ಅಹಮಾದಾಬಾದ್: ಬಹುನಿರೀಕ್ಷಿತ 16ನೇ ಆವೃತ್ತಿಯ ಐಪಿಎಲ್(IPL 2023) ಇಂದಿನಿಂದ ಆರಂಭಗೊಳ್ಳಲಿದೆ. ಕೋವಿಡ್ ನಂತರ ಮೊದಲ ಬಾರಿಗೆ ಐಪಿಎಲ್ ಉದ್ಘಾಟನಾ ಸಮಾರಂಭ ನಡೆಸಲು ಬಿಸಿಸಿಐ ಎಲ್ಲ ಸಿದ್ಧತೆ ಪೂರ್ಣಗೊಳಿಸಿದೆ. ಆದರೆ ಇದೀಗ ಈ ಸಮಾರಂಭ ಮತ್ತು ಪಂದ್ಯ ನಡೆಯುವುದು ಅನುಮಾನ ಎನ್ನಲಾಗಿದೆ. ಅಹಮದಾಬಾದ್ನಲ್ಲಿ ಭಾರಿ ಮಳೆಯಾಗುತ್ತಿದ್ದು ಶುಕ್ರವಾರವು ಮಳೆ ಅಬ್ಬರ ಇರಲಿದೆ ಎಂದು ತಿಳಿದುಬಂದಿದೆ.
ಗುರುವಾರ ಗುಜರಾತ್ ಮತ್ತು ಚೆನ್ನೈ ತಂಡದ ಆಟಗಾರರು ಮೈದಾನದಲ್ಲಿ ಅಭ್ಯಾಸ ನಡೆಸುತ್ತಿರುವಾಗ ದಿಢೀರ್ ಮಳೆ ಸುರಿದಿದೆ. ನಂತರ ಆಟಗಾರರು ಮಳೆಗೆ ಒದ್ದೆಯಾಗಿ ಡ್ರೆಸ್ಸಿಂಗ್ ರೂಮ್ಗೆ ತೆರಳುತ್ತಿರುವ ಫೋಟೊ ಇದೀಗ ವೈರಲ್ ಆಗಿದೆ. ಗುಜರಾತ್ ತಂಡದ ಕೋಚ್ ಆಶೀಸ್ ನೆಹ್ರಾ ಅವರು ಮಳೆಗೆ ಒದ್ದೆಯಾಗುತ್ತಿರುವ ಫೋಟೊವನ್ನು ಗುಜರಾತ್ ಟೈಟಾನ್ಸ್ ತಂಡ ಟ್ವಿಟರ್ನಲ್ಲಿ ಹಂಚಿಕೊಂಡಿದೆ.
ಇದನ್ನೂ ಓದಿ IPL 2023 : ಚೆನ್ನೈ ಸೂಪರ್ ಕಿಂಗ್ಸ್ ಬಳಗ ಸೇರಿದ ರಾಜಸ್ಥಾನ್ ರಾಯಲ್ಸ್ನ ಮಾಜಿ ಬೌಲರ್
ನರೇಂದ್ರ ಮೋದಿ ಕ್ರೀಡಾಂಗಣ ಮೊದಲ ಪಂದ್ಯಕ್ಕೆ ಸಂಪೂರ್ಣ ಸಜ್ಜಾಗಿ ನಿಂತಿದೆ. ಆದರೆ ಅಹಮದಾಬಾದ್ನಲ್ಲಿ ಗುರುವಾರ ಸಂಜೆ ಭಾರಿ ಮಳೆ ಆಗಿದ್ದು ಇದೀಗ ಮೊದಲ ಪಂದ್ಯ ನಡೆಯುವುದು ಅನುಮಾನ ಎನ್ನಲಾಗಿದೆ. ಹವಾಮಾನ ಇಲಾಖೆ ಶುಕ್ರವಾರವೂ ಮಳೆಯ ಮುನ್ಸೂಚನೆ ನೀಡಿದೆ. ಹೀಗಾಗಿ ಅಭಿಮಾನಿಗಳಿಗೆ ಚಿಂತೆಗೀಡು ಮಾಡಿದೆ.
ಸಂಜೆ 7.30ಕ್ಕೆ ಉದ್ಘಾಟನಾ ಪಂದ್ಯ ನಡೆಯುವ ಒಂದು ಗಂಟೆ ಮೊದಲು ಸಿನೆಮಾ ತಾರೆಗಳಾದ ತಮನ್ನಾ ಭಾಟಿಯಾ ಮತ್ತು ರಶ್ಮಿಕಾ ಮಂದಣ್ಣ ನೃತ್ಯ ಕಾರ್ಯಕ್ರಮದ ಮೂಲಕ ಈ ಟೂರ್ನಿಗೆ ಅದ್ಧೂರಿ ಚಾಲನೆ ನೀಡಲಾಗುವುದು. ಇದೇ ವೇಳೆ ಕ್ರಿಕೆಟ್‌ನ ಮಾಜಿ ದಿಗ್ಗಜರಾದ ಸಚಿನ್ ತೆಂಡೂಲ್ಕರ್, ಸುನೀಲ್ ಗವಾಸ್ಕರ್, ರವಿಶಾಸ್ತ್ರಿ ಸೇರಿ ಹಲವು ಕ್ರಿಕೆಟಿಗರು ಈ ಸಮಾರಂಭದ ಭಾಗವಾಗಲಿದ್ದಾರೆ. ಆದರೆ ಮಳೆಯಾರ ಇದಕ್ಕೆ ಅಡ್ಡಿ ಪಡಿಸಬಾರದು.