IOA | ಐಒಎ ಅಥ್ಲೀಟ್‌ಗಳ ಸಮಿತಿಗೆ ಮೇರಿ ಕೋಮ್​, ಪಿ.ವಿ. ಸಿಂಧು ಸೇರಿ 10 ಮಂದಿ ಅವಿರೋಧ ಆಯ್ಕೆ - Vistara News

Latest

IOA | ಐಒಎ ಅಥ್ಲೀಟ್‌ಗಳ ಸಮಿತಿಗೆ ಮೇರಿ ಕೋಮ್​, ಪಿ.ವಿ. ಸಿಂಧು ಸೇರಿ 10 ಮಂದಿ ಅವಿರೋಧ ಆಯ್ಕೆ

ಭಾರತ ಒಲಿಂಪಿಕ್ ಸಂಸ್ಥೆಯ (ಐಒಎ) ಅಥ್ಲೀಟ್‌ಗಳ ಸಮಿತಿಯ ಸದಸ್ಯರಾಗಿ ಸೋಮವಾರ 10 ಮಂದಿ ಕ್ರೀಡಾಪಟುಗಳು ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

VISTARANEWS.COM


on

kom
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ನವದೆಹಲಿ: ಭಾರತದ ಒಲಿಂಪಿಕ್ಸ್​ ಪದಕ ವಿಜೇತರಾದ ಸ್ಟಾರ್​ ಮಹಿಳಾ ಬಾಕ್ಸರ್ ಮೇರಿ ಕೋಮ್‌, ಪಿ.ವಿ.ಸಿಂಧು ಹಾಗೂ ಮೀರಾಬಾಯಿ ಚಾನು ಸೇರಿ 10 ಮಂದಿ ಕ್ರೀಡಾಪಟುಗಳು (IOA) ಭಾರತ ಒಲಿಂಪಿಕ್ ಸಂಸ್ಥೆಯ (ಐಒಎ) ಅಥ್ಲೀಟ್‌ಗಳ ಸಮಿತಿಯ ಸದಸ್ಯರಾಗಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ಸೋಮವಾರ ಈ ಹತ್ತು ಮಂದಿಯ ಅವಿರೋಧ ಆಯ್ಕೆ ನಡೆದಿದೆ. ವಿಂಟರ್‌ ಒಲಿಂಪಿಯನ್‌ ಶಿವ ಕೇಶವನ್‌, ಶೂಟರ್‌ ಗಗನ್ ನಾರಂಗ್‌, ಟೇಬಲ್ ಟೆನಿಸ್‌ ಪಟು ಅಚಂತ ಶರತ್ ಕಮಲ್‌, ಹಾಕಿ ಆಟಗಾರ್ತಿ ರಾಣಿ ರಾಂಪಾಲ್‌, ಫೆನ್ಸರ್ ಭವಾನಿ ದೇವಿ, ರೋವರ್‌ ಬಜರಂಗ್ ಲಾಲ್‌ ಮತ್ತು ಮಾಜಿ ಶಾಟ್‌ಪಟ್‌ ಪಟು ಒ.ಪಿ. ಖರಾನಾ ಅಪೆಕ್ಸ್ ಸಮಿತಿಗೆ ಆಯ್ಕೆಯಾದ ಇನ್ನುಳಿದ ಅಥ್ಲೀಟ್‌ಗಳಾಗಿದ್ದಾರೆ.

ಹತ್ತು ಮಂದಿ ನಾಮಪತ್ರ ಸಲ್ಲಿಕೆ

ಭಾರತ ಒಲಿಂಪಿಕ್ ಸಂಸ್ಥೆಯ ಈ ಚುನಾವಣೆಗೆ ಹತ್ತು ಮಂದಿ ಮಾತ್ರ ನಾಮಪತ್ರ ಸಲ್ಲಿಸಿದ್ದರು. ಅದರಂತೆ ಐಒಎ ಚುನಾವಣಾಧಿಕಾರಿಯಾಗಿರುವ ಉಮೇಶ್ ಸಿನ್ಹಾ ಅವರು ಚುನಾವಣೆಗೆ ಮುನ್ನವೇ 10 ಅಥ್ಲೀಟ್‌ಗಳನ್ನು ಅವಿರೋಧವಾಗಿ ಆಯ್ಕೆಮಾಡಿದ್ದಾರೆ.

ಮಾಜಿ ಒಲಿಂಪಿಕ್ ಚಿನ್ನದ ಪದಕ ವಿಜೇತ ಶೂಟರ್​ ಅಭಿನವ್ ಬಿಂದ್ರಾ ಮತ್ತು ಹಾಕಿ ತಂಡದ ಮಾಜಿ ನಾಯಕ ಸರ್ದಾರ್ ಸಿಂಗ್‌ ಕ್ರಮವಾಗಿ ಅಂತಾರಾಷ್ಟ್ರೀಯ ಒಲಿಂಪಿಕ್ ಸಮಿತಿ ಮತ್ತು ಏಷ್ಯಾ ಒಲಿಂಪಿಕ್ ಕೌನ್ಸಿಲ್‌ನ ಸದಸ್ಯರಾಗಿರುವುದರಿಂದ ಅವರೂ ಕೂಡ ಐಒಎನ ಅಥ್ಲೀಟ್‌ಗಳ ಸಮಿತಿಯಲ್ಲಿ ಸ್ಥಾನ ಪಡೆದಿದ್ದಾರೆ.

ಇದನ್ನೂ ಓದಿ | IND VS NZ | ಭಾರತ ವಿರುದ್ಧದ ತವರಿನ ಟಿ20, ಏಕದಿನ ಸರಣಿಗೆ ನ್ಯೂಜಿಲೆಂಡ್​ ತಂಡ ಪ್ರಕಟ

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

Latest

Pro Kabaddi Final: ಚೊಚ್ಚಲ ಟ್ರೋಫಿ ಗೆದ್ದ ಪುಣೇರಿ ಪಲ್ಟಾನ್‌

10ನೇ ಆವೃತ್ತಿ ಪ್ರೊ ಕಬಡ್ಡಿಯ ಫೈನಲ್(Pro Kabaddi Final)​ ಪಂದ್ಯದಲ್ಲಿ ಪುಣೇರಿ ಪಲ್ಟಾನ್‌ ಗೆದ್ದು ಚೊಚ್ಚಲ ಪ್ರಶಸ್ತಿಗೆ ಮುತ್ತಿಕ್ಕಿದೆ.

VISTARANEWS.COM


on

Puneri Paltan vs Haryana Steelers
Koo

ಹೈದರಾಬಾದ್​: ಹಾವು-ಏಣಿ ಆಟದಂತೆ ಅತ್ಯಂತ ಜಿದ್ದಾಜಿದ್ದಿನಿಂದ ಸಾಗಿದ 10ನೇ ಆವೃತ್ತಿ ಪ್ರೊ ಕಬಡ್ಡಿಯ ಫೈನಲ್(Pro Kabaddi Final)​ ಪಂದ್ಯದಲ್ಲಿ ಪುಣೇರಿ ಪಲ್ಟಾನ್‌(Puneri Paltan) 28-25 ಅಂಕಗಳ ಅಂತರದಿಂದ ಹರಿಯಾಣ ಸ್ಟೀಲರ್ಸ್‌(Haryana Steelers) ತಂಡವನ್ನು ಮಣಿಸಿ ಚೊಚ್ಚಲ ಪ್ರಶಸ್ತಿಗೆ ಮುತ್ತಿಕ್ಕಿದೆ. ಪ್ರಶಸ್ತಿ ಮೊತ್ತವಾಗಿ 3 ಕೋಟಿ ರೂ. ನಗದು ಪುರಸ್ಕಾರ ಬಾಚಿಕೊಂಡಿದೆ. ರನ್ನರ್ ಅಪ್​ ಹರಿಯಾಣ ತಂಡಕ್ಕೆ 1.8 ಕೋಟಿ ರೂ. ಬಹುಮಾನ ಲಭಿಸಿತು.

ಹೈದರಾಬಾದ್‌ನ ಗಚ್ಚಿಬೌಲಿ ಒಳಾಂಗಣ ಕ್ರೀಡಾಂಗಣದಲ್ಲಿ ಶುಕ್ರವಾರ ನಡೆದ ಉಭಯ ತಂಡಗಳ ಈ ಫೈನಲ್​ ಫೈಟ್​ ಆರಂಭದಿಂದ ಹಿಡಿದು ಕೊನೆಯ ತನಕವೂ ರೋಚಕತೆ ಮತ್ತು ಕುತೂಹಲಕ್ಕೆ ಸಾಕ್ಷಿಯಾಯಿತು. ಇತ್ತಂಡಗಳ ಆಟಗಾರರು ಕೂಡ ಅಂಕ ಗಳಿಕೆಗಾಗಿ ತೀವ್ರ ಪೈಪೋಟಿ ನಡೆಸಿದರು. ಇವರ ಜತೆಗೆ ಕೋಚ್​ಗಳು ಕೂಡ ಅಗ್ರೆಸಿವ್​ ಆಗಿ ಕಂಡುಬಂದರು.

ಟರ್ನಿಂಗ್​ ಪಾಯಿಂಟ್​


ಮೊದಲಾರ್ಧದ 20 ನಿಮಿಷದ ಆಟದಲ್ಲಿ ಕೊನೆಯ 1.28 ನಿಮಿಷದವರೆಗೂ ಪುಣೆ ತಂಡ ಹಿನ್ನಡೆಯಲ್ಲಿತ್ತು. ಆದರೆ, ಈ ವೇಳೆ ಡು ಆರ್​ ಡೈ ರೇಟ್​ನಲ್ಲಿ ಪಂಕಜ್​ ಮೋಹಿತೆ ಅವರು ಪಾದರಸದಂತಹ ರೇಡಿಂಗ್​ ದಾಳಿ ನಡೆಸಿ ಒಂದೇ ಬಾರಿಗೆ 5 ಅಂಕ ಕಲೆಹಾಕಿ ಪಂದ್ಯದ ಗತಿಯನ್ನೇ ಬದಲಿಸಿದರು. ಇದು ಪಂದ್ಯ ಟರ್ನಿಂಗ್​ ಪಾಯಿಂಟ್​ ಕೂಡ ಆಯಿತು. ಅವರ ಈ ರೇಡಿಂಗ್​ ಸಾಹಸದಿಂದ ಪುಣೆ ಭರ್ಜರಿ ಲೀಡ್​ ಪಡೆಯಿತು. ಮೊದಲಾರ್ಧ ಮುಕ್ತಾಯಕ್ಕೆ 13-10 ಅಂಕದ ಮುನ್ನಡೆ ಸಾಧಿಸಿತು. ಇದೇ ಮುನ್ನಡೆಯನ್ನು ಪಂದ್ಯದಕ್ಕೂ ಕಾಯ್ದುಕೊಂಡು ಪ್ರಶಸ್ತಿ ಎತ್ತಿಹಿಡಿಯಿತು.

ಕನ್ನಡಿಗ ಕೋಚ್‌ ಬಿ.ಸಿ. ರಮೇಶ್‌ ಮಾರ್ಗದರ್ಶನ


ಕನ್ನಡಿಗ ಕೋಚ್‌ ಬಿ.ಸಿ. ರಮೇಶ್‌ ಮಾರ್ಗದರ್ಶನದಲ್ಲಿ ಪುಣೇರಿ ತಂಡ ಈ ಆವೃತ್ತಿಯ ಆರಂಭದಿಂದಲೂ ಉತ್ತಮ ಪ್ರದರ್ಶನ ನೀಡಿ ಆಡಿದ 22 ಪಂದ್ಯಗಳಲ್ಲಿ 17 ಗೆಲುವುಗಳೊಂದಿಗೆ ಅಂಕ ಪಟ್ಟಿಯಲ್ಲಿ ಅಗ್ರಸ್ಥಾನದಲ್ಲಿ ಕಾಣಿಸಿಕೊಂಡಿತ್ತು. ತನ್ನ ಖ್ಯಾತಿಗೆ ತಕ್ಕಂತೆ ಫೈನಲ್​ನಲ್ಲಿಯೂ ಇದೇ ಪ್ರದರ್ಶನ ತೋರುವ ಮೂಲಕ ಪ್ರಶಸ್ತಿಯನ್ನು ತನ್ನದಾಗಿಸಿಕೊಂಡಿತು. ಕಳೆದ ಬಾರಿಯೂ ಪುಣೇರಿ ತಂಡ ಫೈನಲ್​ ಆಡಿತ್ತು. ಆದರೆ ಅಲ್ಲಿ ಜೈಪುರ ವಿರುದ್ಧ ಸೋತು ರನ್ನರ್​ ಅಪ್​ ಸ್ಥಾನ ಪಡೆದಿತ್ತು. ಈ ಬಾರಿ ಪ್ರಶಸ್ತಿಗೆಲ್ಲುವಲ್ಲಿ ಯಶಸ್ಸು ಕಂಡಿತು.

ಖ್ಯಾತ ಡಿಫೆಂಡರ್‌​ ಮೊಹಮ್ಮದ್ರೇಜಾ ಚಿಯಾನೆಹ್ ಅವರು ಮೊದಲಾರ್ಧದ ಆಟದಲ್ಲಿ ವಿಫಲಗೊಂಡರೂ ಕೂಡ ದ್ವಿತೀಯಾರ್ಧದಲ್ಲಿ ಶ್ರೇಷ್ಠ ಆಟ ಪ್ರದರ್ಶಿಸಿ ತಂಡಕ್ಕೆ ನೆರವಾದರು. ಮೋಹಿತ್​ ಗೋಯತ್​ ಅವರು ಪ್ರೊ ಕಬಡ್ಡಿ ಆವೃತ್ತಿಯಲ್ಲಿ 400 ರೇಡಿಂಗ್​ ಅಂಕಗಳನ್ನು ಪೂರ್ತಿಗೊಳಿಸಿದ ದಾಖಲೆಯನ್ನು ಕೂಡ ಈ ಪಂದ್ಯದಲ್ಲಿ ಬರೆದರು.

ಹರ್ಯಾಣ ಪರ ರೇಡರ್​ ಶಿವಂ ತಕ್ಕ ಮಟ್ಟಿನ ಆಟ ಪ್ರದರ್ಶಿಸಿದರು. ಅವರು 6 ಅಂಕ ಗಳಿಸಿದರು. ನಾಯಕ ವಿನಯ್​ ಕೇವಲ 3 ಅಂಕಕ್ಕೆ ಸೀಮಿತರಾದರು. ಅವರ ವೈಫಲ್ಯ ತಂಡಕ್ಕೆ ಭಾರೀ ಹಿನ್ನಡೆ ಉಂಟುಮಾಡಿತು. ಪುಣೇರಿ ಪರ ನಾಯಕ ಅಸ್ಲಾಂ ಇನಾಮ್ದಾರ್‌ 4, ಪಂಕಜ್​ ಮೋಹಿತೆ 9 ಅಂಕ ಗಳಿಸಿ ಗೆಲುವಿನ ಹೀರೊ ಎನಿಸಿದರು.

Continue Reading

ಬೆಂಗಳೂರು

Self Harming : ಗಂಡನ ಅಕ್ರಮ ಸಂಬಂಧಕ್ಕೆ ಬೇಸತ್ತು 1 ವರ್ಷದ ಪುಟ್ಟ ಮಗುವಿನ ತಾಯಿ ಆತ್ಮಹತ್ಯೆ

Self Harming : ಬೆಂಗಳೂರಿನಲ್ಲಿ ಗೃಹಿಣಿಯೊಬ್ಬರು ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಸಾಫ್ಟ್‌ ವೇರ್‌ ಎಂಜಿನಿಯರ್‌ ಎಂಬ ಕಾರಣಕ್ಕೆ ಖುಷಿಯಿಂದ ಮದುವೆಯಾದ ಆಕೆಗೆ ಈಗ ಅವನ ಅಕ್ರಮ ಸಂಬಂಧವೇ ಮುಳುವಾಗಿದೆ. ಒಂದು ವರ್ಷದ ಪುಟ್ಟ ಮಗು ಅಮ್ಮನಿಲ್ಲದೆ ಅನಾಥವಾಗಿದೆ.

VISTARANEWS.COM


on

Self Harming in Bangalore
ಆತ್ಮಹತ್ಯೆ ಮಾಡಿಕೊಂಡ ಕಾವ್ಯ ತನ್ನ ಗಂಡ ಪ್ರವೀಣ್‌ ಮತ್ತು ಮಗುವಿನ ಜತೆ
Koo

ಬೆಂಗಳೂರು: ಅವನು ಒಬ್ಬ ಸಾಫ್ಟ್‌ ವೇರ್‌ ಎಂಜಿನಿಯರ್‌ (Software Engineer). ಒಳ್ಳೆಯ ಕೆಲಸದಲ್ಲಿದ್ದಾನೆ ಎಂಬ ಕಾರಣಕ್ಕೆ ಐವತ್ತು ಲಕ್ಷ ರೂ. ಖರ್ಚು ಮಾಡಿ ಅದ್ಧೂರಿಯಾಗಿ ಮದುವೆ ಮಾಡಿಕೊಟ್ಟಿದ್ದರು. ದುಡ್ಡಿನ ಜತೆ ಅರ್ಧ ಕೆಜಿ ಚಿನ್ನ ಕೂಡಾ ಕೊಟ್ಟಿದ್ದರು. ಆದರೆ, ಆ ಮನುಷ್ಯ ಮದುವೆಯಾದ ಕೂಡಲೇ ಕೆಲಸ ಬಿಟ್ಟಿದ್ದ. ಹಾಗೇ ಇದ್ದಿದ್ದರೆ ಪರವಾಗಿರಲಿಲ್ಲ. ಬೇರೆ ಹೆಣ್ಣಿನ ಸಹವಾಸಕ್ಕೆ ಬಿದ್ದಿದ್ದ. ಕೇಳಿದರೆ ತಂಗಿ ಅಂತಿದ್ದ! ಇಂಥ ದುಷ್ಟ ಗಂಡನ ಅಕ್ರಮ ಸಂಬಂಧದಿಂದ (Illicit relationship) ಬೇಸತ್ತು ಆ ಹುಡುಗಿ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ (Self Harming), ಕೇವಲ ಒಂದು ವರ್ಷದ ಪುಟ್ಟ ಕಂದಮ್ಮನನ್ನು ಬಿಟ್ಟು ಹೋಗಿದ್ದಾಳೆ.

ಇದು ಬೆಂಗಳೂರಿನ ರಾಜಗೋಪಾಲ ನಗರದ ಮೋಹನ್‌ ಥಿಯೇಟರ್‌ ಬಳಿಯ ಮನೆಯೊಂದರಲ್ಲಿ ನಡೆದಿರುವ ಘಟನೆ. ಆತ್ಮಹತ್ಯೆ ಮಾಡಿಕೊಂಡಿರುವ ಯುವತಿಯ ಹೆಸರು ಕಾವ್ಯ. ವಯಸ್ಸು ಇನ್ನೂ ಕೇವಲ 22. ಎರಡು ವರ್ಷದ ಹಿಂದಷ್ಟೇ ಸಂಸಾರ ಜೀವನಕ್ಕೆ ಕಾಲಿಟ್ಟ ಆಕೆ ಬಿಟ್ಟು ಹೋಗಿರುವ ಪುಟ್ಟ ಮಗುವಿನ ಮೊದಲ ಹುಟ್ಟುಹಬ್ಬವನ್ನು ಕೆಲವು ದಿನದ ಹಿಂದಷ್ಟೇ ಆಚರಿಸಲಾಗಿತ್ತು.

ಕುಣಿಗಲ್‌ ನಿವಾಸಿಯಾಗಿರುವ ಕಾವ್ಯ ಪ್ರವೀಣ್ ಎಂಬಾತನನ್ನು ಮದ್ವೆಯಾಗಿದ್ದಳು. ಆದರೆ ಸಂಸಾರ ನೆಟ್ಟಗಿರಲಿಲ್ಲ ಎಂಬ ಕಾರಣಕ್ಕೆ ಆತ್ಮಹತ್ಯೆ ಮಾಡಿಕೊಂಡಿದ್ದಾಳೆ. ಆದರೆ, ಈಗ ಇದು ಆತ್ಮಹತ್ಯೆ ಅಲ್ಲ, ಕೊಲೆ ಎಂದು ಆಕೆಯ ಮನೆಯವರು ಆರೋಪ ಮಾಡುತ್ತಿದ್ದಾರೆ.

ಪ್ರವೀಣ್ ಎಂಜಿನಿಯರ್‌ ಎಂಬ ಕಾರಣಕ್ಕೆ ಕಾವ್ಯಳನ್ನು ಆಕೆಯ ಮನೆಯವರು ಖುಷಿಯಿಂದ ಮದುವೆ ಮಾಡಿಕೊಟ್ಟಿದ್ದರಂತೆ. ಆದರೆ ಆತ ಮಾತ್ರ ಮದುವೆ ಆದ ಸ್ವಲ್ಪ ದಿನದಲ್ಲಿ ಕೆಲಸ ಬಿಟ್ಟಿದ್ದನಂತೆ. ಎಲ್ಲಿಯೂ ಕೆಲಸಕ್ಕೆ ಹೋಗದೆ ಕಾವ್ಯಾಳ ಪೋಷಕರು ಕೊಟ್ಟ ಹಣದಲ್ಲಿ ಜೀವನ ಶುರು ಮಾಡಿದ್ದ.

ಕಾವ್ಯಾಳ ಮನೆಯವರು ಎಷ್ಟೇ ಬುದ್ಧಿ ಹೇಳಿದರೂ ಮೊಂಡು ಬಿದ್ದಿದ್ದ ಪ್ರವೀಣ್. ಪೋಷಕರಿಗೆ ಅಸಲಿ ಸತ್ಯ ಗೊತ್ತಾಗಿದ್ದೇ ಆಗ. ತಮ್ಮ ಮಗಳನ್ನ ಪ್ರೀತಿಸುವ ಹುಡುಗನನ್ನ ಹುಡುಕೋದನ್ನ ಬಿಟ್ಟು ಪೋಷಕರೂ ಕೂಡ ಆತನ ಸಿರಿವಂತಿಕೆ ಸ್ಟೇಟಸ್ ಹುಡುಕಿದ್ದರು.

Self Harming in Bangalore1

ಇದನ್ನು ಓದಿ: Love Case : ಪ್ರೀತ್ಸೆ ಪ್ರೀತ್ಸೆ ಎಂದು ಅಪ್ರಾಪ್ತೆಯ ಕೊಂದೇ ಬಿಟ್ಟ ಪಾಗಲ್‌ ಪ್ರೇಮಿ

ಇಷ್ಟರ ನಡುವೆ ಪ್ರವೀಣನಿಗೆ ಬೇರೆ ಹುಡುಗೀಯ ಜೊತೆ ಅಕ್ರಮ ಸಂಬಂಧ ಇತ್ತು ಎಂಬ ವಿಷಯವೂ ಗೊತ್ತಾಗಿತ್ತು. ಅದನ್ನು ಪ್ರಶ್ನಿಸಿದಾಗ ಆಕೆ ನನ್ನ ತಂಗಿ ನಮ್ಮಿಬ್ಬರ ನಡುವೆ ಏನಿಲ್ಲ ಎಂದೇ ಹೇಳುತ್ತಿದ್ದ. ಆದರೆ, ಆಕೆಯ ಸಂಬಂಧವನ್ನು ಮುಂದುವರಿಸಿದ್ದ. ಭಾನುವಾರ ಕೂಡಾ ಇದೇ ವಿಚಾರಕ್ಕೆ ಪತಿ, ಪತ್ನಿ ನಡುವೆ ಜಗಳ ನಡೆದಿದೆ ಎಂದು ಹೇಳಲಾಗಿದೆ. ಇದರಿಂದ ನೊಂದು, ಜಗಳ ತಾರಕ್ಕೇರಿ ಕಾವ್ಯ ನೇಣು ಬಿಗಿದುಕೊಂಡಿರುವ ಸಾಧ್ಯತೆ ಇದೆ. ಆದರೆ, ಪ್ರವೀಣನ ಮನೆಯವರೇ ಕೊಂದು ನೇಣಿಗೆ ಹಾಕಿದ್ದಾರೆಂದು ಕುಟುಂಬಸ್ಥರ ಆರೋಪ. ಪ್ರವೀಣ ಕಾವ್ಯಳಿಗೆ ಕೊಟ್ಟ ಚಿನ್ನಾಭರಣಗಳನ್ನು ಕೂಡಾ ಆ ಯುವತಿಗೆ ಕೊಟ್ಟಿದ್ದಾನೆ ಎಂದು ಕೂಡಾ ಆರೋಪಿಸಿದ್ದಾರೆ. ಸದ್ಯ ಈ ಸಂಬಂಧ ರಾಜಗೋಪಾಲ ನಗರ ಪೊಲೀಸರು ಆರೋಪಿಗಳನ್ನ ವಶಕ್ಕೆ ಪಡೆದು ವಿಚಾರಣೆ ನಡೆಸುತ್ತಿದ್ದಾರೆ.

Continue Reading

Latest

Diamond League: ಸೆಂಟಿಮೀಟರ್ ಅಂತರದಲ್ಲಿ ನೀರಜ್​ ಕೈತಪ್ಪಿದ ಚಿನ್ನ; ಲಾಂಗ್​ ಜಂಪ್​ನಲ್ಲಿ ಶ್ರೀಶಂಕರ್​ಗೆ 5ನೇ ಸ್ಥಾನ

ಜ್ಯೂರಿಚ್‌ನಲ್ಲಿ ನಡೆದ ಮೂರನೇ ಚರಣರದ ಡೈಮಂಡ್​ ಲೀಗ್​ನಲ್ಲಿ ನೀರಜ್​ ಅವರು 85.71 ದೂರ ಜಾವೆಲಿನ್​ ಎಸೆದು ಕೇವಲ 15 ಸೆಂಟಿಮೀಟರ್​ ಅಂತರದಿಂದ ಚಿನ್ನದ ಪದಕ ಗೆಲ್ಲುವ ಅವಕಾಶವನ್ನು ಕಳೆದುಕೊಂಡರು

VISTARANEWS.COM


on

neeraj chopra and Sreeshankar
Koo

ಜ್ಯೂರಿಚ್‌: ಭಾನುವಾರ ಬುಡಾಪೆಸ್ಟ್​ನಲ್ಲಿ ನಡೆದಿದ್ದ ವಿಶ್ವ ಆ್ಯತ್ಲೆಟಿಕ್ಸ್‌ ಚಾಂಪಿಯನ್‌ಶಿಪ್‌ನಲ್ಲಿ ಐತಿಹಾಸಿಕ ಚಿನ್ನ ಗೆದ್ದ ಭಾರತದ ಜಾವೆಲಿನ್‌ ತಾರೆ ನೀರಜ್‌ ಚೋಪ್ರಾ(Neeraj Chopra) ನಾಲ್ಕು ದಿನಗಳ ಅಂತರದಲ್ಲಿ ಬೆಳ್ಳಿ ಗೆದ್ದ ಸಾಧನೆ ಮಾಡಿದ್ದಾರೆ. ಜ್ಯೂರಿಚ್‌ನಲ್ಲಿ ನಡೆದ ಮೂರನೇ ಚರಣರದ ಡೈಮಂಡ್​ ಲೀಗ್​ನಲ್ಲಿ ನೀರಜ್​ ಅವರು 85.71 ದೂರ ಜಾವೆಲಿನ್​ ಎಸೆದು ಕೇವಲ 15 ಸೆಂಟಿಮೀಟರ್​ ಅಂತರದಿಂದ ಚಿನ್ನದ ಪದಕ ಗೆಲ್ಲುವ ಅವಕಾಶವನ್ನು ಕಳೆದುಕೊಂಡರು. ಆದರೆ ಮತ್ತೊಮ್ಮೆ ಭಾರತದ ಕೀರ್ತಿ ಪತಾಕೆಯನ್ನು ಜಾಗತಿಕ ಕ್ರೀಡಾ ಕ್ಷೇತ್ರದಲ್ಲಿ ಎತ್ತಿ ಹಿಡಿದರು. ಭಾರತರ ಮತ್ತೊಂದು ಭರವಸೆಯಾಗಿದ್ದ ಲಾಂಗ್​ ಜಂಪ್​ ಸ್ಪರ್ಧೆಯಲ್ಲಿ ಮುರಳಿ ಶ್ರೀಶಂಕರ್‌ ಅವರು ಪದಕ ಗೆಲ್ಲುವಲ್ಲಿ ವಿಫಲರಾದರು. ಅವರು 7.99 ಮೀ. ಜಿಗಿದು 5ನೇ ಸ್ಥಾನಕ್ಕೆ ತೃಪ್ತಿಪಟ್ಟರು. ಗ್ರ್ಯಾಂಡ್‌ ಫಿನಾಲೆ ಅಮೆರಿಕದ ಯೂಜಿನ್‌ನಲ್ಲಿ ಸೆಪ್ಟೆಂಬರ್​ 16, 17ರಂದು ನಡೆಯಲಿದೆ.

ಒಲಿಂಪಿಕ್ಸ್‌ನಲ್ಲಿ ಬೆಳ್ಳಿ ಪದಕ ಗೆದ್ದ ಜೆಕ್ ಗಣರಾಜ್ಯದ ಜಾಕುಬ್ ವಡ್ಲೆಜ್ 85.86 ದೂರ ಎಸೆದು ಚಿನ್ನ ಗೆದ್ದರು. ನೀರಜ್​ 85.71 ದೂರ ಎಸೆದು ಬೆಳ್ಳಿ ಗೆದ್ದರೆ, ಜರ್ಮನಿಯ ಜೂಲಿಯನ್‌ ವೆಬ್ಬರ್‌ 85.04 ಕಂಚು ಗೆದ್ದರು. ​ಮೊದಲ ಪ್ರಯತ್ನದಲ್ಲಿ 80.79 ಮೀ. ಎಸೆದ ನೀರಜ್​ ದ್ವಿತೀಯ ಎಸೆತದಲ್ಲಿ ಫೌಲ್​ ಆದರು. ನಾಲ್ಕನೇ ಎಸೆದಲ್ಲಿ ಮತ್ತೆ ಹಿಡಿತ ಸಾಧಿಸಿದರೂ ಅಂತಿಮ ಎಸೆದಲ್ಲಿ ಎಡವಿ ಚಿನ್ನದ ಪದಕದಿಂದ ವಂಚಿತಾದರು.

ದೋಹ- ಲಾಸನ್ನೆ ಚರಣದಲ್ಲಿ ಚಿನ್ನ

ನೀರಜ್‌ ಚೋಪ್ರಾ ಇದೇ ಮೇ 5ರಂದು ದೋಹಾದಲ್ಲಿ ನಡೆದಿದ್ದ ಡೈಮಂಡ್‌ ಲೀಗ್‌ನಲ್ಲಿ(Diamond League) ಚಿನ್ನದ ಪದಕ ಗೆದ್ದಿದ್ದರು. ಈ ಕೂಟದಲ್ಲಿ ಅವರು ತಮ್ಮ 4ನೇ ಅತ್ಯುತ್ತಮ ದೂರದ(88.67 ಮೀ.) ಸಾಧನೆಯೊಂದಿಗೆ ಗುರುತಿಸಿಕೊಂಡಿದ್ದರು. ಬಳಿಕ ಸ್ನಾಯು ಸೆಳೆತಕ್ಕೆ ಸಿಲುಕಿದ ಕಾರಣ ಒಂದು ತಿಂಗಳ ವಿಶ್ರಾಂತಿ ಪಡೆದು ಲಾಸನ್ನೆ ಚರಣರದ ಡೈಮಂಡ್​ ಲೀಗ್​ನಲ್ಲಿ(Lausanne Diamond League) ಕಣಕ್ಕಿಳಿದಿದ್ದರು. ಇಲ್ಲಿ 87.66 ಮೀಟರ್‌ ದೂರಕ್ಕೆ ಜಾವೆಲಿನ್ ಎಸೆದು ಚಿನ್ನದ ಪದಕ್ಕೆ ಕೊರಳೊಡ್ಡಿ ಸತತ ಚಿನ್ನ ಗೆದ್ದ ಸಾಧನೆ ಮಾಡಿದ್ದರು. ಇಲ್ಲಿಯೂ ಚಿನ್ನ ಗೆದ್ದಿದ್ದರೆ ಹ್ಯಾಟ್ರಿಕ್​ ಚಿನ್ನ ಗೆದ್ದ ಸಾಧನೆ ಮಾಡುತ್ತಿದ್ದರು.

ಇದನ್ನೂ ಓದಿ Neeraj Chopra: ಪ್ಯಾರಿಸ್​ನಲ್ಲಿಯೂ ನೀರಜ್​ ಚೋಪ್ರಾಗೆ ಚಿನ್ನ ಒಲಿಯಲಿದೆ; ಶಿರಸಿಯ ಕಾಶಿನಾಥ್ ನಾಯ್ಕ್ ವಿಶ್ವಾಸ

5ನೇ ಸ್ಥಾನಕ್ಕೆ ತೃಪ್ತಿಪಟ್ಟ ಮುರಳಿ ಶ್ರೀಶಂಕರ್‌

ಭಾರತರ ಮತ್ತೊಂದು ಭರವಸೆಯಾಗಿದ್ದ ಲಾಂಗ್​ ಜಂಪ್​ ಸ್ಪರ್ಧೆಯಲ್ಲಿ ಮುರಳಿ ಶ್ರೀಶಂಕರ್‌ ಅವರು ಪದಕ ಗೆಲ್ಲುವಲ್ಲಿ ವಿಫಲರಾದರು. 7.99 ಮೀ. ಜಿಗಿದು 5ನೇ ಸ್ಥಾನ ಪಡೆದರು. ಲಾಸನ್ನೆ ಚರಣದಲ್ಲಿಯೂ 7.88 ಮೀಟರ್‌ ಜಿಗಿತದೊಂದಿಗೆ ಐದನೇ ಸ್ಥಾನ ಪಡೆದಿದ್ದರು. ಈ ಬಾರಿ ತಮ್ಮ ಜಿಗಿತವನ್ನು ಕೊಂಚ ಉತ್ತಮಗೊಳಿಸಿದರು. ಗ್ರೀಸ್‌ನ ಮಿಲ್ಟಿಯಾಡಿಸ್ ಟೆಂಟೊಗ್ಲೋ 8.07 ಮೀ. ಜಿಗಿದು ಚಿನ್ನ ಗೆದ್ದರು.

ಕಳೆದ ಪ್ಯಾರಿಸ್‌ ಡೈಮಂಡ್‌ ಲೀಗ್‌ ಲಾಂಗ್‌ಜಂಪ್‌ನಲ್ಲಿ 8.09 ಮೀ. ದೂರದ ಸಾಧನೆಯೊಂದಿಗೆ ತೃತೀಯ ಸ್ಥಾನಿಯಾಗಿದ್ದ ಮುರಳಿ ಶ್ರೀಶಂಕರ್‌ ಇಲ್ಲಿ ಪದಕ ಗೆಲ್ಲುವಲ್ಲಿ ಎಡವಿದರು. ಇದಕ್ಕೂ ಮುನ್ನ ನಡೆದಿದ್ದ ನ್ಯಾಶನಲ್‌ ಇಂಟರ್‌ ಸ್ಟೇಟ್‌ ಆ್ಯತ್ಲೆಟಿಕ್ಸ್‌ನಲ್ಲಿ ಅತ್ಯುತ್ತಮ ವೈಯಕ್ತಿಕ ಸಾಧನೆಯನ್ನು ದಾಖಲಿಸಿ(8.42 ಮೀ.) ಮಿಂಚಿದ್ದರು.

ವಿಶ್ವ ಆ್ಯತ್ಲೆಟಿಕ್ಸ್‌ನಲ್ಲಿ ಚಿನ್ನದ ಹೊಳಪು

ಭಾನುವಾರ ರಾತ್ರಿ ನಡೆದಿದ್ದ ಫೈನಲ್‌ನಲ್ಲಿ ನೀರಜ್‌ ಚೋಪ್ರಾ 88.17 ಮೀ. ದೂರಕ್ಕೆ ಜಾವೆಲಿನ್‌ ಎಸೆದು ಚಿನ್ನದ ಪದಕ ಗೆದ್ದಿದ್ದರು. ಈ ಮೂಲಕ ವಿಶ್ವ ಆ್ಯತ್ಲೆಟಿಕ್ಸ್‌ನಲ್ಲಿ ಭಾರತಕ್ಕೆ ಮೊದಲ ಚಿನ್ನ ತಂದುಕೊಟ್ಟಿದ್ದರು. ಒಲಿಂಪಿಕ್ಸ್, ಕಾಮನ್ವೆಲ್ತ್ ಗೇಮ್ಸ್ ಮತ್ತು ಏಷ್ಯನ್ ಗೇಮ್ಸ್‌ ಹಾಗೂ ವಿಶ್ವ ಚಾಂಪಿಯನ್​ಶಿಪ್​ನಲ್ಲಿಯೂ ಚಿನ್ನ ಗೆದ್ದ ಭಾರತದ ಮೊದಲ ಅಥ್ಲೀಟ್​ ಎಂಬ ಹಿರಿಮೆಗೆ ಪಾತ್ರರಾಗಿದ್ದರು. ಕಳೆದ ವರ್ಷ ಇದೇ ಕೂಟದಲ್ಲಿ ಬೆಳ್ಳಿ ಪದಕ ಜಯಿಸಿದ್ದರು.

Continue Reading

Latest

ST Somashekhar : ಜನಸ್ಪಂದನ ಕಾರ್ಯಕ್ರಮಕ್ಕೆ ಡಿಕೆಶಿಗೆ ಆಹ್ವಾನ; ಸೋಮಶೇಖರ್‌ ಕಾಂಗ್ರೆಸ್‌ ಸೇರ್ಪಡೆ ಫಿಕ್ಸಾ?

ST Somashekhar : ಬಿಜೆಪಿ ಶಾಸಕ ಎಸ್‌ಟಿ ಸೋಮಶೇಖರ್‌ ಅವರು ಶನಿವಾರ ಬೆಳಗ್ಗೆ ಮೋದಿ ಕಾರ್ಯಕ್ರಮದ ಕಡೆಗೆ ತಲೆ ಹಾಕಿಲ್ಲ. ಆದರೆ, ಸಂಜೆ ಡಿಕೆಶಿ ಜತೆ ವೇದಿಕೆ ಹಂಚಿಕೊಳ್ಳುತ್ತಿದ್ದಾರೆ!

VISTARANEWS.COM


on

ST Somashekhar
Koo

ಬೆಂಗಳೂರು: ಯಶವಂತಪುರದ ಬಿಜೆಪಿ ಶಾಸಕರಾಗಿರುವ ಎಸ್‌ಟಿ ಸೋಮಶೇಖರ್‌ (ST Somashekhar) ಅವರು ಬಿಜೆಪಿ ಬಿಟ್ಟು ಕಾಂಗ್ರೆಸ್‌ ಸೇರ್ಪಡೆಯ (Operation Hasta) ಸುದ್ದಿ ನಿಜವಾಗುವ ಕಾಲ ಸನ್ನಿಹಿತವಾದಂತೆ ಕಾಣುತ್ತಿದೆ. ಹಂತ ಹಂತವಾಗಿ ಬಿಜೆಪಿಯಿಂದ ದೂರವಾಗುತ್ತಾ, ಕಾಂಗ್ರೆಸ್‌ಗೆ ಹತ್ತಿರವಾಗುತ್ತಿರುವ ಅವರ ನಡೆಯಲ್ಲಿ ಶನಿವಾರ ಒಂದು ನಿರ್ಣಾಯಕ ದಿನವಾಗುವ ಸಾಧ್ಯತೆ ಇದೆ.

ಜನಸ್ಪಂದನ ಕಾರ್ಯಕ್ರಮಕ್ಕೆ ಡಿಕೆ ಶಿವಕುಮಾರ್‌ಗೆ ಆಹ್ವಾನ

ಬಿಜೆಪಿ ಪಕ್ಷದ ಎಲ್ಲ ಕಾರ್ಯಕ್ರಮಗಳಿಂದ ದೂರವಾಗಿ ನಿಂತಿರುವ ಎಸ್‌ಟಿ ಸೋಮಶೇಖರ್‌ ಅವರು ಶನಿವಾರ ಸಂಜೆ ತಮ್ಮ ಕ್ಷೇತ್ರದಲ್ಲಿ ನಡೆಯುವ ಕಾರ್ಯಕ್ರಮವೊಂದರಲ್ಲಿ ಭಾಗವಹಿಸುತ್ತಿದ್ದಾರೆ. ಇದರಲ್ಲಿ ಅವರು ವೇದಿಕೆ ಹಂಚಿಕೊಳ್ಳುತ್ತಿರುವುದು ರಾಜ್ಯದ ಉಪಮುಖ್ಯಮಂತ್ರಿ, ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್‌ (DK Shivakumar) ಅವರ ಜತೆ.

ಚೇಂಜ್‌ ಮೇಕರ್ಸ್‌ ಆಫ್‌ ಕನಕಪುರ ನಿವಾಸಿ ಸಂಘ ಎಂಬ ಸಂಸ್ಥೆ, ಶೋಭಾ ಫಾರೆಸ್ಟ್‌ ವ್ಯೂ ನಿವಾಸಿ ಸಂಘ (ಎಸ್‌ಫ್‌ವಿ) ಜತೆ ಸೇರಿಕೊಂಡು ಯಶವಂತಪುರ ವಿಧಾನಸಭಾ ಕ್ಷೇತ್ರದ ಹೆಮ್ಮಿಗೆ ಪುರ ವಾರ್ಡ್‌ ಸಂಖ್ಯೆ 198ರ ನಿವಾಸಿಗಳ ಜತೆ ʻಜನಸ್ಪಂದನʼ ಕಾರ್ಯಕ್ರಮ ಆಯೋಜಿಸಲಾಗಿದೆ. ಇದರ ಅಧ್ಯಕ್ಷತೆಯನ್ನು ವಹಿಸುವವರು ಶಾಸಕ ಎಸ್‌.ಟಿ. ಸೋಮಶೇಖರ್‌. ಸಂಜೆ ನಾಲ್ಕು ಗಂಟೆಗೆ ಕಾರ್ಯಕ್ರಮ ನಡೆಯಲಿದೆ.

ST Somashekhar

ಎಸ್‌ಟಿ ಸೋಮಶೇಖರ್‌ ಅವರು ಇತ್ತೀಚೆಗೆ ಬಿಜೆಪಿಯ ಯಾವುದೇ ಕಾರ್ಯಕ್ರಮದಲ್ಲಿ ಭಾಗವಹಿಸುತ್ತಿಲ್ಲ. ಮಾಜಿ ಮುಖ್ಯಮಂತ್ರಿ ಬಿ.ಎಸ್‌. ಯಡಿಯೂರಪ್ಪ ಅವರು ಆಯೋಜಿಸಿದ್ದ ಬೆಂಗಳೂರು ಶಾಸಕರ ಸಭೆಯಲ್ಲಿ ಅವರು ಗೈರು ಹಾಜರಾಗಿದ್ದರು. ಮಾತ್ರವಲ್ಲ ಪ್ರಧಾನಿ ನರೇಂದ್ರ ಮೋದಿ ಅವರು ಬೆಂಗಳೂರಿಗೆ ಬಂದಾಗಲೂ ಸೋಮಶೇಖರ್‌ ಮಾತ್ರ ತಿರುಗಿ ನೋಡಿಲ್ಲ!

ಬಿ.ಎಸ್‌. ಯಡಿಯೂರಪ್ಪ ಅವರು ಸೋಮಶೇಖರ್‌ ಅವರ ಜತೆ ಮಾತನಾಡುವ ಹೊಣೆಯನ್ನು ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರಿಗೆ ವಹಿಸಿದ್ದರು. ಆದರೆ, ಬೊಮ್ಮಾಯಿ ಅವರು ಮಾತನಾಡಿಲ್ಲ. ಸಿ.ಟಿ. ರವಿ, ಆರ್‌. ಅಶೋಕ್‌ ಅವರು ಕರೆಸಿಕೊಂಡು ಮಾತನಾಡಿದರೂ ಸೋಮಶೇಖರ್‌ ಅವರು ತಮ್ಮ ಸಮಸ್ಯೆ ಹೇಳಿಕೊಂಡಿದ್ದಾರೆ ಹೊರತು ಸಾಂತ್ವನ ಸಿಕ್ಕಿಲ್ಲ ಎನ್ನಲಾಗಿದೆ.

ಇದರ ನಡುವೆ ಸೋಮಶೇಖರ್‌ ಅವರು ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿ ಮಾಡಿದ್ದರು. ಮತ್ತು ಅವರ ಕ್ಷೇತ್ರಕ್ಕೆ ದೊಡ್ಡ ಮೊತ್ತದ ಅನುದಾನವನ್ನು ಪಡೆದುಕೊಂಡು ಬಂದಿದ್ದರು. ಇದೆಲ್ಲವೂ ಸೋಮಶೇಖರ್‌ ಅವರು ಕಾಂಗ್ರೆಸ್‌ಗೆ ಹೋಗುವ ಸಂದೇಶ ಎಂಬಂತೆ ವಿಶ್ಲೇಷಿಸಲಾಗುತ್ತಿದೆ.

ಇದೀಗ ತಮ್ಮ ಕ್ಷೇತ್ರದಲ್ಲಿ ಡಿ.ಕೆ. ಶಿವಕುಮಾರ್‌ ಅವರಿಗೆ ಸಂಬಂಧಿಸಿದ ಸಂಘಟನೆಗಳು ಆಯೋಜಿಸಿರುವ ಜನಸ್ಪಂದನ ಕಾರ್ಯಕರ್ಮದಲ್ಲಿ ಎಸ್‌ಟಿ ಸೋಮಶೇಖರ್‌ ಭಾಗವಹಿಸುತ್ತಿರುವುದು ಭಾರಿ ಸದ್ದು ಮಾಡಿದೆ.

ಇದನ್ನೂ ಓದಿ: Operation Hasta : ಮೋದಿ ಬಂದ್ರೂ ಬರಲಿಲ್ಲ ಸೋಮಶೇಖರ್‌, ಸಿಎಂ ಭೇಟಿಯಾದ್ರು ಶಿವರಾಂ ಹೆಬ್ಬಾರ್‌! ಏನಾಗ್ತಿದೆ?

ಸಿದ್ದರಾಮಯ್ಯ ಭೇಟಿ ಮಾಡಿದ ಶಿವರಾಮ್‌ ಹೆಬ್ಬಾರ್‌

ಈ ನಡುವೆ, ಆಪರೇಷನ್‌ ಹಸ್ತದ ಸುಳಿಗೆ ಸಿಲುಕಿದ್ದಾರೆ ಎಂದು ಹೇಳಲಾದ ಇನ್ನೊಬ್ಬ ಶಾಸಕ ಶಿವರಾಮ ಹೆಬ್ಬಾರ್‌ ಅವರು ಕೂಡಾ ಶನಿವಾರ ಸಿಎಂ ಸಿದ್ದರಾಮಯ್ಯ ಅವರನ್ನು ಭೇಟಿಯಾಗಿ ಮಾತುಕತೆ ನಡೆಸಿದ್ದಾರೆ. ಅವರು ಬರ ಘೋಷಣೆ ಮತ್ತು ಪರಿಹಾರದ ಬೇಡಿಕೆಯನ್ನು ಇಟ್ಟುಕೊಂಡು ಹೋಗಿದ್ದಾರಾದರೂ, ನಿಜವಾದ ಉದ್ದೇಶ ಅದಲ್ಲ ಎನ್ನಲಾಗುತ್ತಿದೆ.

Continue Reading
Advertisement
Gold Rate
ಚಿನ್ನದ ದರ6 mins ago

Gold Rate Today: ಚಿನ್ನದ ಬೆಲೆಯಲ್ಲಿ ಏರಿಕೆ; ಇಷ್ಟಿದೆ ಇಂದಿನ ದರ

A Raja Controversy
ರಾಜಕೀಯ11 mins ago

A Raja controversy : ಭಾರತ ಒಂದು ದೇಶವೇ ಅಲ್ಲ, ರಾಮ ದೇವರೇ ಅಲ್ಲ ಎಂದ ಡಿಎಂಕೆ ಸಂಸದ ಎ. ರಾಜಾ

ED case Money laundering case quashed Supreme Court gives big relief to DK Shivakumar
ರಾಜಕೀಯ26 mins ago

ED Case: ಅಕ್ರಮ ಹಣ ವರ್ಗಾವಣೆ ಕೇಸ್ ರದ್ದು ಮಾಡಿದ ಸುಪ್ರೀಂ ಕೋರ್ಟ್‌; ಡಿ.ಕೆ. ಶಿವಕುಮಾರ್​​ಗೆ ಬಿಗ್ ರಿಲೀಫ್

Man deaed in train collision in Mysuru
ಮೈಸೂರು31 mins ago

Mysuru News : ಪತ್ನಿ ಜತೆಗೆ ವಿಡಿಯೊ ಕಾಲ್‌; ಮಾತಲ್ಲಿ ಮೈಮರೆತಾಗ ಬಡಿಯಿತು ರೈಲು

GN saibaba
ದೇಶ41 mins ago

Maoist Links Case: ಮಾವೋವಾದಿಗಳೊಂದಿಗೆ ನಂಟು ಪ್ರಕರಣ; ಸಾಯಿಬಾಬಾ, ಇತರ ಐವರನ್ನು ದೋಷಮುಕ್ತಗೊಳಿಸಿದ ಕೋರ್ಟ್‌

Sedition Case We have collected voice samples of accused DK Shivakumar
ರಾಜಕೀಯ1 hour ago

Sedition Case: ಆರೋಪಿಗಳ ಧ್ವನಿ ಮಾದರಿ ಸಂಗ್ರಹಿಸಿದ್ದೇವೆ; ಮಂಡ್ಯ ಘೋಷಣೆಯನ್ನೂ ತನಿಖೆ ಮಾಡ್ತೇವೆ: ಡಿಕೆಶಿ

R Ashok Bangalore blastNew Project
ರಾಜಕೀಯ1 hour ago

R AShok : ಕರ್ನಾಟಕದಲ್ಲಿ ಪಾಕಿಸ್ತಾನದ ಮಕ್ಕಳು ಹುಟ್ಟಿಕೊಳ್ತಿದ್ದಾರೆ ಎಂದ ಅಶೋಕ್‌

Murder by friends over love affair
ಕಲಬುರಗಿ2 hours ago

Murder Case : ಪ್ರೀತಿ ವಿಚಾರಕ್ಕೆ ಕಿತ್ತಾಟ; ಯುವಕನ ಕೊಲೆಯಲ್ಲಿ ಅಂತ್ಯ

modi
ದೇಶ2 hours ago

Narendra Modi: ತೆಲಂಗಾಣ, ಒಡಿಶಾಕ್ಕೆ ಮೋದಿ ಭೇಟಿ; 26,000 ಕೋಟಿ ರೂ. ಮೌಲ್ಯದ ಯೋಜನೆಗಳಿಗೆ ಚಾಲನೆ

KSRTC to operate special buses for Mahashivratri
ಮಹಾ ಶಿವರಾತ್ರಿ2 hours ago

Maha Shivratri : ಮಹಾಶಿವರಾತ್ರಿಗೆ ಕೆಎಸ್‌ಆರ್‌ಟಿಸಿಯಿಂದ ಸ್ಪೆಷಲ್‌ ಬಸ್‌; ಶೇ.10ರಷ್ಟು ಡಿಸ್ಕೌಂಟ್‌!

Sharmitha Gowda in bikini
ಕಿರುತೆರೆ5 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ5 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ5 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ3 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ5 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ5 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ4 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ3 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ4 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

BJP JDS alliance to finalise seats for Lok Sabha polls this week HD DeveGowda
ರಾಜಕೀಯ21 hours ago

HD Devegowda: ಈ ವಾರದಲ್ಲಿ ಲೋಕಸಭೆಗೆ ಬಿಜೆಪಿ-ಜೆಡಿಎಸ್‌ ಮೈತ್ರಿ ಸೀಟು ಅಂತಿಮ: ಎಚ್‌.ಡಿ. ದೇವೇಗೌಡ

Elephant attacks in Sakaleshpur workers escaped
ಹಾಸನ1 day ago

Elephant Attack : ಆನೆ ಅಟ್ಯಾಕ್‌ಗೆ ಬಾಯಿಗೆ ಬಂತು ಜೀವ; ಜಸ್ಟ್‌ ಎಸ್ಕೇಪ್‌ ಆಗಿದ್ದು ಹೀಗೆ..

dina bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರು ಇಂದು ಗಾಬರಿಯಲ್ಲೇ ದಿನ ಕಳೆಯುವಿರಿ

read your daily horoscope predictions for march 3rd 2024
ಭವಿಷ್ಯ2 days ago

Dina Bhavishya : ಈ ರಾಶಿಯವರು ಆತುರದಲ್ಲಿ ಇಂದು ಈ ನಿರ್ಧಾರವನ್ನು ತೆಗೆದುಕೊಳ್ಳಬೇಡಿ!

Rameswaram cafe bomb blast case Accused caught on CCTV
ಬೆಂಗಳೂರು3 days ago

Blast In Bengaluru: ಸನ್ನೆ ಮಾಡಿ ಪೊಲೀಸರಿಗೆ ಶಂಕಿತನ ಚಾಲೆಂಜ್! ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಏನು

Rameswaram Cafe Blast Suspected travels in BMTC Volvo bus
ಬೆಂಗಳೂರು3 days ago

Blast In Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ವೋಲ್ವೋ ಬಸ್‌ನಲ್ಲಿ ಬಾಂಬರ್ ಸಂಚಾರ, ಸಿಸಿಟಿವಿಯಲ್ಲಿ ಸೆರೆ

Blast in Bengaluru Time bomb planted in rameshwaram cafe Important evidence found
ಬೆಂಗಳೂರು4 days ago

Blast in Bengaluru: ರಾಮೇಶ್ವರಂ ಕೆಫೆ ಬ್ಲಾಸ್ಟ್‌; ಹೋಟೆಲ್‌ನಲ್ಲಿಟ್ಟಿದ್ದು ಟೈಂ ಬಾಂಬ್‌? ಸಿಕ್ಕಿದೆ ಮಹತ್ವದ ಸಾಕ್ಷ್ಯ

rameshwaram cafe bengaluru incident
ಬೆಂಗಳೂರು4 days ago

Blast in Bengaluru : ರಾಮೇಶ್ವರಂ ಕೆಫೆ ಸ್ಫೋಟದ ಸ್ಥಳದಲ್ಲಿ ಬ್ಯಾಟರಿ ಪತ್ತೆ!

Elephants spotted in many places
ಹಾಸನ4 days ago

Elephant Attack: ಹಾಸನ, ರಾಮನಗರ, ಮೈಸೂರಲ್ಲಿ ಆನೆ ಬೇನೆ; ಬೆಳಗಾವಿಯಲ್ಲಿ ಬಿಂದಾಸ್‌ ಓಡಾಟ

read your daily horoscope predictions for march 1st 2024
ಭವಿಷ್ಯ4 days ago

Dina Bhavishya : ಈ ರಾಶಿಯವರು ಪ್ರಮುಖ ಜನರೊಡನೆ ವ್ಯವಹರಿಸುವಾಗ ಎಚ್ಚರಿಕೆಯಿಂದ ಮಾತನಾಡಿ

ಟ್ರೆಂಡಿಂಗ್‌