ನವದೆಹಲಿ: ಮುಂಬೈ ಇಂಡಿಯನ್ಸ್(Mumbai Indians) ವಿರುದ್ಧ ಮಂಗಳವಾರ ನಡೆದ ಐಪಿಎಲ್(IPL 2023) ಪಂದ್ಯದಲ್ಲಿ ಡೆಲ್ಲಿ ಕ್ಯಾಪಿಟಲ್ಸ್(Delhi Capitals) ತಂಡದ ನಾಯಕ ಡೇವಿಡ್ ವಾರ್ನರ್(David Warner) ನೂತನ ಮೈಲುಗಲ್ಲೊಂದನ್ನು ತಲುಪಿದ್ದಾರೆ. ಐಪಿಎಲ್ ವೃತ್ತಿಬದುಕಿನಲ್ಲಿ ನಾಯಕನಾಗಿ ಮೂರು ಸಾವಿರ ರನ್‌ಗಳನ್ನು ಪೂರೈಸಿದ ಸಾಧನೆ ಮಾಡಿದ್ದಾರೆ.
ಇತ್ತೀಚೆಗಷ್ಟೇ ಸನ್‌ರೈಸರ್ಸ್ ವಿರುದ್ಧದ ಪಂದ್ಯದಲ್ಲಿ ಅರ್ಧಶತಕ ಬಾರಿಸಿದ್ದ ವಾರ್ನರ್ ಐಪಿಎಲ್ ಟೂರ್ನಿಯಲ್ಲಿ ಅತಿ ಕಡಿಮೆ ಇನಿಂಗ್ಸ್ನಲ್ಲಿ 6000 ರನ್ ಪೂರೈಸಿದ ಮೊದಲ ಬ್ಯಾಟರ್ ಎಂಬ ಸಾಧನೆ ಮಾಡಿದ್ದರು. ಇದೀಗ ಮತ್ತೊಂದು ಸಾಧನೆಯನ್ನು ತಮ್ಮ ಹೆಸರಿಗೆ ಸೇರಿಸಿಕೊಂಡಿದ್ದಾರೆ. ಐಪಿಎಲ್‌ನಲ್ಲಿ 3 ಸಾವಿರಕ್ಕೂ ಹೆಚ್ಚು ರನ್ ಗಳಿಸಿದ ನಾಯಕರ ಪಟ್ಟಿಗೆ ಸೇರಿದ್ದಾರೆ. ವಿರಾಟ್ ಕೊಹ್ಲಿ, ಎಂ.ಎಸ್ ಧೋನಿ ಹಾಗೂ ರೋಹಿತ್ ಶರ್ಮಾ ವಾರ್ನರ್ ಅವರಿಗಿಂತಲೂ ಮುನ್ನ ಈ ಸಾಧನೆ ಮಾಡಿದ್ದಾರೆ. ವಾರ್ನರ್ ಮುಂಬೈ ವಿರುದ್ಧ 47 ಎಸೆತಗಳಲ್ಲಿ 6 ಫೋರ್‌ಗಳ ನೆರವಿನೊಂದಿಗೆ 51 ರನ್ ಬಾರಿಸಿದ್ದರು.
ನಾಯಕನಾಗಿ ಅತಿ ಹೆಚ್ಚು ಐಪಿಎಲ್ ರನ್ಗಳಿಸಿದ ದಾಖಲೆ ವಿರಾಟ್ ಕೊಹ್ಲಿ ಅವರ ಹೆಸರಲ್ಲಿದೆ. ಕೊಹ್ಲಿ ಆರ್‌ಸಿಬಿ ಪರ ನಾಯಕನಾಗಿ 4,881 ರನ್‌ಗಳನ್ನು ಬಾರಿಸಿದ್ದಾರೆ. ದ್ವಿತೀಯ ಸ್ಥಾನದಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ತಂಡದ ನಾಯಕ ಎಂ.ಎಸ್ ಧೋನಿ ಕಾಣಿಸಿಕೊಂಡಿದ್ದಾರೆ. ಅವರು ಸಿಎಸ್‌ಕೆ ಮತ್ತು ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ತಂಡದ ನಾಯಕನಾಗಿ ಒಟ್ಟಾರೆ 4.582 ರನ್‌ಗಳನ್ನು ಬಾರಿಸಿದ್ದಾರೆ. ಪ್ರಸಕ್ತ ಸಾಲಿನ ಐಪಿಎಲ್ನಲ್ಲಿಯೂ ಅವರು ಸಿಎಸ್‌ಕೆ ತಂಡದ ನಾಯಕ್ವ ಮಾಡುತ್ತಿದ್ದಾರೆ. ಆದರೆ ಕೊಹ್ಲಿ ಅವರು ಆರ್‌ಸಿಬಿ ಪರ ಆಡುತ್ತಿದ್ದರೂ ನಾಯಕತ್ವದಿಂದ ಕೆಳಗಿಳಿದಿದ್ದಾರೆ.
ಇದನ್ನೂ ಓದಿ IPL 2023: ಯುವಕರ ಸವಾಲು ಮೆಟ್ಟಿ ನಿಂತಿತೇ ಚೆನ್ನೈ
ಗೆಲುವಿನ ಖಾತೆ ತರೆದ ಮುಂಬೈ
ಅರುಣ್ ಜೇಟ್ಲಿ ಕ್ರಿಕೆಟ್ ಮೈದಾನದಲ್ಲಿ ಮಂಗಳವಾರ ನಡೆದ ಐಪಿಎಲ್ನ 15ನೇ ಪಂದ್ಯದಲ್ಲಿ ಟಾಸ್ ಸೋತು ಮೊದಲು ಬ್ಯಾಟಿಂಗ್‌ಗೆ ಇಳಿಸಲ್ಪಟ್ಟ ಡೆಲ್ಲಿ ಕ್ಯಾಪಿಟಲ್ಸ್ 19.4 ಓವರ್‌ಗಳಲ್ಲಿ 172 ರನ್ ಗಳಿಸಿತು ಗುರಿ ಬೆನ್ನಟ್ಟಿದ ಮುಂಬೈ 20 ಓವರ್‌ಗಳಲ್ಲಿ 4 ವಿಕೆಟಿಗೆ 173 ರನ್ ಬಾರಿಸಿತು. ಅಂತಿಮ ಎಸೆತದಲ್ಲಿ ಮುಂಬೈ ಗೆಲುವಿಗೆ ಅಗತ್ಯವಿದ್ದ 2 ರನ್ ಹೊಡೆಯಿತು. ಇದು ವಾರ್ನರ್ ಪಡೆಗೆ ಎದುರಾದ ಸತತ 4ನೇ ಸೋಲು. ಮುಂಬೈಗೆ ಮೊದಲ ಗೆಲುವು.