Site icon Vistara News

IPL 2023: ಆರ್​ಸಿಬಿ ವಿರುದ್ಧ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಚೆನ್ನೈ ಸೂಪರ್​ ಕಿಂಗ್ಸ್​

Royal Challengers Bangalore vs Chennai Super Kings

Royal Challengers Bangalore vs Chennai Super Kings

ಬೆಂಗಳೂರು: ಚೆನ್ನೈ ಸೂಪರ್​ ಕಿಂಗ್ಸ್​ ವಿರುದ್ಧ ಟಾಸ್​ ಗೆದ್ದ ರಾಯಲ್​ ಚಾಲೆಂಜರ್ಸ್​ ಬೆಂಗಳೂರು ತಂಡದ ನಾಯಕ ಫಾಫ್​ ಡು ಪ್ಲೆಸಿಸ್​ ಬೌಲಿಂಗ್​ ಆಯ್ಕೆ ಮಾಡಿಕೊಂಡಿದ್ದಾರೆ. ಟಾಸ್​ ಸೋತ ಚೆನ್ನೈ ಮೊದಲು ಬ್ಯಾಟಿಂಗ್ ನಡೆಸಲಿದೆ.​

ಪಿಚ್​ ರಿಪೋರ್ಟ್​

ಚಿನ್ನಸ್ವಾಮಿ ಸ್ಟೇಡಿಯಂನ ಪಿಚ್​ ಬ್ಯಾಟಿಂಗ್​ಗೆ ಹೇಳಿ ಮಾಡಿಸಿದಂತೆ. ಇದು​ ಸಂಪೂರ್ಣ ಬ್ಯಾಟಿಂಗ್​​ ಸ್ನೇಹಿ ಪಿಚ್​ ಎನ್ನುವುದರಲ್ಲಿ ಯಾವುದೇ ಅನುಮಾನ ಬೇಡ. ಇಲ್ಲಿ ಬೌಂಡರಿ ಗೆರೆ ಕೂಡ ಅಂತ್ಯಂತ ಸಮೀಪವಿರುವ ಕಾರಣ ಬ್ಯಾಟರ್​ಗಳು ಯಾವುದೇ ಒತ್ತಡವಿಲ್ಲದೆ ಬ್ಯಾಟ್​ ಬೀಸಬಹುದಾಗಿದೆ. ಆದರೆ ಬೌಲರ್​ಗಳು ಮಾತ್ರ ಶಕ್ತಿ ಮೀರಿ ಪ್ರಯತ್ನ ತೋರಬೇಕಿದೆ.

ಆರ್​ಸಿಬಿ ವಿರುದ್ಧ ಧೋನಿ ಉತ್ತಮ ದಾಖಲೆ ಹೊಂದಿದ್ದಾರೆ. ಚಿನ್ನಸ್ವಾಮಿಯಲ್ಲೇ ಧೋನಿ ಈ ಹಿಂದೊಮ್ಮೆ ಆಡಿದ ಪಂದ್ಯವೊಂದರಲ್ಲಿ ಮೈದಾನದಿಂದ ಹೊರಕ್ಕೆ ಸಿಕ್ಸರ್​ ಬಾರಿಸಿ ಮಿಂಚಿದ್ದರು. ಉಭಯ ತಂಡಗಳು ಇದುವರೆಗೆ ಐಪಿಎಲ್​ನಲ್ಲಿ 30 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಚೆನ್ನೈ 19 ಪಂದ್ಯಗಳನ್ನು ಗೆದ್ದಿದೆ. ಆರ್​ಸಿಬಿ 10 ಪಂದ್ಯಗಳಲ್ಲಿ ಜಯ ಸಾಧಿಸಿದೆ. ಒಂದು ಪಂದ್ಯ ಫಲಿತಾಂಶ ಕಂಡಿಲ್ಲ.

ಧೋನಿ ಅವರು ಆರ್​ಸಿಬಿ ವಿರುದ್ಧ ಅತಿ ಹೆಚ್ಚು ಸಿಕ್ಸರ್​ ಬಾರಿಸಿದ ದಾಖಲೆ ಹೊಂದಿದ್ದಾರೆ. ಅವರು ಇದುವರೆಗೆ 46 ಸಿಕ್ಸರ್​ ಬಾರಿಸಿದ್ದಾರೆ. 2019ರಲ್ಲಿ ಮೊಹಮ್ಮದ್​ ಸಿರಾಜ್​ ಅವರ ಓವರ್​ನಲ್ಲಿ ಸತತ ಸಿಕ್ಸರ್​ ಮತ್ತು ಬೌಂಡರಿ ಬಾರಿಸಿ 25ಕ್ಕು ಹೆಚ್ಚು ರನ್​ ಪೇರಿಸಿ ಸಿರಾಜ್​ ಅವರನ್ನು ಬೆಂಡೆತ್ತಿದ್ದರು. ಆದರೆ ಇದೀಗ ಸಿರಾಜ್​ ವಿಶ್ವ ದರ್ಜೆಯ ಶ್ರೇಷ್ಠ ಬೌಲರ್​ಗಳಲ್ಲಿ ಒಬ್ಬರಾಗಿ ಬೆಳೆದು ನಿಂತ್ತಿದ್ದಾರೆ.

ಇದನ್ನೂ ಒದಿ IPL 2023: ಐಪಿಎಲ್​ಗೆ ಪದಾರ್ಪಣೆ ಮಾಡಿದ ಸಚಿನ್ ಪುತ್ರ ಅರ್ಜುನ್​ ತೆಂಡೂಲ್ಕರ್​

ಸಂಭಾವ್ಯ ತಂಡಗಳು

ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೆ, ಅಜಿಂಕ್ಯ ರಹಾನೆ, ಮೊಹಮ್ಮದ್ ಅಲಿ, ರವೀಂದ್ರ ಜಡೇಜಾ, ಶಿವಂ ದುಬೆ, ಮಿಚೆಲ್ ಸ್ಯಾಂಟ್ನರ್/ ಮಹೀಶ್‌ ತೀಕ್ಷಣ, ಸಿಸಂಡ ಮಗಾಲ, ಎಂ.ಎಸ್ ಧೋನಿ(ನಾಯಕ), ಎಸ್ ಹಂಗರ್ಗೇಕರ್, ತುಷಾರ್ ದೇಶಪಾಂಡೆ.

ಆರ್​ಸಿಬಿ: ಆರ್​ಸಿಬಿ: ವಿರಾಟ್ ಕೊಹ್ಲಿ, ಫಾಫ್ ಡು ಪ್ಲೆಸಿಸ್ (ನಾಯಕ), ಗ್ಲೆನ್ ಮ್ಯಾಕ್ಸ್‌ವೆಲ್, ದಿನೇಶ್ ಕಾರ್ತಿಕ್ (ವಿಕೆಟ್ ಕೀಪರ್), ಸುಯೇಶ್ ಪ್ರಭುದೇಸಾಯಿ, ಶಹಬಾಜ್ ಅಹ್ಮದ್, ವನಿಂದು ಹಸರಂಗ / ಮೈಕಲ್ ಬ್ರೆಸ್‌ವೆಲ್, ಡೇವಿಡ್ ವಿಲ್ಲಿ, ಕರ್ಣ್ ಶರ್ಮಾ, ಆಕಾಶ್ ದೀಪ್, ಮೊಹಮ್ಮದ್ ಸಿರಾಜ್.

Exit mobile version