ಮುಂಬಯಿ: ಕಳೆದ ಎರಡು ಆವೃತ್ತಿಗಳಲ್ಲಿಯೂ ಮುಂಬೈ ಇಂಡಿಯನ್ಸ್ ತಂಡದ ಭಾಗವಾಗಿದ್ದ ಟೀಮ್ ಇಂಡಿಯಾದ ಮಾಜಿ ಕ್ರಿಕೆಟಿಗ ಸಚಿನ್ ತೆಂಡೂಲ್ಕರ್(Sachin Tendulkar) ಅವರ ಪುತ್ರ ಅರ್ಜುನ್ ತೆಂಡೂಲ್ಕರ್ಗೆ(Arjun Tendulkar ಆಡುವ ಅವಕಾಶ ಸಿಕ್ಕಿರಲಿಲ್ಲ. ಆದರೆ ಈ ಬಾರಿ ಅವರು ಐಪಿಎಲ್(IPL 2023) ಪದಾರ್ಪಣೆ ಮಾಡುವ ಸಾಧ್ಯತೆ ಇದೆ ಎಂದು ತಿಳಿದುಬಂದಿದೆ.
ರಣಜಿ ಟ್ರೋಫಿ ಕ್ರಿಕೆಟ್ನಲ್ಲಿ ಉತ್ತಮ ಪ್ರದರ್ಶನ ತೋರಿದ ಕಾರಣ ಅರ್ಜುನ್ ತೆಂಡೂಲ್ಕರ್ಗೆ ಈ ಬಾರಿ ಐಪಿಎಲ್‌ನಲ್ಲಿ ಮುಂಬೈ ತಂಡದ ಪರ ಆಡುವ ಅವಕಾಶ ಸಿಗಲಿದೆ ಎನ್ನಲಾಗುತ್ತಿದೆ. ಅವರು ಈ ಗೋವಾ ಪರ ಪದಾರ್ಪಣ ಪಂದ್ಯದಲ್ಲೇ ಶತಕ ಬಾರಿಸುವ ಮೂಲಕ ತಂದೆ ಸಚಿನ್ ಅವರ ದಾಖಲೆಯನ್ನು ಸರಿಗಟ್ಟಿದ್ದರು. ಇದುವರೆಗೆ 7 ಪ್ರಥಮ ದರ್ಜೆ ಪಂದ್ಯಗಳನ್ನು ಆಡಿದ ಅವರು 12 ವಿಕೆಟ್‌ಗಳ ಜತೆಗೆ 233 ರನ್ ಗಳಿಸಿದ್ದಾರೆ.
ಕಳೆದ ವರ್ಷ ಮೆಗಾ ಹರಾಜಿನಲ್ಲಿ 30 ಲಕ್ಷಕ್ಕೆ ಬಿಡ್ ಮಾಡುವ ಮೂಲಕ ಅರ್ಜುನ್ ತೆಂಡೂಲ್ಕರ್ ಅವರನ್ನು ಮುಂಬೈ ಇಂಡಿಯನ್ಸ್ ತಂಡ ರೀಟೈನ್ ಮಾಡಿತ್ತು. ಈ ಹಿಂದೆ 2021ರಲ್ಲಿ ಮುಂಬೈ ತಂಡವು ಅವರನ್ನು 20 ಲಕ್ಷ ರೂ. ಮೂಲ ಬೆಲೆಗೆ ಖರೀದಿಸಿತ್ತು. ಬೆನ್ನು ನೋವಿನ ಶಸ್ತ್ರಚಿಕಿತ್ಸೆಗೆ ಒಳಗಾದ ಕಾರಣ ಜಸ್ಪ್ರೀತ್ ಬುಮ್ರಾ ಕೂಡ ತಂಡದಲ್ಲಿಲ್ಲ. ಹೀಹಾಗಿ ಕ್ಯಾಮರೂನ್ ಗ್ರೀನ್ ಜತೆಗೆ ಅರ್ಜುನ್ ಕೆಳ ಕ್ರಮಾಂಕದಲ್ಲಿ ಬ್ಯಾಟ್ಸ್‌ಮನ್ ಮತ್ತು ಬೌಲರ್ ಆಗಿ ಕಾಣಿಸಿಕೊಳ್ಳುವ ಸಾಧ್ಯತೆ ಇದೆ.
ಇದನ್ನೂ ಓದಿ IPL 2023: ಗೆಳೆಯ ಕೊಹ್ಲಿ ಬಗ್ಗೆ ಸ್ಫೋಟಕ ಹೇಳಿಕೆ ನೀಡಿದ ಎಬಿಡಿ; ವಿಡಿಯೊ ವೈರಲ್
ಒಟ್ಟು 5 ಬಾರಿಯ ಐಪಿಎಲ್ ಚಾಂಪಿಯನ್ ತಂಡವಾದ ಮುಂಬೈ ಇಂಡಿಯನ್ಸ್ ಕಳದೆ ಆವೃತ್ತಿಯಲ್ಲಿ ಅತ್ಯಂತ ಕಳಪೆ ಪ್ರದರ್ಶನ ತೋರಿತ್ತು. ಕಳೆದ ಬಾರಿ 14 ಪಂದ್ಯದಲ್ಲಿ ಕೇವಲ 4 ಪಂದ್ಯಗಳಲ್ಲಿ ಗೆಲುವು ಸಾಧಿಸಿ ಅಭಿಮಾನಿಗಳಿಗೆ ನಿರಾಸೆ ಉಂಟುಮಾಡಿತ್ತು. ಆದರೆ ಈ ಬಾರಿ ಮತ್ತೆ ಕಪ್ ಗೆಲ್ಲುವ ಯೋಜನೆಯಲ್ಲಿದೆ ರೋಹಿತ್ ಪಡೆ. ಮುಂಬೈ ತಂಡ ಈ ಬಾರಿ ತನ್ನ ಅಭಿಯಾನವನ್ನು ಆರ್ಸಿಬಿ ವಿರುದ್ಧ ಆಡುವ ಮೂಲಕ ಪ್ರಾರಂಭಿಸಲಿದೆ. ಈ ಪಂದ್ಯ ಏಪ್ರಿಲ್ 2 ಭಾನುವಾರ ನಡೆಯಲಿದೆ.