ನವದೆಹಲಿ: 16ನೇ ಆವೃತ್ತಿಯ ಐಪಿಎಲ್ನ 7ನೇ ಪಂದ್ಯದಲ್ಲಿ ಟಾಸ್ ಗೆದ್ದ ಗುಜರಾತ್ ಟೈಟಾನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಮೊದಲು ಬೌಲಿಂಗ್ ಮಾಡಲು ನಿರ್ಧರಿಸಿದ್ದಾರೆ. ಟಾಸ್ ಸೋತ ವಾರ್ನರ್ ಸಾರಥ್ಯದ ಡೆಲ್ಲಿ ಕ್ಯಾಪಿಟಲ್ಸ್ ಮೊದಲು ಬ್ಯಾಟಿಂಗ್ ನಡೆಸಲಿದೆ.
ಬಂಗಾಳದ ಯುವ ಕೀಪರ್ ಅಭಿಷೇಕ್ ಪೋರೆಲ್ ಈ ಪಂದ್ಯದಲ್ಲಿ ಕಣಕ್ಕಿಳಿಯುವ ಮೂಲಕ ಐಪಿಎಲ್ಗೆ ಪದಾರ್ಪಣೆ ಮಾಡಿದರು. ಇವರು ಕಾರು ಅಪಘಾತದಲ್ಲಿ ಗಾಯಗೊಂಡು ತೇತರಿಕೆ ಕಾಣುತ್ತಿರುವ ರಿಷಭ್ ಪಂತ್ ಬದಲು ಡೆಲ್ಲಿ ತಂಡಕ್ಕೆ ಸೇರ್ಪಡೆಗೊಂಡಿದ್ದರು. ಇದೀಗ ತಮ್ಮ ಕೀಪಿಂಗ್ ಮತ್ತು ಬ್ಯಾಟಿಂಗ್ ಪ್ರದರ್ಶನ ತೋರಲು ಮುಂದಾಗಿದ್ದಾರೆ.
ಗುಜರಾತ್ ತಂಡ ಯುವ ಪಡೆಯನ್ನೇ ನೆಚ್ಚಿಕೊಂಡಿದೆ. ದಕ್ಷಿಣ ಆಫ್ರಿಕಾದ ಹಾರ್ಡ್ ಹಿಟ್ಟರ್ ಡೇವಿಡ್ ಮಿಲ್ಲರ್ ತಂಡವನ್ನು ಕೂಡಿಕೊಂಡಿರುವುದು ಪಾಂಡ್ಯ ಪಡೆ ಮತ್ತಷ್ಟು ಬಲಿಷ್ಠಗೊಂಡಿದೆ. ವೃದ್ಧಿಮಾನ್ ಸಾಹಾ, ಶುಭಮನ್ ಗಿಲ್, ಸಾಯಿ ಸುದರ್ಶನ್, ರಾಹುಲ್ ತೆವಾಟಿಯಾ, ಮೊಹಮ್ಮದ್ ಶಮಿ, ರಶೀದ್ ಖಾನ್ ಉತ್ತಮ ಫಾರ್ಮ್ನಲ್ಲಿದ್ದಾರೆ. ಒಟ್ಟಾರೆ ತಂಡ ಎಲ್ಲ ವಿಭಾಗದಲ್ಲಿಯೂ ಸಮರ್ಥವಾಗಿದೆ.
ಮೊದಲ ಪಂದ್ಯದಲ್ಲಿ ಡೆಲ್ಲಿ ತಂಡದಲ್ಲಿ ಬೌಲಿಂಗ್ ಸಮಸ್ಯೆ ಎದ್ದು ಕಾಣುತ್ತಿತ್ತು. ಮುಖೇಶ್ ಕುಮಾರ್, ಚೇತನ್ ಸಕಾರಿಯಾ ಅನಾನುಭವಿಗಳಾದ ಕಾರಣ ಅವರ ಬೌಲಿಂಗ್ ಅಷ್ಟಾಗಿ ಘಾತಕವಾಗಿರಲಿಲ್ಲ. ಆದರೆ ಇದೀಗ ದಕ್ಷಿಣ ಆಫ್ರಿಕಾ ತಂಡದ ವೇಗಿಗಳಾದ ಆನ್ರಿಚ್ ನೋರ್ಜೆ ತಂಡಕ್ಕೆ ಆಗಮಿಸಿರುವುದು ಡೆಲ್ಲಿಗೆ ಕೊಂಚ ಆತ್ಮವಿಶ್ವಾಸ ಮೂಡಿದಂತಿದೆ. ಬ್ಯಾಟಿಂಗ್ನಲ್ಲಿ ನಾಯಕ ಡೇವಿಡ್ ವಾರ್ನರ್ ಹೊರತು ಪಡಿಸಿ ಉಳಿದ ಯಾವುದೇ ಆಟಗಾರರಿಂದಲೂ ಮೊದಲ ಪಂದ್ಯದಲ್ಲಿ ಉತ್ತಮ ಪ್ರದರ್ಶನ ಕಂಡುಬಂದಿಲ್ಲ. ಹೀಗಾಗಿ ಈ ಪಂದ್ಯದಲ್ಲಿ ಪೃಥ್ವಿ ಶಾ, ಸರ್ಫರಾಜ್ ಖಾನ್, ಮಿಚೆಲ್ ಮಾರ್ಷ್ ಸಿಡಿಯಬೇಕಿದೆ.
ಸಂಭಾವ್ಯ ತಂಡಗಳು
ಡೆಲ್ಲಿ ಕ್ಯಾಪಿಟಲ್ಸ್: ಪೃಥ್ವಿ ಶಾ, ಡೇವಿಡ್ ವಾರ್ನರ್ (ನಾಯಕ), ಮಿಚೆಲ್ ಮಾರ್ಶ್, ಸರ್ಫರಾಜ್ ಖಾನ್, ರಿಲೀ ರೊಸ್ಸೋ, ರೋಮನ್ ಪೊವೆಲ್, ಅಮನ್ ಹಕೀಮ್ ಖಾನ್, ಅಕ್ಷರ್ ಪಟೇಲ್, ಕುಲದೀಪ್ ಯಾದವ್, ಚೇತನ್ ಸಕರಿಯಾ, ಮುಖೇಶ್ ಕುಮಾರ್, ಖಲೀಲ್ ಅಹ್ಮದ್, ಮನೀಶ್ ಪಾಂಡೆ, ಪ್ರವೀಣ್ ದುಬೆ, ಲಲಿತ್ ಯಾದವ್, ಅನ್ರಿಚ್ ನೋರ್ಜೆ ಅಭಿಷೇಕ್ ಪೊರೆಲ್, ಫಿಲಿಪ್ ಸಾಲ್ಟ್, ಇಶಾಂತ್ ಶರ್ಮಾ, ಕಮಲೇಶ್ ನಾಗರಕೋಟಿ, ರಿಪಾಲ್ ಪಟೇಲ್, ಯಶ್ ಧುಲ್, ವಿಕ್ಕಿ ಒಸ್ತ್ವಾಲ್.
ಗುಜರಾತ್ ಟೈಟಾನ್ಸ್: ವೃದ್ಧಿಮಾನ್ ಸಹಾ, ಶುಭ್ಮನ್ ಗಿಲ್, ಸಾಯಿ ಸುದರ್ಶನ್, ಹಾರ್ದಿಕ್ ಪಾಂಡ್ಯ (ನಾಯಕ), ವಿಜಯ್ ಶಂಕರ್, ರಾಹುಲ್ ತೇವಾಟಿಯಾ, ರಶೀದ್ ಖಾನ್, ಮೊಹಮ್ಮದ್ ಶಮಿ, ಜೋಶ್ವ ಲಿಟಲ್, ಯಶ್ ದಯಾಳ್, ಅಲ್ಜಾರಿ ಜೋಸೆಫ್, ಜಯಂತ್ ಯಾದವ್, ಮೋಹಿತ್ ಶರ್ಮಾ, ಶ್ರೀಕರ್ ಭರತ್, ಅಭಿನವ್ ಮನೋಹರ್, ಪ್ರದೀಪ್ ಸಾಂಗ್ವಾನ್, ಮ್ಯಾಥ್ಯೂ ವೇಡ್, ಒಡಿನ್ ಸ್ಮಿತ್, ಡೇವಿಡ್ ಮಿಲ್ಲರ್, ರವಿ ಶ್ರೀನಿವಾಸನ್ ಸಾಯಿ ಕಿಶೋರ್, ಶಿವಂ ಮಾವಿ, ದರ್ಶನ್ ನಲ್ಕಂಡೆ, ಉರ್ವಿಲ್ ಪಟೇಲ್.