ಕ್ರಿಕೆಟ್
IPL 2023: ಗಿಲ್ ಶತಕದ ಕಮಾಲ್; ಮುಂಬೈಗೆ ಬೃಹತ್ ಮೊತ್ತದ ಗುರಿ
ಶುಭಮನ್ ಗಿಲ್ ಅವರು ಐಪಿಎಲ್ನ ಆವೃತ್ತಿಯೊಂದರಲ್ಲಿ 800 ರನ್ಗಳ ಗಡಿ ದಾಟಿದ ನಾಲ್ಕನೇ ಆಟಗಾರ ಎಂಬ ಹಿರಿಮೆಗೆ ಪಾತ್ರರಾಗಿದ್ದಾರೆ.
ಅಹಮದಾಬಾದ್: ನ್ಯೂ ಬ್ಯಾಟಿಂಗ್ ಸೆನ್ಸೇಷನಲ್ ಶುಭಮನ್ ಗಿಲ್(129) ಅವರು ಬಾರಿಸಿದ ಸೊಗಸಾದ ಶತಕದ ನೆರವಿನಿಂದ ಮುಂಬೈ ವಿರುದ್ಧದ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ಬೃಹತ್ ಮೊತ್ತ ದಾಖಲಿಸಿದೆ.
ಮಳೆಯಿಂದ ವಿಳಂಬಗೊಂಡ ಈ ಪಂದ್ಯದಲ್ಲಿ ಟಾಸ್ ಸೋತು ಬ್ಯಾಟಿಂಗ್ಗೆ ಇಳಿಸಲ್ಪಟ್ಟ ಹಾಲಿ ಚಾಂಪಿಯನ್ ಗುಜರಾತ್ ಟೈಟನ್ಸ್ ನಿಗದಿತ 20 ಓವರ್ಗಳಲ್ಲಿ 3 ವಿಕೆಟ್ ನಷ್ಟಕ್ಕೆ 233 ರನ್ ಗಳಿಸಿದೆ. ಎದುರಾಳಿ ಮುಂಬೈ ತಂಡ ಗೆಲುವಿಗೆ 234 ರನ್ ಬಾರಿಸಬೇಕಿದೆ.
ಇನಿಂಗ್ಸ್ ಆರಂಭಿಸಿದ ಶುಭಮನ್ ಗಿಲ್ ಮತ್ತು ವೃದ್ಧಿಮಾನ್ ಸಾಹಾ ಅವರು ಆರಂಭದಲ್ಲಿ ರಕ್ಷಣಾತ್ಮಕ ಆಟಕ್ಕೆ ಒತ್ತು ನೀಡಿದರು. ಈ ಪರಿಣಾಮ ಪವರ್ ಪ್ಲೇಯಲ್ಲಿ ದೊಡ್ಡ ಮೊತ್ತ ಹರಿದು ಬರಲಿಲ್ಲ. ಪವರ್ ಪ್ಲೇ ಮುಗಿದ ತಕ್ಷಣ ಬ್ಯಾಟಿಂಗ್ ವೇಗಕ್ಕೆ ಚುರುಕು ಮುಟ್ಟಿಸಿದ ಗಿಲ್ ಮುಂಬೈ ಬೌಲರ್ಗಳನ್ನು ದಂಡಿಸಿ ರನ್ ಗಳಿಸಲು ಆರಂಭಿಸಿದರು. ಇದೇ ವೇಳೆ ಅವರು ಜೀವದಾನವೊಂದು ಪಡೆದರು. 31 ರನ್ ಗಳಿಸಿದ್ದ ವೇಳೆ ಟಿಮ್ ಡೇವಿಡ್ ಅವರು ಕ್ಯಾಚ್ ಕೈಚೆಲ್ಲಿದರು.
ಗಿಲ್ ಅವರು ಈ ಪಂದ್ಯದಲ್ಲಿ 8 ರನ್ ಗಳಿಸಿದ ವೇಳೆ ನೂತನ ಮೈಲುಗಲ್ಲೊಂದನ್ನು ತಲುಪಿದರು. ಈ ಬಾರಿಯ ಐಪಿಎಲ್ನಲ್ಲಿ ಅತ್ಯಧಿಕ ರನ್ ಗಳಿಸಿದ ಆಟಗಾರನಾಗಿ ಮೂಡಿಬಂದರು. ಈ ಮೂಲಕ ಆರ್ಸಿಬಿಯ ನಾಯಕ ಫಾಫ್ ಡು ಪ್ಲೆಸಿಸ್ ಅವರನ್ನು ಹಿಂದಿಕ್ಕಿ ಆರೆಂಜ್ ಕ್ಯಾಪ್ ಪಡೆದರು. ಡು ಪ್ಲೆಸಿಸ್ 14 ಪಂದ್ಯಗಳಿಂದ 730 ರನ್ ಗಳಿಸಿದ್ದರು. ಇದೀಗ ಗಿಲ್ 800ರ ಗಡಿ ದಾಟಿದ್ದಾರೆ. ಈ ಸಾಧನೆ ಮಾಡಿದ ನಾಲ್ಕನೇ ಆಟಗಾರ ಎಂಬ ಹಿರಿಮೆಗೂ ಗಿಲ್ ಪಾತ್ರರಾದರು. ವಿರಾಟ್ ಕೊಹ್ಲಿ, ಜಾಸ್ ಬಟ್ಲರ್ ಮತ್ತು ಡೇವಿಡ್ ವಾರ್ನರ್ ಈ ಸಾಧನೆ ಮಾಡಿದ ಮೊದಲಿಗರು.
ಮತ್ತೊಂದು ತುದಿಯಲ್ಲಿ ರನ್ ಗಳಿಸಲು ಪರದಾಡುತ್ತಿದ್ದ ವೃದ್ಧಿಮಾನ್ ಸಾಹಾ ಅವರು ಅನುಭವಿ ಸ್ಪಿನ್ನರ್ ಪಿಯೂಷ್ ಚಾವ್ಲಾ ಅವರ ಎಸೆತದಲ್ಲಿ ಮುಂದೆ ಬಂದು ಸಿಕ್ಸರ್ ಬಾರಿಸುವ ಪ್ರಯತ್ನದಲ್ಲಿ ಎಡವಿ ಇಶಾನ್ ಕಿಶನ್ ಅವರಿಂದ ಸ್ಡಂಪ್ ಔಟ್ ಆದರು. ಅವರ ಗಳಿಕೆ 16 ಎಸೆತಗಳಿಂದ 18 ರನ್. ಸಾಹಾ ವಿಕೆಟ್ ಪತನದ ಬಳಿಕ ಕ್ರೀಸ್ಗಿಳಿದ ಸಾಯಿ ಸುದರ್ಶನ್ ಅವರು ಗಿಲ್ ಜತೆಗೂಡಿ ಉಪಯುಕ್ತ ಇನಿಂಗ್ಸ್ ಕಟ್ಟಿದರು. ಪರಿಣಾಮ ಗುಜರಾತ್ 10 ಓವರ್ ಮುಕ್ತಾಯದ ವೇಳೆಗೆ 90 ಗಡಿ ದಾಟಿ 10ರ ಸರಾಸರಿಯಲ್ಲಿ ರನ್ ಕಲೆಹಾಕುವ ಮೂಲಕ ಆರಂಭದಲ್ಲಿ ಕಂಡಿದ್ದ ರನ್ ಬರಗಾಲವನ್ನು ಸರಿದೂಗಿಸಿತು.
ಮೂರನೇ ಶತಕ ಸಿಡಿಸಿ ಸಂಭ್ರಮಿಸಿದ ಗಿಲ್
ಟಿಮ್ ಡೇವಿಡ್ ಅವರಿಂದ ಸಿಕ್ಕ ಒಂದು ಜೀವದಾನದ ಸಂಪೂರ್ಣ ಲಾಭವೆತ್ತಿದ ಶುಭಮನ್ ಗಿಲ್ ಶತಕ ಬಾರಿಸಿ ಸಂಭ್ರಮಿಸಿದರು. ಇದು ಅವರ ಮೂರನೇ ಐಪಿಎಲ್ ಶತಕವಾಗಿದೆ. ಈ ಮೂರು ಶತಕವೂ ಈ ಆವೃತ್ತಿಯಲ್ಲಿಯೇ ದಾಖಲಾಗಿದ್ದು ವಿಶೇಷ. ಒಂದೇ ಆವೃತ್ತಿಯಲ್ಲಿ ಅತ್ಯಧಿಕ ಶತಕ ಬಾರಿಸಿದ ಸಾಧನೆ ವಿರಾಟ್ ಕೊಹ್ಲಿ ಮತ್ತು ಜಾಸ್ ಬಟ್ಲರ್ ಹೆಸರಿನಲ್ಲಿದೆ. ಉಭಯ ಆಟಗಾರರು 4 ಶತಕ ಬಾರಿಸಿದ್ದಾರೆ.
ಇದನ್ನೂ ಓದಿ IPL 2023: ಟೂರ್ನಿಯಿಂದ ಹೊರಬಿದ್ದರೂ ವಿಶೇಷ ಅವತಾರದಲ್ಲಿ ಕಾಣಿಸಿಕೊಂಡ ಆರ್ಸಿಬಿ ನಾಯಕ
ಕೊಹ್ಲಿಯ ಶೈಲಿಯಲ್ಲೇ ಬ್ಯಾಟ್ ಬೀಸಿದ ಗಿಲ್, ಮುಂಬೈ ಬೌಲರ್ಗಳ ಮೇಲೆರಗಿ ಸಿಕ್ಸರ್, ಬೌಂಡರಿಗಳ ಮಳೆಯನ್ನೇ ಸುರಿಸಿದರು. ಈ ಮೂಲಕ ನೆರೆದಿದ್ದ ಸ್ಥಳೀಯ ಅಭಿಮಾನಿಗಳಿಗೆ ಭರಪೂರ ಮನರಂಜನೆ ಒದಗಿಸಿದರು. ಅದರಲ್ಲೂ ಚಾವ್ಲಾ ಓವರ್ನಲ್ಲಿ ಬ್ಯಾಕ್ ಟು ಬ್ಯಾಕ್ ಸಿಕ್ಸರ್ ಬಾರಿಸುವ ಮೂಲಕ ಚಾವ್ಲಾ ಅವರಿಗೆ ಚಳಿ ಬಿಡಿಸಿದರು. ಈ ಓವರ್ನಲ್ಲಿ 20 ರನ್ ಸೋರಿಕೆಯಾಯಿತು. ಮತ್ತೊಂದು ತುದಿಯಲ್ಲಿ ಬ್ಯಾಟಿಂಗ್ ನಡೆಸುತ್ತಿದ್ದ ಸಾಯಿ ಸುದರ್ಶನ್ ಕೂಡ ಸಿಕ್ಕ ಅವಕಾಶದಲ್ಲಿ ಸಿಕ್ಸರ್, ಬೌಂಡರಿ ಬಾರಿಸುತ್ತಾ ಸಾಗಿ ತಂಡದ ಮೊತ್ತವನ್ನು ಹಿಗ್ಗಿಸುತ್ತಿದ್ದರು. 43 ರನ್ ಗಳಿಸಿದ ವೇಳೆ ಅವರು ರಿಟೈರ್ಡ್ ಔಟ್ ಆದರು. ಅವರ ಈ ಇನಿಂಗ್ಸ್ನಲ್ಲಿ 5 ಬೌಂಡರಿ ಮತ್ತಿ ಒಂದು ಸಿಕ್ಸರ್ ಸಿಡಿಯಿತು.
ಬಿರುಸಿನ ಬ್ಯಾಟಿಂಗ್ ಮೂಲಕ 150 ರನ್ಗಳತ್ತ ಮುನ್ನುಗ್ಗುತ್ತಿದ್ದ ಗಿಲ್ ಅವರನ್ನು ಅಂತಿಮವಾಗಿ ಕಳೆದ ಲಕ್ನೋ ವಿರುದ್ಧದ ಪಂದ್ಯದ ಹೀರೊ ಆಕಾಶ್ ಮಧ್ವಾಲ್ ಕಟ್ಟಿ ಹಾಕಿದರು. 60 ಎಸೆತ ಎದುರಿಸಿದ ಗಿಲ್ ಬರೊಬ್ಬರಿ 10 ಸಿಕ್ಸರ್ ಮತ್ತು 7 ಬೌಂಡರಿ ನೆರವಿನಿಂದ 129 ರನ್ ಗಳಿಸಿದರು. ಅಂತಿಮ ಹಂತದಲ್ಲಿ ಪಾಂಡ್ಯ ಅಜೇಯ 28 ರನ್ ಸಿಡಿಸಿ ತಂಡದ ಬೃಹತ್ ಮೊತ್ತಕ್ಕೆ ಕಾರಣರಾದರು.
ಕ್ರಿಕೆಟ್
ತಾಯಿ, ಮಗಳ ಜೀವ ತೆಗೆಯಿತು ಐಪಿಎಲ್ ಲಕ್ನೊ ತಂಡದ ಹೋರ್ಡಿಂಗ್
ಚಲಿಸುತ್ತಿದ್ದ ಕಾರಿನ ಮೇಲೆ ಹೋರ್ಡಿಂಗ್ ಬಿದ್ದ ಕಾರಣ ತಾಯಿ, ಮಗಳು ಮೃತಪಟ್ಟಿದ್ದರೆ ಚಾಲಕ ಗಾಯಗೊಂಡಿದ್ದಾರೆ.
ಲಖನೌ: ಲಕ್ನೋದ ಅಟಲ್ ಬಿಹಾರಿ ವಾಜಪೇಯಿ (ಎಕಾನಾ) ಕ್ರಿಕೆಟ್ ಸ್ಟೇಡಿಯಂ ಬಳಿ ಸೋಮವಾರ ಭಾರಿ ಬಿರುಗಾಳಿಯ ಸಮಯದಲ್ಲಿ ದೊಡ್ಡ ಹೋರ್ಡಿಂಗ್ ಬಿದ್ದು ಕಾರು ನಜ್ಜುಗುಜ್ಜಾದ ಪರಿಣಾಮ ತಾಯಿ, ಮಗಳು ಮೃತಪಟ್ಟಿದ್ದಾಳೆ. ಘಟನೆಯಲ್ಲಿ ಚಾಲಕ ಗಾಯಗೊಂಡಿದ್ದಾರೆ. ತಾಯಿ-ಮಗಳು ಇಬ್ಬರನ್ನೂ ಲೋಹಿಯಾ ಆಸ್ಪತ್ರೆಗೆ ದಾಖಲಿಸಿದ್ದರೂ ಆಗಲೇ ಅವರಿಬ್ಬರು ಮೃತಪಟ್ಟಿದ್ದಾರೆ ಎಂದು ಅಲ್ಲಿನ ವೈದ್ಯರು ಘೋಷಿಸಿದ್ದಾರೆ.
ಗಾಜಿಪುರ ಪೊಲೀಸ್ ಠಾಣೆ ಪ್ರದೇಶದ ಇಂದಿರಾ ನಗರ ಕಾಲೋನಿ ನಿವಾಸಿಗಳಾದ ಪ್ರೀತಿ ಜಗ್ಗಿ (38) ಮತ್ತು ಅವರ ಮಗಳು ಏಂಜೆಲ್ (15) ಪ್ರಯಾಣಿಸುತ್ತಿದ್ದ ಸ್ಕಾರ್ಪಿಯೋ ವಾಹನದ ಮೇಲೆ ಜಾಹೀರಾತು ಫಲಕ ಬಿದ್ದಿದೆ ಎಂದು ಗೋಸಾಯ್ಗಂಜ್ ಸಹಾಯಕ ಪೊಲೀಸ್ ಆಯುಕ್ತ (ಎಎಸ್ಪಿ) ಅಮಿತ್ ಕುಮಾವತ್ ಮಾಹಿತಿ ನೀಡಿದ್ದಾರೆ.
इकाना स्टेडियम के पास हादसे का मामला हादसे में एक की गई जान,
— Network10 (@Network10Update) June 5, 2023
3 लोग गंभीर घायल, घायलों को भेजा गया अस्पताल,
लोहिया अस्पताल भेजे गए सभी घायल,
घायलों में एक महिला की हालत नाजुक #EkanaStadium @Uppolice #Lucknow pic.twitter.com/zpR5iFplvo
ಅವರು ತಮ್ಮ ಚಾಲಕ ಸರ್ತಾಜ್ (28) ಅವರೊಂದಿಗೆ ಮಾಲ್ಗೆ ಪ್ರದೇಶಕ್ಕೆ ಹೋಗುತ್ತಿದ್ದಾಗ ದುರಂತ ಸಂಭವಿಸಿದೆ ಎಂದು ಅವರು ಮಾಹಿತಿ ನೀಡಿದ್ದಾರೆ. ಕ್ರೀಡಾಂಗಣದ ಗೇಟ್ ಸಂಖ್ಯೆ 2 ರ ಮುಂಭಾಗದ ಜಾಹೀರಾತು ಫಲಕವು ಅವರ ವಾಹನದ ಮೇಲೆ ಬಿದ್ದಿದೆ ಎಂದು ಅವರು ಹೇಳಿದರು. ಸರ್ತಾಜ್ ಗಾಯಗೊಂಡಿದ್ದು, ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಈ ಕುರಿತು ತನಿಖೆ ಆರಂಭಿಸಿದ್ದೇವೆ ಎಂದು ಅವರು ಹೇಳಿದ್ದಾರೆ.
ಇದನ್ನೂ ಓದಿ : Odisha Train Accident: ರೈಲು ಅಪಘಾತ ಸಂಭವಿಸಿದ ಸ್ಥಳದಲ್ಲಿ ‘ಪ್ರೇಮ ಕವನಗಳು’ ಅನಾಥ!
ಸೋಷಿಯಲ್ ಮೀಡಿಯಾದಲ್ಲಿ ಓಡಾಡುತ್ತಿರುವವೀಡಿಯೊದಲ್ಲಿ, ಜಾಹೀರಾತು ಫಲಕದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಚಾಲಕ ಸಹಾಯಕ್ಕಾಗಿ ತೀವ್ರವಾಗಿ ಬೇಡಿಕೊಳ್ಳುತ್ತಿರುವುದನ್ನು ಕಾಣಬಹುದು. ಚಂಡಮಾರುತದ ಪರಿಣಾಮವಾಗಿ ಬೃಹತ್ ಬೋರ್ಡ್ ಕುಸಿದಿದೆ ಎಂದು ಹೇಳಲಾಗಿದೆ.
A woman & her daughter were crushed to death, while the SUV driver was in critical condition, after a mammoth billboard collapsed on their car in front of Ekana cricket stadium in #Lucknow as a gusty wind hit the city at 5 pm.#UttarPradesh pic.twitter.com/G2qGq43GvN
— Arvind Chauhan (@Arv_Ind_Chauhan) June 5, 2023
ಪ್ರಾಥಮಿಕ ವರದಿಗಳ ಪ್ರಕಾರ, ಪೊಲೀಸರು ಘಟನಾ ಸ್ಥಳದಲ್ಲಿ ಹಾಜರಿದ್ದರು. ತಕ್ಷಣವೇ ಎಲ್ಲಾ ಪ್ರಯಾಣಿಕರನ್ನು ತಕ್ಷಣ ಆಸ್ಪತ್ರೆಗೆ ಕರೆದೊಯ್ದಿದ್ದಾರೆ.
ಸ್ಕಾರ್ಪಿಯೋ ಎಸ್ ಯುವಿ ಅವಶೇಷಗಳ ಅಡಿಯಲ್ಲಿ ಸಿಲುಕಿಕೊಂಡಿತ್ತು. ಹೀಗಾಗಿ ತಕ್ಷಣದಲ್ಲೇ ಒಳಗೆ ಸಿಲುಕಿದ್ದವರನ್ನು ಹೊರಗೆ ಎಳೆಯಲು ಸಾಧ್ಯವಾಗಿರಲಿಲ್ಲ. ಕ್ರೇನ್ ಸಹಾಯದಿಂದ ಬಿದ್ದ ಜಾಹೀರಾತು ಫಲಕವನ್ನು ತೆಗೆದು ಹಾಕಿ ಅವರನ್ನು ಹೊರಗೆಳೆಯಲಾಗಿದೆ.
ಎಕಾನಾ ಕ್ರಿಕೆಟ್ ಸ್ಟೇಡಿಯಂನಲ್ಲಿ ಇತ್ತೀಚೆಗೆ ನಡೆದ ಐಪಿಎಲ್ ಪಂದ್ಯಗಳಿಗೆ ಸಂಬಂಧಿಸಿದ ಹೋರ್ಡಿಂಗ್ ಇದಾಗಿದೆ. ಈ ಕ್ರೀಡಾಂಗಣವು 2018ರಲ್ಲಿ ತನ್ನ ಮೊದಲ ಅಂತಾರಾಷ್ಟ್ರೀಯ ಪಂದ್ಯವನ್ನು ಆಯೋಜಿಸಿದ್ದು ಅಲ್ಲಿಂದ ಪ್ರಾಮುಖ್ಯತೆಯನ್ನು ಪಡೆದುಕೊಂಡಿದೆ. ಐಪಿಎಲ್ನ ಲಕ್ನೊ ಸೂಪರ್ ಜೈಂಟ್ಸ್ ತಂಡದ ತವರ ಸ್ಟೇಡಿಯಮ್ ಇದಾಗಿದೆ.
ಕ್ರಿಕೆಟ್
Wrestlers Protest : ಕುಸ್ತಿಪಟುಗಳ ಬಾಯಿ ಮುಚ್ಚಿಸಿದರೇ ಅಮಿತ್ ಶಾ? ಕೆಲಸಕ್ಕೆ ಮರಳಿದ ಸಾಕ್ಷಿ
ಪ್ರತಿಭಟನೆಯಲ್ಲಿ ಪ್ರಧಾನ ಪಾತ್ರ ವಹಿಸಿದ್ದ ಸಾಕ್ಷಿ ಮಲಿಕ್ ಅವರು ನಮ್ಮ ಬೇಡಿಕೆ ಈಡೇರಿಲ್ಲ ಧರಣಿ ಮುಂದುವರಿಯುತ್ತದೆ ಎಂದು ಹೇಳಿದ್ದಾರೆ.
ನವ ದೆಹಲಿ: ಭಾರತೀಯ ಕುಸ್ತಿ ಒಕ್ಕೂಟದ ಅಧ್ಯಕ್ಷ ಬ್ರಿಜ್ಭೂಷನ್ ಸಿಂಗ್ ಶರಣ್ ವಿರುದ್ಧ ನಿರಂತರವಾಗಿ ಪ್ರತಿಭಟನೆ ನಡೆಸುತ್ತಿದ್ದ ಕುಸ್ತಿಪಟುಗಳ ಜತೆ ಮಾತನಾಡಿರುವ ಕೇಂದ್ರ ಗೃಹಮಂತ್ರಿ ಅಮಿತ್ ಶಾ, ಪರಿಹಾರವೊಂದರನ್ನು ಕಂಡುಕೊಂಡಿದ್ದಾರೆ ಎಂಬುದಾಗಿ ಹೇಳಲಾಗುತ್ತಿದೆ. ಕುಸ್ತಿಪಟುಗಳ ಜತೆ ಉನ್ನತಮಟ್ಟದ ಸಭೆ ನಡೆಸಿದ ಅಮಿತ್ ಶಾ ಅವರು ಕುಸ್ತಿಪಟುಗಳು ನೀಡುತ್ತಿದ್ದ ನಿರಂತರ ಹೇಳಿಕೆಗಳಿಗೂ ಬ್ರೇಕ್ ಹಾಕಿದ್ದಾರೆ ಎನ್ನಲಾಗಿದೆ. ಶುಕ್ರವಾರ ಕುಸ್ತಿಪಟು ಸಾಕ್ಷಿ ಮಲಿಕ್ ಅವರು ರೈಲ್ವೆ ಇಲಾಖೆಯಲ್ಲಿ ಕರ್ತವ್ಯಕ್ಕೆ ಹಾಜರಾಗಿದ್ದಾರೆ. ಆದರೆ, ಎಎನ್ಐ ಜತೆ ಮಾತನಾಡಿದ ಸಾಕ್ಷಿ ಮಲಿಕ್, ನಮ್ಮ ಬೇಡಿಕೆ ಈಡೇರಿಲ್ಲ ಎಂಬುದಾಗಿ ಹೇಳಿಕೆ ಕೊಟ್ಟಿದ್ದಾರೆ.
“ಇದು ಸಾಮಾನ್ಯ ಮಾತುಕತೆಯಾಗಿತ್ತು. ಸಭೆಯಲ್ಲಿ ಯಾವುದೇ ಅಂತಿಮ ಪರಿಹಾರವನ್ನು ಸಾಧಿಸಲಾಗಲಿಲ್ಲ. ಆರೋಪಿಗಳನ್ನು ಬಂಧಿಸಬೇಕೆಂಬ ನಮ್ಮ ಬೇಡಿಕೆಯೂ ಮುಂದುವರಿಯುತ್ತದೆ” ಎಂದು ಮಲಿಕ್ ತಿಳಿಸಿದ್ದಾರೆ.
ಮಲಿಕ್ ಮತ್ತು ಬಜರಂಗ್ ಪುನಿಯಾ ಮತ್ತು ಸಹ ಒಲಿಂಪಿಯನ್ ಮತ್ತು ವಿಶ್ವ ಚಾಂಪಿಯನ್ಷಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು ಬ್ರಿಜ್ ಭೂಷಣ್ ವಿರುದ್ಧ ಪ್ರತಿಭಟನೆ ನಡೆಸುತ್ತಿದ್ದಾರೆ. ಅಪ್ರಾಪ್ತ ವಯಸ್ಸಿನ ಕುಸ್ತಿಪಟು ಸೇರಿ ಏಳು ಕುಸ್ತಿಪಟುಗಳ ವಿರುದ್ಧದ ಲೈಂಗಿಕ ಕಿರುಕುಳ ಆರೋಪ ಹೊತ್ತಿರುವ ಬ್ರಿಜ್ ಭೂಷಣ್ ಅವರನ್ನು ಬಂಧಿಸುವಂತೆ ಅವರೆಲ್ಲರೂ ಒತ್ತಾಯಿಸಿದ್ದಾರೆ. ಆದರೆ, ಸಿಂಗ್ ಎಲ್ಲಾ ಆರೋಪಗಳನ್ನು ನಿರಾಕರಿಸಿದ್ದಾರೆ.
#LISTEN | "We met Union Home Minister Amit Shah, it was a normal conversation, we have only one demand and that is to arrest him (Brij Bhushan Singh). I have not stepped back from the protest, I have resumed my work as OSD in Railways. I want to clarify that we will keep… pic.twitter.com/H4RUZVZttd
— ANI (@ANI) June 5, 2023
ನಾವು ನಮ್ಮ ಹೆಸರುಗಳನ್ನು ಹಿಂತೆಗೆದುಕೊಂಡಿಲ್ಲ, ವಿನೇಶ್, ನಾನು ಮತ್ತು ಭಜರಂಗ್ ಈ ಪ್ರತಿಭಟನೆಯಲ್ಲಿ ಒಟ್ಟಿಗೆ ಇದ್ದೇವೆ ಮತ್ತು ನಾವು ನಮ್ಮ ಹೆಸರುಗಳನ್ನು ಹಿಂತೆಗೆದುಕೊಂಡಿಲ್ಲ” ಎಂದು ಮಲಿಕ್ ಎಎನ್ಐಗೆ ತಿಳಿಸಿದರು.
ವರದಿಗಳ ಪ್ರಕಾರ, ಕಳೆದ ಜನವರಿಯಲ್ಲಿ ಪ್ರತಿಭಟನೆ ಆರಂಭಗೊಂಡ ಬಳಿಕ ಇದೇ ಮೊದಲ ಬಾರಿಗೆ ಅಮಿತ್ ಶಾ ಅವರ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ ನಡೆಸಲಾಗಿತ್ತು. ಇದಕ್ಕೂ ಮೊದಲು ಕುಸ್ತಿಪಟುಗಳ ಜತೆ ಕ್ರೀಡಾ ಸಚಿವ ಅನುರಾಗ್ ಠಾಕೂರ್ ಮಾತ್ರ ಸಭೆ ನಡೆಸಿದ್ದರು.
ಕುಸ್ತಿಪಟುಗಳು ತಮ್ಮ ಪದಕಗಳನ್ನು ಗಂಗಾ ನದಿಯಲ್ಲಿ ವಿಸರ್ಜಿಸಲು ಹರಿದ್ವಾರಕ್ಕೆ ತೆರಳಿದ್ದ ನಂತರ ಈ ಪ್ರತಿಭಟನೆ ಹೆಚ್ಚು ಕಾವು ಪಡೆದುಕೊಂಡಿತ್ತು. ರೈತ ಮುಖಂಡ ರಾಕೇಶ್ ಟಿಕಾಯತ್ ಅವರು ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ಜೂನ್ 9 ರೊಳಗೆ ಬಂಧಿಸುವಂತೆ ಸರ್ಕಾರಕ್ಕೆ ಅಂತಿಮ ಗಡುವು ನೀಡಿದ್ದಾರೆ. ಸಾಕ್ಷಿ ಮಲಿಕ್ ಅವರ ತಂದೆ ಸುಖ್ಬೀರ್ ಮಲಿಕ್ ಮತನಾಡಿ, ನಮ್ಮೆರಡು ಬೇಡಿಕೆಗಳನ್ನು ಮುಂದಿಟ್ಟಿದ್ದೇವೆ ಎಂದು ಹೇಳಿದ್ದರು.
ನಮ್ಮ ಹೋರಾಟ ಮುಂದುವರಿಯುತ್ತದೆ: ಸಾಕ್ಷಿ ಮಲಿಕ್
ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದ್ದಾರೆ ಎಂಬ ಮಾಧ್ಯಮ ವರದಿಗಳನ್ನು ಸಾಕ್ಷಿ ಮಲಿಕ್ ನಿರಾಕರಿಸಿದ್ದಾರೆ. ಮಲಿಕ್ ಈ ಹಿಂದೆ ದೆಹಲಿಯಲ್ಲಿರುವ ಉತ್ತರ ರೈಲ್ವೆ ಕಚೇರಿಯಲ್ಲಿ ಕಾಣಿಸಿಕೊಂಡಿದ್ದರು. ಈ ಮೂಲಕ ಅವರು ಪ್ರತಿಭಟನೆಯನ್ನು ಹಿಂದಕ್ಕೆ ಪಡೆದುಕೊಂಡಿದ್ದಾರೆ ಎಂಬುದಾಗಿ ಸುದ್ದಿಯಾಗಿತ್ತು.
ನಾವು ಪ್ರತಿಭಟನೆಯಿಂದ ಹಿಂದೆ ಸರಿಯಲಿಲ್ಲ. ಎಲ್ಲವೂ ವದಂತಿಗಳು. ಬಾಕಿ ಇರುವ ಕೆಲವು ಕೆಲಸಗಳನ್ನು ಮುಗಿಸಲು ನಾನು ಕಚೇರಿಗೆ ಬಂದಿದ್ದೇನೆ. ಮುಂದೆ ಏನು ಮಾಡಬೇಕು ಪ್ರತಿಭಟನೆಯನ್ನು ಅಹಿಂಸಾತ್ಮಕ ರೀತಿಯಲ್ಲಿ ಹೇಗೆ ಮುಂದುವರಿಸಬೇಕು ಎಂಬುದರ ಬಗ್ಗೆ ಕಾರ್ಯತಂತ್ರವನ್ನು ರೂಪಿಸುತ್ತಿದ್ದೇವೆ ಎಂದು ಮಲಿಕ್ ಹೇಳಿದ್ದಾರೆ.
ಇದಕ್ಕೂ ಮೊದಲು,ಒಲಿಂಪಿಯನ್ ಕುಸ್ತಿಪಟುಗಳು ತಮ್ಮ ಪ್ರತಿಭಟನೆಯನ್ನು ಹಿಂತೆಗೆದುಕೊಂಡಿದ್ದಾರೆ ಎಂಬ ವರದಿಗಳನ್ನು ಅವರು ನಿರಾಕರಿಸಿದ್ದಾರೆ. ಈ ಸುದ್ದಿ ಸಂಪೂರ್ಣವಾಗಿ ತಪ್ಪು. ನ್ಯಾಯಕ್ಕಾಗಿ ಹೋರಾಟದಲ್ಲಿ, ನಮ್ಮಲ್ಲಿ ಯಾರೂ ಹಿಂದೆ ಸರಿದಿಲ್ಲ, ನಾವು ಸಹ ಹಿಂದೆ ಸರಿಯುವುದಿಲ್ಲ. ಸತ್ಯಾಗ್ರಹದ ಜೊತೆಗೆ, ನಾನು ರೈಲ್ವೆಯಲ್ಲಿ ನನ್ನ ಜವಾಬ್ದಾರಿಯನ್ನು ಪೂರೈಸಬೇಕಾಗಿದೆ ನ್ಯಾಯ ಸಿಗುವವರೆಗೂ ನಮ್ಮ ಹೋರಾಟ ಮುಂದುವರಿಯುತ್ತದೆ. ದಯವಿಟ್ಟು ಯಾವುದೇ ತಪ್ಪು ಸುದ್ದಿಗಳನ್ನು ಹರಡಬೇಡಿ” ಎಂದು ಅವರು ಟ್ವೀಟ್ ಮಾಡಿದ್ದಾರೆ.
ಕ್ರಿಕೆಟ್
WTC Final 2023 : ಆಸ್ಟ್ರೇಲಿಯಾ ವಿರುದ್ಧ ಅಬ್ಬರಿಸುವ ಸೂಚನೆ ನೀಡಿದ ರೋಹಿತ್ ಶರ್ಮಾ
ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ ಪ್ರಶಸ್ತಿಗಾಗಿ ಭಾರತ ಮತ್ತು ಆಸ್ಟ್ರೇಲಿಯಾ ಜೂನ್ 7ರಂದು ಮುಖಾಮುಖಿಯಾಗಲಿವೆ.
ಲಂಡನ್: ಜೂನ್ 7 ರಂದು ಲಂಡನ್ನ ದಿ ಓವಲ್ ಸ್ಟೇಡಿಯಮ್ನಲ್ಲಿ ಆರಂಭವಾಗಲಿರುವ ಐಸಿಸಿ ವಿಶ್ವ ಟೆಸ್ಟ್ ಚಾಂಪಿಯನ್ಷಿಪ್ (WTC Final 2023) ಫೈನಲ್ನಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳು ಮುಖಾಮುಖಿಯಾಗಲಿವೆ. ಏತನ್ಮಧ್ಯೆ, ಭಾರತ ತಂಡದ ನಾಯಕ ರೋಹಿತ್ ಶರ್ಮಾ ಆಸ್ಟ್ರೇಲಿಯಾ ವಿರುದ್ಧದ ಚಾಂಪಿಯನ್ಷಿಪ್ ಪಂದ್ಯಕ್ಕೆ ಮುಂಚಿತವಾಗಿ ಬ್ಯಾಟಿಂಗ್ನಲ್ಲಿ ಅಬ್ಬರದ ಪ್ರದರ್ಶನ ನೀಡುವ ಭರವಸೆ ತೋರಿದ್ದಾರೆ. ಓವಲ್ ಇಂಗ್ಲೆಂಡ್ನಲ್ಲಿರುವ ಬ್ಯಾಟಿಂಗ್ ಪ್ರಿಯ ಪಿಚ್ ಆಗಿದ್ದು, ಅಬ್ಬರಿಸುವುದು ಗ್ಯಾರಂಟಿ ಎಂದು ಹೇಳಿದ್ದಾರೆ.
ಈ ಮೈದಾನದಲ್ಲಿ ಭಾರತ ಕೊನೆಯ ಬಾರಿಗೆ ಆಡಿದಾಗ ಹಿಟ್ಮ್ಯಾನ್ ರೋಹಿತ್ ಅದ್ಭುತ ಟೆಸ್ಟ್ ಶತಕ ಭಾರಿಸಿದ್ದರು. ಅದೇ ವಿಶ್ವಾಸದೊಂದಿಗೆ ಮತ್ತೊಂದು ಮೂರಂಕಿ ಮೊತ್ತವನ್ನು ಬಾರಿಸುವ ಸೂಚನೆ ನೀಡಿದ್ದಾರೆ 2021ರಲ್ಲಿ ಟೀಮ್ ಆತಿಥೇಯ ಇಂಡಿಯಾ ಇಂಗ್ಲೆಂಡ್ ವಿರುದ್ಧ ಈ ಪಿಚ್ನಲ್ಲಿ ಆಡಿತ್ತು. ಪಂದ್ಯದಲ್ಲಿ ರೋಹಿತ್ 256 ಎಸೆತಗಳಲ್ಲಿ 127 ರನ್ ಗಳಿಸಿದರು. ಅವರ ಪ್ರದರ್ಶನದಿಂದ ಭಾರತ ತಂಡ ಭರ್ಜರಿ ವಿಜಯ ದಾಖಲಿಸಿತ್ತು. ಹೀಗಾಗಿ ಈ ಬಾರಿಯೂ ರೋಹಿತ್ ಬ್ಯಾಟಿಂಗ್ ಬಗ್ಗೆ ಕುತೂಹಲ ಕೆರಳಿದೆ.
ನಿರ್ಣಾಯಕ ಪಂದ್ಯಕ್ಕೆ ಮುಂಚಿತವಾಗಿ, ಅವರು ಎದುರಾಳಿ ಬೌಲರ್ಗಳನ್ನು ನಿಭಾಯಿಸಲು ಸತತವಾಗಿ ಅಭ್ಯಾಸ ಮಾಡುತ್ತಿದ್ದಾರೆ. ಅಲ್ಲಿನ ಹವಾಮಾನವೂ ಅವರಿಗೆ ಎಷ್ಟರ ಮಟ್ಟಿಗೆ ನೆರವು ನೀಡುತ್ತದೆ ಎಂದು ನೋಡಬೇಕಿದೆ. ಈ ಕುರಿತು ಮಾತನಾಡಿದ ರೋಹಿತ್ “ಹವಾಮಾನವು ಬದಲಾಗುತ್ತಲೇ ಇರುತ್ತದೆ. ಆದ್ದರಿಂದ ಸುದೀರ್ಘ ಇನಿಂಗ್ಸ್ ಬಗ್ಗೆ ಗಮನಹರಿಸಬೇಕಾಗಿದೆ ದೀರ್ಘಕಾಲದವರೆಗೆ ಏಕಾಗ್ರತೆಯನ್ನು ಹೊಂದಿರಬೇಕಾಗುತ್ತದೆ. ಬೌಲರ್ಗಳನ್ನು ಯಾವಾಗ ದಂಡಿಸಬೇಕು ಎಂಬ ಪ್ರಜ್ಞೆಯನ್ನು ಗಳಿಸಬೇಕಾಗುತ್ತೆ. ಅದಕ್ಕೆ ನಾನು ಸಿದ್ದನಾಗಿದ್ದೇನೆ ಎಂದು ಹೇಳಿದ್ದಾರೆ.
ಓವಲ್ನಲ್ಲಿ ಸ್ಕೋರ್ ಬಾರಿಸುವುದು ನನ್ನ ಯೋಜನೆಯಾಗಿದೆ. ಅದಕ್ಕೆ ಪೂರಕ ಯೋಜನೆಗಳನ್ನು ಸಿದ್ದಪಡಿಸಿಕೊಂಡಿದ್ದೇನೆ ಎಂದು ಹೇಳಿದ್ದಾರೆ. “ನಮ್ಮ ಸಾಮರ್ಥ್ಯ ಏನು ಎಂಬುದನ್ನು ನಾವು ಮೊದಲು ಅರ್ಥಮಾಡಿಕೊಳ್ಳಬೇಕು. ಅಂತೆಯೇ ಓವಲ್ ಇಂಗ್ಲೆಂಡ್ನ ಅತ್ಯುತ್ತಮ ಬ್ಯಾಟಿಂಗ್ ಪಿಚ್ಗಳಲ್ಲಿ ಒಂದಾಗಿದೆ ಎಂದು ನಮಗೆ ತಿಳಿದಿದೆ. ಹೀಗಾಗಿ ರನ್ ಹೇಗೆ ಗಳಿಸಬೇಕು ಎಂದು ಅರಿತುಕೊಳ್ಳಬೇಕಾಗುತ್ತದ. ಸ್ಕ್ವೇರ್ ಬೌಂಡರಿ ಮೂಲಕ ರನ್ ಗಳಿಸುವುದು ಸುಲಭ. ಇಲ್ಲಿ ಯಶಸ್ಸು ಸಾಧಿಸಲು ಅದುವೇ ಉತ್ತಮ ಎಂದು ಹೇಳಿದ್ದಾರೆ.
ಇದನ್ನೂ ಓದಿ : IPL 2023 : ಡಕ್ಔಟ್ ಆಗುವ ಮೂಲಕ ಅನಗತ್ಯ ದಾಖಲೆ ಸೃಷ್ಟಿಸಿಕೊಂಡ ರೋಹಿತ್ ಶರ್ಮಾ
ಕಳೆದ ವರ್ಷ ಸೌತಾಂಪ್ಟನ್ನ ರೋಸ್ ಬೌಲ್ನಲ್ಲಿ ನಡೆದ ಡಬ್ಲ್ಯುಟಿಸಿ 2021ರ ಫೈನಲ್ನಲ್ಲಿ ವಿರಾಟ್ ಕೊಹ್ಲಿ ನೇತೃತ್ವದ ಭಾರತ ತಂಡವನ್ನು ಎಂಟು ವಿಕೆಟ್ಗಳಿಂದ ಸೋಲಿಸಿದ್ದ ನ್ಯೂಜಿಲ್ಯಾಂಡ್ ತಂಡ ಚಾಂಪಿಯನ್ಪಟ್ಟ ಅಲಂಕರಿಸಿತ್ತು.
2021-23ರ ಆವೃತ್ತಿಯಲ್ಲಿ ಆಸ್ಟ್ರೇಲಿಯಾ 19 ಟೆಸ್ಟ್ಗಳಲ್ಲಿ 66.67 ಅಂಕಗಳೊಂದಿಗೆ ಡಬ್ಲ್ಯುಟಿಸಿ ಪಾಯಿಂಟ್ಸ್ ಟೇಬಲ್ನಲ್ಲಿ ಅಗ್ರಸ್ಥಾನದಲ್ಲಿದೆ. ಮುಕ್ತಾಯಗೊಂಡ ಬಾರ್ಡರ್-ಗವಾಸ್ಕರ್ ಟ್ರೋಫಿ ಸರಣಿಯಲ್ಲಿ ಕಾಂಗರೂಗಳನ್ನು 2-1 ರಿಂದ ಸೋಲಿಸಿದ ನಂತರ ಭಾರತವು 58.8 ಅಂಕಗಳೊಂದಿಗೆ ಫೈನಲ್ಗೆ ಪ್ರವೇಶಿಸಿತು.
ಕ್ರಿಕೆಟ್
WTC Final 2023: ನೂತನ ಜೆರ್ಸಿಯಲ್ಲಿ ಫೋಟೋಶೂಟ್ ಮಾಡಿಸಿದ ಟೀಮ್ ಇಂಡಿಯಾ
ಭಾರತ ಮತ್ತು ಆಸ್ಟ್ರೇಲಿಯಾ ನಡುವಣ ವಿಶ್ವ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್ ಪಂದ್ಯ ಜೂನ್ 7 ರಿಂದ ಆರಂಭಗೊಳ್ಳಲಿದೆ.
ಲಂಡನ್: ಆಸ್ಟ್ರೇಲಿಯಾ ವಿರುದ್ಧದ ಐಸಿಸಿ ಟೆಸ್ಟ್ ಚಾಂಪಿಯನ್ಶಿಪ್ ಫೈನಲ್(WTC Final 2023) ಪಂದ್ಯದಲ್ಲಿ ಭಾರತ ತಂಡ ನೂತನ ಜೆರ್ಸಿ ತೊಟ್ಟು ಕಣಕ್ಕಿಳಿಯಲಿದೆ. ಇದಕ್ಕೂ ಮುನ್ನ ಟೀಮ್ ಇಂಡಿಯಾ ಆಟಗಾರರು ಹೊಸ ಜೆರ್ಸಿಯಲ್ಲಿ ಫೋಟೋಶೂಟ್ ಮಾಡಿಸಿಕೊಂಡಿದ್ದಾರೆ. ಆಟಗಾರರ ಫೋಟೊಗಳನ್ನು ಬಿಸಿಸಿಐ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಹಂಚಿಕೊಂಡು ಲೈಟ್ಸ್, ಕ್ಯಾಮೆರಾ, ಹೆಟ್ಶಾಟ್ ಎಂದು ಬರೆದುಕೊಂಡಿದೆ. ಈ ಫೋಟೊಗಳು ವೈರಲ್ ಆಗಿವೆ. ಮಹತ್ವದ ಪಂದ್ಯಕ್ಕೂ ಮುನ್ನ ಆಟಗಾರರಿಗೆ ಅಡಿಡಾಸ್ ಸಂಸ್ಥೆ ಹೊಸ ಜೆರ್ಸಿ ಕಿಟ್ಗಳನ್ನು ಒದಗಿಸಿದೆ.
ಭಾರತ ತಂಡದ ಆಟಗಾರರು ಈ ಜೆರ್ಸಿಯಲ್ಲಿ ಕ್ಯಾಮರಾಗೆ ಫೋಸ್ ಕೊಟ್ಟಿದ್ದಾರೆ. ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ, ಶುಭ್ಮನ್ ಗಿಲ್, ಆರ್.ಅಶ್ವಿನ್, ರವೀಂದ್ರ ಜಡೇಜಾ ಮತ್ತು ಇತರ ಆಟಗಾರರ ಫೋಟೋಗಳನ್ನು ಬಿಸಿಸಿಐ ಮತ್ತು ಐಸಿಸಿ ಸಾಮಾಜಿಕ ಜಾಲತಾಣದಲ್ಲಿ ಪೋಸ್ಟ್ ಮಾಡಿದೆ. ಇತ್ತೀಚೆಗೆ ಭಾರತ ಕ್ರಿಕೆಟ್ ತಂಡ ಆಟಗಾರರ ಕಿಟ್ ಪ್ರಾಯೋಜಕ್ವವನ್ನು ಅಡಿಡಾಸ್ ವಹಿಸಿಕೊಂಡಿತ್ತು. ಮೂರು ಮಾದರಿಯ ಕ್ರಿಕೆಟ್ಗೆ ಹೊಸ ಜರ್ಸಿ ಸಿದ್ಧಪಡಿಸಲಾಗಿದೆ. ಟೆಸ್ಟ್ಗೆ ಸಾಂಪ್ರದಾಯಿಕ ಬಿಳಿ ಮತ್ತು ಏಕದಿನಕ್ಕೆ ನೀಲಿ ಬಣ್ಣದ ಡ್ರೆಸ್ನಲ್ಲಿ ಭಾರತ ಇನ್ನು ಮುಂದೆ ಕಣಕ್ಕಿಳಿಯಲಿದೆ.
Lights 💡
— BCCI (@BCCI) June 5, 2023
Camera 📸
Headshots ✅#TeamIndia | #WTC23 pic.twitter.com/9G34bFfg78
ಈ ಮಹತ್ವದ ಪಂದ್ಯದಲ್ಲಿ ಭಾರತ ಮತ್ತು ಆಸ್ಟ್ರೇಲಿಯಾ ತಂಡಗಳ ಆಟಗಾರರು ಈಗಾಗಲೇ ಭರ್ಜರಿ ಅಭ್ಯಾಸದಲ್ಲಿ ತೊಡಗಿದ್ದಾರೆ. ಐಪಿಎಲ್ನಲ್ಲಿ ಮಿಂಚಿದ್ದ ಶುಭಮನ್ ಗಿಲ್ ವಿರಾಟ್ ಕೊಹ್ಲಿ, ಮೊಹಮ್ಮದ್ ಶಮಿ ಮತ್ತು ಸಿರಾಜ್ ಈ ಪಂದ್ಯದಲ್ಲಿ ಯಾವ ರೀತಿಯ ಫಾರ್ಮ್ ತೋರ್ಪಡಿಸಲಿದ್ದಾರೆ ಎಂದು ಕಾದು ನೋಡಬೇಕಿದೆ. ಒಂದೊಮ್ಮೆ ಇವರಲ್ಲಿ ಇಬ್ಬರು ಆಟಗಾರರು ಮಿಂಚಿದರೂ ಭಾರತಕ್ಕೆ ಗೆಲುವು ಖಚಿತ ಎನ್ನಲಡ್ಡಿಯಿಲ್ಲ.
ಈ ಪಂದ್ಯದಲ್ಲಿ ವಿಕೆಟ್ ಕೀಪಿಂಗ್ ಯಾರು ಮಾಡಲಿದ್ದಾರೆ ಎಂಬ ಅನುಮಾನ ಎಲ್ಲರಲ್ಲಿಯೂ ಮೂಡಿದೆ. ಆದರೆ ಸದ್ಯದ ಮಾಹಿತಿ ಪ್ರಕಾರ ಶ್ರೀಕರ್ ಭರತ್ ಅವರು ಕೀಪಿಂಗ್ ಗ್ಲೌಸ್ ತೊಡುವುದು ಪಕ್ಕಾ ಎಂಬಂತಿದೆ. ಇಶಾನ್ ಕಿಶನ್ ಅವರು 5 ದಿನಗಳ ಕಾಲ ಕೀಪಿಂಗ್ ನಡೆಸುವಷ್ಟು ಸಾಮರ್ಥ್ಯ ಇಲ್ಲದ ಕಾರಣ ಅವರಿಗೆ ಅವಕಾಶ ಸಿಗುವುದು ಅನುಮಾನ.
ಇದನ್ನೂ ಓದಿ WTC Final 2023: ಫೈನಲ್ಗೂ ಮುನ್ನವೇ ಮೈಂಡ್ ಗೇಮ್ ಆರಂಭಿಸಿದ ಆಸೀಸ್ ಆಟಗಾರರು; ಕೊಹ್ಲಿ ಬಗ್ಗೆ ಹೇಳಿದ್ದೇನು?
ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಶುಭಮನ್ ಗಿಲ್, ಚೇತೇಶ್ವರ ಪೂಜಾರ, ವಿರಾಟ್ ಕೊಹ್ಲಿ, ಅಜಿಂಕ್ಯ ರಹಾನೆ, ಕೆ.ಎಸ್.ಭರತ್ (ವಿಕೆಟ್ ಕೀಪರ್), ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಅಕ್ಷರ್ ಪಟೇಲ್, ಶಾರ್ದೂಲ್ ಠಾಕೂರ್, ಮೊಹಮ್ಮದ್ ಶಮಿ, ಮೊಹಮ್ಮದ್ ಸಿರಾಜ್, ಉಮೇಶ್ ಯಾದವ್, ಜಯದೇವ್ ಉನಾದ್ಕತ್, ಇಶಾನ್ ಕಿಶನ್ (ವಿಕೆಟ್ ಕೀಪರ್). ಮೀಸಲು ಆಟಗಾರರು: ಯಶಸ್ವಿ ಜೈಸ್ವಾಲ್, ಮುಖೇಶ್ ಕುಮಾರ್, ಸೂರ್ಯಕುಮಾರ್ ಯಾದವ್.
-
ಕರ್ನಾಟಕ19 hours ago
Odisha Train Accident: ಒಡಿಶಾ ರೈಲು ದುರಂತಕ್ಕೆ ಕೋಮು ಬಣ್ಣ ನೀಡಿದ ಮಹಿಳೆ, ಒಡಿಶಾ ಪೊಲೀಸರಿಂದ ತನಿಖೆ
-
ಕರ್ನಾಟಕ17 hours ago
ವಿಶ್ವ ಪರಿಸರ ದಿನ: ಸಸಿ ನೆಡಿ, ಫೋಟೊ ಕಳುಹಿಸಿ; ವಿಸ್ತಾರ ನ್ಯೂಸ್ ಅಭಿಯಾನ
-
ಕರ್ನಾಟಕ14 hours ago
Murder Case: ಟೋಲ್ ವಿಚಾರಕ್ಕೆ ಕಿರಿಕ್; ಹಾಕಿ ಸ್ಟಿಕ್ನಿಂದ ಬಡಿದು ಕೊಂದೇಬಿಟ್ಟರು ದುರುಳರು
-
ಕರ್ನಾಟಕ10 hours ago
DK Shivakumar: ಹೊಸಕೆರೆಹಳ್ಳಿ ಕೆರೆ ಮಧ್ಯೆ ರಸ್ತೆ ಮಾಡಿದ್ದಕ್ಕೆ ಜಾಡಿಸಿದ ಡಿಕೆಶಿ; ಅಧಿಕಾರಿಗಳ ಅಮಾನತಿಗೆ ಆದೇಶ
-
ದೇಶ15 hours ago
Odisha Train Accident: ಗಾಯದ ಮೇಲೆ ಬರೆ ಎಂದರೆ ಇದೇ; ಒಡಿಶಾದಲ್ಲಿ ಹಳಿ ತಪ್ಪಿದ ಮತ್ತೊಂದು ರೈಲು
-
ದೇಶ18 hours ago
world environment day : ಇಂದು ವಿಶ್ವ ಪರಿಸರ ದಿನ 2023: ಈ ದಿನದ ಮಹತ್ವ, ಇತಿಹಾಸ, ಥೀಮ್ ತಿಳಿಯಿರಿ
-
ಪರಿಸರ10 hours ago
ವಿಶ್ವ ಪರಿಸರ ದಿನ: ‘ಸಸಿ ನೆಡಿ, ಫೋಟೊ ಕಳುಹಿಸಿ’ ವಿಸ್ತಾರ ಅಭಿಯಾನ; ನಿಮ್ಮ ಮತ್ತಷ್ಟು ಫೋಟೊಗಳು ಇಲ್ಲಿವೆ
-
ಕರ್ನಾಟಕ7 hours ago
ಸರ್ಕಾರಿ ಬಸ್ ಓಡಿಸಿದ ಖಾಸಗಿ ವ್ಯಕ್ತಿ; ಕ್ರೂಸರ್ಗೆ ಡಿಕ್ಕಿ, ತಪ್ಪಿತು ಭಾರೀ ಅನಾಹುತ