ಅಹಮದಾಬಾದ್: ನಾಲ್ಕು ಬಾರಿಯ ಐಪಿಎಲ್ ಚಾಂಪಿಯನ್ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ತಂಡಗಳು ಭಾನುವಾರ ಫೈನಲ್ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಈ ಪಂದ್ಯದ ಪಿಚ್ ರಿಪೋರ್ಟ್, ಸಂಭಾವ್ಯ ತಂಡಗಳು ಮತ್ತು ಹವಾಮಾನ ವರದಿಯ ಸಂಪೂರ್ಣ ಮಾಹಿತಿ ಇಂತಿದೆ.
ಮಳೆ ಸಾಧ್ಯತೆ ಅಧಿಕ
ಪೈನಲ್ ಪಂದ್ಯಕ್ಕೆ ಮಳೆ ಸಾಧ್ಯತೆ ಅಧಿಕ ಎಂದು ಹವಾಮಾನ ಇಲಾಖೆ ಈಗಾಗಲೇ ಮುನ್ಸೂಚನೆ ನೀಡಿದೆ. ಕಳೆದ ಕ್ವಾಲಿಫೈಯರ್ ಪಂದ್ಯಕ್ಕೂ ಮಳೆ ಅಡ್ಡಿ ಪಡಿಸಿತ್ತು. ಹೀಗಾಗಿ ಈ ಪಂದ್ಯ ವಿಳಂಬವಾಗಿ ಆರಂಭಗೊಂಡಿತ್ತು. ಇಧಿಗ ಫೈನಲ್ ಪಂದ್ಯದ ವೇಳೆಯೂ ಮಳೆ ಬರುವ ಸಾಧ್ಯತೆ ಇದೆ. ಒಂದೊಂಮ್ಮೆ ಮಳೆಯಿಂದ ಈ ಪಂದ್ಯ ನಡೆಸಲು ಸಾಧ್ಯವಾಗದಿದ್ದರೆ. ಮೇ 29ರ ಮೀಸಲು ದಿನದಂದು ಪಂದ್ಯ ನಡೆಸಲಾಗುತ್ತದೆ.
ಇದನ್ನೂ ಓದಿ IPL 2023: ಐಪಿಎಲ್ನಲ್ಲಿ ಧೋನಿ, ಪಾಂಡ್ಯ ಎಷ್ಟು ಫೈನಲ್ ಆಡಿದ್ದಾರೆ? ಇಲ್ಲಿದೆ ಮಾಹಿತಿ
ಪಿಚ್ ರಿಪೋರ್ಟ್
ಅಹಮದಾಬಾದ್ನ ನರೇಂದ್ರ ಮೋದಿ ಸ್ಟೇಡಿಯಂನ ಪಿಚ್ ಸಂಪೂರ್ಣ ಬ್ಯಾಟಿಂಗ್ ಸ್ನೇಹಿಯಾಗಿದೆ. ಇಲ್ಲಿ 200ರ ಮೊತ್ತಕ್ಕೇನು ಅಡ್ಡಿಯಿಲ್ಲ. ಇದಕ್ಕೆ ಶುಕ್ರವಾರದ ಕ್ವಾಲಿಫೈಯರ್ ಪಂದ್ಯವೇ ಉತ್ತಮ ಸಾಕ್ಷಿ. ಹೀಗಾಗಿ ಇಲ್ಲಿ ಬೌಲರ್ಗಳು ಶಕ್ತಿ ಮೀರಿ ಪ್ರದರ್ಶನ ತೋರಬೇಕಿದೆ. ಸ್ಲೋ ಬೌಲ್ ಎಸೆಯುವ ಬೌಲರ್ಗಳಿಗೆ ಈ ಪಿಚ್ ಹೆಚ್ಚಿನ ನೆರವು ನೀಡುತ್ತದೆ. ಇದೇ ಕಾರಣಕ್ಕೆ ಮುಂಬೈ ವಿರುದ್ಧ ಮೋಹಿತ್ ಶರ್ಮ ಅವರು 5 ವಿಕೆಟ್ ಕಬಳಿಸಲು ಪ್ರಮುಖ ಕಾರಣ. ಸ್ಪಿನ್ ಬೌಲಿಂಗ್ ಅಷ್ಟರ ಮಟ್ಟಿಗೆ ಇಲ್ಲಿ ಯಶಸ್ಸು ಕಾಣುವುದು ಕಷ್ಟ.
ಮುಖಾಮುಖಿ
ಚೆನ್ನೈ ಮತ್ತು ಗುಜರಾತ್ ತಂಡಗಳು ಇದುವರೆಗೆ ಐಪಿಎಲ್ನಲ್ಲಿ 4 ಬಾರಿ ಮುಖಾಮುಖಿಯಾಗಿವೆ. ಇದರಲ್ಲಿ ಗುಜರಾತ್ ಮೂರು ಬಾರಿ ಗೆದ್ದಿದೆ. ಚೆನ್ನೈ ತಂಡ ಒಂದು ಪಂದ್ಯ ಗೆದ್ದಿದೆ. ಈ ಗೆಲುವು ಇದೇ ಆವೃತ್ತಿಯ ಮೊದಲ ಕ್ವಾಲಿಫೈಯರ್ ಪಂದ್ಯದಲ್ಲಿ ದಾಖಲಾಗಿತ್ತು. ಅಹಮದಾಬಾದ್ನಲ್ಲೇ ನಡೆದ ಉದ್ಘಾಟನ ಪಂದ್ಯದಲ್ಲಿ ಚೆನ್ನೈ ವಿರುದ್ಧ ಗುಜರಾತ್ ಗೆದ್ದು ತನ್ನ ಅಭಿಯಾನವನ್ನು ಆರಂಭಿಸಿತ್ತು. ಇದೀಗ ಅಂತಿಮ ಪಂದ್ಯದಲ್ಲಿಯೂ ಇತ್ತಂಡಗಳು ಮುಖಾಮುಖಿಯಾಗಿವೆ. ಇಲ್ಲಿ ಯಾರಿಗೆ ಅದೃಷ್ಟ ಒಲಿಯಲಿದೆ ಎಂಬುದು ಈ ಪಂದ್ಯದ ಕೌತುಕ.
ಸಂಭಾವ್ಯ ತಂಡಗಳು
ಗುಜರಾತ್ ಟೈಟನ್ಸ್: ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ರಶೀದ್ ಖಾನ್, ರಾಹುಲ್ ತೇವಾಟಿಯಾ, ವಿಜಯ್ ಶಂಕರ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಪ್ರದೀಪ್ ಸಾಂಗ್ವಾನ್, ದರ್ಶನ್ ನಲ್ಕಂಡೆ, ಜಯಂತ್ ಯಾದವ್, ಆರ್ ಸಾಯಿ ಕಿಶೋರ್, ನೂರ್ ಅಹ್ಮದ್, ದಸುನ್ ಶನಕಾ, ಒಡಿಯನ್ ಸ್ಮಿತ್, ಕೆಎಸ್ ಭರತ್, ಶಿವಂ ಮಾವಿ, ಉರ್ವಿಲ್ ಪಟೇಲ್, ಜೋಶುವಾ ಲಿಟಲ್, ಮೋಹಿತ್ ಶರ್ಮಾ.
ಚೆನ್ನೈ ಸೂಪರ್ ಕಿಂಗ್ಸ್: ಮಹೇಂದ್ರ ಸಿಂಗ್ ಧೋನಿ(ನಾಯಕ), ರವೀಂದ್ರ ಜಡೇಜಾ, ಡೆವೊನ್ ಕಾನ್ವೇ, ಋತುರಾಜ್ ಗಾಯಕ್ವಾಡ್, ಅಂಬಾಟಿ ರಾಯುಡು, ಸುಬ್ರಾಂಶು ಸೇನಾಪತಿ, ಮೊಯೀನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೇನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹರ್, ತುಷಾರ್ ದೇಶಪಾಂಡೆ, ಆಕಾಶ್ ಸಿಂಗ್, ಮಥೀಶಾ ಪತಿರಾನಾ, ಸಿಮರ್ಜೀತ್ ಸಿಂಗ್, ಪ್ರಶಾಂತ್ ಸೋಲಂಕಿ, ಮಹೀಶ್ ತೀಕ್ಷಾನಾ, ಅಜಿಂಕ್ಯ ರಹಾನೆ, ಬೆನ್ ಸ್ಟೋಕ್ಸ್, ಶೇಖ್ ರಶೀದ್, ನಿಶಾಂತ್ ಸಿಂಧು.