ಅಹಮದಾಬಾದ್: 16ನೇ ಆವೃತ್ತಿಯ ಐಪಿಎಲ್ ಟೂರ್ನಿಯ ಫೈನಲ್ ಪಂದ್ಯ ಭಾನುವಾರ(ಮೇ 28) ಅಹಮದಾಬಾದ್ನ ನರೇಂದ್ರ ಮೋದಿ ಕ್ರಿಕೆಟ್ ಸ್ಟೇಡಿಯಂನಲ್ಲಿ ನಡೆಯಲಿದೆ. ಇಲ್ಲಿ ಚೆನ್ನೈ ಸೂಪರ್ ಕಿಂಗ್ಸ್ ಮತ್ತು ಗಜರಾತ್ ಟೈಟನ್ಸ್ ತಂಡಗಳು ಪ್ರಶಸ್ತಿಗಾಗಿ ಹೋರಾಟ ನಡೆಸಲಿವೆ. ಇದಕ್ಕೂ ಮುನ್ನ ಉಭಯ ತಂಡದ ನಾಯಕರು ಇಲ್ಲಿಯವರೆಗೆ ಎಷ್ಟು ಫೈನಲ್ ಪಂದ್ಯಗಳನ್ನು ಆಡಿದ್ದಾರೆ ಎಂಬ ಕುತೂಹಲದ ಮಾಹಿತಿ ಇಂತಿದೆ.
ಧೋನಿ 10 ಫೈನಲ್ ಪಂದ್ಯದ ಸರದಾರ
ಚೆನ್ನೈ ಸೂಪರ್ ಕಿಂಗ್ಸ್ ತಂಡ ಐಪಿಎಲ್ನಲ್ಲಿ ಒಟ್ಟು ಹತ್ತು ಬಾರಿ ಫೈನಲ್ ಪ್ರವೇಶಿಸಿದೆ. ಈ ಹತ್ತೂ ಫೈನಲ್ ಪಂದ್ಯದಲ್ಲಿಯೂ ಮಹೇಂದ್ರ ಸಿಂಗ್ ಧೋನಿ ತಂಡದ ನಾಯಕತ್ವ ವಹಿಸಿದ್ದಾರೆ. ಇದು ಐಪಿಎಲ್ನಲ್ಲಿ ಒಂದು ದಾಖಲೆಯಾಗಿದೆ. ಆದರೆ ಧೋನಿ ಇದುವರೆಗೆ 11 ಐಪಿಎಲ್ ಪಂದ್ಯಗಳಲ್ಲಿ ಕಣಕ್ಕಿಳಿದಿದ್ದಾರೆ. ಚೆನ್ನೈ ತಂಡ ಸ್ಪಾಟ್ ಫಿಕ್ಸಿಂಗ್ ಹಗರಣದಲ್ಲಿ ಸಿಲುಕಿ 2 ವರ್ಷಗಳ ನಿಷೇಧಕ್ಕೊಳಗಾಗಿದ್ದಾಗ ಧೋನಿ ಅವರು ರೈಸಿಂಗ್ ಪುಣೆ ಸೂಪರ್ ಜೈಂಟ್ಸ್ ಪರ ಆಡಿದ್ದರು. ಇಲ್ಲಿ ಸ್ಟೀವನ್ ಸ್ಮಿತ್ ನಾಯಕತ್ವದಲ್ಲಿ ತಂಡ ಫೈನಲ್ ಪ್ರವೇಶಿಸಿತ್ತು. ಹೀಗಾಗಿ ಇದು ಧೋನಿಗೆ ಒಟ್ಟಾರೆ 11ನೇ ಫೈನಲ್.
ಹಾರ್ದಿಕ್ ಪಾಂಡ್ಯಗೆ 6ನೇ ಫೈನಲ್
ಟೀಮ್ ಇಂಡಿಯಾದ ಭವಿಷ್ಯದ ನಾಯಕ ಎಂದೇ ಗುರುತಿಸಿಕೊಂಡಿರುವ ಗುಜರಾತ್ ಟೈಟನ್ಸ್ ತಂಡದ ನಾಯಕ ಹಾರ್ದಿಕ್ ಪಾಂಡ್ಯ ಅವರಿಗೆ ಇದು ಆರನೇ ಐಪಿಎಲ್ ಫೈನಲ್ ಪಂದ್ಯವಾಗಿದೆ. ನಾಯಕನಾಗಿ ಇದು ಅವರಿಗೆ ಸತತ ಎರಡನೇ ಫೈನಲ್. ಈ ಹಿಂದೆ ಅವರು ಮುಂಬೈ ತಂಡದ ಸದಸ್ಯನಾಗಿ ನಾಲ್ಕು ಫೈನಲ್ ಪಂದ್ಯಗಳನ್ನು ಆಡಿದ್ದಾರೆ. ಆಡಿದ ನಾಲ್ಕು ಫೈನಲ್ನಲ್ಲಿಯೂ ಮುಂಬೈ ತಂಡ ಚಾಂಪಿಯನ್ ಆಗಿತ್ತು. ಗುಜರಾತ್ ತಂಡ ನಾಯಕನಾಗಿಯೂ ಅವರು ಚೊಚ್ಚಲ ಪ್ರಯತ್ನದಲ್ಲೇ ತಂಡವನ್ನು ಚಾಂಪಿಯನ್ ಪಟ್ಟಕ್ಕೇರಿಸಿದ ಹಿರಿಮೆಯೂ ಅವರದ್ದಾಗಿದೆ. ಇದೀಗ ಎರಡನೇ ಟ್ರೋಫಿ ಮೇಲೆರ ಕಣ್ಣಿಟ್ಟಿದ್ದು ಇದನ್ನೂ ಗೆಲ್ಲುವು ಮೂಲಕ ತಾನೊಬ್ಬ ಯಶಸ್ವಿ ನಾಯಕ ಎಂಬುದನ್ನು ಸಾಭೀತುಪಡಿಸುವ ಯೋಜನೆಯಲ್ಲಿದ್ದಾರೆ.
ತಂಡಗಳು
ಚೆನ್ನೈ ಸೂಪರ್ ಕಿಂಗ್ಸ್: ಮಹೇಂದ್ರ ಸಿಂಗ್ ಧೋನಿ(ನಾಯಕ), ರವೀಂದ್ರ ಜಡೇಜಾ, ಡೆವೊನ್ ಕಾನ್ವೇ, ಋತುರಾಜ್ ಗಾಯಕ್ವಾಡ್, ಅಂಬಾಟಿ ರಾಯುಡು, ಸುಬ್ರಾಂಶು ಸೇನಾಪತಿ, ಮೊಯೀನ್ ಅಲಿ, ಶಿವಂ ದುಬೆ, ರಾಜವರ್ಧನ್ ಹಂಗರ್ಗೇಕರ್, ಡ್ವೇನ್ ಪ್ರಿಟೋರಿಯಸ್, ಮಿಚೆಲ್ ಸ್ಯಾಂಟ್ನರ್, ದೀಪಕ್ ಚಹರ್, ತುಷಾರ್ ದೇಶಪಾಂಡೆ, ಆಕಾಶ್ ಸಿಂಗ್, ಮಥೀಶಾ ಪತಿರಾನಾ, ಸಿಮರ್ಜೀತ್ ಸಿಂಗ್, ಪ್ರಶಾಂತ್ ಸೋಲಂಕಿ, ಮಹೀಶ್ ತೀಕ್ಷಾನಾ, ಅಜಿಂಕ್ಯ ರಹಾನೆ, ಬೆನ್ ಸ್ಟೋಕ್ಸ್, ಶೇಖ್ ರಶೀದ್, ನಿಶಾಂತ್ ಸಿಂಧು.
ಇದನ್ನೂ ಓದಿ IPL 2023: ಗಿಲ್ ಪ್ರಚಂಡ ಬ್ಯಾಟಿಂಗ್ಗೆ ಪಂತ್ ಸೇರಿ ಹಲವು ದಿಗ್ಗಜದಿಂದ ಮೆಚ್ಚುಗೆ
ಗುಜರಾತ್ ಟೈಟನ್ಸ್ (ಜಿಟಿ) : ಹಾರ್ದಿಕ್ ಪಾಂಡ್ಯ (ನಾಯಕ), ಶುಭಮನ್ ಗಿಲ್, ಡೇವಿಡ್ ಮಿಲ್ಲರ್, ಅಭಿನವ್ ಮನೋಹರ್, ಸಾಯಿ ಸುದರ್ಶನ್, ವೃದ್ಧಿಮಾನ್ ಸಹಾ, ಮ್ಯಾಥ್ಯೂ ವೇಡ್, ರಶೀದ್ ಖಾನ್, ರಾಹುಲ್ ತೇವಾಟಿಯಾ, ವಿಜಯ್ ಶಂಕರ್, ಮೊಹಮ್ಮದ್ ಶಮಿ, ಅಲ್ಜಾರಿ ಜೋಸೆಫ್, ಯಶ್ ದಯಾಳ್, ಪ್ರದೀಪ್ ಸಾಂಗ್ವಾನ್, ದರ್ಶನ್ ನಲ್ಕಂಡೆ, ಜಯಂತ್ ಯಾದವ್, ಆರ್ ಸಾಯಿ ಕಿಶೋರ್, ನೂರ್ ಅಹ್ಮದ್, ದಸುನ್ ಶನಕಾ, ಒಡಿಯನ್ ಸ್ಮಿತ್, ಕೆಎಸ್ ಭರತ್, ಶಿವಂ ಮಾವಿ, ಉರ್ವಿಲ್ ಪಟೇಲ್, ಜೋಶುವಾ ಲಿಟಲ್, ಮೋಹಿತ್ ಶರ್ಮಾ.