IPL 2023: ಗೆಲುವಿನ ಹಳಿ ಏರಿದ ಗುಜರಾತ್​; ಪಂಜಾಬ್​ ವಿರುದ್ಧ 6 ವಿಕೆಟ್​ ಜಯ - Vistara News

ಕ್ರಿಕೆಟ್

IPL 2023: ಗೆಲುವಿನ ಹಳಿ ಏರಿದ ಗುಜರಾತ್​; ಪಂಜಾಬ್​ ವಿರುದ್ಧ 6 ವಿಕೆಟ್​ ಜಯ

ಕೊನೆಯ ಓವರ್​ನ ರೋಚಕ ಪಂದ್ಯದಲ್ಲಿ ಹಾಲಿ ಚಾಂಪಿಯನ್​ ಗುಜರಾತ್​ ಟೈಟನ್ಸ್​ ತಂಡ ಪಂಜಾಬ್​ ಕಿಂಗ್ಸ್​ ವಿರುದ್ಧ 6 ವಿಕೆಟ್​ ಗೆಲುವು ದಾಖಲಿಸಿದೆ.

VISTARANEWS.COM


on

Punjab Kings vs Gujarat Titans
ಮಹತ್ವದ, ಕುತೂಹಲಕರ ಸುದ್ದಿಗಾಗಿ ಫಾಲೊ ಮಾಡಿ
Koo

ಮೊಹಾಲಿ: ಕೋಲ್ಕತಾ ನೇಟ್​ ರೈಡರ್ಸ್​ ವಿರುದ್ಧದ ಪಂದ್ಯದಲ್ಲಿ ಸೋಲು ಕಂಡಿದ್ದ ಹಾಲಿ ಚಾಂಪಿಯನ್​ ಗುಜರಾತ್​ ಟೈಟನ್ಸ್​ ತಂಡ ಮತ್ತೆ ಗೆಲುವಿನ ಟ್ರ್ಯಾಕ್​ಗೆ ಮರಳಿದೆ. ಪಂಜಾಬ್ ಕಿಂಗ್ಸ್​ ವಿರುದ್ಧದ ಪಂದ್ಯದಲ್ಲಿ 6 ವಿಕೆಟ್​ಗಳ ಗೆಲುವು ದಾಖಲಿಸಿದೆ. ಇದು ಪಾಂಡ್ಯ ಪಡೆಗೆ ಒಲಿದ ಮೂರನೇ ಗೆಲುವಾಗಿದೆ. ಪಂಜಾಬ್​ಗೆ ಎದುರಾದ ಸತತ ಎರಡನೇ ಸೋಲು ಇದಾಗಿದೆ.

ಮೊಹಾಲಿಯ ಐ.ಎಸ್‌.ಬಿಂದ್ರಾ ಸ್ಟೇಡಿಯಂನಲ್ಲಿ ಗುರುವಾರ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಪಂಜಾಬ್​ ಕಿಂಗ್ಸ್​ ನಿಗದಿತ 20 ಓವರ್​ಗಳಲ್ಲಿ 8 ವಿಕೆಟ್ ನಷ್ಟಕ್ಕೆ 153 ರನ್​ ಬಾರಿಸಿತು. ಜವಾಬಿತ್ತ ಗುಜರಾತ್​ ಟೈಟನ್ಸ್​ 19.5 ಓವರ್​ಗಳಲ್ಲಿ 4 ವಿಕೆಟ್​ ನಷ್ಟಕ್ಕೆ 154 ರನ್​ ಬಾರಿಸಿ ಗೆಲುವು ದಾಖಲಿಸಿತು.

ಸಾಧಾರಣ ಮೊತ್ತವನ್ನು ಬೆನ್ನಟಿದ ಗುಜರಾತ್​ಗೆ ಆರಂಭಿಕರಾದ ವೃದ್ಧಿಮಾನ್​ ಸಾಹಾ ಮತ್ತು ಶಭಮನ್​ ಗಿಲ್​ ಉತ್ತಮ ಅಡಿಪಾಯ ಹಾಕಿದರು. ಈ ಜೋಡಿ ಕೇವಲ ನಾಲ್ಕು ಓವರ್​ಗಳಲ್ಲಿ 40 ರನ್​ ಜತೆಯಾಟ ನಡೆಸಿತು. ಈ ವೇಳೆ ಕಗಿಸೊ ರಬಾಡ ಅವರು ಸಾಹಾ ವಿಕೆಟ್​ ಕಿತ್ತರು. ಈ ವಿಕೆಟ್​ ಪಡೆಯುತ್ತಿದ್ದಂತೆ ರಬಾಡ ಅವರು ಐಪಿಎಲ್​ನಲ್ಲಿ ನೂರು ವಿಕೆಟ್​ ಪೂರ್ತಿಗೊಳಿಸಿದ ಸಾಧನೆ ಮಾಡಿದರು. ಬಳಿಕ ಬಂದ ಸಾಯಿ ಸುದರ್ಶನ್​ 19 ರನ್​ಗೆ ಔಟಾದರು. ಆದರೆ ಮತ್ತೊಂದು ತುದಿಯಲ್ಲಿ ಜವಬ್ದಾರಿಯುತ ಬ್ಯಾಟಿಂಗ್ ನಡೆಸುತ್ತಿದ್ದ ಶುಭಮನ್​ ಗಿಲ್​ 40 ಎಸೆತಗಳಲ್ಲಿ ಅರ್ಧಶತಕ ಪೂರೈಸಿದರು. ಒಟ್ಟು 49 ಎಸೆತಗಳಿಂದ ಅವರು 67 ರನ್​ ಗಳಿಸಿ ಸ್ಯಾಮ್​ ಕರನ್​ಗೆ ವಿಕೆಟ್​ ಒಪ್ಪಿಸಿದರು.

ಅಂತಿಮ ಓವರ್​ನಲ್ಲಿ ಗೆಲುವಿಗೆ 7 ರನ್​ ತೆಗೆಯುವ ಸವಾಲಿನಲ್ಲಿ ಡೇವಿಡ್​ ಮಿಲ್ಲರ್(17*)​ ಮತ್ತು ರಾಹುಲ್​ ತೆವಾಟಿಯ(5*) ಅಜೇಯ ಆಟವಾಡುವ ಮೂಲಕ ತಂಡವನ್ನು ಗೆಲುವಿನ ದಡ ಸೇರಿಸಿದರು. 2 ಎಸೆತದ ಮುಂದೆ ನಾಲ್ಕು ರನ್​ ಬೇಕಿದ್ದಾಗ ತೆವಾಟಿಯ ಬೌಂಡರಿ ಬಾರಿಸಿ ಗೆಲುವನ್ನು ಸಾರಿದರು. ಪಂಜಾಬ್​ ಪರ ಅರ್ಶ್​ದೀಪ್​ ಸಿಂಗ್​, ರಬಾಡ, ಸ್ಯಾಮ್​ ಕರನ್​ ತಲಾ ಒಂದು ವಿಕೆಟ್​ ಪಡೆದರು.

ಪಾಂಡ್ಯ ಮತ್ತೆ ವಿಫಲ

​ನಾಯಕ ಪಾಂಡ್ಯ ಅವರ ಬ್ಯಾಟಿಂಗ್​ ವೈಫಲ್ಯ ಈ ಪಂದ್ಯದಲ್ಲಿಯೂ ಮುಂದುವರಿಯಿತು. ಕೇವಲ 8 ರನ್​ಗೆ ಔಟಾಗುವ ಮೂಲಕ ಮತ್ತೆ ಎರಡಂಕಿ ಮೊತ್ತ ದಾಟುವಲ್ಲಿ ಎಡವಿದರು. ಇದಕ್ಕೂ ಮುನ್ನ ಆಡಿದ ಎರಡು ಪಂದ್ಯದಲ್ಲಿ ಕ್ರಮವಾಗಿ ಅವರು ಗಳಿಸಿದ ಮೊತ್ತ 8,5. ಇದೀಗ ಮೂರು ಪಂದ್ಯಗಳಲ್ಲಿ ಅವರ ಬ್ಯಾಟ್​ನಿಂದ ಬಂದ ಒಟ್ಟು ಮೊತ್ತ 21. ಸದ್ಯ ಈ ಪಂದ್ಯದಲ್ಲಿ ಗಿಲ್​ ಮತ್ತು ಸಹ ಆಟಗಾರರು ಆಡಿದ ಕಾರಣ ಪಂದ್ಯ ಗೆಲುವು ದಾಖಲಿಸಿತು. ಆದರೆ ಮುಂದಿನ ಪಂದ್ಯದಲ್ಲಿಯೂ ಇವರನ್ನೇ ನಂಬಿ ಕೂತರೆ, ಒಂದೊಮ್ಮೆ ಅವರು ಆಡದೇ ಹೋದರೆ ಪಂದ್ಯ ಸೋಲು ಕಾಣುವುದು ಖಚಿತ. ಹೀಗಾಗಿ ಪಾಂಡ್ಯ ತಕ್ಷಣ ಎಚ್ಚೆತ್ತುಕೊಂಡು ಮುಂದಿನ ಪಂದ್ಯದಲ್ಲಿ ಬ್ಯಾಟಿಂಗ್​ ಫಾರ್ಮ್​ ಕಂಡುಕೊಳ್ಳುವ ಅನಿವಾರ್ಯತೆ ಇದೆ.

ನೀರಸ ಬ್ಯಾಟಿಂಗ್​ ಪ್ರದರ್ಶಿಸಿದ ಪಂಜಾಬ್​

ಇದಕ್ಕೂ ಮೊದಲು ಬ್ಯಾಟಿಂಗ್​ ನಡೆಸಿದ ಪಂಜಾಬ್​ಗೆ ಆರಂಭದಲ್ಲೇ ಮೊಹಮ್ಮದ್​ ಶಮಿ ಶಾಕ್​ ನೀಡಿದರು. ತಂಡ ಖಾತೆ ತೆರೆಯುವ ಮೊದಲೇ ಪ್ರಭ್​ಶಿಮ್ರಾನ್​ ಸಿಂಗ್​ ವಿಕೆಟ್​ ಬೇಟೆಯಾಡಿ ಗುಜರಾತ್​ಗೆ ಮುನ್ನಡೆ ತಂದುಕೊಟ್ಟರು. ಗಾಯದಿಂದಾಗಿ ಜಾನಿ ಬೇರ್​ಸ್ಟೋ ಟೂರ್ನಿಯಿಂದ ಹೊರಬಿದ್ದ ಕಾರಣ ತಂಡ ಸೇರ್ಪಡೆಗೊಂಡಿದ್ದ ಮ್ಯಾಥ್ಯೂ ಶಾರ್ಟ್‌ ಈ ಪಂದ್ಯದಲ್ಲಿ ಆಡುವ ಅವಕಾಶ ಪಡೆದರು. ಕ್ರೀಸ್​ಗೆ ಬಂದ ಆರಂಭದಲ್ಲೇ ಮೊಹಮ್ಮದ್​ ಶಮಿ ಓವರ್​ನಲ್ಲಿ ಅವರು ಬಡಬಡನೆ 2 ಬೌಂಡರಿ ಬಾರಿಸಿ ಅಪಾಯಕಾರಿಯಾಗುವ ಸೂಚನೆ ನೀಡಿದರು.

ಬಿರುಸಿನಿಂದಲೇ ಬ್ಯಾಟ್​ ಬೀಸುತ್ತಿದ್ದ ಅವರನ್ನು ಕಳೆದ ಪಂದ್ಯದ ಹ್ಯಾಟ್ರಿಕ್​​ ವಿಕೆಟ್​ ವೀರ ರಶೀದ್​ ಖಾನ್​ ಕ್ಲೀನ್​ ಬೌಲ್ಡ್​ ಮಾಡುವ ಮೂಲಕ ಅವರ ಬ್ಯಾಟಿಂಗ್​ ಅಬ್ಬರಕ್ಕೆ ಬ್ರೇಕ್​ ಹಾಕಿದರು. ಒಟ್ಟು 24 ಎಸೆತ ಎದುರಿಸಿದ ಅವರು 36 ರನ್​ ಬಾರಿಸಿದರು. 6 ಬೌಂಡರಿ ಮತ್ತು ಒಂದು ಸಿಕ್ಸರ್​ ಒಳಗೊಂಡಿತ್ತು. ಕಳೆದ ಮೂರು ಪಂದ್ಯಗಳಲ್ಲಿ ಉತ್ತಮ ಬ್ಯಾಟಿಂಗ್​ ಮೂಲಕ ತಂಡಕ್ಕೆ ಆಸರೆಯಾಗಿದ್ದ ನಾಯಕ ಶಿಖರ್​ ಧವನ್​ ಅವರು ಈ ಪಂದ್ಯದಲ್ಲಿ ಕೇವಲ 8 ರನ್​ಗೆ ಔಟಾದರು.

ಇದನ್ನೂ ಓದಿ IPL 2023: ತಂದೆಯ ಕ್ರಿಕೆಟ್​ ಪ್ರದರ್ಶನವನ್ನು ಟಿವಿಯಲ್ಲಿ ಕಂಡು ಖುಷಿಪಟ್ಟ ಅಂಬೆಗಾಲಿನ ಮಗು; ವಿಡಿಯೊ ವೈರಲ್​

ಮ್ಯಾಥ್ಯೂ ಶಾರ್ಟ್‌ ವಿಕೆಟ್​ ಪತನದ ಬಳಿಕ ತಂಡದ ಮೊತ್ತವೂ ಕುಂಡಿತವಾಗಿ ಸಾಗಿತು. ಜಿತೇಶ್​ 25 ರನ್​ ಗಳಿಸಿ ಮೋಹಿತ್​ ಶರ್ಮ ಅವರಿಗೆ ವಿಕೆಟ್​ ಒಪ್ಪಿಸಿದರು. ಮೋಹಿತ್ ಶರ್ಮ ಅವರು ಮೂರು ವರ್ಷಗಳ ಬಳಿಕ ಐಪಿಎಲ್​ ಟೂರ್ನಿಯಲ್ಲಿ ಆಡಲಿಳಿದರು. ಅವರು 2020ರಲ್ಲಿ ಪಂಜಾಬ್​ ತಂಡದ ಪರ ಕೊನೆಯ ಬಾರಿ ಐಪಿಎಲ್​ ಪಂದ್ಯವನ್ನಾಡಿದ್ದರು. ಮೂರು ವರ್ಷಗಳ ಬಳಿಕ ಆಡಿದರೂ ಉತ್ತಮ ಪ್ರದರ್ಶನ ತೋರಿದರು. 4 ಓವರ್​ ಎಸೆದು ಕೇವಲ 18 ರನ್​ ನೀಡಿ 2 ವಿಕೆಟ್​ ಕಿತ್ತರು. ಆಲ್​ರೌಂಡರ್​ ಸ್ಯಾಮ್​ ಕರನ್​ 22, ಭನುಕಾ ರಾಜಪಕ್ಸೆ 20 ರನ್​ ಬಾರಿಸಿದರು. ಅಂತಿಮ ಹಂತದಲ್ಲಿ ಶಾರುಖ್​ ಖಾನ್​ ಅವರು ಸಿಡಿದು ನಿಂತ ಪರಿಣಾಮ ತಂಡ ಸ್ಪರ್ಧಾತ್ಮಕ ಮೊತ್ತ ಪೇರಿಸಿತು. ಅವರು 9 ಎಸೆತಕ್ಕೆ 22 ರನ್​ ಗಳಿಸಿ ರನೌಟ್​ ಸಂಕಟಕ್ಕೆ ಸಿಲುಕಿದರು.

ಕೆಕೆಆರ್​ ವಿರುದ್ಧದ ಪಂದ್ಯದಲ್ಲಿ ಅಸೌಖ್ಯದ ಕಾರಣ ಪಂದ್ಯದಿಂದ ಹೊರಗುಳಿದಿದ್ದ ತಂಡದ ಖಾಯಂ ನಾಯಕ ಹಾರ್ದಿಕ್ ಪಾಂಡ್ಯ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಮತ್ತೆ ನಾಯಕ್ವ ವಹಿಸಿಕೊಂಡರು. ಕೆಕೆಆರ್​ ವಿರುದ್ಧದ ಪಂದ್ಯದಲ್ಲಿ ರಶೀದ್​ ಖಾನ್​ ತಂಡವನ್ನು ಮುನ್ನಡೆಸಿದ್ದರು.

ಕ್ಷಣ ಕ್ಷಣದ ಮಾಹಿತಿಗಾಗಿ Vistara News FaceBook ಪೇಜ್ ಫಾಲೋ ಮಾಡಿ
ಮಹತ್ವದ ಮಾಹಿತಿಗಾಗಿ ವಿಸ್ತಾರ ನ್ಯೂಸ್ ಆ್ಯಪ್ ಉಚಿತವಾಗಿ ಡೌನ್ ಲೋಡ್ ಮಾಡಿಕೊಳ್ಳಿ: Andriod App | IOS App
Continue Reading
Click to comment

Leave a Reply

Your email address will not be published. Required fields are marked *

ಕ್ರೀಡೆ

MS Dhoni: ಗೆಳತಿಯ ಹೆಸರಿನಲ್ಲಿ 7 ಅಕ್ಷರಗಳಿಲ್ಲದ ಕಾರಣ ಬ್ರೇಕಪ್ ಆದ ಧೋನಿ ಅಭಿಮಾನಿ

MS Dhoni: ಮಹೇಂದ್ರ ಸಿಂಗ್‌ ಧೋನಿಯ ಅಪ್ಪಟ ಅಭಿಮಾನಿಯೊಬ್ಬ ತನ್ನ ಗೆಳತಿಯ ಹೆಸರಿನಲ್ಲಿ 7 ಅಕ್ಷರಗಳಿಲ್ಲದ ಕಾರಣ ಬ್ರೇಕಪ್ ಮಾಡಿದ್ದಾನೆ. ಭಾನುವಾರ ನಡೆದ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಪೋಸ್ಟರ್​ ಹಿಡಿಯುವ ಮೂಲಕ ಈ ಅಭಿಮಾನಿ ತನ್ನ ಬ್ರೇಕಪ್ ವಿಚಾರವನ್ನು ಬಹಿರಂಗಪಡಿಸಿದ್ದಾನೆ.

VISTARANEWS.COM


on

MS Dhoni
Koo

ಚೆನ್ನೈ: ಮಹೇಂದ್ರ ಸಿಂಗ್‌ ಧೋನಿ(MS Dhoni) ಅಂತಾರಾಷ್ಟ್ರೀಯ ಕ್ರಿಕೆಟಿಗೆ ನಿವೃತ್ತಿ ಘೋಷಿಸಿ ಹಲವು ವರ್ಷ ತುಂಬಿದರೂ ಅವರು ಈಗಲೂ ಕ್ರಿಕೆಟಿನ ಸೂಪರ್‌ ಸ್ಟಾರ್‌ ಆಗಿದ್ದಾರೆ. ಅವರ ಅಭಿಮಾನಿಗಳ ಸಂಖ್ಯೆಗೇನೂ ಕೊರತೆ ಇಲ್ಲ. ಐಪಿಎಲ್​ನಲ್ಲಿ(IPL 2024) ಚೆನ್ನೈ ಪರ ಆಡುತ್ತಿರುವ ಧೋನಿ ಮೈದಾನಕ್ಕೆ ಇಳಿದರೆ ಸಾಕು ಇಡೀ ಸ್ಟೇಡಿಯಂ ತುಂಬಾ ಧೋನಿಯ ಹೆಸರಿನದ್ದೇ ಸದ್ದು. ಧೋನಿಯನ್ನು ನೋಡಲೆಂದೇ ಅವರ ಅಭಿಮಾನಿಗಳು ಕಾದು ಕುಳಿತಿರುತ್ತಾರೆ. ಇದೀಗ ಅವರ ಅಪ್ಪಟ ಅಭಿಮಾನಿಯೊಬ್ಬ ತನ್ನ ಗೆಳತಿಯ ಹೆಸರಿನಲ್ಲಿ 7 ಅಕ್ಷರಗಳಿಲ್ಲದ ಕಾರಣ ಬ್ರೇಕಪ್ ಮಾಡಿದ್ದಾನೆ. ಭಾನುವಾರ ನಡೆದ ಸನ್​ರೈಸರ್ಸ್​ ಹೈದರಾಬಾದ್ ವಿರುದ್ಧದ ಪಂದ್ಯದಲ್ಲಿ ಪೋಸ್ಟರ್​ ಹಿಡಿಯುವ ಮೂಲಕ ಈ ಅಭಿಮಾನಿ ತನ್ನ ಬ್ರೇಕಪ್ ವಿಚಾರವನ್ನು ಬಹಿರಂಗಪಡಿಸಿದ್ದಾನೆ.

ಚೆನ್ನೈಯ ಚೆಪಾಕ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಐಪಿಎಲ್​(IPL 2024) ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಚೆನ್ನೈ(Chennai Super Kings) ತಂಡ ನಾಯಕ ಋತುರಾಜ್​ ಗಾಯಕ್ವಾಡ್​, ಡೇರಿಯಲ್​ ಮಿಚೆಲ್​ ಮತ್ತು ಶಿವಂ ದುಬೆ ಅವರ ಆಕ್ರಮಣಕಾರಿ ಬ್ಯಾಟಿಂಗ್​ ಸಾಹಸದಿಂದ ನಿಗದಿತ 20 ಓವರ್​ಗಳಲ್ಲಿ ಕೇವಲ 3 ವಿಕೆಟ್​ ನಷ್ಟಕ್ಕೆ 212 ರನ್​ ಬಾರಿಸಿತು. ಈ ಹಿಂದಿನ ಪಂದ್ಯಗಳಲ್ಲಿ ಸಲೀಸಾಗಿ ಮೂರು ಬಾರಿ 250ರ ಗಡಿ ದಾಟಿದ್ದ ಸನ್​ರೈಸರ್ಸ್​ ತಂಡಕ್ಕೆ ಈ ಮೊತ್ತ ಎಲ್ಲಿಂದಲೂ ಸಾಲದು ಎಂದು ನಿರೀಕ್ಷೆ ಮಾಡಿದ್ದವರಿಗೆ ಚೆನ್ನೈ ತಂಡದ ಮಧ್ಯಮ ವೇಗಿ ತುಷಾರ್​ ದೇಶ್​ಪಾಂಡೆ ಘಾತಕ ಸ್ಫೆಲ್ ಮೂಲಕ ಕಟ್ಟಿಹಾಕಿದರು. ಅಂತಿಮವಾಗಿ ಹೈದರಾಬಾದ್​ 18.5 ಓವರ್​ಗಳಲ್ಲಿ 134 ರನ್​ಗೆ ಸರ್ವಪತನ ಕಂಡು ಹೀನಾಯವಾಗಿ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ IPL 2024 Points Table: ಚೆನ್ನೈ ಗೆಲುವಿನಿಂದ ಅಂಕಪಟ್ಟಿಯಲ್ಲಿ 3 ತಂಡಗಳಿಗೆ ಭಾರೀ ಹೊಡೆತ

ಎಂ.ಎಸ್.ಧೋನಿ(MS Dhoni), ಕ್ಯಾಪ್ಟನ್‌ ಕೂಲ್‌, ಮಾಹಿ, ತಾಲಾ… ಎಂದೆಲ್ಲ ಪ್ರೀತಿಯಿಂದ ಕರೆಸಿಕೊಳ್ಳುವ ಮಹೇಂದ್ರ ಸಿಂಗ್‌ ಧೋನಿ ಎಂದರೆ ಅಭಿಮಾನಿಗಳಿಗೊಂದು ಎಮೋಷನ್ (ಭಾವನೆ). ಅವರು ಅಪಾರ ಸಂಖ್ಯೆಯ ಅಭಿಮಾನಿ ಬಳಗವನ್ನು ಹೊಂದಿದ್ದಾರೆ. ಕಳೆದ ವರ್ಷವೇ ಧೋನಿ ಅವರು ಐಪಿಎಲ್​ಗೆ ವಿದಾಯ ಹೇಳಲು ನಿರ್ಧರಿಸಿದ್ದರು. ಆದರೆ ಅಭಿಮಾನಿಗಳ ಒತ್ತಾಯದ ಮೇರೆಗೆ ತಮ್ಮ ನಿವೃತ್ತಿಯನ್ನು ಮುಂದೆ ಹಾಕಿದ್ದರು. ಈ ಬಾರಿಯ ಟೂರ್ನಿ ಅವರಿಗೆ ವಿದಾಯದ ಟೂರ್ನಿಯಾಗಲಿದೆ. ಈ ಮೂಲಕ ಧೋನಿ ಎಲ್ಲ ಮಾದರಿಯ ಕ್ರಿಕಟ್​ಗೂ ಗುಡ್​ಬೈ ಹೇಳಲಿದ್ದಾರೆ. ಹೀಗಾಗಿ ಧೋನಿ ಅವರ ಬ್ಯಾಟಿಂಗ್​ ಕುಣ್ತುಂಬಿಕೊಳ್ಳಲು ಅವರ ಅಭಿಮಾನಿಗಳು ಪ್ರತಿ ಪಂದ್ಯದ ವೇಳೆಯೂ ಬಹಳ ನಿರೀಕ್ಷೆಯಿಂದ ಕಾಯುತ್ತಿರುತ್ತಾರೆ.

ಮೊಣಕಾಲು ಗಾಯದ ಸಮಸ್ಯೆಯಿಂದ ಬಳಲುತ್ತಿರುವ ಧೋನಿ ಕಳೆದ ವರ್ಷ ಮುಂಬೈಯಲ್ಲಿ ಶಸ್ತ್ರಚಿಕಿತ್ಸೆಗೆ ಒಳಗಾಗಿದ್ದರು. ಈ ಬಾರಿಯ ಐಪಿಎಲ್​ನ ಮೊದಲ ಪಂದ್ಯದಲ್ಲಿಯೇ ಧೋನಿ ಗಾಯದ ಸಮಸ್ಯೆಯಿಂದ ಬಳಲುತ್ತಿರುವುದು ಕಂಡು ಬಂದಿತ್ತು. ಕಳೆದ ಮುಂಬೈ ಮತ್ತು ಕೆಕೆಆರ್​ ವಿರುದ್ಧದ ಪಂದ್ಯದಲ್ಲಿ ಬ್ಯಾಟಿಂಗ್​ ನಡೆಸಿದ ವೇಳೆ ಕುಂಟುತಾ ನಡೆದಾಡಿದ ಫೋಟೊ ಮತ್ತು ವಿಡಿಯೊ ವೈರಲ್​ ಆಗಿತ್ತು. ಕಳೆದ ಮುಂಬೈ ವಿರುದ್ಧದ ಪಂದ್ಯದಲ್ಲಿ ಹಾರ್ದಿಕ್​ ಪಾಂಡ್ಯಗೆ ಹ್ಯಾಟ್ರಿಕ್​ ಸಿಕ್ಸರ್​ಗಳ ರುಚಿ ತೋರಿಸಿದ್ದರು. ವಯಸ್ಸು 42 ಆದರೂ, ತಮ್ಮ ಬ್ಯಾಟಿಂಗ್​ ಫಾರ್ಮ್​ ಮಾತ್ರ ಈ ಹಿಂದಿನಂತೆಯೇ ಇದೆ.​

Continue Reading

ಕ್ರೀಡೆ

T20 World Cup 2024: ಆಸ್ಟ್ರೇಲಿಯಾದಿಂದ ಹಡಗಿನಲ್ಲೇ 3 ಕ್ರಿಕೆಟ್ ಪಿಚ್ ತಂದ ಅಮೆರಿಕ

T20 World Cup 2024: ಆಸ್ಟ್ರೇಲಿಯಾದಿಂದ ತರಿಸಲಾದ ಡ್ರಾಪ್ ಇನ್ ಪಿಚ್ ಬಳಸಗಾಗುತ್ತದೆ. ಪಿಚ್ ಸಂಪೂರ್ಣವಾಗಿ ಅಡಿಲೇಡ್‌ನಲ್ಲಿ ತಯಾರಿಸಲಾಗಿದ್ದು, ಅದನ್ನು ಹಡಗಿನಲ್ಲೇ 22,500 ಕಿಲೋಮೀಟರ್ ದೂರದ ಫ್ಲೋರಿಡಾ ಮೂಲಕ ನ್ಯೂಯಾರ್ಕ್‌ಗೆ ತರಲಾಗಿದೆ.

VISTARANEWS.COM


on

T20 World Cup 2024
Koo

ನ್ಯೂಯಾರ್ಕ್: ವೆಸ್ಟ್​ ಇಂಡೀಸ್​ ಮತ್ತು ಅಮೆರಿಕ ಆತಿಥ್ಯದಲ್ಲಿ ನಡೆಯಲಿರುವ ಪುರುಷರ ಟಿ20 ವಿಶ್ವಕಪ್​ ಟೂರ್ನಿಗೆ(T20 World Cup 2024) ಇನ್ನು ಕೆಲವೇ ಇಂದು ತಿಂಗಳು ಮಾತ್ರ ಬಾಕಿ ಉಳಿದಿದೆ. ಇದೇ ಮೊದಲ ಬಾರಿಗೆ ಅಮೆರಿಕ ಐಸಿಸಿ ಪಂದ್ಯಾವಳಿ ಆತಿಥ್ಯ ವಹಿಸಿಕೊಂಡಿದೆ. ಸುಸಜ್ಜಿತ ಪಿಚ್ ಇಲ್ಲದ ಕಾರಣ ಆಸ್ಟ್ರೇಲಿಯಾದಿಂದ ಡ್ರಾಪ್ ಇನ್ ಪಿಚ್‌ಗಳನ್ನು(Drop-In Pitches) ತರಿಸಿಕೊಂಡಿದೆ. ವಿಶ್ವಕಪ್​ ಪಂದ್ಯಾವಳಿಗಳು ಜೂನ್​ 1ರಿಂದ 29ರ ತನಕ ಸಾಗಲಿದೆ.

ವಿಶ್ವಕಪ್ ಟೂರ್ನಿಗೆ ಅಮೆರಿಕದ ಮೂರು ಸ್ಟೇಡಿಯಂಗಳು ಆತಿಥ್ಯ ವಹಿಸಿವೆ. ಇಲ್ಲಿ 16 ಪಂದ್ಯಗಳು ನಡೆಯಲಿದೆ. ಈ ಮೈದಾನಕ್ಕೆ ಆಸ್ಟ್ರೇಲಿಯಾದಿಂದ ತರಿಸಲಾದ ಡ್ರಾಪ್ ಇನ್ ಪಿಚ್ ಬಳಸಗಾಗುತ್ತದೆ. ಪಿಚ್ ಸಂಪೂರ್ಣವಾಗಿ ಅಡಿಲೇಡ್‌ನಲ್ಲಿ ತಯಾರಿಸಲಾಗಿದ್ದು, ಅದನ್ನು ಹಡಗಿನಲ್ಲೇ 22,500 ಕಿಲೋಮೀಟರ್ ದೂರದ ಫ್ಲೋರಿಡಾ ಮೂಲಕ ನ್ಯೂಯಾರ್ಕ್‌ಗೆ ತರಲಾಗಿದೆ.

ಮೂರು ಪಿಚ್‌ಗಳನ್ನು ಈಗಾಗಲೇ ಫ್ಲೋರಿಡಾ, ಟೆಕ್ಸಾಸ್ ಹಾಗೂ ನ್ಯೂಯಾರ್ಕ್ ಕ್ರೀಡಾಂಗಣಗಳಿಗೆ ಅಡವಡಿಸಲಾಗಿದೆ. ಅಮೆರಿಕದ ಈ ಮೂರು ಕ್ರೀಡಾಂಗಣಗಳಲ್ಲಿ 16 ಪಂದ್ಯಗಳು ನಡೆಯಲಿದೆ. ಉಳಿದ 39 ಪಂದ್ಯಗಳಿಗೆ ವೆಸ್ಟ್ ಇಂಡೀಸ್ ಆತಿಥ್ಯ ವಹಿಸಿದೆ. ಟೂರ್ನಿಯಲ್ಲಿ ಒಟ್ಟು 55 ಪಂದ್ಯಗಳು ನಡೆಯಲಿವೆ. ಜೂನ್ 1ರಿಂದ 18ರವರೆಗೆ ಗುಂಪು ಹಂತದಲ್ಲಿ 40 ಪಂದ್ಯಗಳು ನಡೆಯಲಿವೆ. ಜೂನ್ 19 ರಿಂದ 24 ರವರೆಗೆ ಸೂಪರ್ 8 ಪಂದ್ಯಗಳು ನಡೆಯಲಿವೆ.

ತಲಾ 2 ಅಭ್ಯಾಸ ಪಂದ್ಯ


ವಿಶ್ವಕಪ್​ಗೆ ಮುನ್ನ ಎಲ್ಲ 20 ತಂಡಗಳು ತಮ್ಮ ಆಗಮನಕ್ಕೆ ತಕ್ಕಂತೆ ತಲಾ 2 ಅಭ್ಯಾಸ ಪಂದ್ಯಗಳನ್ನು ಆಡಲಿವೆ ಎಂದು ಐಸಿಸಿ ತಿಳಿಸಿದೆ. ಟೂರ್ನಿಯ ಲೀಗ್​ ಮತ್ತು ಸೂಪರ್​ 8 ಪಂದ್ಯಗಳಿಗೆ ಯಾವುದೇ ಮೀಸಲು ದಿನ ಇಲ್ಲ. ಈ ಪಂದ್ಯಗಳಿಗೆ ಮಳೆ ಬಂದು ಪಂದ್ಯ ರದ್ದಾದರೆ ಸಮಾನ ಅಂಕ ನೀಡಲಾಗುತ್ತದೆ. ಆದರೆ, ಸೆಮಿಫೈನಲ್​ ಮತ್ತು ಫೈನಲ್​ ಪಂದ್ಯಗಳಿಗೆ ಮೀಸಲು ದಿನ ಇರಲಿದೆ. ಒಂದೊಮ್ಮೆ ಸೆಮಿ ಮತ್ತು ಫೈನಲ್​ ಫೈನಲ್​ ಪಂದ್ಯಗಳು ಕೂಡ ಮೀಸಲು ದಿನವೂ ನಡೆಯದಿದ್ದರೆ ಆಗ ಅಂಕಪಟ್ಟಿಯಲ್ಲಿ ಅಗ್ರಸ್ಥಾನ ಪಡೆದ ತಂಡಕ್ಕೆ ಲಾಭ ಸಿಗಲಿದೆ.

ಇದನ್ನೂ ಓದಿ T20 World Cup 2024: ವಿಶ್ವಕಪ್​ಗೆ ಪಂತ್​ ಮೊದಲ ಆಯ್ಕೆಯ ಕೀಪರ್​​ ಅಲ್ಲ; ಮತ್ಯಾರು?

ಟಿ20 ವಿಶ್ವಕಪ್​ಗಾಗಿಯೇ ನ್ಯೂಯಾರ್ಕ್​ನಲ್ಲಿ ತಾತ್ಕಾಲಿಕವಾಗಿ ನಸ್ಸೌ ಕೌಂಟಿ ಇಂಟರ್‌ನ್ಯಾಶನಲ್ ಕ್ರಿಕೆಟ್ ಸ್ಟೇಡಿಯಂ(Nassau County International Cricket Stadium) ನಿರ್ಮಾಣ ಮಾಡಲಾಗಿದೆ. ಬಹುತೇಕ ಇದರ ಕಾಮಗಾರಿ ಮುಕ್ತಾಯ ಕಂಡಿದೆ. ಜೂನ್ 9 ರಂದು ಭಾರತ ಮತ್ತು ಪಾಕಿಸ್ತಾನ(IND vs PAK) ನಡುವಿನ ಹೈ-ವೋಲ್ಟೇಜ್ ಘರ್ಷಣೆ ಸೇರಿದಂತೆ ಭಾರತದ ಎಲ್ಲಾ ಗುಂಪು-ಹಂತದ ಪಂದ್ಯಗಳಿಗೆ ಈ ಕ್ರೀಡಾಂಗಣವು ಅಣಿಯಾಗಿದೆ. ಅಚ್ಚರಿ ಎಂದರೆ ಈ ಸ್ಟೇಡಿಯಂ ಅನ್ನು ನಿರ್ಮಾಣ ಮಾಡಿದ್ದೇ ಭಾರತ ಮತ್ತು ಪಾಕಿಸ್ತಾನ ಎದುರಿನ ಪಂದ್ಯಕ್ಕಾಗಿ.

34 ಸಾವಿರ ಪ್ರೇಕ್ಷಕರು ಕೂರುವಷ್ಟು ಸಾಮರ್ಥ್ಯದ ಸ್ಟೇಡಿಯಂ ಇದಾಗಿದ್ದು. ಭಾರತ-ಪಾಕ್​ ಪಂದ್ಯಕ್ಕಾಗಿಯೇ ಇದನ್ನು ತಾತ್ಕಾಲಿಕವಾಗಿ ನಿರ್ಮಿಸಲಾಗಿದೆ. ಪಂದ್ಯದ ನಂತರ ಇದನ್ನು ಕೆಡವಲಾಗುತ್ತದೆ ಎಂದು ತಿಳಿಸಲಾಗಿದೆ. ಭಾರತ ಮತ್ತು ಪಾಕ್​ ನಡುವಣ ಪಂದ್ಯ ನ್ಯೂಯಾರ್ಕ್‌ನಲ್ಲಿಯೇ ನಡೆಸಲು ಕಾರಣವೂ ಕೂಡ ಇದೆ. ಏಕೆಂದರೆ ಈ ಪ್ರದೇಶದಲ್ಲಿ 7,11,000 ಭಾರತೀಯ ಮತ್ತು ಸುಮಾರು 1,00,000 ಪಾಕಿಸ್ತಾನ ಮೂಲದ ಜನರು ವಾಸಿಸುತ್ತಿದ್ದಾರೆ ಎನ್ನಲಾಗಿದೆ.

Continue Reading

ಕ್ರೀಡೆ

T20 World Cup 2024: ವಿಶ್ವಕಪ್​ಗೆ ಪಂತ್​ ಮೊದಲ ಆಯ್ಕೆಯ ಕೀಪರ್​​ ಅಲ್ಲ; ಮತ್ಯಾರು?

T20 World Cup 2024: ಕ್ರಿಕ್​ ಇನ್ಫೋ ವರದಿಯ ಪ್ರಕಾರ, ಆಯ್ಕೆ ಸಮಿತಿಯು ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್(Sanju Samson) ಅವರನ್ನು ಟೀಮ್ ಇಂಡಿಯಾಕ್ಕೆ ತಮ್ಮ ಮೊದಲ ಆಯ್ಕೆಯ ವಿಕೆಟ್ ಕೀಪರ್ ಎಂದು ಪರಿಗಣಿಸಲಿದೆ, ಪಂತ್​ ದ್ವಿತೀಯ ಆಯ್ಕೆಯ ಕೀಪರ್​ ಆಗಿದ್ದಾರೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

VISTARANEWS.COM


on

T20 World Cup 2024
Koo

ಮುಂಬಯಿ: ಜೂನ್​ 1ರಿಂದ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ನಲ್ಲಿ ನಡೆಯುವ ಟಿ20 ವಿಶ್ವಕಪ್​ಗೆ(T20 World Cup 2024) ಸೋಮವಾರ ನ್ಯೂಜಿಲ್ಯಾಂಡ್ ತನ್ನ ತಂಡವನ್ನು ಪ್ರಕಟಗೊಳಿಸಿದೆ. ಭಾರತ ತಂಡ ಯಾವಾಗ ಪ್ರಕಟಗೊಳ್ಳಿದೆ ಎಂದು ಕಾಯುತ್ತಿರುವಾಗಲೇ ಅಚ್ಚರಿಯ ಸುದ್ದಿಯೊಂದು ಹೊರಬಿದ್ದಿದೆ.​

ಕಾರು ಅಪಘಾತದಿಂದ ಗಾಯಗೊಂಡು ಐಪಿಎಲ್​ ಮೂಲಕ 14 ತಿಂಗಳ ಬಳಿಕ ಕ್ರಿಕೆಟ್​ ಆಡಲಿಳಿದರೂ ಕೂಡ ರಿಷಭ್​ ಪಂತ್(Rishabh Pant)​ ಅವರ ಕೀಪಿಂಗ್​ ಮತ್ತು ಬ್ಯಾಟಿಂಗ್​ ಫಾರ್ಮ್​ನಲ್ಲಿ ಯಾವುದೇ ಕೊರತೆ ಕಂಡುಬಂದಿರಲಿಲ್ಲ. ಈ ಹಿಂದಿನಂತೆ ಅವರ ಫಾರ್ಮ್​ ಕಂಡುಬಂದಿತ್ತು. ಹೀಗಾಗಿ ಪಂತ್​ ಟಿ20 ವಿಶ್ವಕಪ್​ಗೆ ಮೊದಲ ಕೀಪರ್​ ಆಗಲಿದ್ದಾರೆ ಎಂದು ಹೇಳಲಾಗಿತ್ತು. ಆದರೆ, ಇದೀಗ ಪಂತ್​ ಮೊದಲ ಆಯ್ಕೆಯ ಕೀಪರ್​ ಎಲ್ಲ ಎನ್ನುವ ಮಾತುಗಳು ಕೇಳಿ ಬಂದಿವೆ.

ಕ್ರಿಕ್​ ಇನ್ಫೋ ವರದಿಯ ಪ್ರಕಾರ, ಆಯ್ಕೆ ಸಮಿತಿಯು ರಾಜಸ್ಥಾನ್ ರಾಯಲ್ಸ್ ತಂಡದ ನಾಯಕ ಸಂಜು ಸ್ಯಾಮ್ಸನ್(Sanju Samson) ಅವರನ್ನು ಟೀಮ್ ಇಂಡಿಯಾಕ್ಕೆ ತಮ್ಮ ಮೊದಲ ಆಯ್ಕೆಯ ವಿಕೆಟ್ ಕೀಪರ್ ಎಂದು ಪರಿಗಣಿಸಲಿದೆ, ಪಂತ್​ ದ್ವಿತೀಯ ಆಯ್ಕೆಯ ಕೀಪರ್​ ಆಗಿದ್ದಾರೆ ಎಂದು ತನ್ನ ವರದಿಯಲ್ಲಿ ತಿಳಿಸಿದೆ.

ಇದನ್ನೂ ಓದಿ T20 World Cup 2024: ಸಭೆ ನಡೆಸಿದ ರೋಹಿತ್​, ಅಗರ್ಕರ್​; ಈ ಆಟಗಾರನಿಗೆ ಅವಕಾಶವಿಲ್ಲ!

ಕೆ.ಎಲ್​ ರಾಹುಲ್(KL Rahul)​, ದಿನೇಶ್​ ಕಾರ್ತಿಕ್​ ಮತ್ತು ಜಿತೇಶ್ ಶರ್ಮಾ ಕೂಡ ಕೀಪಿಂಗ್​ ರೇಸ್​ನಲ್ಲಿದ್ದರು. ಈ ಪೈಕಿ ಜಿತೇಶ್​ ಶರ್ಮ ಈ ಬಾರಿಯ ಐಪಿಎಲ್​ನಲ್ಲಿ ಅಷ್ಟಾಗಿ ಉತ್ತಮ ಪ್ರದರ್ಶನ ತೋರಿಲ್ಲ. ಹೀಗಾಗಿ ಅವರಿಗೆ ಸ್ಥಾನ ಸಿಗುವುದು ಅನುಮಾನ ಎನ್ನಲಾಗಿದೆ. ಆರಂಭಿಕರಾಗಿ ರೋಹಿತ್ ಶರ್ಮಾ ಜತೆ ಇನಿಂಗ್ಸ್​ ಆರಂಭಿಸಲು ಯಶಸ್ವಿ ಜೈಸ್ವಾಲ್, ಶುಭಮನ್ ಗಿಲ್ ಮತ್ತು ಋತುರಾಜ್​ ಗಾಯಕ್ವಾಡ್​ ಮಧ್ಯೆ ತೀವ್ರ ಪೈಪೋಟಿ ಇದ್ದರೂ ಎಡಗೈ ಬ್ಯಾಟರ್​​ ಆಗಿರುವ ಜೈಸ್ವಾಲ್​ಗೆ ಈ ಅವಕಾಶ ಸಿಗುವು ಸಾಧ್ಯತೆ ಅಧಿಕವಾಗಿದೆ.

ವಿಶ್ವಕಪ್​ ಅಮೆರಿಕ ಮತ್ತು ವೆಸ್ಟ್​ ಇಂಡೀಸ್​ ಜಂಟಿ ಆತಿಥ್ಯದಲ್ಲಿ ನಡೆಯಲಿದೆ. ವಿಂಡೀಸ್​ ನೆಲದಲ್ಲಿ ಈಗಾಗಕಲೇ ಜೈಸ್ವಾಲ್​ ಉತ್ತಮ ದಾಖಲೆ ಹೊಂದಿದ್ದಾರೆ. ಚೊಚ್ಚಲ ಟೆಸ್ಟ್​ ಪಂದ್ಯದಲ್ಲಿಯೇ ಬಿರುಸಿನ ಬ್ಯಾಟಿಂಗ್​ ಮೂಲಕ ಶತಕ ಬಾರಿಸಿ ಮಿಂಚಿದ್ದರು. ನಿಧಾನಗತಿಯ ಪಿಚ್​ನಲ್ಲಿಯೂ ಜೈಸ್ವಾಲ್​ ಉತ್ತಮ ರನ್​ ಗಳಿಸುವಲ್ಲಿ ಸಮರ್ಥರಿದ್ದಾರೆ. ಹೀಗಾಗಿ ಅವರಿಗೆ ಈ ಅವಕಾಶ ಸಿಗುವುದು ಪಕ್ಕಾ ಆಗಿದೆ.

ಏಷ್ಯಾ ಕಪ್​ ಮತ್ತು ಏಕದಿನ ವಿಶ್ವಕಪ್​ನಲ್ಲಿ ಅವಕಾಶ ಸಿಗದ ಸ್ಪಿನ್ನರ್ ಯಜುವೇಂದ್ರ ಚಾಹಲ್ ಅವರಿಗೆ ಐಪಿಎಲ್​ ಪ್ರದರ್ಶನ ನೋಡಿ ಟಿ20ಯಲ್ಲಿ ಅವಕಾಶ ಸಿಗಬಹುದು ಎನ್ನಲಾಗಿತ್ತು. ಆದರೆ, ಅವರು ಆಯ್ಕೆಯಾಗುವ ಸಾಧ್ಯತೆ ಕಡಿಮೆ ಎನ್ನಲಾಗಿದೆ. ಕೋಚಿಂಗ್ ಸ್ಟಾಫ್‌ ನ ಪ್ರಭಾವಿ ಸದಸ್ಯರಿಗೆ ಚಾಹಲ್ ಆದ್ಯತೆಯ ಆಯ್ಕೆಯಾಗಿಲ್ಲ ಎಂದು ವರದಿಯಾಗಿದೆ. ಕುಲದೀಪ್ ಯಾದವ್ ಮತ್ತು ರವೀಂದ್ರ ಜಡೇಜಾ ಸ್ಪಿನ್ ವಿಭಾಗದಲ್ಲಿ ಮೊದಲ ಆಯ್ಕೆಯಾಗಿದ್ದು, ಮೂರನೇ ಸ್ಪಿನ್ನರ್ ಸ್ಥಾನಕ್ಕೆ ಅಕ್ಷರ್ ಪಟೇಲ್ ಅಥವಾ ರವಿ ಬಿಷ್ಣೋಯಿ ಆಯ್ಕೆಯಾಗುವ ಸಾಧ್ಯತೆಯಿದೆ ಎನ್ನಲಾಗಿದೆ.

Continue Reading

ಕ್ರೀಡೆ

IPL 2024 Points Table: ಚೆನ್ನೈ ಗೆಲುವಿನಿಂದ ಅಂಕಪಟ್ಟಿಯಲ್ಲಿ 3 ತಂಡಗಳಿಗೆ ಭಾರೀ ಹೊಡೆತ

IPL 2024 Points Table: ಆರ್​ಸಿಬಿ(Royal Challengers Bengaluru) ಗೆದ್ದರೂ ಈ ತಂಡಕ್ಕೆ ಯಾವುದೇ ಲಾಭವಾಗಲಿಲ್ಲ. ಅಂಕಪಟ್ಟಿಯಲ್ಲಿ(IPL 2024 Points Table) ಕೊನೆಯ ಸ್ಥಾನದಲ್ಲೇ ಮುಂದುವರಿಯಿತು. ಆದರೆ, ಚೆನ್ನೈ ತಂಡದ ಗೆಲುವಿನಿಂದ ಲಕ್ನೋ, ಹೈದರಾಬಾದ್​ ಮತ್ತು ಡೆಲ್ಲಿ ತಂಡಗಳು ತಲಾ ಒಂದು ಸ್ಥಾನ ಕುಸಿತ ಕಂಡಿತು.

VISTARANEWS.COM


on

IPL 2024 Points Table
Koo

ಬೆಂಗಳೂರು: ಭಾನುವಾರ ನಡೆದ ಐಪಿಎಲ್​ನ ಡಬಲ್​ ಹೆಡರ್​ ಪಂದ್ಯದಲ್ಲಿ ಆರ್​ಸಿಬಿ ತಂಡ ಗುಜರಾತ್(Gujarat Titans)​ ವಿರುದ್ಧ ಗೆಲುವು ಸಾಧಿಸಿದರೆ, ಹಾಲಿ ಚಾಂಪಿಯನ್​ ಚೆನ್ನೈ ಸೂಪರ್​ ಕಿಂಗ್ಸ್(Chennai Super Kings)​ ಬಲಿಷ್ಠ ಸನ್​ರೈಸರ್ಸ್(Sunrisers Hyderabad)​ ವಿರುದ್ಧ ಅಮೋಘ ಗೆಲುವು ಸಾಧಿಸಿತು. ಆರ್​ಸಿಬಿ(Royal Challengers Bengaluru) ಗೆದ್ದರೂ ಈ ತಂಡಕ್ಕೆ ಯಾವುದೇ ಲಾಭವಾಗಲಿಲ್ಲ. ಅಂಕಪಟ್ಟಿಯಲ್ಲಿ(IPL 2024 Points Table) ಕೊನೆಯ ಸ್ಥಾನದಲ್ಲೇ ಮುಂದುವರಿಯಿತು. ಆದರೆ, ಚೆನ್ನೈ ತಂಡದ ಗೆಲುವಿನಿಂದ ಲಕ್ನೋ, ಹೈದರಾಬಾದ್​ ಮತ್ತು ಡೆಲ್ಲಿ ತಂಡಗಳು ತಲಾ ಒಂದು ಸ್ಥಾನ ಕುಸಿತ ಕಂಡಿತು.

ಚೆನ್ನೈ ತಂಡ ಈ ಪಂದ್ಯಕ್ಕೂ ಮುನ್ನ 6ನೇ ಸ್ಥಾನಿಯಾಗಿತ್ತು. ಗೆಲುವಿನೊಂದಿಗೆ ಮೂರು ಸ್ಥಾನಗಳ ಜಿಗಿತ ಕಂಡು ಮೂರನೇ ಸ್ಥಾನಕ್ಕೇರಿದೆ. ಮೂರನೇ ಸ್ಥಾನದಲ್ಲಿದ್ದ ಹೈದರಾಬಾದ್​ 4ನೇ ಸ್ಥಾನಕ್ಕೆ, 4ನೇ ಸ್ಥಾನದಲ್ಲಿದ್ದ ಲಕ್ನೋ 5ಕ್ಕೆ, 5ನೇ ಸ್ಥಾನದಲ್ಲಿದ್ದ ಡೆಲ್ಲಿ 6ನೇ ಸ್ಥಾನಕ್ಕೆ ಕುಸಿಯಿತು. ಆರ್​ಸಿಬಿ ವಿರುದ್ಧ ಸೋತರೂ ಕೂಡ ಗುಜರಾತ್​ 7ನೇ ಸ್ಥಾನದಲ್ಲೇ ಮುಂದುವರಿದಿದೆ.

ಅಂಕಪಟ್ಟಿ

ತಂಡಪಂದ್ಯಗೆಲುವುಸೋಲುಅಂಕ
ರಾಜಸ್ಥಾನ್​ ರಾಯಲ್ಸ್​98116 (+0.694)
ಕೆಕೆಆರ್​​85310 (+0.972)
ಚೆನ್ನೈ​​95410 (+0.810)
ಹೈದರಾಬಾದ್​95410 (+0.075)
ಲಕ್ನೋ95410 (+0.059)
ಡೆಲ್ಲಿ105510 (-0.276)
ಗುಜರಾತ್​10468 (-1.113)
ಪಂಜಾಬ್9368 (-0.187)
ಮುಂಬೈ9366 (-0.261)
ಆರ್​ಸಿಬಿ10376 (-0.415)

ಚೆನ್ನೈಗೆ ಅಮೋಘ ಗೆಲುವು


ಚೆನ್ನೈಯ ಚೆಪಾಕ್​ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ದ್ವಿತೀಯ ಐಪಿಎಲ್​(IPL 2024) ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ ಆಹ್ವಾನ ಪಡೆದ ಚೆನ್ನೈ(Chennai Super Kings) ತಂಡ ನಾಯಕ ಋತುರಾಜ್​ ಗಾಯಕ್ವಾಡ್​, ಡೇರಿಯಲ್​ ಮಿಚೆಲ್​ ಮತ್ತು ಶಿವಂ ದುಬೆ ಅವರ ಆಕ್ರಮಣಕಾರಿ ಬ್ಯಾಟಿಂಗ್​ ಸಾಹಸದಿಂದ ನಿಗದಿತ 20 ಓವರ್​ಗಳಲ್ಲಿ ಕೇವಲ 3 ವಿಕೆಟ್​ ನಷ್ಟಕ್ಕೆ 212 ರನ್​ ಬಾರಿಸಿತು. ಈ ಹಿಂದಿನ ಪಂದ್ಯಗಳಲ್ಲಿ ಸಲೀಸಾಗಿ ಮೂರು ಬಾರಿ 250ರ ಗಡಿ ದಾಟಿದ್ದ ಸನ್​ರೈಸರ್ಸ್​ ತಂಡಕ್ಕೆ ಈ ಮೊತ್ತ ಎಲ್ಲಿಂದಲೂ ಸಾಲದು ಎಂದು ನಿರೀಕ್ಷೆ ಮಾಡಿದ್ದವರಿಗೆ ಚೆನ್ನೈ ತಂಡದ ಮಧ್ಯಮ ವೇಗಿ ತುಷಾರ್​ ದೇಶ್​ಪಾಂಡೆ ಘಾತಕ ಸ್ಫೆಲ್ ಮೂಲಕ ಕಟ್ಟಿಹಾಕಿದರು. ಅಂತಿಮವಾಗಿ ಹೈದರಾಬಾದ್​ 18.5 ಓವರ್​ಗಳಲ್ಲಿ 134 ರನ್​ಗೆ ಸರ್ವಪತನ ಕಂಡು ಹೀನಾಯವಾಗಿ ಸೋಲೊಪ್ಪಿಕೊಂಡಿತು.

ಇದನ್ನೂ ಓದಿ IPL 2024: ಗೆಲುವಿನಲ್ಲೂ ನೂತನ ದಾಖಲೆ ಬರೆದ ಆರ್​ಸಿಬಿ

ಆರ್​ಸಿಬಿಗೆ 9 ವಿಕೆಟ್​ ಗೆಲುವು

ಇಲ್ಲಿನ ನರೇಂದ್ರ ಮೋದಿ ಕ್ರಿಕೆಟ್​ ಸ್ಟೇಡಿಯಂನಲ್ಲಿ ನಡೆದ ಈ ಪಂದ್ಯದಲ್ಲಿ ಟಾಸ್​ ಸೋತು ಬ್ಯಾಟಿಂಗ್​ಗೆ ಇಳಿಸಲ್ಪಟ್ಟ ಗುಜರಾತ್​ ಟೈಟಾನ್ಸ್​ ಸಾಯಿ ಸುದರ್ಶನ್​(84*) ಮತ್ತು ಶಾರೂಖ್​ ಖಾನ್​(58) ಅರ್ಧಶತಕದ ಉಪಯುಕ್ತ ಬ್ಯಾಟಿಂಗ್​ ನೆರವಿನಿಂದ 20 ಓವರ್​ಗೆ 3 ವಿಕೆಟ್​ ಕಳೆದುಕೊಂಡು ಭರ್ತಿ 200 ರನ್​ ಪೇರಿಸಿತು. ಜವಾಬಿತ್ತ ಆರ್​ಸಿಬಿ ಫುಲ್​ ಬ್ಯಾಟಿಂಗ್​ ಜೋಶ್​ನೊಂದಿಗೆ ಕೇವಲ 16 ಓವರ್​ಗಳಲ್ಲಿ 1 ವಿಕೆಟ್​ನಷ್ಟಕ್ಕೆ 206 ರನ್​ ಬಾರಿಸಿ ಭರ್ಜರಿ ಗೆಲುವು ತನ್ನದಾಗಿಸಿಕೊಂಡಿತು.

Continue Reading
Advertisement
Hassan Pen Drive Case
ಕರ್ನಾಟಕ44 seconds ago

ಪ್ರಜ್ವಲ್‌ ರೇವಣ್ಣ ವಿಡಿಯೊಗಳ ಕುರಿತು ಕೆಲ ತಿಂಗಳ ಮೊದಲೇ ಎಚ್ಚರಿಸಿದ್ದ ಬಿಜೆಪಿ ನಾಯಕ! ಯಾರವರು?

Sex Scandals
Latest10 mins ago

Politicians Scandals : ದೇಶದ ರಾಜಕಾರಣದಲ್ಲಿ ಸಂಚಲನ ಮೂಡಿಸಿದ್ದ ಲೈಂಗಿಕ ಹಗರಣಗಳಿವು!

MS Dhoni
ಕ್ರೀಡೆ11 mins ago

MS Dhoni: ಗೆಳತಿಯ ಹೆಸರಿನಲ್ಲಿ 7 ಅಕ್ಷರಗಳಿಲ್ಲದ ಕಾರಣ ಬ್ರೇಕಪ್ ಆದ ಧೋನಿ ಅಭಿಮಾನಿ

Hassan Pen drive case
ಕರ್ನಾಟಕ26 mins ago

Hassan Pen Drive Case: ಪ್ರಜ್ವಲ್‌, ರೇವಣ್ಣ ಹಾಗೆ ಮಾಡಿಯೇ ಇಲ್ಲ ಎಂದ ದೂರುದಾರೆಯ ಅತ್ತೆ!

Actor Dharmendra not spending enough time with parents
ಸಿನಿಮಾ26 mins ago

Actor Dharmendra: ಪೋಷಕರ ಜತೆ ಸಾಕಷ್ಟು ಸಮಯ ಕಳೆಯಲೇ ಇಲ್ಲ ಎಂದು ವಿಷಾದ ವ್ಯಕ್ತಪಡಿಸಿದ್ರಾ ನಟ ಧರ್ಮೇಂದ್ರ?

Cleric
ದೇಶ38 mins ago

Cleric: ಮಸೀದಿಯಲ್ಲಿ ಮಲಗಿದ್ದ 30 ವರ್ಷದ ಮೌಲ್ವಿಯನ್ನು ಬಡಿದು ಕೊಂದರು; ಹತ್ಯೆಗೆ ಕಾರಣ?

Congress fears defeat over EVMs Congress will not win a single seat in Karnataka says PM Narendra Modi
ರಾಜಕೀಯ39 mins ago

Narendra Modi: ಪ್ರಧಾನಿ ಮೋದಿ ಅನರ್ಹತೆ ಕೋರಿ ಸಲ್ಲಿಸಲಾಗಿದ್ದ ಅರ್ಜಿ ವಜಾ

T20 World Cup 2024
ಕ್ರೀಡೆ49 mins ago

T20 World Cup 2024: ಆಸ್ಟ್ರೇಲಿಯಾದಿಂದ ಹಡಗಿನಲ್ಲೇ 3 ಕ್ರಿಕೆಟ್ ಪಿಚ್ ತಂದ ಅಮೆರಿಕ

Revanth Reddy
ದೇಶ57 mins ago

Revanth Reddy : ಅಮಿತ್​ ಶಾ ತಿರುಚಿದ ವಿಡಿಯೊ ಪ್ರಕರಣ; ತೆಲಂಗಾಣ ಸಿಎಂಗೆ ಡೆಲ್ಲಿ ಪೊಲೀಸರಿಂದ ಸಮನ್ಸ್​

Prajwal Revanna Hassan Pen Drive Case What will SIT probe look like
ಕ್ರೈಂ1 hour ago

Hassan Pen Drive Case: ಪ್ರಜ್ವಲ್‌ ರೇವಣ್ಣ ಕೇಸ್‌; ಎಸ್‌ಐಟಿ ತನಿಖೆ ಹೇಗಿರುತ್ತೆ? ತಪ್ಪಿಸಿಕೊಳ್ಳೋಕೆ ಇರೋ ಚಾನ್ಸ್‌ ಏನು?

Sharmitha Gowda in bikini
ಕಿರುತೆರೆ7 months ago

Geetha Serial Kannada: ನಿದ್ದೆ ಕದ್ದ ಚೋರಿ! ನಟಿ `ಭಾನುಮತಿ’ ಹಾಟ್‌ ಪೋಟೊಗಳಿಗೆ ಫ್ಯಾನ್ಸ್ ಫುಲ್ ಫಿದಾ

Kannada Serials
ಕಿರುತೆರೆ7 months ago

Kannada Serials TRP: 2ನೇ ಸ್ಥಾನದಲ್ಲಿ 2 ಧಾರಾವಾಹಿಗಳು; ಟಿಆರ್‌ಪಿ ರೇಸ್‌ನಲ್ಲಿಲ್ಲ ಭಾಗ್ಯಲಕ್ಷ್ಮೀ!

Bigg Boss- Saregamapa 20 average TRP
ಕಿರುತೆರೆ6 months ago

Kannada Serials TRP: ಏಳನೇ ಸ್ಥಾನಕ್ಕೆ ʻಅಮೃತಧಾರೆʼ ಕುಸಿತ; ಬಿಗ್‌ ಬಾಸ್‌-ಸರಿಗಮಪ ಟಿಆರ್‌ಪಿ ಎಷ್ಟು?

galipata neetu
ಕಿರುತೆರೆ5 months ago

Kanyadana Serial: ಕಿರುತೆರೆಗೆ ಮತ್ತೆ ಎಂಟ್ರಿ ಕೊಟ್ಟ ʻಗಾಳಿಪಟʼ ಖ್ಯಾತಿಯ ʻನೀತುʼ!

Kannada Serials
ಕಿರುತೆರೆ7 months ago

Kannada Serials TRP: ನಾಲ್ಕನೇ ಸ್ಥಾನಕ್ಕೆ ಕುಸಿತ ಕಂಡ ʻಸೀತಾ ರಾಮʼ; ಟಿಆರ್‌ಪಿ ರೇಸ್‌ಗೆ ʻಭಾಗ್ಯಲಕ್ಷ್ಮಿʼ ಬ್ಯಾಕ್‌!

Kannada Serials
ಕಿರುತೆರೆ7 months ago

Kannada Serials TRP: ಟಿಆರ್‌ಪಿಯಲ್ಲಿ ʻಭಾಗ್ಯಲಕ್ಷ್ಮೀʼ ಹವಾ; ʻಪುಟ್ಟಕ್ಕನ ಮಕ್ಕಳುʼ ಧಾರಾವಾಹಿಗೆ ಸಂಕಷ್ಟ!

Bigg Boss' dominates TRP; Sita Rama fell to the sixth position
ಕಿರುತೆರೆ6 months ago

Kannada Serials TRP: ಟಿಆರ್‌ಪಿಯಲ್ಲಿ ʻಬಿಗ್ ಬಾಸ್ʼದೇ ಮೇಲುಗೈ; 6ನೇ ಸ್ಥಾನಕ್ಕೆ ಕುಸಿದ ʻಸೀತಾ ರಾಮʼ

geetha serial Dhanush gowda engagement
ಕಿರುತೆರೆ5 months ago

Dhanush Gowda: ಗೀತಾ ಧಾರಾವಾಹಿ ನಟನ ನಿಶ್ಚಿತಾರ್ಥ; ಭವ್ಯಾಳ ಕಮೆಂಟ್‌ ಬಾಕ್ಸ್‌ ಆಫ್‌!

varun
ಕಿರುತೆರೆ5 months ago

Brindavana Serial: ʼಬೃಂದಾವನʼ ಧಾರಾವಾಹಿಯಲ್ಲಿ ದೊಡ್ಡ ಟ್ವಿಸ್ಟ್‌; ಪ್ರಮುಖ ಪಾತ್ರಧಾರಿಯೇ ಬದಲು

Kannada Serials
ಕಿರುತೆರೆ8 months ago

Kannada Serials TRP: ಟಿಆರ್‌ಪಿಯಲ್ಲಿ ಏರಿಕೆ ಕಂಡ ʻಅಮೃತಧಾರೆʼ; ʻಗಟ್ಟಿಮೇಳʼಕ್ಕೆ ನಾಲ್ಕನೇ ಸ್ಥಾನ!

PM Narendra modi in Bagalakote and Attack on Congress
Lok Sabha Election 20244 hours ago

PM Narendra Modi: ಒಬಿಸಿಗೆ ಇದ್ದ ಮೀಸಲಾತಿ ಪ್ರಮಾಣಕ್ಕೆ ಮುಸ್ಲಿಮರನ್ನು ಸೇರಿಸಲು ಕಾಂಗ್ರೆಸ್‌ ಷಡ್ಯಂತ್ರ: ಮೋದಿ ವಾಗ್ದಾಳಿ

PM Narendra modi in Bagalakote for Election Campaign and here is Live telecast
Lok Sabha Election 20245 hours ago

PM Narendra Modi Live: ಇಂದು ಬಾಗಲಕೋಟೆಯಲ್ಲಿ ನರೇಂದ್ರ ಮೋದಿ ಹವಾ; ಲೈವ್‌ಗಾಗಿ ಇಲ್ಲಿ ವೀಕ್ಷಿಸಿ

dina bhavishya read your daily horoscope predictions for April 29 2024
ಭವಿಷ್ಯ12 hours ago

Dina Bhavishya : ಈ ರಾಶಿಯವರಿಗೆ ಇಂದು ಸಂತೋಷವೇ ಸಂತೋಷ! ಹೂಡಿಕೆಯಲ್ಲಿ ಲಾಭ ಯಾರಿಗೆ?

Congress fears defeat over EVMs Congress will not win a single seat in Karnataka says PM Narendra Modi
Lok Sabha Election 20241 day ago

PM Narendra Modi: ಇವಿಎಂ ದೂರುವ ಕಾಂಗ್ರೆಸ್‌ಗೆ ಸೋಲಿನ ಭೀತಿ; ಕರ್ನಾಟಕದಲ್ಲಿ 1 ಸೀಟನ್ನೂ ಗೆಲ್ಲಲ್ಲವೆಂದ ಮೋದಿ!

PM Narendra Modi in Sirsi
Lok Sabha Election 20241 day ago

PM Narendra Modi: ಕಾಂಗ್ರೆಸ್ ರಾಮ ವಿರೋಧಿ; ಮನೆಗೆ ಹೋಗಿ ಕರೆದರೂ ಮಂದಿರ ಉದ್ಘಾಟನೆಗೆ ಬರಲಿಲ್ಲ: ಮೋದಿ ಟೀಕೆ

If Congress comes to power all your assets will belong to Government says PM Narendra Modi
Lok Sabha Election 20241 day ago

Narendra Modi: ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ನೀವು ಕಷ್ಟಪಟ್ಟು ಸಂಪಾದಿಸಿದ ಆಸ್ತಿಯೆಲ್ಲ ಅನ್ಯರ ಪಾಲು: ಮೋದಿ ಎಚ್ಚರಿಕೆ

Congress ties with Aurangzeb supporters and Girls killed under his rule says Narendra Modi
Lok Sabha Election 20241 day ago

Narendra Modi: ಔರಂಗಜೇಬ್ ಬೆಂಬಲಿಗರ ಜತೆ ಕಾಂಗ್ರೆಸ್ ದೋಸ್ತಿ; ಇವರ ಆಡಳಿತದಲ್ಲಿ ಹೆಣ್ಣು ಮಕ್ಕಳ ಹತ್ಯೆ: ಮೋದಿ ವಾಗ್ದಾಳಿ

Modi in Karnataka stay in Belagavi tomorrow and Huge gatherings at five places
Latest1 day ago

Narendra Modi Live : ಪ್ರಧಾನಿ ಮೋದಿಯ ಬೆಳಗಾವಿ ಪ್ರಚಾರ ಸಭೆಯ ನೇರ ಪ್ರಸಾರವನ್ನು ಇಲ್ಲಿ ವೀಕ್ಷಿಸಿ…

Dina Bhavishya
ಭವಿಷ್ಯ1 day ago

Dina Bhavishya : ಈ ರಾಶಿಯವರಿಗೆ ದಿನದ ಮಟ್ಟಿಗೆ ಖರ್ಚು ಹೆಚ್ಚು

Lok sabha election 2024
Lok Sabha Election 20242 days ago

Lok Sabha Election 2024 : ಮೊಬೈಲ್ ನಿಷೇಧದ ನಡುವೆಯೂ ವೋಟ್‌ ಹಾಕಿದ ವಿಡಿಯೊ ಮಾಡಿದ ಪುಂಡರು

ಟ್ರೆಂಡಿಂಗ್‌