ಅಹಮದಾಬಾದ್: ಮುಂಬೈ ಇಂಡಿಯನ್ಸ್ ವಿರುದ್ಧದ ದ್ವಿತೀಯ ಕ್ವಾಲಿಫೈಯರ್ ಪಂದ್ಯದಲ್ಲಿ ಅಮೋಘ ಶತಕ ಬಾರಿಸಿ ಮಿಂಚಿದ ಶುಭಮನ್ ಗಿಲ್ ಅವರು ಈ ಬಾರಿಯ ಐಪಿಎಲ್ನ ಆರೆಂಜ್ ಕ್ಯಾಪ್ ಮುಡಿಗೇರಿಸಿಕೊಂಡಿದ್ದಾರೆ. ಈ ಮೂಲಕ 730 ರನ್ ಗಳಿಸಿ ಅಗ್ರಸ್ಥಾನದಲ್ಲಿದ್ದ ಡು ಪ್ಲೆಸಿಸ್ ಇದೀಗ ದ್ವಿತೀಯ ಸ್ಥಾನಕ್ಕೆ ಕುಸಿದಿದ್ದಾರೆ.
ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಮೊದಲು ಬ್ಉಆಟಿಂಗ್ ನಡೆಸಿದ ಗುಜರಾತ್ ತಂಡ ಗಿಲ್ ಅವರ ಶತಕದ ನೆರವಿನಿಂದ ಬೃಹತ್ ಮೊತ್ತ ಕಲೆಹಾಕಿತು. ಈ ಪಂದ್ಯದಲ್ಲಿ 8 ರನ್ ಗಳಿಸಿದ ವೇಳೆ ಗಿಲ್ ಅವರು ಡು ಪ್ಲೆಸಿಸ್ ಅವರನ್ನು ಹಿಂದಿಕ್ಕಿ ಆರೆಂಜ್ ಕ್ಯಾಪ್ ವಶಪಡಿಸಿಕೊಂಡರು. ಸದ್ಯ ಗಿಲ್ ಅವರು 851 ರನ್ ಬಾರಿಸಿದ್ದಾರೆ. ಆರ್ಸಿಬಿ ತಂಡ ಸೋಲು ಹೊರ ಬಿದ್ದ ಕಾರಣ ಡು ಪ್ಲೆಸಿಸ್ಗೆ ಇನ್ನು ಗಿಲ್ ದಾಖಲೆ ಮುರಿಯುವ ಅವಕಾಶವಿಲ್ಲ. ಸದ್ಯ ಈ ರೇಸ್ನಲ್ಲಿರುವ ಆಟಗಾರನೆಂದರೆ ಚೆನ್ನೈ ತಂಡದ ಡೆವೋನ್ ಕಾನ್ವೆ. 15 ಪಂದ್ಯ ಆಡಿರುವ ಅವರು 625 ರನ್ ಬಾರಿಸಿದ್ದಾರೆ. ಫೈನಲ್ ಪಂದ್ಯ ಬಾಕಿ ಇದ್ದರೂ ಅವರಿಗೆ ಈ ಮೊತ್ತವನ್ನು ಗಳಿಸಲು ಅಸಾಧ್ಯ. ಹೀಗಾಗಿ ಈ ಬಾರಿಯ ಆರೆಂಜ್ ಕ್ಯಾಪ್ ಗಿಲ್ ಅವರಿಗೆ ಸಿಗುವುದು 100 ಪ್ರತಿಶತವಾಗಿದೆ.
800 ರನ್ಗಳ ಗಡಿ ದಾಡಿದ ವೇಳೆ ಗಿಲ್ ಅವರು ಮತ್ತೊಂದು ದಾಖಲೆಯನ್ನು ತಮ್ಮ ಹೆಸರಿಗೆ ಬರೆದರು. ಒಂದೇ ಆವೃತ್ತಿಯ ಐಪಿಎಲ್ನಲ್ಲಿ 800 ರನ್ ಬಾರಿಸಿದ ನಾಲ್ಕನೇ ಆಟಗಾರ ಎಂಬ ಹಿರಿಮೆಗೂ ಪಾತ್ರರಾದರು. ವಿರಾಟ್ ಕೊಹ್ಲಿ, ಜಾಸ್ ಬಟ್ಲರ್ ಮತ್ತು ಡೇವಿಡ್ ವಾರ್ನರ್ ಈ ಸಾಧನೆ ಮಾಡಿದ ಮೊದಲಿಗರು.
ಇದನ್ನೂ ಓದಿ IPL 2023: ಗಿಲ್ ಶತಕದ ಕಮಾಲ್; ಮುಂಬೈಗೆ ಬೃಹತ್ ಮೊತ್ತದ ಗುರಿ
𝙂𝙄𝙇𝙇𝙞𝙖𝙣𝙩! 👏👏
— IndianPremierLeague (@IPL) May 26, 2023
Stand and applaud the Shubman Gill SHOW 🫡🫡#TATAIPL | #Qualifier2 | #GTvMI | @ShubmanGill pic.twitter.com/ADHi0e6Ur1
31 ರನ್ ಗಳಿಸಿದ್ದ ವೇಳೆ ಟಿಮ್ ಡೇವಿಡ್ ಅವರಿಂದ ಕ್ಯಾಚ್ ಕೈಚೆಲ್ಲಿ ಜೀವದಾನ ಪಡೆದ ಗಿಲ್ ಇದರ ಸಂಪೂರ್ಣ ಲಾಭವೆತ್ತಿ ಶತಕ ಸಿಡಿಸಿ ಸಂಭ್ರಮಿಸಿದರು. 60 ಎಸೆತ ಎದುರಿಸಿದ ಗಿಲ್ ಬರೊಬ್ಬರಿ 10 ಸಿಕ್ಸರ್ ಮತ್ತು 7 ಬೌಂಡರಿ ನೆರವಿನಿಂದ 129 ರನ್ ಗಳಿಸಿದರು. ಗಿಲ್ ಅವರು ಬಾರಿಸಿದ ಮೂರನೇ ಐಪಿಎಲ್ ಶತಕ ಇದಾಗಿದೆ. ಈ ಮೂರು ಶತಕಗಳು ಈ ಆವೃತ್ತಿಯಲ್ಲಿಯೇ ದಾಖಲಾಗಿದ್ದು ವಿಶೇಷ.