Site icon Vistara News

IPL 2023: ಟಾಸ್ ಗೆದ್ದ ಧೋನಿ; ಹೈದರಾಬಾದ್​ಗೆ ಬ್ಯಾಟಿಂಗ್​ ಆಹ್ವಾನ

Chennai Super Kings vs Sunrisers Hyderabad

Chennai Super Kings vs Sunrisers Hyderabad

ಚೆನ್ನೈ: 16ನೇ ಆವೃತ್ತಿಯ ಐಪಿಎಲ್​ನ 29ನೇ ಪಂದ್ಯದಲ್ಲಿ ಟಾಸ್​ ಗೆದ್ದ ಚೆನ್ನೈ ಸೂಪರ್​ ಕಿಂಗ್ಸ್​ ತಂಡ ಮೊದಲು ಬೌಲಿಂಗ್​ ಆಯ್ಕೆ ಮಾಡಿದೆ. ಟಾಸ್​ ಸೋತ ಸನ್​ರೈಸರ್ಸ್​ ಹೈದರಾಬಾದ್​ ತಂಡ ಬ್ಯಾಟಿಂಗ್​ ಆಹ್ವಾನ ಪಡೆದಿದೆ.

ಬಲಾಬಲದ ಲೆಕ್ಕಾಚಾರದಲ್ಲಿ ಚೆನ್ನೈ ಸೂಪರ್​ ಕಿಂಗ್ಸ್​ ಮುಂದಿದೆ. ಇದುವರೆಗೆ ಉಭಯ ತಂಡಗಳು ಐಪಿಎಲ್​ನಲ್ಲಿ 18 ಪಂದ್ಯಗಳಲ್ಲಿ ಮುಖಾಮುಖಿಯಾಗಿವೆ. ಇದರಲ್ಲಿ ಚೆನ್ನೈ ತಂಡ 13 ಪಂದ್ಯಗಳಲ್ಲಿ ಗೆದ್ದಿದೆ, ಹೈದರಾಬಾದ್​ ಕೇವಲ 5 ಪಂದ್ಯಗಳಲ್ಲಿ ಮಾತ್ರ ಗೆಲುವು ಕಂಡಿದೆ. ಹೀಗಾಗಿ ಚೆನ್ನೈ ಬಲಿಷ್ಠವಾಗಿ ಗೋಚರಿಸಿದೆ.

ಹೈದರಾಬಾದ್‌ ತಂಡ ಬ್ಯಾಟಿಂಗ್​ ಮತ್ತು ಬೌಲಿಂಗ್​ ಎರಡೂ ವಿಭಾಗದಲ್ಲಿಯೂ ಬಲಿಷ್ಠವಾಗಿದೆ. ಆದರೆ ನಿರೀಕ್ಷಿತ ಪ್ರದರ್ಶನ ತೋರುವಲ್ಲಿ ಆಟಗಾರರು ವಿಫಲರಾಗುತ್ತಿದ್ದಾರೆ. ಒಂದು ಪಂದ್ಯದಲ್ಲಿ ಶ್ರೇಷ್ಠ ಪ್ರದರ್ಶನ ತೋರಿದರೆ, ಮುಂದಿನ ಪಂದ್ಯದಲ್ಲಿ ನೂರರೊಳಗೆ ಗಂಟುಮೂಟೆ ಕಟ್ಟುತ್ತದೆ. ಹೀಗಾಗಿ ಹೈದರಾಬಾದ್​ ಪ್ರದರ್ಶನದ ಮೇಲೆ ನಂಬಿಕೆ ಇರಿಸುವುದು ಕಷ್ಟಕರ. ಅತ್ತ ಚೆನ್ನೈ ತಂಡ ಬ್ಯಾಟಿಂಗ್​ ಮೇಲೆಯ ಹೆಚ್ಚಿನ ನಂಬಿಕೆ ಇರಿಸಿದೆ.

ಇದನ್ನೂ ಓದಿ IPL 2023: ಕೊರೊನಾ​ ಲಾಕ್​ಡೌನ್​ನಿಂದ ಬೌಲಿಂಗ್​ ಸುಧಾರಣೆ; ಮೊಹಮ್ಮದ್​ ಸಿರಾಜ್​

ಸಂಭಾವ್ಯ ತಂಡಗಳು

ಚೆನ್ನೈ ಸೂಪರ್ ಕಿಂಗ್ಸ್: ಡೆವೊನ್ ಕಾನ್ವೆ, ಋತುರಾಜ್ ಗಾಯಕ್ವಾಡ್, ಅಜಿಂಕ್ಯ ರಹಾನೆ, ಶಿವಂ ದುಬೆ, ಅಂಬಾಟಿ ರಾಯುಡು, ಮೊಯೀನ್ ಅಲಿ, ರವೀಂದ್ರ ಜಡೇಜಾ, ಎಂ.ಎಸ್ ಧೋನಿ (ನಾಯಕ), ಮಹೀಶ್ ತೀಕ್ಷಣ, ತುಷಾರ್ ದೇಶಪಾಂಡೆ, ಮತೀಶ ಪತಿರಾನ, ಆಕಾಶ್ ಸಿಂಗ್, ಡ್ವೈನ್ ಪ್ರಿಟೋರಿಯಸ್, ಸುಭ್ರಾಂಶು ಸೇನಾಪತಿ, ಶೇಕ್ ರಶೀದ್, ಎಸ್ ಹಂಗರ್ಗೇಕರ್, ಮಿಚೆಲ್ ಸ್ಯಾಂಟ್ನರ್, ಬೆನ್ ಸ್ಟೋಕ್ಸ್, ಅಜಯ್ ಜಾದವ್ ಮಂಡಲ್, ಪ್ರಶಾಂತ್ ಸೋಲಂಕಿ, ಸಿಮರ್ಜೀತ್ ಸಿಂಗ್, ದೀಪಕ್ ಚಾಹರ್, ಭಗತ್ ವರ್ಮಾ, ನಿಶಾಂತ್ ಸಿಂಧು.

ಸನ್‌ರೈಸರ್ಸ್ ಹೈದರಾಬಾದ್: ಹ್ಯಾರಿ ಬ್ರೂಕ್, ಮಯಾಂಕ್ ಅಗರ್ವಾಲ್, ರಾಹುಲ್ ತ್ರಿಪಾಠಿ, ಏಡೆನ್‌ ಮಾರ್ಕ್ರಮ್ (ನಾಯಕ), ಹೆನ್ರಿಚ್ ಕ್ಲಾಸೆನ್ (ವಿಕೆಟ್ ಕೀಪರ್), ವಾಷಿಂಗ್ಟನ್ ಸುಂದರ್, ಮಾರ್ಕೊ ಜಾನ್ಸೆನ್, ಭುವನೇಶ್ವರ್ ಕುಮಾರ್, ಮಯಾಂಕ್ ಮಾರ್ಕಂಡೆ, ಉಮ್ರಾನ್ ಮಲಿಕ್, ಟಿ ನಟರಾಜನ್, ಆದಿಲ್ ರಶೀದ್, ಅಕಿಲ್​ ಹೊಸೈನ್, ಗ್ಲೆನೆನ್ ಫಿಲಿಪ್ಸ್, ಸಮರ್ಥ ವ್ಯಾಸ್, ಅನ್ಮೋಲ್ಪ್ರೀತ್ ಸಿಂಗ್, ಮಯಾಂಕ್ ದಾಗರ್, ಉಪೇಂದ್ರ ಯಾದವ್, ಅಭಿಷೇಕ್ ಶರ್ಮಾ, ಕಾರ್ತಿಕ್ ತ್ಯಾಗಿ, ಸನ್ವಿರ್ ಸಿಂಗ್, ಫಜಲ್ಹಕ್ ಫಾರೂಕಿ, ಅಬ್ದುಲ್ ಸಮದ್, ನಿತೀಶ್ ರೆಡ್ಡಿ, ವಿವ್ರಾಂತ್ ಶರ್ಮಾ.

Exit mobile version