ಬೆಂಗಳೂರು: ರಾಯಲ್ ಚಾಲೆಂಜರ್ಸ್ ಬೆಂಗಳೂರು ಫ್ರಾಂಚೈಸಿಯು “ಆರ್‌ಸಿಬಿ ಅನ್‌ಬಾಕ್ಸ್: ಕಾರ್ಯಕ್ರಮವನ್ನು ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ಯಶಸ್ವಿಯಾಗಿ ನಡೆಸಿದೆ. ತಂಡದ ಮಾಜಿ ಆಟಗಾರರಾದ ಎಬಿ ಡಿವಿಲಿಯರ್ಸ್ ಹಾಗೂ ಕ್ರಿಸ್ ಗೇಲ್ ಈ ಕಾರ್ಯಕ್ರಮದ ಆಕರ್ಷಣೆಯ ಕೇಂದ್ರ ಬಿಂದುವಾಗಿ ಕಾಣಿಸಿಕೊಂಡರು.
ಭಾನುವಾರ ಚಿನ್ನಸ್ವಾಮಿ ಸ್ಟೇಡಿಯಂನಲ್ಲಿ ನಡೆದ ಈ ಕಾರ್ಯಕ್ರಮವನ್ನು ನೋಡಲು ಜನರು ಹೆಚ್ಚಿನ ಸಂಖ್ಯೆಯಲ್ಲಿ ನೆರೆದಿದ್ದರು. ಪಂದ್ಯ ವೀಕ್ಷಣೆಗೆ ಬಂದಷ್ಟೇ ಉತ್ಸಾಹದಿಂದ ಆರ್‌ಸಿಬಿ ಅಭಿಮಾನಿಗಳು ಈ ಕಾರ್ಯಕ್ರಮಕ್ಕೆ ಆಮಿಸಿದ್ದರು. ಇದೇ ವೇಳೆ ತಂಡದ ನೆಚ್ಚಿನ ಮಾಜಿ ಆಟಗಾರರಾದ ಕ್ರಿಸ್ ಗೇಲ್ ಮತ್ತು ಎಬಿ ಡಿವಿಲಿಯರ್ಸ್‌ಗೆ ಹಾಲ್ ಆಫ್ ಫೇಮ್ ಪ್ರಶಸ್ತಿ ನೀಡಿ ಗೌರವಿಸಲಾಯಿತು. ಈ ಮೂಲಕ ಉಭಯ ಆಟಗಾರರು ಧರಿಸಿದ್ದ ಜೆರ್ಸಿ ನಂಬರನ್ನು ಆರ್‌ಸಿಬಿ ಫ್ರಾಂಚೈಸಿಯು ಶಾಶ್ವತವಾಗಿ ನಿವೃತ್ತಿಗೊಳಿಸಿತು.
ನೂತನ ಜೆರ್ಸಿ ಅನಾವರಣ
16ನೇ ಆವೃತ್ತಿಯ ಐಪಿಎಲ್ ಟೂರ್ನಿಗೆ ಇದೇ ಕಾರ್ಯಕ್ರಮದ ಮೂಲಕ ಆರ್‌ಸಿಬಿ ತಂಡ ನೂತನ ಜೆರ್ಸಿಯನ್ನು ಅನಾವರಣ ಮಾಡಿತು. ತಂಡದ ಮಾಜಿ ನಾಯಕ ವಿರಾಟ್ ಕೊಹ್ಲಿ, ಹಾಲಿ ನಾಯಕ ಫಾಪ್ ಡು ಪ್ಲೆಸಿಸ್ ಹಾಗೂ ಕ್ರಿಸ್ ಗೇಲ್ ಉಪಸ್ಥಿತಿಯಲ್ಲಿ ಈ ಜೆರ್ಸಿಯನ್ನು ಬಿಡುಗಡೆಗೊಳಿಸಲಾಯಿತು. ಈ ಕಾರ್ಯಕ್ರಮಕ್ಕೆ ಮಹಿಳಾ ಪ್ರೀಮಿಯರ್ ಲೀಗ್ನ ಆರ್‌ಸಿಬಿ ತಂಡದ ಕೆಲ ಆಟಗಾರ್ತಿಯರು ಪಾಲ್ಗೊಂಡಿದ್ದರು.
ಸೋನು ನಿಗಮ್, ಜೇಸನ್ ಡೆರುಲೊ ಸೇರಿದಂತೆ ಹಲವು ಮಂದಿ ಸಂಗೀತ ರಸಮಂಜರಿ ಮೂಲಕ ನೆರೆದಿದ್ದ ಅಭಿಮಾನಿಗಳನ್ನು ರಂಜಿಸಿದರಿ. ಇದೇ ವೇಳೆ ಆರ್‌ಸಿಬಿ ತಂಡದ ವೇಗಿ ಹರ್ಷಲ್ ಪಟೇಲ್ ಅವರು ಗಿಟಾರ್ ಹಿಡಿದು ಎಲ್ಲರ ಗಮನ ಸೆಳೆದರು.
ಇದನ್ನೂ ಓದಿ IPL 2023 : ರಿಷಭ್ ಪಂತ್ ಅಲಭ್ಯತೆ ಡೆಲ್ಲಿ ಕ್ಯಾಪಿಟಲ್ಸ್ ತಂಡಕ್ಕೆ ಕಾಡುತ್ತಿದೆ ಎಂದ ನಿರ್ದೇಶಕ ಸೌರವ್ ಗಂಗೂಲಿ
ಆರ್‌ಸಿಬಿ ತಂಡದ ಸದಸ್ಯರು
ಫಾಫ್ ಡು ಪ್ಲೆಸಿಸ್ (ನಾಯಕ), ವಿರಾಟ್ ಕೊಹ್ಲಿ, ಸುಯಾಶ್ ಪ್ರಭುದೇಸಾಯಿ, ರಜತ್ ಪಾಟಿದಾರ್, ದಿನೇಶ್ ಕಾರ್ತಿಕ್, ಅನುಜ್ ರಾವತ್, ಫಿನ್ ಅಲೆನ್, ಗ್ಲೆನ್ ಮ್ಯಾಕ್ಸ್‌ವೆಲ್, ವಾನಿಂದು ಹಸರಂಗ, ಶಹಬಾಜ್ ಅಹ್ಮದ್, ಹರ್ಷಲ್ ಪಟೇಲ್, ಡೇವಿಡ್ ವಿಲ್ಲಿ, ಕರಣ್ ಶರ್ಮಾ, ಮಹಿಪಾಲ್ ಲೊಮ್ರೋರ್, ಮೊಹಮ್ಮದ್ ಸಿರಾಜ್, ಹೇಜಲ್ವುಡ್, ಸಿದ್ದಾರ್ಥ್ ಕೌಲ್, ಆಕಾಶ್ ದೀಪ್, ರೀಸ್ ಟೋಪ್ಲೆ, ಹಿಮಾಂಶು ಶರ್ಮಾ, ವಿಲ್ ಜಾಕ್ಸ್, ಮನೋಜ್ ಭಾಂಡಗೆ, ರಾಜನ್ ಕುಮಾರ್, ಅವಿನಾಶ್ ಸಿಂಗ್.