Site icon Vistara News

Ind vs SA : ದಕ್ಷಿಣ ಆಫ್ರಿಕಾ ಪ್ರವಾಸಕ್ಕೆ ಭಾರತ ತಂಡಗಳ ಪ್ರಕಟ; ವಿರಾಟ್​, ರೋಹಿತ್ ಇದ್ದಾರಾ?

india Test team

ಬೆಂಗಳೂರು : ಪೂರ್ಣ ಪ್ರಮಾಣದ ದಕ್ಷಿಣ ಆಫ್ರಿಕಾ ಪ್ರವಾಸಕ್ಕಾಗಿ (Ind vs SA) ಬಿಸಿಸಿಐ ಗುರುವಾರ ಭಾರತದ ತಂಡವನ್ನು ಪ್ರಕಟಿಸಿದೆ. ಭಾರತ ತಂಡವು ಮೂರು ಟಿ 20, ಅಷ್ಟೇ ಏಕದಿನ ಮತ್ತು ಎರಡು ಟೆಸ್ಟ್ ಪಂದ್ಯಗಳನ್ನು ಆಡಲಿದೆ. ಮೂರು ಪಂದ್ಯಗಳ ಟಿ20 ಸರಣಿ ಡಿಸೆಂಬರ್ 10ರಿಂದ ಆರಂಭವಾಗಲಿದೆ. ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಇಬ್ಬರಿಗೂ ಪ್ರವಾಸದ ವೈಟ್ ಬಾಲ್ ಕ್ರಿಕೆಟ್​ನಿಂದ ವಿಶ್ರಾಂತಿ ನೀಡಲಾಗಿದೆ.

ಟೆಸ್ಟ್ ಸರಣಿಯಲ್ಲಿ ರೋಹಿತ್ ನಾಯಕತ್ವದ ಪಾತ್ರ ವಹಿಸಲಿದ್ದಾರೆ. ಕೊಹ್ಲಿ ಕೂಡ ವಿಶ್ವಕಪ್ ನಂತರ ಮೊದಲ ಬಾರಿಗೆ ಟೆಸ್ಟ್ ಸಮಯದಲ್ಲಿ ಅಂತರರಾಷ್ಟ್ರೀಯ ಕ್ರಿಕೆಟ್​ಗೆ ಮರಳಲಿದ್ದಾರೆ. ಆಲ್​ರೌಂಡರ್​ ಹಾರ್ದಿಕ್ ಪಾಂಡ್ಯ ವಿಶ್ವಕಪ್ ಸಮಯದಲ್ಲಿ ಉಂಟಾದ ಗಾಯದಿಂದ ಇನ್ನೂ ಚೇತರಿಸಿಕೊಳ್ಳದ ಕಾರಣ ಕೆ.ಎಲ್ ರಾಹುಲ್ ಅವರನ್ನು ಏಕದಿನ ನಾಯಕ ಮತ್ತು ಸೂರ್ಯಕುಮಾರ್ ಯಾದವ್ ಟಿ 20 ಪಂದ್ಯಗಳಿಗೆ ನಾಯಕರನ್ನಾಗಿ ಆಯ್ಕೆ ಮಾಡಲಾಗಿದೆ.

ಟಿ20 ಸರಣಿಯಲ್ಲಿ ಶುಬ್ಮನ್ ಗಿಲ್, ರವೀಂದ್ರ ಜಡೇಜಾ ಮತ್ತು ಮೊಹಮ್ಮದ್ ಸಿರಾಜ್ ತಂಡಕ್ಕೆ ಮರಳಲಿದ್ದಾರೆ. 35 ವರ್ಷದ ಕೊಹ್ಲಿ ವೈಟ್-ಬಾಲ್ ಸ್ವರೂಪಗಳಿಂದ ವಿರಾಮವನ್ನು ಕೋರಿದ್ದಾರೆ ಎಂದು ಈ ಹಿಂದೆ ವರದಿಯಾಗಿತ್ತು. ಅದು ಸತ್ಯವಾಗಿದೆ. ವಿಶ್ವಕಪ್​ನ 11 ಪಂದ್ಯಗಳಲ್ಲಿ 765 ರನ್ ಗಳಿಸುವ ಮೂಲಕ ದಾಖಲೆಯ ಪ್ರದರ್ಶನ ನೀಡಿದ್ದ ಕೊಹ್ಲಿ ಟೂರ್ನಿಯ ಶ್ರೇಷ್ಠ ಬ್ಯಾಟರ್ ಪ್ರಶಸ್ತಿ ಪಡೆದಿದ್ದರು. ನ್ಯೂಜಿಲೆಂಡ್ ವಿರುದ್ಧದ ಸೆಮಿಫೈನಲ್​ ನಡೆದ ಮುಂಬಯಿಯಲ್ಲಿ , ಕೊಹ್ಲಿ ತಮ್ಮ 50 ನೇ ಶತಕವನ್ನು ಬಾರಿಸುವ ಮೂಲಕ ಏಕದಿನ ಪಂದ್ಯಗಳಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಸಚಿನ್ ತೆಂಡೂಲ್ಕರ್ ಅವರ ಅಪ್ರತಿಮ ದಾಖಲೆಯನ್ನು ಮುರಿದಿದ್ದರು. ಆದರೆ, ಅವರು ದಕ್ಷಿಣ ಆಫ್ರಿಕಾ ವಿರುದ್ಧದ ಬಿಳಿ ಚೆಂಡಿನ ಪಂದ್ಯದಲ್ಲಿ ಆಡುತ್ತಿಲ್ಲ.

“ರೋಹಿತ್ ಶರ್ಮಾ ಮತ್ತು ವಿರಾಟ್ ಕೊಹ್ಲಿ ಪ್ರವಾಸದ ವೈಟ್ ಬಾಲ್ ಕ್ರಿಕೆಟ್​ನಿಂದ ವಿರಾಮ ನೀಡುವಂತೆ ಮಂಡಳಿಗೆ ಮನವಿ ಮಾಡಿದ್ದರು. ಮೊಹಮ್ಮದ್. ಶಮಿ ಪ್ರಸ್ತುತ ಚಿಕಿತ್ಸೆ ಪಡೆಯುತ್ತಿದ್ದಾರೆ ಮತ್ತು ಅವರ ಲಭ್ಯತೆಯು ಫಿಟ್ನೆಸ್​ಗೆ ಒಳಪಟ್ಟಿರುತ್ತದೆ.

ಟಿ20 ತಂಡ: ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್, ಋತುರಾಜ್ ಗಾಯಕ್ವಾಡ್, ತಿಲಕ್ ವರ್ಮಾ, ಸೂರ್ಯಕುಮಾರ್ ಯಾದವ್ (ನಾಯಕ), ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಜಿತೇಶ್ ಶರ್ಮಾ (ವಿಕೆಟ್ ಕೀಪರ್), ರವೀಂದ್ರ ಜಡೇಜಾ (ಉಪನಾಯಕ), ವಾಷಿಂಗ್ಟನ್ ಸುಂದರ್, ರವಿ ಬಿಷ್ಣೋಯ್, ಕುಲದೀಪ್ ಯಾದವ್, ಅರ್ಶ್​​ದೀಪ್​ ಸಿಂಗ್, ಮೊಹಮ್ಮದ್ ಶಮಿ. ಸಿರಾಜ್, ಮುಖೇಶ್ ಕುಮಾರ್, ದೀಪಕ್ ಚಾಹರ್.

ಏಕದಿನ ತಂಡ: ಋತುರಾಜ್ ಗಾಯಕ್ವಾಡ್, ಸಾಯಿ ಸುದರ್ಶನ್, ತಿಲಕ್ ವರ್ಮಾ, ರಜತ್ ಪಾಟಿದಾರ್, ರಿಂಕು ಸಿಂಗ್, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ನಾಯಕ), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಕುಲದೀಪ್ ಯಾದವ್, ಯಜುವೇಂದ್ರ ಚಾಹಲ್, ಮುಖೇಶ್ ಕುಮಾರ್, ಅವೇಶ್ ಖಾನ್, ಅರ್ಷ್ದೀಪ್ ಸಿಂಗ್, ದೀಪಕ್ ಚಾಹರ್.

ಟೆಸ್ಟ್​ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಋತುರಾಜ್ ಗಾಯಕ್ವಾಡ್, ಇಶಾನ್ ಕಿಶನ್ (ವಿಕೆಟ್ ಕೀಪರ್), ಕೆಎಲ್ ರಾಹುಲ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ. ಸಿರಾಜ್, ಮುಖೇಶ್ ಕುಮಾರ್, ಮೊಹಮ್ಮದ್. ಶಮಿ*, ಜಸ್ಪ್ರೀತ್ ಬುಮ್ರಾ (ಉಪನಾಯಕ), ಪ್ರಸಿದ್ಧ್ ಕೃಷ್ಣ.

ಸರಣಿಯ ವಿವರ

Exit mobile version