Site icon Vistara News

IPL 2023: ಚೆನ್ನೈ ಸೂಪರ್​ ಕಿಂಗ್ಸ್​ ಮತ್ತು ಲಕ್ನೋ ಸೂಪರ್‌ ಜೈಂಟ್ಸ್‌ ಪಂದ್ಯದ ಪಿಚ್​ ರಿಪೋರ್ಟ್​

IPL 2023: Chennai Super Kings vs Lucknow Super Giants Match Pitch Report

IPL 2023: Chennai Super Kings vs Lucknow Super Giants Match Pitch Report

ಚೆನ್ನೈ: ಈ ಬಾರಿಯ ಐಪಿಎಲ್‌ನ(IPL 2023) ಆರಂಭಿಕ ಪಂದ್ಯದಲ್ಲಿ ಹಾಲಿ ಚಾಂಪಿಯನ್‌ ಗುಜರಾತ್‌ ಕೈಯಲ್ಲಿ ಸೋಲು ಕಂಡಿದ್ದ ಚೆನ್ನೈ ಸೂಪರ್‌ ಕಿಂಗ್ಸ್‌ ತಂಡವು ಸೋಮವಾರ ತನ್ನ ತವರಿನಲ್ಲಿ ನಡೆಯುವ ಪಂದ್ಯದಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ತಂಡವನ್ನು ಎದುರಿಸಲಿದ್ದು ಗೆಲುವಿನ ನಿರೀಕ್ಷೆಯಲ್ಲಿದೆ. ಇನ್ನೊಂದೆಡೆ ಡೆಲ್ಲಿ ವಿರುದ್ಧ ಭರ್ಜರಿ ಗೆಲ್ಲುವು ಸಾಧಿಸಿ ಶುಭಾರಂಭ ಕಂಡಿರುವ ರಾಹುಲ್​ (kl rahul)ಪಡೆ ಈ ಪಂದ್ಯದಲ್ಲಿಯೂ ಗೆಲುವಿನ ನಾಗಲೋಟ ಮುಂದುವರಿಸುವ ಯೋಜನೆಯಲ್ಲಿದೆ. ಹೀಗಾಗಿ ಈ ಪಂದ್ಯ ರೋಚಕವಾಗಿ ಸಾಗುವ ನಿರೀಕ್ಷೆ ಇದೆ. ಈ ಪಂದ್ಯದ ಪಿಚ್​ ರಿಪೋರ್ಟ್​ ಮತ್ತು ಸಂಭಾವ್ಯ ತಂಡದ ಮಾಹಿತಿ ಇಂತಿದೆ.

ಪಿಚ್​ ರಿಪೋರ್ಟ್​

ಚೆನ್ನೈಯ ಎಂ.ಎ. ಚಿದಂಬರಂ ಸ್ಟೇಡಿಯಂನ ಪಿಚ್​ ಸಂಪೂರ್ಣ ಬ್ಯಾಟಿಂಗ್​ ಸ್ನೇಹಿಯಾಗಿದೆ. ಇಲ್ಲಿ ಆಡಿದ ಎಲ್ಲ ಬಹುತೇಕ ಪಂದ್ಯಗಳಲ್ಲಿ ದೊಡ್ಡ ಮೊತ್ತ ದಾಖಲಾಗಿದೆ. 5 ಪಂದ್ಯಗಳಲ್ಲಿ 200ರನ್​ಗಳ ಗಡಿ ದಾಟಿದೆ. ಹೀಗಾಗಿ ಈ ಪಂದ್ಯದಲ್ಲಿಯೂ ದೊಡ್ಡ ಮೊತ್ತ ದಾಖಲಾಗುವ ಸಾಧ್ಯತೆ ಇದೆ. ಇಲ್ಲಿ ಧೋನಿ(ms dhoni) ಅವರು ಅತ್ಯಧಿಕ ಮೊತ್ತ ಗಳಿಸಿದ ಸಾಧನೆ ಮಾಡಿದ್ದಾರೆ. ಇದುವರೆಗೆ ಈ ಮೈದಾನದಲ್ಲಿ ಧೋನಿ 1,363 ರನ್​ ಬಾರಿಸಿದ್ದಾರೆ. ರಾಹುಲ್​ ದಾಖಲೆಯೂ ಇಲ್ಲಿ ಉತ್ತಮವಾಗಿದೆ. ಏಕದಿನ ಕ್ರಿಕೆಟ್​ನಲ್ಲಿ ರಾಹುಲ್​ ಇಲ್ಲಿ ಶತಕ ಬಾರಿಸಿ ಮಿಂಚಿದ್ದರು. ಬೌಲಿಂಗ್​ನಲ್ಲಿ ನೋಡುವುದಾದರೆ ರವೀಂದ್ರ ಜಡೇಜಾ(19) ವಿಕೆಟ್​ ಕಿತ್ತಿದ್ದಾರೆ.

ಇದನ್ನೂ ಓದಿ IPL 2023: ಟಿ20 ಕ್ರಿಕೆಟ್​ನಲ್ಲಿ ವಿಶೇಷ ದಾಖಲೆ ಬರೆದ ಯಜುವೇಂದ್ರ ಚಾಹಲ್

ರಾಹುಲ್​ ಸಾರಥ್ಯದ ಲಕ್ನೋ ಸೂಪರ್‌ ಜೈಂಟ್ಸ್‌ ತಂಡ ಚೆನ್ನೈ ವಿರುದ್ಧ ಒಂದು ಪಂದ್ಯ ಆಡಿದೆ. ಇದರಲ್ಲಿ ಲಕ್ನೋ ಸೂಪರ್‌ ಜೈಂಟ್ಸ್‌ ಗೆಲುವು ಸಾಧಿಸಿತ್ತು. ಉಭಯ ತಂಡಗಳ ಈ ಮೇಲಾಟ ದೊಡ್ಡ ಮತ್ತಕ್ಕೆ ಸಾಕ್ಷಿಯಾಗಿತ್ತು. ಮೊದಲು ಬ್ಯಾಟಿಂಗ್​ ನಡೆಸಿದ್ದ ಚೆನ್ನೈ 210 ರನ್​ ಬಾರಿಸಿತ್ತು. ಗುರಿ ಬೆನ್ನಟ್ಟಿದ ಲಕ್ನೋ ಸೂಪರ್‌ ಜೈಂಟ್ಸ್‌ 211 ರನ್​ ಬಾರಿಸಿ ಗೆಲುವು ದಾಖಲಿಸಿತ್ತು. ಬಲಾಬಲದ ಲೆಕ್ಕಾಚಾರದಲ್ಲಿ ಲಕ್ನೋ ಬಲಿಷ್ಠವಾಗಿದೆ.

ಇದನ್ನೂ ಓದಿ IPL 2023: ಪದಾರ್ಪಣ ಪಂದ್ಯದಲ್ಲೇ ಸ್ಟೇಡಿಯಂನಿಂದ ಹೊರಕ್ಕೆ ಸಿಕ್ಸರ್​ ಬಾರಿಸಿದ ವಧೇರಾ; ವಿಡಿಯೊ ವೈರಲ್​

ಸಂಭಾವ್ಯ ತಂಡ

ಚೆನ್ನೈ ಸೂಪರ್ ಕಿಂಗ್ಸ್ : ಡೆವೋನ್ ಕಾನ್ವೆ, ಋತುರಾಜ್ ಗಾಯಕ್ವಾಡ್, ಮೊಯೀನ್ ಅಲಿ, ಬೆನ್ ಸ್ಟೋಕ್ಸ್, ಅಂಬಟಿ ರಾಯುಡು, ರವೀಂದ್ರ ಜಡೇಜಾ, ಎಂ.ಎಸ್ ಧೋನಿ (ನಾಯಕ), ಶಿವಂ ದುಬೆ, ಮಿಚೆಲ್ ಸ್ಯಾಂಟ್ನರ್​, ದೀಪಕ್ ಚಹರ್, ಆರ್‌.ಎಸ್ ಹಂಗರ್ಗೇಕರ್, ತುಷಾರ್ ದೇಶಪಾಂಡೆ, ಸುಭ್ರಾಂಶು ಸೇನಾಪತಿ, ಶೇಕ್ ರಶೀದ್, ಅಜಿಂಕ್ಯ ರಹಾನೆ, ನಿಶಾಂತ್ ಸಿಂಧು, ಡ್ವೈನ್ ಪ್ರಿಟೋರಿಯಸ್, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ಆಕಾಶ್ ಸಿಂಗ್, ಭಗತ್ ವರ್ಮಾ.

ಲಕ್ನೋ ಸೂಪರ್‌ ಜೈಂಟ್ಸ್‌ : ಕೆ.ಎಲ್ ರಾಹುಲ್ (ನಾಯಕ), ಕೈಲ್​ ಮೇಯರ್ಸ್, ದೀಪಕ್ ಹೂಡಾ, ಕೃನಾಲ್ ಪಾಂಡ್ಯ, ಮಾರ್ಕಸ್ ಸ್ಟೋಯಿನಿಸ್, ನಿಕೋಲಸ್ ಪೂರನ್, ಆಯುಷ್ ಬದೋನಿ, ಮಾರ್ಕ್ ವುಡ್, ಜಯ್​ದೇವ್​ ಉನಾದ್ಕತ್​, ರವಿ ಬಿಷ್ಣೋಯಿ, ಅವೇಶ್ ಖಾನ್, ಕೃಷ್ಣಪ್ಪ ಗೌತಮ್, ಪ್ರೇರಕ್ ಮಂಕಡ್, ಸ್ವಪ್ನಿಲ್ ಸಿಂಗ್, ನವೀನ್-ಉಲ್-ಹಕ್, ಯಶ್ ಠಾಕೂರ್, ಡೇನಿಯಲ್ ಸಾಮ್ಸ್, ರೊಮಾರಿಯೋ ಶೆಫರ್ಡ್, ಯುದ್ವೀರ್ ಸಿಂಗ್ ಚರಕ್, ಮಯಾಂಕ್ ಯಾದವ್, ಅಮಿತ್ ಮಿಶ್ರಾ, ಮನನ್ ವೋಹ್ರಾ.

Exit mobile version