Site icon Vistara News

IPL 2023: ಡೆಲ್ಲಿ ಕ್ಯಾಪಿಟಲ್ಸ್​ ತಂಡಕ್ಕೆ ಡೇವಿಡ್​ ವಾರ್ನರ್​ ನಾಯಕ

IPL 2023: David Warner is the captain for Delhi Capitals

IPL 2023: David Warner is the captain for Delhi Capitals

ನವದೆಹಲಿ: ಕಾರು ಅಪಘಾತದಲ್ಲಿ ಗಾಯಗೊಂಡು ಚಿಕಿತ್ಸೆ ಪಡೆಯುತ್ತಿರುವ ಟೀಮ್​ ಇಂಡಿಯಾ ಆಟಗಾರ ರಿಷಭ್​ ಪಂತ್(Rishabh Pant) 2023ರ ಐಪಿಎಲ್‌ನಿಂದ(IPL 2023) ಹೊರಗುಳಿದ ಹಿನ್ನೆಲೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಡೇವಿಡ್​ ವಾರ್ನರ್(David Warner)​ ನಾಯಕತ್ವ ವಹಿಸಿಕೊಳ್ಳಲಿದ್ದಾರೆ ಎಂದು ವರದಿಯಾಗಿದೆ.

ಡೆಲ್ಲಿ ಕ್ಯಾಪಿಟಲ್ಸ್‌ ತಂಡದ ಕ್ರಿಕೆಟ್‌ ನಿರ್ದೇಶಕ ಸೌರವ್ ಗಂಗೂಲಿ ಈ ಹಿಂದೆಯೇ ಪಂತ್​ ಅವರು ಐಪಿಎಲ್​ ಆಡುವುದಿಲ್ಲ ಎಂದು ಖಚಿತಪಡಿಸಿದ್ದರು. ಇದಾದ ಬಳಿಕ ಫ್ರಾಂಚೈಸಿ ಸೂಕ್ತ ನಾಯಕನ ಹುಡುಕಾಟದಲ್ಲಿ ತೊಡಗಿತ್ತು. ಇದೀಗ ಮೂಲಗಳ ಪ್ರಕಾರ 16ನೇ ಆವೃತ್ತಿಯಲ್ಲಿ ಆಸೀಸ್​ ಆರಂಭಿಕ ಆಟಗಾರ ಡೇವಿಡ್​ ವಾರ್ನರ್​ ತಂಡವನ್ನು ಮುನ್ನಡೆಸಲಿದ್ದಾರೆ ಎಂದು ವರದಿಯಾಗಿದೆ. ಜತೆಗೆ ಟೀಮ್​ ಇಂಡಿಯಾದ ಆಲ್​ರೌಂಡರ್​ ಅಕ್ಷರ್​ ಪಟೇಲ್​ ಉಪನಾಯಕನಾಗಿ ಆಯ್ಕೆಯಾಗಿದ್ದಾರೆ ಎಂದು ತಿಳಿದುಬಂದಿದೆ. ಆದರೆ ಫ್ರಾಂಚೈಸಿ ಈ ಬಗ್ಗೆ ಯಾವುದೇ ಅಧಿಕೃತ ಮಾಹಿತಿ ನೀಡಿಲ್ಲ.

ಡೇವಿಡ್​ ನಾರ್ನರ್​ ಈಗಾಗಲೇ ಐಪಿಎಲ್​ನಲ್ಲಿ ನಾಯಕತ್ವವಹಿಸಿರುವ ಅನುಭವ ಹೊಂದಿದ್ದಾರೆ. 2016ರಲ್ಲಿ ಅವರ ನಾಯಕತ್ವದಲ್ಲಿ ಸನ್​ರೈಸರ್ಸ್​ ಹೈದರಾಬಾದ್ ತಂಡ ಚಾಂಪಿಯನ್ ಪಟ್ಟ ಅಲಂಕರಿಸಿತ್ತು. ಆ ಬಳಿಕ ಅವರ ನಾಯಕತ್ವದಲ್ಲಿ ತಂಡ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ವಿಫಲವಾಗಿತ್ತು. ಇದೇ ಕಾರಣದಿಂದ ಅವರನ್ನು ನಾಯಕತ್ವದಿಂದ ಕೆಳಗಿಳಿಸಿ ನ್ಯೂಜಿಲ್ಯಾಂಡ್​ನ ಕೇನ್ ವಿಲಿಯಮ್ಸನ್​ಗೆ ನಾಯಕನ ಪಟ್ಟ ನೀಡಲಾಗಿತ್ತು.

Exit mobile version