ್, ತಿಲಕ್ ವರ್ಮಾ, ಶಿವಂ ದುಬೆ, ತನುಷ್ ಕೋಟ್ಯಾನ್, ಕುಲದೀಪ್ ಯಾದವ್, ಆಕಾಶ್ ದೀಪ್, ಪ್ರಸಿದ್ಧ್ ಕೃಷ್ಣ, ಖಲೀಲ್ ಅಹ್ಮದ್, ಅವೇಶ್ ಖಾನ್, ವಿದ್ವತ್ ಕಾವೇರಪ್ಪ, ಕುಮಾರ್ ಕುಶಾಗ್ರ , ಶಾಶ್ವತ್ ರಾವತ್.

ಭಾರತ ‘ಬಿ’ ತಂಡ


ಅಭಿಮನ್ಯು ಈಶ್ವರನ್ (ನಾಯಕ), ಯಶಸ್ವಿ ಜೈಸ್ವಾಲ್, ಸರ್ಫರಾಜ್ ಖಾನ್, ರಿಷಭ್ ಪಂತ್ (ವಿ.ಕೀ), ಮುಷೀರ್ ಖಾನ್, ನಿತೀಶ್ ಕುಮಾರ್ ರೆಡ್ಡಿ (ಫಿಟ್‌ನೆಸ್‌ ಟೆಸ್ಟ್‌ ಅವಲಂಬನೆ), ವಾಷಿಂಗ್ಟನ್ ಸುಂದರ್, ನವದೀಪ್ ಸೈನಿ, ಯಶ್ ದಯಾಳ್, ಮುಖೇಶ್ ಕುಮಾರ್, ರಾಹುಲ್ ಚಹರ್, ಆರ್ ಸಾಯಿ ಕಿಶೋರ್, ಮೋಹಿತ್ ಆವಸ್ತಿ, ಎನ್ ಜಗದೀಸನ್ (ವಿ.ಕೀ)

ಇದನ್ನೂ ಓದಿ Natasa Stankovic: ಪಾಂಡ್ಯ ಜತೆಗಿನ ವಿಚ್ಛೇದನದ ಅಸಲಿ ಸತ್ಯ ಬಿಚ್ಚಿಟ್ಟ ನತಾಶ!

ಭಾರತ ‘ಸಿ’ ತಂಡ


ಋತುರಾಜ್ ಗಾಯಕ್ವಾಡ್​ (ನಾಯಕ), ಸಾಯಿ ಸುದರ್ಶನ್, ರಜತ್ ಪಾಟಿದಾರ್, ಅಭಿಷೇಕ್ ಪೊರೆಲ್ (ವಿ.ಕೀ), ಸೂರ್ಯಕುಮಾರ್ ಯಾದವ್, ಬಿ ಇಂದ್ರಜಿತ್, ಹೃತಿಕ್ ಶೋಕೀನ್, ಮಾನವ್ ಸುತಾರ್, ಗೌರವ್ ಯಾದವ್, ವೈಶಾಕ್ ವಿಜಯ್‌ಕುಮಾರ್, ಅನ್ಶುಲ್ ಖಂಬೋಜ್, ಹಿಮಾಂಶು ಚೌಹಾಣ್, ಮಯಾಂಕ್ ಮಾರ್ಕಂಡೆ, ಆರ್ಯನ್‌ ಜುಯೆಲ್‌ (ವಿ.ಕೀ), ಸಂದೀಪ್ ವಾರಿಯರ್.

ಭಾರತ ‘ಡಿ’ ತಂಡ

ಶ್ರೇಯಸ್ ಅಯ್ಯರ್​ (ನಾಯಕ), ಅಥರ್ವ ಟೈಡೆ, ಯಶ್ ದುಬೆ, ದೇವದತ್ ಪಡಿಕ್ಕಲ್, ಇಶಾನ್ ಕಿಶನ್ (ವಿಕೆಟ್‌ ಕೀಪರ್), ರಿಕಿ ಭುಯಿ, ಸರನ್ಶ್ ಜೈನ್, ಅಕ್ಷರ್ ಪಟೇಲ್, ಅರ್ಷದೀಪ್ ಸಿಂಗ್, ಆದಿತ್ಯ ಠಾಕರೆ, ಹರ್ಷಿತ್ ರಾಣಾ, ತುಷಾರ್ ದೇಶಪಾಂಡೆ, ಆಕಾಶ್ ಸೇನ್‌ಗುಪ್ತ, ಕೆಎಸ್ (ವಿಕೆಟ್‌ ಕೀಪರ್), ಸೌರಭ್ ಕುಮಾರ್.

Continue Reading
Advertisement
Latest3 hours ago

ಫರ್ಮಾನ್ ಖಾನ್ ಜೊತೆ ಮದುವೆಯಾದ ಒಂದೇ ತಿಂಗಳಲ್ಲಿ ಮೊನಾಲಿಸಾ ಭೋಸ್ಲೆ ಗರ್ಭಿಣಿ!

Latest4 hours ago

ಎಸ್ಎಸ್ಎಲ್‌ಸಿ: ಹಿಂದಿಗೆ ಈ ಬಾರಿ ಗ್ರೇಡ್‌ ಬದಲು ಅಂಕ: ಸಚಿವ ಮಧು ಬಂಗಾರಪ್ಪ ಸ್ಪಷ್ಟನೆ

Latest4 hours ago

ಇರಾನ್‌ ಸರಕು ಸಾಗಣೆ ಹಡಗಿನ ಮೇಲೆ ಗುಂಡಿನ ದಾಳಿ: ಅಮೆರಿಕ ವಿರುದ್ಧ ಆಕ್ರೋಶ

Latest5 hours ago

ಹೋಮ್‌ಸ್ಟೇನಲ್ಲಿ ಅತ್ಯಾಚಾರ: ಸುತ್ತೋಲೆ ಹೊರಡಿಸಲಾಗಿದೆ ಎಂದ ಸಚಿವ ಪರಮೇಶ್ವರ್‌

Latest5 hours ago

ಜೈಲಿನಲ್ಲಿದ್ದುಕೊಂಡೆ ವಿಧ್ವಂಸ ಕೃತ್ಯಕ್ಕೆ ಸಂಚು: 7 ಆರೋಪಿಗಳಿಗೆ ಕಠಿಣ ಶಿಕ್ಷೆ ಪ್ರಕಟಿಸಿದ ಎನ್‌ ಐ ಎ ಕೋರ್ಟ್

Latest5 hours ago

ಸಚಿವ ಪ್ರಲ್ಹಾದ ಜೋಶಿ ಮನವಿಗೆ ಸ್ಪಂದನೆ; “ಧಾರವಾಡ ಆಕಾಶವಾಣಿ ಕೇಂದ್ರ” ಸ್ಥಳಾಂತರಿಸದಿರಲು ನಿರ್ಧಾರ

Latest5 hours ago

ಚಿನ್ನ ಕಳ್ಳ ಸಾಗಣೆ: ನಟಿ ರನ್ಯಾರಾವ್‌ ಗೆ ಸಿಕ್ತು ಜಾಮೀನು

Latest6 hours ago

ತಮಿಳುನಾಡು: ಯಾರು ಹಿತವರು ಈ ಮೂವರೊಳಗೆ?:dmk; aiadmk; tvk

Latest7 hours ago

ಗೋಲ್ಡ್ ಸ್ಮಗ್ಲಿಂಗ್ ಹಗರಣ: ನಟಿ ರನ್ಯಾ ರಾವ್​​ಗೆ ಜಾಮೀನು ಮಂಜೂರು ಮಾಡಿದ ನ್ಯಾಯಾಲಯ!

ಅವಿಭಾಗೀಕೃತ7 hours ago

“ನಿಮ್ಮಿಂದಲೇ ಟ್ರಾಫಿಕ್‌ ಜಾಮ್!‌ ಗೆಟ್‌ ಔಟ್‌” ಎಂದು ಸಚಿವರನ್ನು ನಿಂದಿಸಿದ ಮಹಿಳೆ

galipata neetu
ಕಿರುತೆರೆ2 years ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ3 years ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Sharmitha Gowda in bikini
ಕಿರುತೆರೆ3 years ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ3 years ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Bigg Boss- Saregamapa 20 average TRP
ಕಿರುತೆರೆ3 years ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ2 years ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ2 years ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

Kannada Serials
ಕಿರುತೆರೆ3 years ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

varun
ಕಿರುತೆರೆ2 years ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Action Prince Dhruva Sarja much awaited film Martin to hit the screens on October 11
ಸಿನಿಮಾ2 years ago

Martin Movie : ಆ್ಯಕ್ಷನ್‌ ಪ್ರಿನ್ಸ್‌ ಧ್ರುವ ಸರ್ಜಾ ಅಭಿನಯದ ಬಹು ನಿರೀಕ್ಷಿತ ʻಮಾರ್ಟಿನ್ʼ ಚಿತ್ರ ಅಕ್ಟೋಬರ್ 11ರಂದು ತೆರೆಗೆ

Sudeep's birthday location shift
ಸ್ಯಾಂಡಲ್ ವುಡ್2 years ago

Kichcha Sudeepa: ಸುದೀಪ್‌ ಬರ್ತ್‌ ಡೇ ಲೊಕೇಶನ್‌ ಶಿಫ್ಟ್; ದರ್ಶನ್‌ ಭೇಟಿಗೆ ಬಳ್ಳಾರಿ ಜೈಲಿಗೆ ಹೋಗ್ತಾರಾ ಕಿಚ್ಚ

Actor Darshan
ಸ್ಯಾಂಡಲ್ ವುಡ್2 years ago

Actor Darshan : ಬಿಗಿ ಭದ್ರತೆಯಲ್ಲಿ ಪರಪ್ಪನ ಅಗ್ರಹಾರದಿಂದ ದರ್ಶನ್‌ ಬಳ್ಳಾರಿಗೆ ಸ್ಥಳಾಂತರ; ಸೆಲ್‌ನಲ್ಲಿ ಏನೆಲ್ಲ ವ್ಯವಸ್ಥೆ ಇದೆ ಗೊತ್ತಾ?

ಮಳೆ2 years ago

Karnataka rain : ವಿಜಯನಗರದಲ್ಲಿ ಮಳೆ ಅವಾಂತರ; ಹರಿಯುವ ಹಳ್ಳದಲ್ಲೇ ಶವ ಸಾಗಿಸಿದ ಗ್ರಾಮಸ್ಥರು

karnataka Weather Forecast
ಮಳೆ2 years ago

Karnataka Weather : ಭೀಮಾನ ಅಬ್ಬರಕ್ಕೆ ನಲುಗಿದ ನೆರೆ ಸಂತ್ರಸ್ತರು; ನಾಳೆಗೆ ಇಲ್ಲೆಲ್ಲ ಮಳೆ ಅಲರ್ಟ್‌

Bellary news
ಬಳ್ಳಾರಿ2 years ago

Bellary News : ಫಿಲ್ಮಂ ಸ್ಟೈಲ್‌ನಲ್ಲಿ ಕಾಡಿನಲ್ಲಿ ನಿಧಿ ಹುಡುಕಾಟ; ಅತ್ಯಾಧುನಿಕ ಟೆಕ್ನಾಲಜಿ ಬಳಕೆ ಮಾಡಿದ ಖದೀಮರ ಗ್ಯಾಂಗ್‌

Maravoor bridge in danger Vehicular traffic suspended
ದಕ್ಷಿಣ ಕನ್ನಡ2 years ago

Maravoor Bridge : ಕಾಳಿ ನದಿ ಸೇತುವೆ ಬಳಿಕ ಅಪಾಯದಲ್ಲಿದೆ ಮರವೂರು ಸೇತುವೆ; ವಾಹನ ಸಂಚಾರ ಸ್ಥಗಿತ

Wild Animals Attack
ಚಿಕ್ಕಮಗಳೂರು2 years ago

Wild Animals Attack : ಮಲೆನಾಡಲ್ಲಿ ಕಾಡಾನೆಯ ದಂಡು; ತೋಟಕ್ಕೆ ತೆರಳುವ ಕಾರ್ಮಿಕರಿಗೆ ಎಚ್ಚರಿಕೆ

Karnataka Weather Forecast
ಮಳೆ2 years ago

Karnataka Weather : ಮಳೆಯಾಟಕ್ಕೆ ಮುಂದುವರಿದ ಮಕ್ಕಳ ಗೋಳಾಟ; ಆಯ ತಪ್ಪಿದರೂ ಜೀವಕ್ಕೆ ಅಪಾಯ

assault case
ಬೆಳಗಾವಿ2 years ago

Assault Case : ಬೇರೊಬ್ಬ ಯುವತಿ ಜತೆಗೆ ಸಲುಗೆ; ಪ್ರಶ್ನಿಸಿದ್ದಕ್ಕೆ ಪತ್ನಿಗೆ ಮನಸೋ ಇಚ್ಛೆ ಥಳಿಸಿದ ಪಿಎಸ್‌ಐ

ಟ್ರೆಂಡಿಂಗ್‌