ಮುಂಬಯಿ: ಮುಂಬರುವ ಐಪಿಎಲ್ 16ನೇ ಆವೃತ್ತಿಗೆ ಈಗಾಗಲೇ ಪೂರ್ವ ತಯಾರಿ ಆರಂಭವಾಗಿದೆ. ಇದರ ಭಾಗವಾಗಿ ಡಿಸೆಂಬರ್ 23ರಂದು ಕೊಚ್ಚಿಯಲ್ಲಿ ಆಟಗಾರರ ಮಿನಿ ಹರಾಜು ಪ್ರಕ್ರಿಯೆ ನಡೆಯಲಿದೆ. ಈ ಮಧ್ಯೆ ‘ಯೂನಿವರ್ಸ್ ಬಾಸ್’ ಖ್ಯಾತಿಯ ಬ್ಯಾಟ್ಸ್‌ಮನ್ ಕ್ರಿಸ್ ಗೇಲ್ ಮತ್ತೊಮ್ಮೆ ಐಪಿಎಲ್‌ಗೆ ಎಂಟ್ರಿ ಕೊಡಲಿದ್ದಾರೆ ಎಂದು ತಿಳಿದು ಬಂದಿದೆ.
ಬಿರುಸಿನ ಬ್ಯಾಟಿಂಗ್‌ಗೆ ಹೆಸರುವಾಸಿಯಾಗಿರುವ ಗೇಲ್ ಈ ಬಾರಿ ಆಟಗಾರನಾಗಿ ಐಪಿಎಲ್‌ಗೆ ಮರಳುತ್ತಿಲ್ಲ. ಬದಲಾಗಿ ವಿಶ್ಲೇಷಕರಾಗಿ ಕಾರ್ಯನಿರ್ವಹಿಸಲಿದ್ದಾರೆ ಎಂದು ಸ್ಟ್ರೀಮಿಂಗ್ ಪ್ಲಾಟ್‌ಫಾರ್ಮ್ ಜಿಯೋ ಸಿನೆಮಾ ಟ್ವೀಟ್ ಮೂಲಕ ತಿಳಿಸಿದೆ.
ಐಪಿಎಲ್‌ನಲ್ಲಿ ಅತಿ ಹೆಚ್ಚು ಸಿಕ್ಸರ್‌ಗಳನ್ನು ಸಿಡಿಸಿದ ದಾಖಲೆ ಹೊಂದಿರುವ ಕ್ರಿಸ್ ಗೇಲ್ ಕೋಲ್ಕತಾ ನೈಟ್ರೈಡರ್ಸ್, ರಾಯಲ್ ಚಾಲೆಂಜರ್ಸ್ ಬೆಂಗಳೂರು, ಕಿಂಗ್ಸ್ ಇಲೆವೆನ್ ಪಂಜಾಬ್ ತಂಡದ ಪರ ಆಡಿದ್ದಾರೆ. ಗೇಲ್ ಒಟ್ಟು 142 ಐಪಿಎಲ್ ಪಂದ್ಯಗಳನ್ನಾಡಿ 4,965 ರನ್ ಗಳಿಸಿದ್ದಾರೆ. ಇದರಲ್ಲಿ 175 ರನ್ ಅವರ ಗರಿಷ್ಠ ಸ್ಕೋರ್ ಆಗಿದೆ.
ಇದನ್ನೂ ಓದಿ | IPL 2023 | ಐಪಿಎಲ್ ಹರಾಜಿನಲ್ಲಿ ಭಾಗಿಯಾಗಲಿರುವ ಹಿರಿಯ ಮತ್ತು ಕಿರಿಯ ಆಟಗಾರರು ಯಾರು?