ಚೆನ್ನೈ: ಮಾಜಿ ಚಾಂಪಿಯನ್ಗಳಾದ ರಾಜಸ್ಥಾನ್ ರಾಯಲ್ಸ್ ಮತ್ತು ಚೆನ್ನೈ ಸೂಪರ್ ಕಿಂಗ್ಸ್ ತಂಡಗಳು ಇಂದು(ಬುಧವಾರ ಎಪ್ರಿಲ್ 12) ನಡೆಯುವ ಐಪಿಎಲ್(IPL 2023) ಪಂದ್ಯದಲ್ಲಿ ಹೋರಾಟ ನಡೆಸಲು ಸಜ್ಜಾಗಿದೆ. ಉಭಯ ತಂಡಗಳ ಸಂಭಾವ್ಯ ಆಡುವ ಬಳಗದ ಮತ್ತು ಪಿಚ್ ರಿಪೋರ್ಟ್ ಮಾಹಿತಿ ಇಂತಿದೆ.
ಪಿಚ್ ರಿಪೋರ್ಟ್
ಚೆನ್ನೈನ ಎಂ.ಎ ಚಿದಂಬರಂ ಸ್ಟೇಡಿಯಂ ಸಾಮಾನ್ಯವಾಗಿ ಸ್ಪಿನ್ ಸ್ನೇಹಿಯಾಗಿದೆ. ಆದರೆ ಇಲ್ಲಿ ದೊಡ್ಡ ಮೊತ್ತವನ್ನು ನಿರೀಕ್ಷೆ ಮಾಡಬಹುದು. ಏಕೆಂದರೆ ಇಲ್ಲಿ ಆಡಿದ ಕಳೆದ ಪಂದ್ಯದಲ್ಲಿಯೂ 200 ಪ್ಲಸ್ ಮೊತ್ತ ದಾಖಲಾಗಿತ್ತು. ವೇಗಿಗಳಿಗೆ ಇಲ್ಲಿನ ಪಿಚ್ ಕಡಿಮೆ ಪ್ರಮಾಣದಲ್ಲಿ ನೆರವು ನೀಡುತ್ತದೆ. ಈ ಪಿಚ್‌ನಲ್ಲಿ ಇದುವರೆಗೆ 68 ಪಂದ್ಯಗಳು ನಡೆದಿದ್ದು, 42 ಬಾರಿ ಮೊದಲು ಬ್ಯಾಟಿಂಗ್ ಮಾಡಿದ ತಂಡ ಗೆಲುವು ದಾಖಲಿಸಿದೆ. ಹೀಗಾಗಿ ಟಾಸ್ ಗೆದ್ದ ತಂಡದ ಮೊದಲು ಬ್ಯಾಟಿಂಗ್ ನಡೆಸುವ ಸಾಧ್ಯತೆ ಅಧಿಕ.
ಬಲಾಬಲದ ಲೆಕ್ಕಾಚಾರದಲ್ಲಿ ಉಭಯ ತಂಡಗಳು ಇದುವರೆಗೆ ಐಪಿಎಲ್ನಲ್ಲಿ ಒಟ್ಟು 26 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಚೆನ್ನೈ ಸೂಪರ್ ಕಿಂಗ್ಸ್ 15 ಪಂದ್ಯಗಳಲ್ಲಿ ಗೆದ್ದಿದೆ. ರಾಜಸ್ಥಾನ್ ರಾಯಲ್ಸ್ 11 ಪಂದ್ಯಗಳಲ್ಲಿ ಜಯಿಸಿದೆ. ಈ ಲೆಕ್ಕಾಚಾರದಲ್ಲಿ ಚೆನ್ನೈ ತಂಡ ಬಲಿಷ್ಠವಾಗಿ ಗೋಚರಿಸಿದೆ.
ಇದನ್ನೂ ಓದಿ IPL 2023: ಚೆನ್ನೈ ತಂಡವನ್ನು ಬ್ಯಾನ್ ಮಾಡುವಂತೆ ಸರ್ಕಾರಕ್ಕೆ ಒತ್ತಾಯಿಸಿದ ಶಾಸಕ ವೆಂಕಟೇಶ್ವರನ್
ಸಂಭಾವ್ಯ ತಂಡಗಳು
ಚೆನ್ನೈ ಸೂಪರ್ ಕಿಂಗ್ಸ್: ಋತುರಾಜ್ ಗಾಯಕ್ವಾಡ್, ಡೆವೊನ್ ಕಾನ್ವೆ, ಅಜಿಂಕ್ಯ ರಹಾನೆ, ಮೊಹಮ್ಮದ್ ಅಲಿ, ರವೀಂದ್ರ ಜಡೇಜಾ, ಶಿವಂ ದುಬೆ, ಮಿಚೆಲ್ ಸ್ಯಾಂಟ್ನರ್/ ಮಹೀಶ್ ತೀಕ್ಷಣ, ಸಿಸಂಡ ಮಗಾಲ, ಎಂ.ಎಸ್ ಧೋನಿ(ನಾಯಕ), ಎಸ್ ಹಂಗರ್ಗೇಕರ್, ತುಷಾರ್ ದೇಶಪಾಂಡೆ.
ರಾಜಸ್ಥಾನ್ ರಾಯಲ್ಸ್: ಯಶಸ್ವಿ ಜೈಸ್ವಾಲ್, ಜಾಸ್ ಬಟ್ಲರ್, ಸಂಜು ಸ್ಯಾಮ್ಸನ್, ರಿಯಾನ್ ಪರಾಗ್, ಶಿಮ್ರಾನ್ ಹೆಟ್ಮೆಯರ್, ರವಿಚಂದ್ರನ್ ಅಶ್ವಿನ್, ಜೇಸನ್ ಹೋಲ್ಡರ್, ಡಿ.ಸಿ ಜುರೆಲ್, ಟ್ರೆಂಟ್ ಬೌಲ್ಟ್, ಯಜುವೇಂದ್ರ ಚಾಹಲ್, ಸಂದೀಪ್ ಶರ್ಮಾ.