1. ಸಿಕ್ಕಿಂ ದಿಢೀರ್ ಪ್ರವಾಹ, ಇನ್ನೂ ಪತ್ತೆಯಾಗಿಲ್ಲ 23 ಯೋಧರು, 8 ಮಂದಿ ಸಾವು
ಗ್ಯಾಂಗ್‌ಟಾಕ್: ಉತ್ತರ ಸಿಕ್ಕಿಂನಲ್ಲಿ ಮೇಘಸ್ಫೋಟ ಉಂಟಾಗಿದ್ದು(Sikkim Flash Flood), ನದಿಗಳು ಉಕ್ಕಿ ಹರಿಯುತ್ತಿವೆ. ಅಷ್ಟೇ ಅಲ್ಲ, ಭಾರತೀಯ ಸೇನೆಯ 23 ಯೋಧರು (Indian Army Jawans) ಸೇರಿದಂತೆ ಒಟ್ಟು 49 ಜನರು ನಾಪತ್ತೆಯಾಗಿದ್ದಾರೆ. ಈ ಮಧ್ಯೆ 8 ಜನರು ಮೃತಪಟ್ಟಿರುವುದು ಖಚಿತಪಟ್ಟಿದೆ. ಹಾಗೆಯೇ ನಾಪತ್ತೆಯಾಗಿರುವವರ ಶೋಧ ಕಾರ್ಯಾಚರಣೆ ನಡೆದಿದೆ(Search operation). ಪ್ರಧಾನಿ ನರೇಂದ್ರ ಮೋದಿ (PM Narendra Modi) ಸಿಕ್ಕಮ್ ಮುಖ್ಯಮಂತ್ರಿಯವರೊಂದಿಗೆ ಮಾತನಾಡಿ, ನೈಸರ್ಗಿಕ ವಿಪತ್ತು ನಿರ್ವಹಣೆಗೆ ಎಲ್ಲ ರೀತಿಯ ನೆರವು ನೀಡುವುದಾಗಿ ಹೇಳಿದ್ದಾರೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
2. Asian Games : ಏಷ್ಯನ್ ಗೇಮ್ಸ್ನಲ್ಲಿ ಭಾರತದ ಐತಿಹಾಸಿಕ ಸಾಧನೆ, ಒಟ್ಟು ಪದಕಗಳ ಸಂಖ್ಯೆ 81ಕ್ಕೆ ಏರಿಕೆ
ಬೆಂಗಳೂರು: ಭಾರತೀಯ ಕ್ರೀಡಾ ಕ್ಷೇತ್ರಕ್ಕೆ ಅಕ್ಟೋಬರ್ 4 ಮಹತ್ವದ ದಿನವಾಗಿದೆ. ಚೀನಾದ ಹ್ಯಾಂಗ್ಝೌನಲ್ಲಿ ನಡೆಯುತ್ತಿರುವ ಏಷ್ಯನ್ ಗೇಮ್ಸ್ನಲ್ಲಿ (Asian Games) ಭಾರತದ ಅಥ್ಲೀಟ್ಗಳು ಇದುವರೆಗಿನ ಗರಿಷ್ಠ ಸಾಧನೆ ಮಾಡಿದ್ದಾರೆ. ಇಲ್ಲಿಯವರೆಗಿನ 18 ಆವೃತ್ತಿಗಳಲ್ಲಿ ಭಾರತ ಗರಿಷ್ಠ 69 ಪದಕಗಳನ್ನು ಗೆದ್ದುಕೊಂಡಿತ್ತು. ಆದರೆ, ಈ ಬಾರಿ 11ನೇ ದಿನಕ್ಕೆ ಒಟ್ಟು ಪದಕಗಳ ಸಂಖ್ಯೆ 81ಕ್ಕೆ ಏರಿಕೆಯಾಗಿದೆ. ಈ ಮೂಲಕ ಸಾರ್ವಕಾಲಿಕ ದಾಖಲೆಯನ್ನು ಬರೆದಿದೆ. ಅಕ್ಟೋಬರ್ 7ರವರೆಗೆ ಅಂದರೆ ಇನ್ನೂ ಮೂರು ದಿನಗಳ ಕಾಲ ಕ್ರೀಡಾಕೂಟ ನಡೆಯಲಿದ್ದು ಭಾರತದ ಒಟ್ಟು ಪದಕಗಳ ಸಂಖ್ಯೆ ಹೆಚ್ಚಳವಾಗಲಿದೆ. ಅಂದಾಜಿನ ಪ್ರಕಾರ ಭಾರತಕ್ಕೆ 100 ಪದಕಗಳನ್ನು ಗೆಲ್ಲುವ ಅವಕಾಶವೂ ಇದೆ. ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ.
ಈ ಸುದ್ದಿಯನ್ನೂ ಓದಿ : Asian Games : ಏಷ್ಯನ್ ಗೇಮ್ಸ್ನಲ್ಲಿ ಚಿನ್ನದ ಪದಕ ಗೆದ್ದ ಜಾವೆಲಿನ್ ಎಸೆತಗಾರ ನೀರಜ್ ಚೋಪ್ರಾ
ಏಷ್ಯನ್ ಗೇಮ್ಸ್ನಲ್ಲಿ ಹೊಸ ದಾಖಲೆಯೊಂದಿಗೆ ಚಿನ್ನ ಗೆದ್ದ ಪುರುಷರ ರಿಲೇ ತಂಡ
4. ಏಕದಿನ ವಿಶ್ವಕಪ್ ಸಮರ ಗುರುವಾರದಿಂದ ಶುರು!, ಭಾರತ ಆತಿಥ್ಯದಲ್ಲಿ ನಡೆಯಲಿದೆ ಕ್ರಿಕೆಟ್ ಹಬ್ಬ
13ನೇ ಆವೃತ್ತಿಯ ಏಕ ದಿನ ಕ್ರಿಕೆಟ್ ವಿಶ್ವ ಕಪ್ ಭಾರತದ ಆತಿಥ್ಯದಲ್ಲಿ ಗುರುವಾರದಿಂದ (ಅಕ್ಟೋಬರ್ 5) ಆರಂಭವಾಗಲಿದೆ. ಅಹಮದಾಬಾದ್ನಲ್ಲಿರುವ ವಿಶ್ವದ ಅತ್ಯಂತ ದೊಡ್ಡ ಕ್ರಿಕೆಟ್ ಸ್ಟೇಡಿಯಮ್ ಆಗಿರುವ ನರೇಂದ್ರ ಮೋದಿ ಕ್ರಿಕೆಟ್ ಕ್ರೀಡಾಂಗಣದಲ್ಲಿ ಮೊದಲ ಪಂದ್ಯ ನಡೆಯಲಿದೆ. 2019ರ ಆವೃತ್ತಿಯ ಚಾಂಪಿಯನ್ ಇಂಗ್ಲೆಂಡ್ ಹಾಗೂ ರನ್ನರ್ ಅಪ್ ನ್ಯೂಜಿಲ್ಯಾಂಡ್ ನಡುವಿನ ಹಣಾಹಣಿಯೊಂದಿಗೆ ಟೂರ್ನಿಗೆ ಚಾಲನೆ ಸಿಗಲಿದೆ.
ವಿಶ್ವಕಪ್ ಪಂದ್ಯಾವಳಿಯ ಕುತೂಹಲಕರ ಮಾಹಿತಿಗಾಗಿ ಕ್ಲಿಕ್ ಮಾಡಿ
4. ಮೋದಿ ದಸರಾ ಕೊಡುಗೆ; ಉಜ್ವಲ ಫಲಾನುಭವಿಗಳ ಎಲ್‌ಪಿಜಿ ಸಿಲಿಂಡರ್ ಸಬ್ಸಿಡಿ 300 ರೂ.ಗೆ ಏರಿಕೆ!
ನವದೆಹಲಿ: ರಕ್ಷಾ ಬಂಧನಕ್ಕೆ (Raksha Bandhan) ಎಲ್‌ಪಿಜಿ ಸಿಲಿಂಡರ್ ಬೆಲೆಯಲ್ಲಿ 200 ರೂ. ಕಡಿತ (LPG Price Cut) ಮಾಡಿದ್ದ ಕೇಂದ್ರ ಸರ್ಕಾರವು (Central Government) ಈಗ, ಪ್ರಧಾನ ಮಂತ್ರಿ ಉಜ್ವಲ ಯೋಜನೆಯ ಫಲಾನುಭವಿಗಳಿಗೆ ಖುಷಿ ಸುದ್ದಿ ನೀಡಿದೆ. 200 ರೂ. ಇದ್ದ ಸಬ್ಸಿಡಿ ಮೊತ್ತವನ್ನು 300 ರೂಪಾಯಿಗೆ ಏರಿಕೆ ಮಾಡಿದೆ. ಪ್ರಧಾನಿ ನೇತೃತ್ವದಲ್ಲಿ ನಡೆದ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ ಎಂದು ಕೇಂದ್ರ ಸಚಿವ ಅನುರಾಗ್ ಠಾಕೂರ್ ಅವರು ಮಾಧ್ಯಮಗಳಿಗೆ ತಿಳಿಸಿದ್ದಾರೆ(Pradhan Mantri Ujjwala Yojana). ಪೂರ್ಣ ಸುದ್ದಿಗೆ ಇಲ್ಲಿ ಕ್ಲಿಕ್ ಮಾಡಿ
5. ಬಿಜೆಪಿ ಸರ್ಕಾರ ಸಾವಿರಾರು ಕೇಸ್ ಕೈಬಿಟ್ಟಿದೆ; 7361 ರೌಡಿ ಶೀಟರ್ಸ್ ಬೀದಿಗೆ ಬಿಟ್ಟಿದೆ ಎಂದ ಡಿ ಕೆ ಶಿವಕುಮಾರ್
ಬೆಂಗಳೂರು: “ಹಿಂದಿನ ಬಿಜೆಪಿ ಸರಕಾರ (BJP Governments) ಕೋಮು ಘಟನೆಗಳಿಗೆ (Communal Incidents) ಸಂಬಧಪಟ್ಟ ಸಾವಿರಾರು ಪ್ರಕರಣಗಳನ್ನು ಕೈಬಿಟ್ಟಿದೆ. ಜತೆಗೆ ಸಾವಿರಾರು ರೌಡಿ ಶೀಟರ್‌ಗಳನ್ನು (Rowdy Sheeters) ಬೀದಿಗೆ ಬಿಟ್ಟಿದೆ” ಎಂದು ಡಿಸಿಎಂ ಡಿ.ಕೆ.ಶಿವಕುಮಾರ್ (DK Shivakumar) ಅವರು ತಿರುಗೇಟು ನೀಡಿದ್ದಾರೆ. ಸದಾಶಿವನ ನಗರದ ನಿವಾಸದ ಬಳಿ ಮಾಧ್ಯಮಗಳೊಂದೊಂದಿಗೆ ಮಾತನಾಡುವ ವೇಳೆ ಗಲಭೆ ಪ್ರಕರಣ ಹಿಂಪಡೆಯುವಂತೆ ನೀವು ಪತ್ರ ಬರೆದಿರುವುದನ್ನು ಬಿಜೆಪಿ ಅಸ್ತ್ರವಾಗಿಸಿಕೊಂಡಿದೆಯಲ್ಲಾ ಎಂಬ ಪ್ರಶ್ನೆಗೆ ಶಿವಕುಮಾರ್ ಅವರು ಉತ್ತರಿಸಿದರು. ಬಿಜೆಪಿ ಸರ್ಕಾರದ ಅವಧಿಯಲ್ಲಿ ಹಿಂಪಡೆಯಲಾದ ಕೋಮು ಪ್ರಕರಣಗಳ ಬಗ್ಗೆ ಮಾಹಿತಿ ನೀಡಿದರು. ಪೂರ್ಣ ಸುದ್ದಿಗೆ ಇಲ್ಲ ಕ್ಲಿಕ್ ಮಾಡಿ.
6. Shivamogga Violence : ಕಾಂಗ್ರೆಸ್ ತುಷ್ಟೀಕರಣ ಸಮಾಜಘಾತುಕ ಶಕ್ತಿಗಳಿಗೆ ಬಲ ಎಂದ ಬೊಮ್ಮಾಯಿ
9. Cancer Detector: ಬಾಯಿಯಿಂದ ಊದಿದರೆ ಕ್ಯಾನ್ಸರ್ ಪತ್ತೆ ಹಚ್ಚುವ ಉಪಕರಣ! ಭಾರತೀಯ ಉದ್ಯಮಿಯ ಪ್ರಯತ್ನ
10. Actress Kushboo: ಕೇರಳ ದೇಗುಲದಲ್ಲಿ ಖುಷ್ಬೂಗೆ ಪಾದ ಪೂಜೆ; ದೇವಿಯೇ ಇವರನ್ನು ಆರಿಸಿದ್ದಂತೆ!
ಮತ್ತಷ್ಟು ವೈರಲ್ ಸುದ್ದಿಗಳಿಗಾಗಿ ಕ್ಲಿಕ್ ಮಾಡಿ