ಮುಂಬಯಿ: ಅಮೆರಿಕ ಮತ್ತು ವೆಸ್ಟ್ ಇಂಡೀಸ್ ಜಂಟಿ ಆತಿಥ್ಯದಲ್ಲಿ ನಡೆಯುವ ಟಿ20 ವಿಶ್ವಕಪ್ಗೆ ಭಾರತ ತಂಡ ಈಗಾಗಲೇ ಪ್ರಕಟಗೊಂಡಿದೆ. ಇದೀಗ ಜೆರ್ಸಿಯ(India’s T20 World Cup Jersey) ಫೋಟೊ ವೈರಲ್ ಆಗಿದೆ. ಹೊಸ ಜೆರ್ಸಿಯ ಫೋಟೊವನ್ನು ಟಾಟಾ ಐಪಿಎಲ್ ಕಾಮೆಂಟ್ರಿ ತನ್ನ ಅಧಿಕೃತ ಟ್ವಿಟರ್ ಎಕ್ಸ್ನಲ್ಲಿ ಹಂಚಿಕೊಂಡಿದೆ. ಜತೆಗೆ ಇದೇ ಜೆರ್ಸಿಯಲ್ಲಿ ಭಾರತ ಟಿ20 ವಿಶ್ವಕಪ್ ಆಡಲಿದೆ ಎಂದು ಬರೆದುಕೊಂಡಿದೆ.
Team India jersey for T20 World Cup 2024#PBKSvCSK #T20WorldCup24 pic.twitter.com/EokA9AHYTF
— TATA IPL 2024 Commentary #IPL2024 (@TATAIPL2024Club) May 5, 2024
ವೈರಲ್ ಆಗಿರುವ ಟೀಮ್ ಇಂಡಿಯಾದ ಜೆರ್ಸಿ ನೀಲಿ ಮತ್ತು ಕೇಸರಿ ಬಣ್ಣದ ಮಿಶ್ರಿತ ಕಂಡುಬಂದಿದೆ. ಜತೆಗೆ ಬಿಳಿ ಬಣ್ಣದ ಎರಡು ಗೆರೆಗಳಿವೆ. ಈ ಜೆರ್ಸಿಗಳನ್ನು ಶಾಫ್ ಒಂದರಲ್ಲಿ ಮಾರಾಟಕ್ಕಿಟ್ಟಂತೆ ಕಾಣುತ್ತದೆ.
ಭಾರತ ತನ್ನ ಮೊದಲ ಪಂದ್ಯವನ್ನು ಜೂನ್ 5 ರಂದು ಐರ್ಲೆಂಡ್ ವಿರುದ್ಧ ಆಡಲಿದೆ. ದ್ವಿತೀಯ ಪಂದ್ಯ ಜೂನ್ 9 ರಂದು ಪಾಕ್ ವಿರುದ್ಧ ಆಡಲಿದ. ಭಾರತ ತನ್ನ ಎಲ್ಲ ಲೀಗ್ ಪಂದ್ಯಗಳನ್ನು ಅಮೆರಿಕದಲ್ಲೇ ಆಡಲಿದೆ. ಇದರಲ್ಲಿ ಮೂರು ಪಂದ್ಯಗಳು ನ್ಯೂಯಾರ್ಕ್ ಮತ್ತು ಒಂದು ಪಂದ್ಯ ಫ್ಲೋರಿಡಾದಲ್ಲಿ ನಡೆಯಲಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆದರೆ, ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ. ಜೂನ್ 29ಕ್ಕೆ ಫೈನಲ್ ಪಂದ್ಯ ಸಾಗಲಿದೆ.
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಹಾರ್ದಿಕ್ ಪಾಂಡ್ಯ (ಉಪನಾಯಕ), ಯಶಸ್ವಿ ಜೈಸ್ವಾಲ್, ವಿರಾಟ್ ಕೊಹ್ಲಿ, ಸೂರ್ಯಕುಮಾರ್ ಯಾದವ್, ರಿಷಭ್ ಪಂತ್ (ವಿಕೆಟ್ ಕೀಪರ್), ಸಂಜು ಸ್ಯಾಮ್ಸನ್ (ವಿಕೆಟ್ ಕೀಪರ್), ಶಿವಂ ದುಬೆ, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಯುಜ್ವೇಂದ್ರ ಚಾಹಲ್, ಅರ್ಶದೀಪ್ ಸಿಂಗ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಸಿರಾಜ್. ಮೀಸಲು ಆಟಗಾರರು ಶುಭಮನ್ ಗಿಲ್, ರಿಂಕು ಸಿಂಗ್, ಖಲೀಲ್ ಅಹ್ಮದ್ ಮತ್ತು ಅವೇಶ್ ಖಾನ್.
ಸ್ವರೂಪ ಬದಲು
ಹಿಂದಿನ ಆವೃತ್ತಿಗಳಿಗಿಂತ ಈ ಬಾರಿ ಟೂರ್ನಿ ವಿಭಿನ್ನ ಸ್ವರೂಪವನ್ನು ಹೊಂದಿದೆ. ಸೂಪರ್ 12 ತಂಡಗಳು ಸೇರಿ 20 ತಂಡಗಳನ್ನು ತಲಾ 5 ಗುಂಪುಗಳಾಗಿ ವಿಂಗಡಿಸಲಾಗುತ್ತದೆ. ಪ್ರತಿ ಗುಂಪಿನಿಂದ ಅಗ್ರ 2 ತಂಡಗಳು ಸೂಪರ್ 8ಗೆ ಅರ್ಹತೆ ಪಡೆಯುತ್ತವೆ. ಸೂಪರ್ 8 ತಂಡಗನ್ನು ತಲಾ ನಾಲ್ಕರ ಎರಡು ಗುಂಪುಗಳಾಗಿ ವಿಭಜಿಸಲಾಗುತ್ತದೆ. ಪ್ರತಿ ಗುಂಪಿನ ಅಗ್ರ ಎರಡು ತಂಡಗಳು ಸೆಮಿಫೈನಲ್ಗೆ ಅರ್ಹತೆ ಪಡೆಯಲಿವೆ. ಬಳಿಕ ಫೈನಲ್ ನಡೆಯಲಿದೆ. 2022ರ ಆವೃತ್ತಿಯಲ್ಲಿ 12 ತಂಡಗಳು ಭಾಗಿಯಾಗಿದ್ದವು. ಆದರೆ 2024ರ ಟೂರ್ನಿಯಲ್ಲಿ 20 ತಂಡಗಳು ಕಣಕ್ಕಿಳಿಯಲಿವೆ.
ಭಾರತದ ಪಂದ್ಯಗಳು
ದಿನಾಂಕ | ಎದುರಾಳಿ | ಸ್ಥಳ |
ಜೂನ್ 5 | ಐರ್ಲೆಂಡ್ | ನ್ಯೂಯಾರ್ಕ್ |
ಜೂನ್ 9 | ಪಾಕಿಸ್ತಾನ | ನ್ಯೂಯಾರ್ಕ್ |
ಜೂನ್ 12 | ಅಮೆರಿಕ | ನ್ಯೂಯಾರ್ಕ್ |
ಜೂನ್ 15 | ಕೆನಡಾ | ಫ್ಲೋರಿಡಾ |