ಮೌಂಟ್ ಮಾಂಗ್ನುಯಿ : ನ್ಯೂಜಿಲ್ಯಾಂಡ್ ವಿರುದ್ಧದ ಟಿ೨೦ ಸರಣಿಯ ಎರಡನೇ ಪಂದ್ಯದಲ್ಲಿ ಸ್ಫೋಟಕ ಶತಕ (ಅಜೇಯ ೧೧೧ ರನ್) ಬಾರಿಸಿದ ಸೂರ್ಯಕುಮಾರ್ ಅವರು ಟಿ೨೦ ಮಾದರಿಯಲ್ಲಿ ಹಲವು ದಾಖಲೆಗಳನ್ನು ಮುರಿದಿದ್ದಾರೆ. ಅಂತೆಯೇ ಅವರು ಟೀಮ್ ಇಂಡಿಯಾದ ಸ್ಟಾರ್ ಬ್ಯಾಟರ್ ವಿರಾಟ್ ಕೊಹ್ಲಿ ಹೊಂದಿದ್ದ ಕ್ಯಾಲೆಂಡರ್ ವರ್ಷದಲ್ಲಿನ ಗರಿಷ್ಠ ಪಂದ್ಯಶ್ರೇಷ್ಠ ಪುರಸ್ಕಾರದ ಸಾಧನೆಯನ್ನೂ ಹಿಂದಿಕ್ಕಿದ್ದಾರೆ.
ನ್ಯೂಜಿಲ್ಯಾಂಡ್ ವಿರುದ್ಧದ ಪಂದ್ಯದಲ್ಲಿ ಸೂರ್ಯಕುಮಾರ್ ಯಾದವ್ ಅವರು ಭರ್ಜರಿ ಶತಕದ ಹಿನ್ನೆಲೆಯಲ್ಲಿ ಪಂದ್ಯಶ್ರೇಷ್ಠ ಪ್ರಶಸ್ತಿ ತಮ್ಮದಾಗಿಸಿಕೊಂಡರು. ಇದು ೨೦೨೨ರಲ್ಲಿ ಅವರು ಪಡೆದ ೭ನೇ ಪ್ರಶಸ್ತಿ. ಈ ಮೂಲಕ ಕ್ಯಾಲೆಂಡರ್ ವರ್ಷದಲ್ಲಿ ಆರು ಪ್ರಶಸ್ತಿಗಳನ್ನು ಪಡೆದಿದ್ದ ವಿರಾಟ್ ಕೊಹ್ಲಿಯ ದಾಖಲೆಯನ್ನು ಮುರಿದರು. ಆದರೆ, ಸೂರ್ಯಕುಮಾರ್ ಯಾದವ್ ಅವರು ೩೦ ಇನಿಂಗ್ಸ್‌ಗಳಲ್ಲಿ ಈ ಸಾಧನೆ ಮಾಡಿದರೆ, ವಿರಾಟ್ ಕೊಹ್ಲಿ ಕೇವಲ ೧೩ ಇನಿಂಗ್ಸ್‌ಗಳಲ್ಲಿ ೬ ಪಂದ್ಯಶ್ರೇಷ್ಠ ಪ್ರಶಸ್ತಿಗಳನ್ನು ಗೆದ್ದಿದ್ದಾರೆ.
ಪಂದ್ಯದಲ್ಲಿ ಮೂರನೇ ಕ್ರಮಾಂಕದಲ್ಲಿ ಬ್ಯಾಟ್ ಮಾಡಿದ ಸೂರ್ಯಕುಮಾರ್ ಯಾದವ್ ಆರಂಭದಿಂದಲೇ ರನ್ ಕ್ರೋಡೀಕರಣ ಮಾಡಿದರು. ಅಂತಿಮ ಹಂತದಲ್ಲಿ ಸಿಡಿದೆದ್ದ ಅವರು ೧೧ ಫೊರ್ ಹಾಗೂ ೭ ಸಿಕ್ಸರ್‌ಗಳ ಸಮೇತ ೧೧೧ ರನ್ ಬಾರಿಸಿ ಮಿಂಚಿದರು.
ಇದನ್ನೂ ಓದಿ | IND vs NZ | ಪಾಕಿಸ್ತಾನ ನಾಯಕ ಬಾಬರ್ ಅಜಮ್ ದಾಖಲೆಯನ್ನು ಪುಡಿಗಟ್ಟಿದ ಸೂರ್ಯಕುಮಾರ್ ಯಾದವ್