ಕೋಲ್ಕೊತಾ: ತವರಿನಲ್ಲಿ ಮುಂಬೈ ಇಂಡಿಯನ್ಸ್ ವಿರುದ್ಧ ನಡೆದಿದ್ದ ಮೊದಲ ಪಂದ್ಯದಲ್ಲಿ ಭರ್ಜರಿ ಗೆಲುವು ಸಾಧಿಸಿ ಬೀಗಿದ್ದ ಆರ್ಸಿಬಿ(Royal Challengers Bangalore), ಗುರುವಾರದ ಐಪಿಎಲ್ನ 9ನೇ(IPL 2023) ಪಂದ್ಯದಲ್ಲಿ ಕೋಲ್ಕತಾ ನೈಟ್ ರೈಡರ್(Kolkata Knight Riders) ವಿರುದ್ಧ ಟಾಸ್ ಗೆದ್ದು ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡಿದೆ.
ಆರ್ಸಿಬಿ ತಂಡದಲ್ಲಿ ಒಂದು ಬದಲಾವಣೆ ಕಂಡುಬಂದಿದೆ. ಮುಂಬೈ ಇಂಡಿಯನ್ಸ್ ವಿರುದ್ಧ ಕಳೆದ ಭಾನುವಾರ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆದ ಪಂದ್ಯದಲ್ಲಿ ಫೀಲ್ಡಿಂಗ್ ವೇಳೆ ಭುಜಕ್ಕೆ ಗಾಯ ಮಾಡಿಕೊಂಡಿದ್ದ ರೀಸ್ ಟಾಪ್ಲಿ(Reece Topley) ಬದಲು ಈ ಪಂದ್ಯದಲ್ಲಿ ಡೇವಿಡ್ ವಿಲ್ಲಿ ಕಣಕ್ಕಿಳಿದರು.
ಪಿಚ್ ರಿಪೋರ್ಟ್
ಈಡನ್ ಗಾರ್ಡನ್ಸ್‌ನ(Eden Gardens) ಪಿಚ್ ಸೀಮರ್‌ಗಳಿಗೆ ನೆರವು ನೀಡುವ ಸಾಧ್ಯತೆ ಇದೆ. ಇಲ್ಲಿ ಚೇಸಿಂಗ್ ನಡೆಸುವ ತಂಡಕ್ಕೆ ಹೆಚ್ಚಿನ ಅವಕಾಶ ಏಕೆಂದರೆ ರಾತ್ರಿಯ ವೇಳೆ ಇಲ್ಲಿ ಇಬ್ಬಿನಿ ಸಮಸ್ಯೆ ಕಾಡಲಿದೆ. ಇದು ಬೌಲರ್ಗಳಿಗೆ ಕಷ್ಟಕರವಾಗಲಿದೆ. ಹೀಗಾಗಿ ಡು ಪ್ಲೆಸಿಸ್ ಮೊದಲು ಬೌಲಿಂಗ್ ಆಯ್ಕೆ ಮಾಡಿಕೊಂಡರು.
2017ರಲ್ಲಿ ಕೆಕೆಆರ್ ವಿರುದ್ಧ ಇಲ್ಲಿ ನಡೆದ ಪಂದ್ಯದಲ್ಲಿ ಆರ್ಸಿಬಿ ಕೇವಲ 49 ರನ್ಗಳಿಗೆ ಆಲೌಟ್ ಆಗಿತ್ತು. ಈ ವರೆಗೆ ಆರ್ಸಿಬಿ ಮತ್ತು ಕೆಕೆಆರ್ ಐಪಿಎಲ್ನಲ್ಲಿ 30 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಆರ್ಸಿಬಿ 14 ಗೆಲುವು ಕೆಕೆಆರ್ 16 ಪಂದ್ಯಗಳಲ್ಲಿ ಮೇಲುಗೈ ಸಾಧಿಸಿದೆ. ಬಲಾಬಲದ ಲೆಕ್ಕಾಚಾರದಲ್ಲಿ ಕೆಕೆಆರ್ ಮುಂದಿದೆ. ಆದರೆ ಈ ಬಾರಿ ಕೆಕೆಆರ್ ಪರ ಹೇಳಿಕೊಳ್ಳುವಂತಹ ಸ್ಟಾರ್ ಆಟಗಾರರು ಕಾಣಿಸಿಕೊಂಡಿಲ್ಲ. ಆರ್ಸಿಬಿ ಪರ ನಾಯಕ ಡು ಪ್ಲೆಸಿಸ್ ಮತ್ತು ವಿರಾಟ್ ಕೊಹ್ಲಿ ಪ್ರಚಂಡ ಬ್ಯಾಟಿಂಗ್ ಫಾರ್ಮ್ನಲ್ಲಿದ್ದಾರೆ.
ಇದನ್ನೂ ಓದಿ IPL 2023: ಆರ್ಸಿಬಿ ಈ ಬಾರಿಯೂ ಕಪ್ ಗೆಲ್ಲಲ್ಲ; ಎಬಿಡಿ ವಿಲಿಯರ್ಸ್ ಅಚ್ಚರಿಯ ಹೇಳಿಕೆ
ರಸೆಲ್ ಮೇಲೆ ವಿಶೇಷ ನಿಗಾ ಅಗತ್ಯ
ಆರ್ಸಿಬಿ ವಿರುದ್ಧ ಉತ್ತಮ ರೆಕಾರ್ಡ್ ಹೊಂದಿರುವ ಆ್ಯಂಡ್ರೆ ರಸೆಲ್ ಮತ್ತು ಸುನೀಲ್ ನಾರಾಯಣ್ ಅವರು ಈ ಪಂದ್ಯದಲ್ಲಿಯೂ ತಮ್ಮ ಹಳೇಯ ಪ್ರದರ್ಶನ ತೋರ್ಪಡಿಸಿದ್ದಲ್ಲಿ ತಂಡಕ್ಕೆ ಗೆಲುವು ಖಚಿತ ಎನ್ನಲಡ್ಡಿಯಿಲ್ಲ. ರಸೆಲ್ ಅವರಂತು ಆರ್ಸಿಬಿ ವಿರುದ್ಧ ಸೇಡಿನ ಪಂದ್ಯದಂತೆ ಬ್ಯಾಟಿಂಗ್ ನಡೆಸುತ್ತಾರೆ. ಈ ಹಿಂದೆ ಹಲವು ಪಂದ್ಯಗಳಲ್ಲಿ ತಮ್ಮ ಸ್ಫೋಟಕ ಬ್ಯಾಟಿಂಗ್ ಮೂಲಕ ಆರ್ಸಿಬಿ ಗೆಲುವನ್ನು ಕಸಿದಿದ್ದಾರೆ. ಹೀಗಾಗಿ ಆರ್ಸಿಬಿ ಬೌಲರ್ಗಳು ಇವರ ಮೇಲೆ ಒಂದು ನಿಗಾ ಇರಿಸುವುದು ಅತ್ಯಗತ್ಯ.
ಸಂಭಾವ್ಯ ತಂಡಗಳು
ರಾಯಲ್ ಚಾಲೆಂಜರ್ಸ್ ಬೆಂಗಳೂರು: ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಸುಯಶ್ ಪ್ರಭುದೇಸಾಯಿ, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಗ್ಲೆನ್ ಮ್ಯಾಕ್ಸ್‌ವೆಲ್, ವನಿಂದು ಹಸರಂಗ, ಶಾಬಾಜ್ ಅಹ್ಮದ್, ಹರ್ಷಲ್ ಪಟೇಲ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಮಹಿಪಾಲ್ ಲೊಮ್ರೊರ್, ಮೊಹಮ್ಮದ್ ಸಿರಾಜ್, ಜೋಶ್ ಹ್ಯಾಜಲ್‌ವುಡ್, ಸಿದ್ಧಾರ್ಥ್ ಕೌಲ್, ಆಕಾಶದೀಪ್, ರೀಸ್ ಟಾಪ್ಲಿ, ಹಿಮಾಂಶು ಶರ್ಮಾ, ಮಿಚೆಲ್ ಬ್ರೇಸ್‌ವೆಲ್.
ಕೋಲ್ಕತ್ತಾ ನೈಟ್ ರೈಡರ್ಸ್: ನಿತೀಶ್ ರಾಣಾ (ನಾಯಕ), ರೆಹಮಾನುಲ್ಲಾ ಗುರ್ಬಾಜ್, ವೆಂಕಟೇಶ್ ಅಯ್ಯರ್, ಆ್ಯಂಡ್ರೆ ರಸೆಲ್, ಸುನೀಲ್ ನಾರಾಯಣ, ಶಾರ್ದೂಲ್ ಠಾಕೂರ್, ಲಾಕಿ ಫರ್ಗ್ಯುಸನ್, ಉಮೇಶ್ ಯಾದವ್, ಟಿಮ್ ಸೌಥಿ, ಹರ್ಷಿತ್ ರಾಣಾ, ವರುಣ್ ಚಕ್ರವರ್ತಿ, ಅನುಕೂಲ್ ರಾಯ್, ರಿಂಕು ಸಿಂಗ್, ಎನ್. ಜಗದೀಶನ್, ವೈಭವ್ ಅರೋರಾ, ಸುಯಶ್ ಶರ್ಮಾ. ಡೇವಿಡ್ ವೀಸ್, ಕುಲವಂತ್ ಖೆಜರೊಲಿಯಾ, ಲಿಟನ್ ದಾಸ್, ಮನ್ದೀಪ್ ಸಿಂಗ್.